< Numbers 7 >
1 And it came to pass on the day that Moses had fully set up the tabernacle, and had anointed it, and sanctified it, and all the instruments thereof, both the altar and all the vessels thereof, and had anointed them, and sanctified them;
೧ಮೋಶೆ ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿ ಅದನ್ನೂ, ಅದರ ಸಾಮಾನುಗಳನ್ನೂ, ಯಜ್ಞವೇದಿಯನ್ನೂ ಮತ್ತು ಯಜ್ಞವೇದಿಯ ಉಪಕರಣಗಳನ್ನೂ ಯೆಹೋವನಿಗಾಗಿ ಅಭಿಷೇಕಿಸಿ ಪ್ರತಿಷ್ಠಿಸಿದನು.
2 That the princes of Israel, heads of the house of their fathers, who were the princes of the tribes, and were over them that were numbered, offered:
೨ಆ ದಿನದಲ್ಲಿ ಇಸ್ರಾಯೇಲರ ಪ್ರಧಾನ ಪುರುಷರು ಅಂದರೆ ಗೋತ್ರದ ಪ್ರಮುಖರು, ಕುಲಾಧಿಪತಿಗಳು, ಜನಗಣತಿಯ ನೇತೃತ್ವವನ್ನು ವಹಿಸಿಕೊಂಡಿದ್ದವರು ಕಾಣಿಕೆಗಳನ್ನು ತಂದು ಸಮರ್ಪಿಸಿದರು.
3 And they brought their offering before YHWH, six covered wagons, and twelve oxen; a wagon for two of the princes, and for each one an ox: and they brought them before the tabernacle.
೩ಅವರು ಆರು ಕಮಾನು ಬಂಡಿಯನ್ನೂ ಮತ್ತು ಹನ್ನೆರಡು ಎತ್ತುಗಳನ್ನೂ ಯೆಹೋವನ ಸನ್ನಿಧಿಗೆ ಕಾಣಿಕೆಯಾಗಿ ತಂದರು. ನಾಯಕರಾದ ಇಬ್ಬರಿಬ್ಬರೂ ಒಂದು ಕಮಾನು ಬಂಡಿಯನ್ನೂ, ಪ್ರತಿ ನಾಯಕನು ಒಂದು ಜೋಡಿ ಎತ್ತನ್ನೂ, ದೇವದರ್ಶನ ಗುಡಾರದ ಮುಂದೆ ತಂದರು. ಹೀಗೆ ಆರು ಜೊತೆ ಬಂಡಿ ಆರು ಜೊತೆ ಎತ್ತುಗಳನ್ನು ತಂದು ಅರ್ಪಿಸಿದರು.
4 And YHWH spake unto Moses, saying,
೪ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
5 Take it of them, that they may be to do the service of the tabernacle of the congregation; and thou shalt give them unto the Levites, to every man according to his service.
೫“ನೀನು ಇವರ ಕೈಯಿಂದ ಈ ಕಾಣಿಕೆಯ ವಸ್ತುಗಳನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಸೇವೆಗಾಗಿ ಉಪಯೋಗಿಸು. ಕಾಣಿಕೆಯನ್ನು ಲೇವಿಯರಿಗೆ ಅವರವರ ಕೆಲಸಕ್ಕೆ ತಕ್ಕ ಹಾಗೆ ಕೊಡಬೇಕು” ಎಂದು ಆಜ್ಞಾಪಿಸಿದನು.
6 And Moses took the wagons and the oxen, and gave them unto the Levites.
೬ಮೋಶೆ ಆ ಬಂಡಿಗಳನ್ನೂ ಮತ್ತು ಎತ್ತುಗಳನ್ನೂ ತೆಗೆದುಕೊಂಡು ಲೇವಿಯರಿಗೆ ಕೊಟ್ಟನು.
7 Two wagons and four oxen he gave unto the sons of Gershon, according to their service:
೭ಅವನು ಗೇರ್ಷೋನ್ಯ ಸಂತಾನದವರಿಗೆ ಅವರ ಕೆಲಸಕ್ಕೆ ತಕ್ಕ ಹಾಗೆ ಎರಡು ಬಂಡಿಗಳನ್ನು, ಮತ್ತು ಎರಡು ಜೋಡಿ ಎತ್ತುಗಳನ್ನು ಕೊಟ್ಟನು.
