< Acts 19 >

1 And it came to pass, that, while Apollos was at Corinth, Paul having passed through the upper coasts came to Ephesus: and finding certain disciples,
ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮಲೆನಾಡಿನಲ್ಲಿ ಸಂಚಾರಮಾಡಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡು;
2 He said unto them, Have ye received the Holy Spirit since ye believed? And they said unto him, We have not so much as heard whether there be any Holy Spirit.
“ನೀವು ನಂಬಿದಾಗ ಪವಿತ್ರಾತ್ಮವರವನ್ನು ಹೊಂದಿದಿರೋ?” ಎಂದು ಅವರನ್ನು ಕೇಳಲು ಅವರು ಅವನಿಗೆ; “ಇಲ್ಲ, ಪವಿತ್ರಾತ್ಮವರವು ಉಂಟೆಂಬುದನ್ನೇ ನಾವು ಕೇಳಿಲ್ಲ” ಅಂದರು.
3 And he said unto them, Unto what then were ye baptized? And they said, Unto John's baptism.
ಅವನು; “ನೀವು ಏನನ್ನು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡಿರಿ” ಎಂದು ಕೇಳಿದ್ದಕ್ಕೆ ಅವರು; “ಯೋಹಾನನ ಬೋಧನೆಯನ್ನು ನಂಬಿ ದೀಕ್ಷಾಸ್ನಾನಮಾಡಿಸಿಕೊಂಡೆವು” ಅಂದರು.
4 Then said Paul, John verily baptized with the baptism of repentance, saying unto the people, that they should believe on him which should come after him, that is, on Messiah Yahushua.
ಅದಕ್ಕೆ ಪೌಲನು; “ಯೋಹಾನನು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡವರಿಗೆ ದೀಕ್ಷಾಸ್ನಾನ ಮಾಡಿಸಿ ತನ್ನ ಹಿಂದೆ ಬರುವ ಯೇಸುವಿನಲ್ಲಿ ನಂಬಿಕೆಯಿಡಬೇಕೆಂಬುದಾಗಿ ಜನರಿಗೆ ಹೇಳಿದನು” ಎಂದು ಹೇಳಲು,
5 When they heard this, they were baptized in the name of the Master Yahushua.
ಅವರು ಆ ಮಾತನ್ನು ಕೇಳಿ ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡರು.
6 And when Paul had laid his hands upon them, the Holy Spirit came on them; and they spake with tongues, and prophesied.
ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮನು ಅವರ ಮೇಲೆ ಇಳಿದುಬಂದನು; ಅವರು ನಾನಾ ಭಾಷೆಗಳನ್ನಾಡಿದರು, ಪ್ರವಾದಿಸಿದರು.
7 And all the men were about twelve.
ಅಲ್ಲಿ ಸುಮಾರು ಹನ್ನೆರಡು ಮಂದಿ ಗಂಡಸರಿದ್ದರು.
8 And he went into the synagogue, and spake boldly for the space of three months, disputing and persuading the things concerning the kingdom of YHWH.
ಆ ಪಟ್ಟಣದಲ್ಲಿ ಪೌಲನು ಸಭಾಮಂದಿರದೊಳಗೆ ಹೋಗಿ, ಮೂರು ತಿಂಗಳು ಅಲ್ಲೇ ದೇವರ ರಾಜ್ಯದ ವಿಷಯಗಳನ್ನು ಕುರಿತು, ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು.
9 But when divers were hardened, and believed not, but spake evil of that way before the multitude, he departed from them, and separated the disciples, disputing daily in the school of one Tyrannus.
ಕೆಲವರು ತಮ್ಮ ಮನಸ್ಸುಗಳನ್ನು ಕಠಿಣಮಾಡಿಕೊಂಡು ಒಡಂಬಡದೆ ಗುಂಪುಕೂಡಿದ ಜನರ ಮುಂದೆ ಈ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟುಹೋಗಿ ಶಿಷ್ಯರನ್ನು ಬೇರೆಮಾಡಿ ತುರನ್ನ ಎಂಬುವನ ತರ್ಕಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.
