< Zechariah 13 >

1 In that day there shall be a fountain opened to the house of David and to the inhabitants of Jerusalem, for purification and for sprinkling.
ಆ ದಿನದಲ್ಲಿ ಪಾಪವನ್ನೂ, ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ, ಯೆರೂಸಲೇಮಿನವರಿಗೂ ತೆರೆದಿರುವುದು.
2 And it shall come to pass in that day, saith the LORD of hosts, that I will cut off the names of the idols out of the land, and they shall no more be remembered; and also I will cause the prophets and the unclean spirit to pass out of the land.
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ನಾನು ವಿಗ್ರಹಗಳನ್ನು ದೇಶದೊಳಗಿಂದ ನಿರ್ನಾಮಮಾಡುವೆನು, ಅವು ಇನ್ನು ಯಾರ ನೆನಪಿಗೂ ಬರುವುದಿಲ್ಲ; ಅಲ್ಲದೆ ಸುಳ್ಳು ಪ್ರವಾದಿಗಳನ್ನೂ, ದುರಾತ್ಮವನ್ನೂ ದೇಶದೊಳಗಿಂದ ತೊಲಗಿಸಿಬಿಡುವೆನು.
3 And it shall come to pass that, when any shall yet prophesy, then his father and his mother that begot him shall say unto him: 'Thou shalt not live, for thou speakest lies in the name of the LORD'; and his father and his mother that begot him shall thrust him through when he prophesieth.
ಆಗ ಯಾವನಾದರೂ ಮತ್ತೆ ಪ್ರವಾದನೆಮಾಡಿದರೆ ಅವನ ಹೆತ್ತ ತಾಯಿತಂದೆಗಳು ಅವನಿಗೆ, ‘ನೀನು ಉಳಿಯಬೇಡ; ಯೆಹೋವನ ಹೆಸರೆತ್ತಿ ಸುಳ್ಳಾಡುತ್ತಿ’ ಎಂದು ಹೇಳಿ ಆ ಹೆತ್ತ ತಾಯಿತಂದೆಗಳೇ ಅವನ ಪ್ರವಾದನೆಯ ನಿಮಿತ್ತ ಅವನನ್ನು ಇರಿದುಬಿಡುವರು.
4 And it shall come to pass in that day, that the prophets shall be brought to shame every one through his vision, when he prophesieth; neither shall they wear a hairy mantle to deceive;
“ಆ ದಿನದಲ್ಲಿ ಯಾವ ಪ್ರವಾದಿಯೇ ಆಗಲಿ ಪ್ರವಾದನೆ ಮಾಡಬೇಕೆಂದಿರುವಾಗ ತನಗಾದ ದರ್ಶನವನ್ನು ಪ್ರಕಟಿಸಲು ನಾಚಿಕೆಪಡುವನು; ಯಾವನೂ ಮೋಸಕ್ಕಾಗಿ ಕಂಬಳಿಯನ್ನು ಹೊದ್ದುಕೊಳ್ಳನು;
5 but he shall say: 'I am no prophet, I am a tiller of the ground; for I have been made a bondman from my youth.'
ಒಬ್ಬನು, ‘ನಾನು ಪ್ರವಾದಿಯಲ್ಲ, ಹೊಲದ ಕೆಲಸದವನು; ಚಿಕ್ಕ ವಯಸ್ಸಿನಿಂದಲೂ ರೈತನಾಗಿದ್ದೇನೆ.’ ಎಂದು ಹೇಳಲು,
6 And one shall say unto him: 'What are these wounds between thy hands?' Then he shall answer: 'Those with which I was wounded in the house of my friends.'
ಮತ್ತೊಬ್ಬನು ಅವನನ್ನು, ‘ನಿನ್ನ ಎದೆಯ ಮೇಲಿರುವ ಈ ಗಾಯಗಳು ಏನು?’ ಎಂದು ಕೇಳಿದರೆ ಅವನು, ‘ಮಿತ್ರರ ಮನೆಯಲ್ಲಿ ನನಗಾದ ಗಾಯಗಳು’” ಎಂದು ಉತ್ತರ ಕೊಡುವನು.
7 Awake, O sword, against My shepherd, and against the man that is near unto Me, saith the LORD of hosts; smite the shepherd, and the sheep shall be scattered; and I will turn My hand upon the little ones.
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವೇ, ನಾನು ನೇಮಿಸಿದ ಕುರುಬನೂ, ನನ್ನ ಸಂಗಡಿಗನೂ ಆಗಿರುವವನ ವಿರುದ್ಧ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದುರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.
8 And it shall come to pass, that in all the land, saith the LORD, two parts therein shall be cut off and die; but the third shall be left therein.
“ದೇಶದೊಳಗೆಲ್ಲಾ ಮೂರರಲ್ಲಿ ಎರಡು ಭಾಗದವರು ಹತರಾಗಿ ಸಾಯುವರು, ಮೂರನೆಯ ಭಾಗದವರು ಅಲ್ಲಿ ಉಳಿಯುವರು” ಇದು ಯೆಹೋವನ ನುಡಿ.
9 And I will bring the third part through the fire, and will refine them as silver is refined, and will try them as gold is tried; they shall call on My name, and I will answer them; I will say: 'It is My people', and they shall say: 'The LORD is my God.'
“ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿ ಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು, ‘ಇವರು ನನ್ನ ಜನರು’ ಅಂದುಕೊಳ್ಳುವೆನು. ಅವರು, ‘ನಮ್ಮ ದೇವರಾದ ಯೆಹೋವನೇ’ ಅನ್ನುವರು.”

< Zechariah 13 >