8 And four wagons and eight oxen he gave unto the sons of Merari, according unto their service, under the hand of Ithamar the son of Aaron the priest.
೮ಮೆರಾರೀ ಸಂತಾನದವರಿಗೆ ಅವರ ಕೆಲಸಕ್ಕೆ ತಕ್ಕ ಹಾಗೆ ನಾಲ್ಕು ಬಂಡಿಗಳನ್ನು ಮತ್ತು ನಾಲ್ಕು ಜೋಡಿ ಎತ್ತುಗಳನ್ನು ಮಹಾಯಾಜಕನಾದ ಆರೋನನ ಮಗನಾದ ಈತಾಮಾರನ ಕೈಗೆ ಒಪ್ಪಿಸಿದರು.
9 But unto the sons of Kohath he gave none: because the service of the sanctuary belonging unto them was that they should bear upon their shoulders.
೯ಕೆಹಾತ್ಯರಿಗೆ ಮಾತ್ರ ಏನೂ ಕೊಡಲಿಲ್ಲ. ಏಕೆಂದರೆ ಅವರು ದೇವದರ್ಶನ ಗುಡಾರದ ಸಾಮಾನುಗಳನ್ನು ಸಾಗಿಸುವುದೇ ಅವರಿಗೆ ನೇಮಕವಾದ ಕೆಲಸವಾಗಿತ್ತು. ಅವರು ಅವುಗಳನ್ನು ಹೆಗಲಿನ ಮೇಲೆ ಹೊರುತ್ತಿದ್ದರು.
10 And the princes offered for dedicating of the altar in the day that it was anointed, even the princes offered their offering before the altar.
೧೦ಮೋಶೆಯು ಯಜ್ಞವೇದಿಯನ್ನು ಅಭಿಷೇಕಿಸಿದ ದಿನದಲ್ಲಿ, ಕುಲಾಧಿಪತಿಗಳು ಅದರ ಪ್ರತಿಷ್ಠೆಗಾಗಿ ಕಾಣಿಕೆಗಳನ್ನು ತಂದು ಅದರ ಮುಂದೆ ಇಟ್ಟರು.
11 And YHWH said unto Moses, They shall offer their offering, each prince on his day, for the dedicating of the altar.
೧೧ಆಗ ಯೆಹೋವನು ಮೋಶೆಗೆ, “ಒಬ್ಬೊಬ್ಬ ಕುಲಾಧಿಪತಿಯು ತನಗೆ ನೇಮಕವಾದ ದಿನದಲ್ಲಿ ಯಜ್ಞವೇದಿಯ ಪ್ರತಿಷ್ಠೆಗಾಗಿ ತನ್ನ ಕಾಣಿಕೆಯನ್ನು ಸಮರ್ಪಿಸಬೇಕು” ಎಂದು ಆಜ್ಞಾಪಿಸಿದನು.
12 And he that offered his offering the first day was Nahshon the son of Amminadab, of the tribe of Judah:
೧೨ಮೊದಲನೆಯ ದಿನದಲ್ಲಿ ಕಾಣಿಕೆಯನ್ನು ಅರ್ಪಿಸಿದವನು ಯೆಹೂದ ಕುಲಾಧಿಪತಿಯಾದ ಅಮ್ಮೀನಾದಾಬನ ಮಗನಾದ ನಹಶೋನ.
13 And his offering was one silver charger, the weight thereof was an hundred and thirty shekels, one silver bowl of seventy shekels, after the shekel of the sanctuary; both of them were full of fine flour mingled with oil for a meat offering:
೧೩ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆ. ಎಪ್ಪತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
14 One spoon of ten shekels of gold, full of incense:
೧೪ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.
15 One young bullock, one ram, one lamb of the first year, for a burnt offering:
೧೫ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕೊಟ್ಟನು.
16 One kid of the goats for a sin offering:
೧೬ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ,
17 And for a sacrifice of peace offerings, two oxen, five rams, five he goats, five lambs of the first year: this was the offering of Nahshon the son of Amminadab.
೧೭ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು, ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಅಮ್ಮೀನಾದಾಬನ ಮಗನಾದ ನಹಶೋನನು ಸಮರ್ಪಿಸಿದ ಕಾಣಿಕೆಗಳು ಇವೇ.