10 And this continued by the space of two years; so that all they which dwelt in Asia heard the word of YHWH, both Jews and Greeks.
೧೦ಇದು ಎರಡು ವರ್ಷಗಳ ವರೆಗೂ ನಡೆದಿದ್ದರಿಂದ ಅಸ್ಯಸೀಮೆಯಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರೂ, ಗ್ರೀಕರೂ, ಕರ್ತನ ವಾಕ್ಯವನ್ನು ಕೇಳಿದರು.
11 And YHWH wrought special miracles by the hands of Paul:
೧೧ದೇವರು ಪೌಲನ ಕೈಯಿಂದ ವಿಶೇಷವಾದ ಮಹತ್ಕಾರ್ಯಗಳನ್ನು ನಡಿಸುತ್ತಾ ಇದ್ದುದರಿಂದ,
12 So that from his body were brought unto the sick handkerchiefs or aprons, and the diseases departed from them, and the evil spirits went out of them.
೧೨ಜನರು ಅವನ ಮೈಮೇಲಿನಿಂದ ಕೈವಸ್ತ್ರಗಳನ್ನೂ, ರುಮಾಲುಗಳನ್ನೂ ತಂದು ರೋಗಿಗಳ ಮೇಲೆ ಹಾಕಲು ಅವರ ರೋಗಗಳು ವಾಸಿಯಾದವು, ದುರಾತ್ಮಗಳೂ ಬಿಟ್ಟುಹೋದವು.
13 Then certain of the vagabond Jews, exorcists, took upon them to call over them which had evil spirits the name of the Master Yahushua, saying, We adjure you by Yahushua whom Paul preacheth.
೧೩ದುರಾತ್ಮಗಳನ್ನೂ ಬಿಡಿಸುವವರೆನಿಸಿಕೊಂಡು, ದೇಶಸಂಚಾರಿಗಳಾದ ಯೆಹೂದ್ಯರಿದ್ದರು. ಅವರಲ್ಲಿ ಕೆಲವರು ದುರಾತ್ಮ ಪೀಡಿತರ ಮೇಲೆ; “ಪೌಲನು ಸಾರುವ ಯೇಸುವಿನ ಆಣೆ” ಎಂದು ಹೇಳಿ ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗಮಾಡುವುದಕ್ಕೆ ತೊಡಗಿದರು.
14 And there were seven sons of one Sceva, a Jew, and chief of the priests, which did so.
೧೪ಮುಖ್ಯಯಾಜಕ ಸ್ಕೇವನೆಂಬ ಒಬ್ಬ ಯೆಹೂದ್ಯನ ಏಳು ಮಂದಿ ಮಕ್ಕಳೂ ಹಾಗೆ ಮಾಡುತ್ತಿದ್ದರು.
15 And the evil spirit answered and said, Yahushua I know, and Paul I know; but who are ye?
೧೫ಆದರೆ ದುರಾತ್ಮವು ಅವರಿಗೆ; “ಯೇಸುವಿನ ಗುರುತು ನನಗುಂಟು, ಪೌಲನನ್ನೂ ಬಲ್ಲೆನು, ಆದರೆ ನೀವು ಯಾರು?” ಎಂದು ಹೇಳಿತು;
16 And the man in whom the evil spirit was leaped on them, and overcame them, and prevailed against them, so that they fled out of that house naked and wounded.
೧೬ಮತ್ತು ದುರಾತ್ಮ ಹಿಡಿದಿದ್ದ ಆ ಮನುಷ್ಯನು ಅವರ ಮೇಲೆ ಹಾರಿ ಬಿದ್ದು, ಅವರನ್ನೂ ಸೋಲಿಸಿ ಸದೆಬಡಿದಿದ್ದರಿಂದ ಅವರು ಗಾಯಗೊಂಡು ಬೆತ್ತಲೆಯಾಗಿ ಆ ಮನೆಯೊಳಗಿಂದ ಓಡಿಹೋದರು.
17 And this was known to all the Jews and Greeks also dwelling at Ephesus; and fear fell on them all, and the name of the Master Yahushua was magnified.
೧೭ಈ ಸಂಗತಿಯು ಎಫೆಸದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರಿಗೂ, ಗ್ರೀಕರಿಗೂ ತಿಳಿದುಬಂದಾಗ ಅವರೆಲ್ಲರೂ ಭಯಭೀತರಾದರು. ಮತ್ತು ಕರ್ತನಾದ ಯೇಸುವಿನ ಹೆಸರು ಪ್ರಖ್ಯಾತಿಗೆ ಬಂದಿತು.
18 And many that believed came, and confessed, and shewed their deeds.
೧೮ಆತನನ್ನು ನಂಬಿದವರಲ್ಲಿ ಅನೇಕರು ಪಶ್ಚಾತ್ತಾಪದಿಂದ ಬಂದು ತಮ್ಮ ತಮ್ಮ ಪಾಪಕೃತ್ಯಗಳನ್ನು ಒಪ್ಪಿಕೊಂಡರು.
19 Many of them also which used curious arts brought their books together, and burned them before all men: and they counted the price of them, and found it fifty thousand pieces of silver.
೧೯ಇದಲ್ಲದೆ ಮಾಟ ಮಂತ್ರಗಳನ್ನು ನಡಿಸಿದವರಲ್ಲಿ ಅನೇಕರು ತಮ್ಮ ಮಾಟಮಂತ್ರಗಳ ಪುಸ್ತಕಗಳನ್ನು ತಂದು, ಕೂಡಿಸಿ ಎಲ್ಲರ ಮುಂದೆ ಸುಟ್ಟುಬಿಟ್ಟರು. ಅವುಗಳ ಮೌಲ್ಯವನ್ನು ಲೆಕ್ಕಮಾಡಿ ಐವತ್ತು ಸಾವಿರ ಬೆಳ್ಳಿ ನಾಣ್ಯ ಆಯಿತೆಂದು ತಿಳಿದುಕೊಂಡರು.
20 So mightily grew the word of YHWH and prevailed.
೨೦ಈ ರೀತಿಯಾಗಿ ಕರ್ತನ ವಾಕ್ಯವು ಬಹಳವಾಗಿ ಹೆಚ್ಚುತ್ತಾ ಪ್ರಬಲವಾಯಿತು.
21 After these things were ended, Paul purposed in the spirit, when he had passed through Macedonia and Achaia, to go to Jerusalem, saying, After I have been there, I must also see Rome.
೨೧ಈ ಸಂಗತಿಗಳು ಆದ ಮೇಲೆ ಪೌಲನು ತಾನು ಮಕೆದೋನ್ಯದಲ್ಲಿಯೂ, ಅಖಾಯದಲ್ಲಿಯೂ ಸಂಚಾರಮಾಡಿ ಯೆರೂಸಲೇಮಿಗೆ ಹೋಗಬೇಕೆಂದು ಮನಸ್ಸಿನಲ್ಲಿ ಯೋಚಿಸಿ; “ಅಲ್ಲಿಗೆ ಹೋದ ಮೇಲೆ ರೋಮಾಪುರವನ್ನು ಸಹ ನೋಡಬೇಕೆಂದು” ಹೇಳಿದನು.
22 So he sent into Macedonia two of them that ministered unto him, Timotheus and Erastus; but he himself stayed in Asia for a season.
೨೨ಆದರೆ ಅವನು ತನಗೆ ಸೇವೆಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಮತ್ತು ಎರಸ್ತನನ್ನೂ ಮಕೆದೋನ್ಯಕ್ಕೆ ಕಳುಹಿಸಿ ತಾನು ಆಸ್ಯಸೀಮೆಯಲ್ಲಿ ಕೆಲವು ಕಾಲ ತಂಗಿದನು.
23 And the same time there arose no small stir about that way.
೨೩ಆ ಕಾಲದಲ್ಲಿ ಈ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು.