18 On the second day Nethaneel the son of Zuar, prince of Issachar, did offer:
೧೮ಎರಡನೆಯ ದಿನದಲ್ಲಿ ಇಸ್ಸಾಕಾರ್ ಕುಲಾಧಿಪತಿಯೂ ಚೂವಾರನ ಮಗನೂ ಆದ ನೆತನೇಲನು ಕಾಣಿಕೆಯನ್ನು ಸಮರ್ಪಿಸಿದನು.
19 He offered for his offering one silver charger, the weight whereof was an hundred and thirty shekels, one silver bowl of seventy shekels, after the shekel of the sanctuary; both of them full of fine flour mingled with oil for a meat offering:
೧೯ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆಯು; ಎಪ್ಪತ್ತು ಶೆಕೆಲ್ ತೂಕವುಳ್ಳ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯ ನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
20 One spoon of gold of ten shekels, full of incense:
೨೦ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.
21 One young bullock, one ram, one lamb of the first year, for a burnt offering:
೨೧ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು.
22 One kid of the goats for a sin offering:
೨೨ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ,
23 And for a sacrifice of peace offerings, two oxen, five rams, five he goats, five lambs of the first year: this was the offering of Nethaneel the son of Zuar.
೨೩ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಚೂವಾರನ ಮಗನಾದ ನೆತನೇಲನು ಸಮರ್ಪಿಸಿದ ಕಾಣಿಕೆಗಳು ಇವೇ.
24 On the third day Eliab the son of Helon, prince of the children of Zebulun, did offer:
೨೪ಮೂರನೆಯ ದಿನದಲ್ಲಿ ಜೆಬುಲೂನ್ ಕುಲಾಧಿಪತಿಯೂ, ಹೇಲೋನನ ಮಗನೂ ಆದ ಎಲೀಯಾಬನು ಕಾಣಿಕೆಯನ್ನು ಸಮರ್ಪಿಸಿದನು.
25 His offering was one silver charger, the weight whereof was an hundred and thirty shekels, one silver bowl of seventy shekels, after the shekel of the sanctuary; both of them full of fine flour mingled with oil for a meat offering:
೨೫ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆ; ಎಪ್ಪತ್ತು ಶೆಕೆಲ್ ತೂಕವುಳ್ಳ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು;
26 One golden spoon of ten shekels, full of incense:
೨೬ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.
27 One young bullock, one ram, one lamb of the first year, for a burnt offering:
೨೭ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು, ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು.
28 One kid of the goats for a sin offering:
೨೮ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ,
29 And for a sacrifice of peace offerings, two oxen, five rams, five he goats, five lambs of the first year: this was the offering of Eliab the son of Helon.
೨೯ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಹೇಲೋನನ ಮಗನಾದ ಎಲೀಯಾಬನು ಸಮರ್ಪಿಸಿದ ಕಾಣಿಕೆಗಳು ಇವೇ.
30 On the fourth day Elizur the son of Shedeur, prince of the children of Reuben, did offer:
೩೦ನಾಲ್ಕನೆಯ ದಿನದಲ್ಲಿ ರೂಬೇನ್ ಕುಲಾಧಿಪತಿಯೂ, ಶೆದೇಯೂರನ ಮಗನೂ ಆದ ಎಲೀಚೂರನು ಕಾಣಿಕೆಯನ್ನು ಸಮರ್ಪಿಸಿದನು.
31 His offering was one silver charger of the weight of an hundred and thirty shekels, one silver bowl of seventy shekels, after the shekel of the sanctuary; both of them full of fine flour mingled with oil for a meat offering:
೩೧ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಬೆಳ್ಳಿಯ ಒಂದು ತಟ್ಟೆ; ಎಪ್ಪತ್ತು ಶೆಕೆಲ್ ತೂಕವುಳ್ಳ ಬೆಳ್ಳಿಯ ಒಂದು ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
32 One golden spoon of ten shekels, full of incense:
೩೨ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.
33 One young bullock, one ram, one lamb of the first year, for a burnt offering:
೩೩ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು.
34 One kid of the goats for a sin offering:
೩೪ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ,
35 And for a sacrifice of peace offerings, two oxen, five rams, five he goats, five lambs of the first year: this was the offering of Elizur the son of Shedeur.
೩೫ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಶೆದೇಯೂರನ ಮಗನಾದ ಎಲೀಚೂರನು ಸಮರ್ಪಿಸಿದ ಕಾಣಿಕೆಗಳು ಇವೇ.