24 For a certain man named Demetrius, a silversmith, which made silver shrines for Diana, brought no small gain unto the craftsmen;
೨೪ಹೇಗೆಂದರೆ, ದೇಮೇತ್ರಿಯನೆಂಬ ಒಬ್ಬ ಅಕ್ಕಸಾಲಿಗನು ಬೆಳ್ಳಿಯಿಂದ ಅರ್ತೆಮೀ ದೇವಿಯ ಗುಡಿಯಂತೆ ಸಣ್ಣಸಣ್ಣ ಗುಡಿಗಳನ್ನು ಮಾಡಿಸುವವನಾಗಿದ್ದು ಆ ಕಸುಬಿನವರಿಗೆ ಬಹಳ ಲಾಭವನ್ನು ಕೊಡುತ್ತಿದ್ದನು.
25 Whom he called together with the workmen of like occupation, and said, Sirs, ye know that by this craft we have our wealth.
೨೫ಅವನು ಅವರನ್ನೂ ಮತ್ತು ಆ ಕಸುಬಿಗೆ ಸಂಬಂಧಪಟ್ಟ ಕೆಲಸದವರನ್ನೂ ಒಟ್ಟಿಗೆ ಕರೆಸಿ ಅವರಿಗೆ; “ಜನರೇ, ಈ ಕೆಲಸದಿಂದ ನಮಗೆ ಐಶ್ವರ್ಯ ಉಂಟಾಗುತ್ತದೆಂದು ನೀವು ಬಲ್ಲಿರಿ.
26 Moreover ye see and hear, that not alone at Ephesus, but almost throughout all Asia, this Paul hath persuaded and turned away much people, saying that they be not mighty ones which are made with hands:
೨೬ಆದರೆ ಕೈಯಿಂದ ಮಾಡಿದ ಮೂರ್ತಿಗಳು ದೇವರುಗಳಲ್ಲವೆಂದು ಆ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಹೆಚ್ಚುಕಡಿಮೆ ಆಸ್ಯಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿಬಿಟ್ಟಿದ್ದಾನೆ ಎಂಬುದನ್ನು ನೀವು ನೋಡುತ್ತಿದ್ದೀರಿ, ಕೇಳುತ್ತಿದ್ದೀರಿ.
27 So that not only this our craft is in danger to be set at nought; but also that the temple of the great goddess Diana should be despised, and her magnificence should be destroyed, whom all Asia and the world worshippeth.
೨೭ಇದರಿಂದ ನಮ್ಮ ಉದ್ಯೋಗಕ್ಕೆ ಕುಂದು ಬರುವುದಲ್ಲದೆ ಅರ್ತೆಮೀ ಮಹಾದೇವಿಯ ದೇವಸ್ಥಾನವು ಗಣನೆಗೆ ಬಾರದೆಹೋಗುವ ಹಾಗೆಯೂ, ಎಲ್ಲಾ ಆಸ್ಯಸೀಮೆಯೂ, ಲೋಕವೆಲ್ಲಾ ಪೂಜಿಸುವ ಈ ದೇವಿಯ ವೈಭವಕ್ಕೆ ಹಾನಿಬರುವ ಹಾಗೆ ಗಂಡಾಂತರವುಂಟಾಗುತ್ತದೆಂದು” ಹೇಳಿದನು.
28 And when they heard these sayings, they were full of wrath, and cried out, saying, Great is Diana of the Ephesians.
೨೮ಅವರು ಈ ಮಾತುಗಳನ್ನು ಕೇಳಿ ಕೋಪಗೊಂಡು; “ಎಫೆಸದವರ ಅರ್ತೆಮೀದೇವಿ ಮಹಾದೇವಿ” ಎಂದು ಅರ್ಭಟಿಸಿದರು.
29 And the whole city was filled with confusion: and having caught Gaius and Aristarchus, men of Macedonia, Paul's companions in travel, they rushed with one accord into the theatre.
೨೯ಆಗ ಊರಿನಲ್ಲೆಲ್ಲಾ ಗಲಿಬಿಲಿಯಾಯಿತು. ಪ್ರಯಾಣದಲ್ಲಿ ಪೌಲನಿಗೆ ಜೊತೆಯವರಾಗಿದ್ದ ಮಕೆದೋನ್ಯದ ಗಾಯನನ್ನೂ, ಅರಿಸ್ತಾರ್ಕನನ್ನೂ ಜನರು ಹಿಡಿದುಕೊಂಡು ಒಟ್ಟಾಗಿ ನಾಟಕ ಶಾಲೆಯೊಳಗೆ ನುಗ್ಗಿದರು.