36 On the fifth day Shelumiel the son of Zurishaddai, prince of the children of Simeon, did offer:
೩೬ಐದನೆಯ ದಿನದಲ್ಲಿ ಸಿಮೆಯೋನ್ ಕುಲಾಧಿಪತಿಯೂ, ಚೂರೀಷದ್ದೈಯ ಮಗನೂ ಆದ ಶೆಲುಮೀಯೇಲನು ಕಾಣಿಕೆಯನ್ನು ಸಮರ್ಪಿಸಿದನು.
37 His offering was one silver charger, the weight whereof was an hundred and thirty shekels, one silver bowl of seventy shekels, after the shekel of the sanctuary; both of them full of fine flour mingled with oil for a meat offering:
೩೭ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಬೆಳ್ಳಿಯ ಒಂದು ತಟ್ಟೆ; ಎಪ್ಪತ್ತು ಶೆಕೆಲ್ ತೂಕವುಳ್ಳ ಬೆಳ್ಳಿಯ ಒಂದು ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
38 One golden spoon of ten shekels, full of incense:
೩೮ಅವನು ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿ ಸಮರ್ಪಿಸಿದನು.
39 One young bullock, one ram, one lamb of the first year, for a burnt offering:
೩೯ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು.
40 One kid of the goats for a sin offering:
೪೦ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ,
41 And for a sacrifice of peace offerings, two oxen, five rams, five he goats, five lambs of the first year: this was the offering of Shelumiel the son of Zurishaddai.
೪೧ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಚೂರೀಷದ್ದೈಯ ಮಗನಾದ ಶೆಲುಮೀಯೇಲನು ಸಮರ್ಪಿಸಿದ ಕಾಣಿಕೆಗಳು ಇವೇ.
42 On the sixth day Eliasaph the son of Deuel, prince of the children of Gad, offered:
೪೨ಆರನೆಯ ದಿನದಲ್ಲಿ ಗಾದ್ ಕುಲಾಧಿಪತಿಯೂ, ದೆಗೂವೇಲನ ಮಗನೂ ಆದ ಎಲ್ಯಾಸಾಫನು ಕಾಣಿಕೆಯನ್ನು ಸಮರ್ಪಿಸಿದನು.
43 His offering was one silver charger of the weight of an hundred and thirty shekels, a silver bowl of seventy shekels, after the shekel of the sanctuary; both of them full of fine flour mingled with oil for a meat offering:
೪೩ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕಲ್ ತೂಕದ ಒಂದು ಬೆಳ್ಳಿಯ ತಟ್ಟೆ, ಎಪ್ಪತ್ತು ಶೆಕೆಲ್ ತೂಕವುಳ್ಳ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
44 One golden spoon of ten shekels, full of incense:
೪೪ಅವನು ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.
45 One young bullock, one ram, one lamb of the first year, for a burnt offering:
೪೫ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು.
46 One kid of the goats for a sin offering:
೪೬ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ,
47 And for a sacrifice of peace offerings, two oxen, five rams, five he goats, five lambs of the first year: this was the offering of Eliasaph the son of Deuel.
೪೭ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು, ದೆಗೂವೇಲನ ಮಗನಾದ ಎಲ್ಯಾಸಾಫನು ಸಮರ್ಪಿಸಿದ ಕಾಣಿಕೆಗಳು ಇವೇ.
48 On the seventh day Elishama the son of Ammihud, prince of the children of Ephraim, offered:
೪೮ಏಳನೆಯ ದಿನದಲ್ಲಿ ಎಫ್ರಾಯೀಮ್ ಕುಲಾಧಿಪತಿಯೂ, ಅಮ್ಮೀಹೂದನ ಮಗನೂ ಆದ ಎಲೀಷಾಮನು ಕಾಣಿಕೆಯನ್ನು ಸಮರ್ಪಿಸಿದನು.
49 His offering was one silver charger, the weight whereof was an hundred and thirty shekels, one silver bowl of seventy shekels, after the shekel of the sanctuary; both of them full of fine flour mingled with oil for a meat offering:
೪೯ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕಲ್ ತೂಕದ ಒಂದು ಬೆಳ್ಳಿಯ ತಟ್ಟೆ; ಎಪ್ಪತ್ತು ಶೆಕೆಲ್ ತೂಕವುಳ್ಳ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
50 One golden spoon of ten shekels, full of incense:
೫೦ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.