30 And when Paul would have entered in unto the people, the disciples suffered him not.
೩೦ಪೌಲನು ಜನರೊಳಗೆ ನುಗ್ಗಬೇಕೆಂದಿದ್ದಾಗ ಶಿಷ್ಯರು ಅವನನ್ನು ಬಿಡಲಿಲ್ಲ.
31 And certain of the chief of Asia, which were his friends, sent unto him, desiring him that he would not adventure himself into the theatre.
೩೧ಇದಲ್ಲದೆ ಆಸ್ಯಸೀಮೆಯ ಅಧಿಕಾರಿಗಳಲ್ಲಿ ಕೆಲವರು ಪೌಲನ ಸ್ನೇಹಿತರಾಗಿದ್ದುದರಿಂದ ಅವನ ಬಳಿಗೆ ಜನರನ್ನು ಕಳುಹಿಸಿ; ನೀನು ನಾಟಕ ಶಾಲೆಯೊಳಗೆ ಹೋಗ ಬೇಡ ಎಂದು ಬೇಡಿಕೊಂಡರು.
32 Some therefore cried one thing, and some another: for the assembly was confused; and the more part knew not wherefore they were come together.
೩೨ಜನಸಮೂಹದಲ್ಲಿ ಗೊಂದಲವೆದ್ದಿತು, ಕೆಲವರು ಒಂದು ವಿಧದಲ್ಲಿ ಕೂಗಾಡಿದರೆ ಮತ್ತೆ ಕೆಲವರು ಇನ್ನೊಂದು ವಿಧದಲ್ಲಿ ಕೂಗುತ್ತಿದ್ದರು. ಬಹುಜನರಿಗೆ ತಾವು ಅಲ್ಲಿ ಕೂಡಿ ಬಂದಿದ್ದ ಕಾರಣವು ಗೊತ್ತಿರಲಿಲ್ಲ.
33 And they drew Alexander out of the multitude, the Jews putting him forward. And Alexander beckoned with the hand, and would have made his defence unto the people.
೩೩ಯೆಹೂದ್ಯರು ಅಲೆಕ್ಸಾಂದ್ರನನ್ನು ಮುಂದಕ್ಕೆ ನೂಕಲು, ಗುಂಪಿನಲ್ಲಿ ಕೆಲವರು ಅವನಿಗೆ ಸೂಚನೆ ಕೊಟ್ಟರು. ಆಗ ಅಲೆಕ್ಸಾಂದ್ರನು ಕೈಸನ್ನೆ ಮಾಡಿ ಕೂಡಿದ್ದ ಜನರಿಗೆ ಪ್ರತಿವಾದ ಮಾಡಬೇಕೆಂದಿದ್ದನು.
34 But when they knew that he was a Jew, all with one voice about the space of two hours cried out, Great is Diana of the Ephesians.
೩೪ಆದರೆ ಅವನು ಯೆಹೂದ್ಯನೆಂದು ತಿಳಿದಾಗ ಎಲ್ಲರೂ ಒಂದೇ ಶಬ್ದದಿಂದ; “ಎಫೆಸದವರ ಅರ್ತೆಮೀದೇವಿ ಮಹಾದೇವಿ” ಎಂದು ಎರಡು ಘಂಟೆ ಹೊತ್ತು ಕೂಗಿದರು.
35 And when the townclerk had appeased the people, he said, Ye men of Ephesus, what man is there that knoweth not how that the city of the Ephesians is a worshipper of the great goddess Diana, and of the image which fell down from Jupiter?