51 One young bullock, one ram, one lamb of the first year, for a burnt offering:
೫೧ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು.
52 one kid of the goats for a sin offering:
೫೨ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ,
53 And for a sacrifice of peace offerings, two oxen, five rams, five he goats, five lambs of the first year: this was the offering of Elishama the son of Ammihud.
೫೩ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಅಮ್ಮೀಹೂದನ ಮಗನಾದ ಎಲೀಷಾಮನು ಸಮರ್ಪಿಸಿದ ಕಾಣಿಕೆಗಳು ಇವೇ.
54 On the eighth day offered Gamaliel the son of Pedahzur, prince of the children of Manasseh:
೫೪ಎಂಟನೆಯ ದಿನದಲ್ಲಿ ಮನಸ್ಸೆ ಕುಲಾಧಿಪತಿಯೂ, ಪೆದಾಚೂರನ ಮಗನೂ ಆದ ಗಮ್ಲೀಯೇಲನು ಕಾಣಿಕೆಯನ್ನು ಸಮರ್ಪಿಸಿದನು.
55 His offering was one silver charger of the weight of an hundred and thirty shekels, one silver bowl of seventy shekels, after the shekel of the sanctuary; both of them full of fine flour mingled with oil for a meat offering:
೫೫ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಬೆಳ್ಳಿಯ ಒಂದು ತಟ್ಟೆ, ಎಪ್ಪತ್ತು ಶೆಕೆಲ್ ತೂಕವುಳ್ಳ ಬೆಳ್ಳಿಯ ಒಂದು ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
56 One golden spoon of ten shekels, full of incense:
೫೬ಅವನು ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.
57 One young bullock, one ram, one lamb of the first year, for a burnt offering:
೫೭ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು.
58 One kid of the goats for a sin offering:
೫೮ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ,
59 And for a sacrifice of peace offerings, two oxen, five rams, five he goats, five lambs of the first year: this was the offering of Gamaliel the son of Pedahzur.
೫೯ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು.
60 On the ninth day Abidan the son of Gideoni, prince of the children of Benjamin, offered:
೬೦ಒಂಭತ್ತನೆಯ ದಿನದಲ್ಲಿ ಬೆನ್ಯಾಮೀನ್ ಕುಲಾಧಿಪತಿಯೂ ಗಿದ್ಯೋನಿಯ ಮಗನೂ ಆದ ಅಬೀದಾನನು ಕಾಣಿಕೆಯನ್ನು ಸಮರ್ಪಿಸಿದನು.
61 His offering was one silver charger, the weight whereof was an hundred and thirty shekels, one silver bowl of seventy shekels, after the shekel of the sanctuary; both of them full of fine flour mingled with oil for a meat offering:
೬೧ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆ; ಎಪ್ಪತ್ತು ಶೆಕೆಲ್ ತೂಕವುಳ್ಳ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
62 One golden spoon of ten shekels, full of incense:
೬೨ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.
63 One young bullock, one ram, one lamb of the first year, for a burnt offering:
೬೩ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು.
64 One kid of the goats for a sin offering:
೬೪ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ,
65 And for a sacrifice of peace offerings, two oxen, five rams, five he goats, five lambs of the first year: this was the offering of Abidan the son of Gideoni.
೬೫ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಗಿದ್ಯೋನಿಯ ಮಗನಾದ ಅಬೀದಾನನು ಕಾಣಿಕೆಯಾಗಿ ಸಮರ್ಪಿಸಿದ ಕಾಣಿಕೆಗಳು ಇವೇ.
66 On the tenth day Ahiezer the son of Ammishaddai, prince of the children of Dan, offered:
೬೬ಹತ್ತನೆಯ ದಿನದಲ್ಲಿ ದಾನ್ ಕುಲಾಧಿಪತಿಯೂ ಅಮ್ಮೀಷದ್ದೈಯ ಮಗನೂ ಆದ ಅಹೀಗೆಜೆರನು ಕಾಣಿಕೆಯನ್ನು ಸಮರ್ಪಿಸಿದನು.
67 His offering was one silver charger, the weight whereof was an hundred and thirty shekels, one silver bowl of seventy shekels, after the shekel of the sanctuary; both of them full of fine flour mingled with oil for a meat offering:
೬೭ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆ; ಎಪ್ಪತ್ತು ಶೆಕಲ್ ತೂಕವುಳ್ಳ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
68 One golden spoon of ten shekels, full of incense:
೬೮ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.