೩೫ಕೊನೆಗೆ ಪಟ್ಟಣದ ಯಜಮಾನನು ಜನರ ಗುಂಪನ್ನು ಸಮಾಧಾನಪಡಿಸಿ; “ಎಫೆಸದವರೇ, ಎಫೆಸ ಪಟ್ಟಣದವರು ಅರ್ತೆಮೀ ಮಹಾದೇವಿಯ ದೇವಸ್ಥಾನಕ್ಕೂ, ಆಕಾಶದಿಂದ ಬಿದ್ದ ಆಕೆಯ ಮೂರ್ತಿಗೂ, ಪಾಲಕರಾಗಿದ್ದಾರೆಂಬುದನ್ನು ತಿಳಿಯದಿರುವ ಮನುಷ್ಯನು ಯಾವನಿದ್ದಾನೇ?
36 Seeing then that these things cannot be spoken against, ye ought to be quiet, and to do nothing rashly.
೩೬ಈ ಸಂಗತಿ ಅಲ್ಲವೆನ್ನುವುದಕ್ಕೆ ಯಾರಿಂದಲೂ ಆಗದಿರುವುದರಿಂದ ನೀವು ಶಾಂತಿಯಿಂದಿರಬೇಕು; ದುಡುಕಿ ಏನೂ ಮಾಡಬಾರದು.
37 For ye have brought hither these men, which are neither robbers of temples, nor yet blasphemers of your goddess.
೩೭ನೀವು ಹಿಡಿದುತಂದಿರುವ ಈ ಮನುಷ್ಯರು ದೇವಸ್ಥಾನದಲ್ಲಿ ಕಳ್ಳತನ ಮಾಡುವವರಲ್ಲ, ನಮ್ಮ ದೇವಿಯನ್ನು ದೂಷಿಸುವವರೂ ಅಲ್ಲ.
38 Wherefore if Demetrius, and the craftsmen which are with him, have a matter against any man, the law is open, and there are deputies: let them implead one another.
೩೮ಹೀಗಿರುವುದರಿಂದ ದೇಮೇತ್ರಿಯನಿಗೂ ಅವನ ಪಕ್ಷವನ್ನು ಹಿಡಿದಿರುವ ಅಕ್ಕಸಾಲಿಗರಿಗೂ ಯಾವನ ಮೇಲಾದರೂ ದೂರುಗಳಿದ್ದರೆ ನ್ಯಾಯಸ್ಥಾನಗಳುಂಟು, ಅಧಿಪತಿಗಳಿದ್ದಾರೆ, ಒಬ್ಬರ ಮೇಲೊಬ್ಬರು ವ್ಯಾಜ್ಯವಾಡಿಕೊಳ್ಳಲಿ.
39 But if ye inquire any thing concerning other matters, it shall be determined in a lawful assembly.
೩೯ಏನಾದರೂ ಹೆಚ್ಚು ವಿಚಾರಣೆ ಬೇಕಾದರೆ ಅದು ನ್ಯಾಯವಾಗಿ ನೆರೆದ ಸಭೆಯಲ್ಲಿ ತೀರ್ಮಾನಿಸಲ್ಪಡಬೇಕು.
40 For we are in danger to be called in question for this day's uproar, there being no cause whereby we may give an account of this concourse.
೪೦ಈ ದಿನದಲ್ಲಿ ನ್ಯಾಯವಾದ ಕಾರಣವಿಲ್ಲದೆ ನೆರೆದ ಜನರ ವಿಷಯದಲ್ಲಿ ಇದು ಒಂದು ದಂಗೆ ಎಂಬುದಾಗಿ ನಮ್ಮ ಮೇಲೆ ತಪ್ಪುಹೊರಿಸುವುದಕ್ಕೆ ಆಸ್ಪದವಾಯಿತು. ಈ ದೊಂಬಿಯನ್ನು ಕುರಿತು ವಿಚಾರಣೆನಡೆಸಿದರೆ ನಮ್ಮಿಂದ ಉತ್ತರಕೊಡುವುದಕ್ಕೆ ಆಗುವುದೇ ಇಲ್ಲ” ಎಂದು ಹೇಳಿದನು.
41 And when he had thus spoken, he dismissed the assembly.
೪೧ಈ ಮಾತುಗಳನ್ನು ಹೇಳಿ ಜನರ ಗುಂಪನ್ನು ಕಳುಹಿಸಿಬಿಟ್ಟನು.

< Acts 19 >