69 One young bullock, one ram, one lamb of the first year, for a burnt offering:
೬೯ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು.
70 One kid of the goats for a sin offering:
೭೦ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ,
71 And for a sacrifice of peace offerings, two oxen, five rams, five he goats, five lambs of the first year: this was the offering of Ahiezer the son of Ammishaddai.
೭೧ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಅಮ್ಮೀಷದ್ದೈಯ ಮಗನಾದ ಅಹೀಗೆಜೆರನು ಸಮರ್ಪಿಸಿದ ಕಾಣಿಕೆಗಳು ಇವೇ.
72 On the eleventh day Pagiel the son of Ocran, prince of the children of Asher, offered:
೭೨ಹನ್ನೊಂದನೆಯ ದಿನದಲ್ಲಿ ಆಶೇರ್ ಕುಲಾಧಿಪತಿಯೂ ಒಕ್ರಾನನ ಮಗನೂ ಆದ ಪಗೀಯೇಲನು ಕಾಣಿಕೆಯನ್ನು ಸಮರ್ಪಿಸಿದನು.
73 His offering was one silver charger, the weight whereof was an hundred and thirty shekels, one silver bowl of seventy shekels, after the shekel of the sanctuary; both of them full of fine flour mingled with oil for a meat offering:
೭೩ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆಯೂ, ಎಪ್ಪತ್ತು ಶೆಕೆಲ್ ತೂಕವುಳ್ಳ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
74 One golden spoon of ten shekels, full of incense:
೭೪ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.
75 One young bullock, one ram, one lamb of the first year, for a burnt offering:
೭೫ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು.
76 One kid of the goats for a sin offering:
೭೬ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ,
77 And for a sacrifice of peace offerings, two oxen, five rams, five he goats, five lambs of the first year: this was the offering of Pagiel the son of Ocran.
೭೭ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು.
78 On the twelfth day Ahira the son of Enan, prince of the children of Naphtali, offered:
೭೮ಹನ್ನೆರಡನೆಯ ದಿನದಲ್ಲಿ ನಫ್ತಾಲಿ ಕುಲಾಧಿಪತಿಯೂ ಏನಾನನ ಮಗನೂ ಆದ ಅಹೀರನು ಕಾಣಿಕೆಯನ್ನು ಸಮರ್ಪಿಸಿದನು.
79 His offering was one silver charger, the weight whereof was an hundred and thirty shekels, one silver bowl of seventy shekels, after the shekel of the sanctuary; both of them full of fine flour mingled with oil for a meat offering:
೭೯ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆ, ಎಪ್ಪತ್ತು ಶೆಕೆಲ್ ತೂಕವುಳ್ಳ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
80 One golden spoon of ten shekels, full of incense:
೮೦ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.
81 One young bullock, one ram, one lamb of the first year, for a burnt offering:
೮೧ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು.
82 One kid of the goats for a sin offering:
೮೨ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ,
83 And for a sacrifice of peace offerings, two oxen, five rams, five he goats, five lambs of the first year: this was the offering of Ahira the son of Enan.
೮೩ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು.
84 This was the dedication of the altar, in the day when it was anointed, by the princes of Israel: twelve chargers of silver, twelve silver bowls, twelve spoons of gold:
೮೪ಯಜ್ಞವೇದಿ ಅಭಿಷೇಕಿಸಲ್ಪಟ್ಟ ದಿನದಲ್ಲಿ ಇಸ್ರಾಯೇಲರ ಕುಲಾಧಿಪತಿಗಳು, ಅದರ ಪ್ರತಿಷ್ಠೆಗಾಗಿ ಕೊಟ್ಟ ಕಾಣಿಕೆಗಳು ಒಟ್ಟಾಗಿ 12 ಬೆಳ್ಳಿಯ ತಟ್ಟೆಗಳು, 12 ಬೆಳ್ಳಿಯ ಬಟ್ಟಲುಗಳು, 12 ಚಿನ್ನದ ಧೂಪಾರತಿಗಳು.
85 Each charger of silver weighing an hundred and thirty shekels, each bowl seventy: all the silver vessels weighed two thousand and four hundred shekels, after the shekel of the sanctuary:
೮೫ಒಂದೊಂದು ಬೆಳ್ಳಿಯ ತಟ್ಟೆಯು 120 ಶೆಕೆಲ್ ತೂಕವುಳ್ಳದ್ದು, ಒಂದೊಂದು ಬಟ್ಟಲು 70 ಶೆಕೆಲ್ ತೂಕದ್ದು. ಆ ಬೆಳ್ಳಿಯ ಪಾತ್ರೆಗಳ ಒಟ್ಟು ತೂಕ ದೇವಸ್ಥಾನದ ನಾಣ್ಯ ತೂಕದ ಪ್ರಕಾರ 2,400 ಶೆಕೆಲ್.
86 The golden spoons were twelve, full of incense, weighing ten shekels apiece, after the shekel of the sanctuary: all the gold of the spoons was an hundred and twenty shekels.
೮೬ಧೂಪದ್ರವ್ಯ ತುಂಬಿದ್ದ ಒಂದೊಂದು ಚಿನ್ನದ ಧೂಪಾರತಿಯ ತೂಕವು ದೇವಸ್ಥಾನದ ನಾಣ್ಯ ತೂಕದ ಪ್ರಕಾರ ಹತ್ತು ಶೆಕೆಲ್ ಮೇರೆಗೆ ಇರುವುದರಿಂದ ಆ ಹನ್ನೆರಡು ಧೂಪಾರತಿಗಳ ಚಿನ್ನವು ಒಟ್ಟಾಗಿ 120 ಶೆಕೆಲ್.
87 All the oxen for the burnt offering were twelve bullocks, the rams twelve, the lambs of the first year twelve, with their meat offering: and the kids of the goats for sin offering twelve.
೮೭ಸರ್ವಾಂಗಹೋಮಕ್ಕಾಗಿ ಕೊಟ್ಟ ಒಟ್ಟು ಪಶುಗಳು: 12 ಹೋರಿಗಳು, 12 ಟಗರುಗಳು, ಒಂದು ವರ್ಷದ 12 ಕುರಿಗಳು ಇವುಗಳೊಂದಿಗೆ ಸಮರ್ಪಿಸಬೇಕಾದ ಧಾನ್ಯದ್ರವ್ಯವನ್ನೂ ಕೊಟ್ಟರು. ದೋಷಪರಿಹಾರಕ ಯಜ್ಞಕ್ಕಾಗಿ ಕೊಟ್ಟದ್ದು 12 ಹೋತಗಳು.
88 And all the oxen for the sacrifice of the peace offerings were twenty and four bullocks, the rams sixty, the he goats sixty, the lambs of the first year sixty. This was the dedication of the altar, after that it was anointed.
೮೮ಸಮಾಧಾನಯಜ್ಞಕ್ಕಾಗಿ ಕೊಟ್ಟ ಒಟ್ಟು ಪಶುಗಳು: 24 ಹೋರಿಗಳು, 60 ಟಗರುಗಳು, 60 ಹೋತಗಳು, ಒಂದು ವರ್ಷದ 60 ಕುರಿಗಳು, ಯಜ್ಞವೇದಿಯು ಅಭಿಷೇಕಿಸಲ್ಪಟ್ಟ ನಂತರ ಇದೇ ಅದರ ಪ್ರತಿಷ್ಠೆಗೆ ಸಮರ್ಪಿಸಲ್ಪಟ್ಟ ಕಾಣಿಕೆ.
89 And when Moses was gone into the tabernacle of the congregation to speak with him, then he heard the voice of one speaking unto him from off the mercy seat that was upon the ark of testimony, from between the two cherubims: and he spake unto him
೮೯ಮೋಶೆ ಯೆಹೋವನ ಸಂಗಡ ಮಾತನಾಡಬೇಕೆಂದು ದೇವದರ್ಶನದ ಗುಡಾರದೊಳಗೆ ಹೋದಾಗ ಆಜ್ಞಾಶಾಸನಗಳ ಮಂಜೂಷದ ಮೇಲಣ ಕೃಪಾಸನದ ಮೇಲಿನಿಂದ ಆ ಎರಡು ಕೆರೂಬಿಗಳ ನಡುವೆಯಿಂದ ತನ್ನ ಸಂಗಡ ಮಾತನಾಡುವ ಯೆಹೋವನ ಸ್ವರವು ಅವನಿಗೆ ಕೇಳಿಸಿತು. ಹೀಗೆ ಯೆಹೋವನು ಮೋಶೆಯ ಸಂಗಡ ಮಾತನಾಡಿದನು.