< Hebrews 1 >
1 God, who at several times and in divers manners spoke in time past unto the fathers by the prophets,
೧ದೇವರು ಪುರಾತನ ಕಾಲದಲ್ಲಿ ನಮ್ಮ ಪೂರ್ವಿಕರ ಸಂಗಡ ಪ್ರವಾದಿಗಳ ಮುಖಾಂತರ ಹಲವಾರು ವಿಧದಲ್ಲಿ, ಅನೇಕಸಾರಿ ಮಾತನಾಡಿದ್ದಾನೆ.
2 Has in these last days spoken unto us by his Son, whom he has appointed heir of all things, by whom also he made the worlds; (aiōn )
೨ಆದರೆ ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ಮಗನ ಮುಖಾಂತರ ಮಾತನಾಡಿದ್ದಾನೆ. ಆತನನ್ನು ಎಲ್ಲದಕ್ಕೂ ಬಾಧ್ಯಸ್ಥನನ್ನಾಗಿ ನೇಮಿಸಿದನು ಮತ್ತು ಆತನ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದನು. (aiōn )
3 Who being the brightness of his glory, and the express image of his person, and upholding all things by the word (rhema) of his power, when he had by himself purged our sins, sat down on the right hand of the Majesty on high:
೩ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.
4 Being made so much better than the angels, as he has by inheritance obtained a more excellent name than they.
೪ಈತನು ದೇವದೂತರಿಗಿಂತಲೂ ಉನ್ನತನಾಗಿದ್ದು. ಅವರಿಗಿಂತ ಅತಿ ಶ್ರೇಷ್ಠವಾದ ಹೆಸರನ್ನು ಬಾಧ್ಯವಾಗಿ ಹೊಂದಿದನು.
5 For unto which of the angels said he at any time, You are my Son, this day have I begotten you? And again, I will be to him a Father, and he shall be to me a Son?
೫ಹೇಗೆಂದರೆ, ದೇವರು ತನ್ನ ದೇವದೂತರೊಳಗೆ ಯಾರಿಗಾದರೂ ಎಂದಾದರೂ ಈ ರೀತಿಯಾಗಿ ಹೇಳಿದ್ದುಂಟೋ?, “ನೀನು ನನ್ನ ಮಗನು, ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.” “ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು.”
6 And again, when he brings in the First-Born into the world, he says, And let all the angels of God worship him.
೬ಇದಲ್ಲದೆ ದೇವರು ತನ್ನ ಚೊಚ್ಚಲು ಮಗನನ್ನು ಭೂಲೋಕಕ್ಕೆ ತಿರುಗಿ ಬರಮಾಡುವಾಗ “ದೇವದೂತರೆಲ್ಲರೂ ಆತನನ್ನು ಆರಾಧಿಸಬೇಕು” ಎಂದು ಆಜ್ಞಾಪಿಸಿದ್ದಾನೆ.
7 And of the angels he says, Who makes his angels spirits, (pneuma) and his ministers a flame of fire.
೭ದೇವದೂತರ ವಿಷಯದಲ್ಲಿ, “ದೇವರು ತನ್ನ ದೂತರನ್ನು ಗಾಳಿಯನ್ನಾಗಿಯೂ, ತನ್ನ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾನೆ” ಎಂದು ಹೇಳಿದ್ದಾನೆ.
8 But unto the Son he says, Your throne, O God, is for ever and ever: a sceptre of righteousness is the sceptre of your kingdom. (aiōn )
೮ಆದರೆ ಮಗನ ವಿಷಯದಲ್ಲಿಯಾದರೋ, “ದೇವರೇ ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು. ನೀತಿದಂಡವೇ ನಿನ್ನ ರಾಜದಂಡವಾಗಿದೆ. (aiōn )
9 You have loved righteousness, and hated iniquity; therefore God, even your God, has anointed you with the oil of gladness above your fellows.
೯ನೀನು ನೀತಿಯನ್ನು ಪ್ರೀತಿಸಿದ್ದೀ ಮತ್ತು ಅನ್ಯಾಯವನ್ನು ದ್ವೇಷಿಸಿದ್ದೀ. ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಅಧಿಕವಾಗಿ ಪರಮಾನಂದ ತೈಲದಿಂದ ಅಭಿಷೇಕಿಸಿದ್ದಾನೆ” ಎಂದು ಹೇಳಿದ್ದಾನೆ.
10 And, You, Lord, in the beginning have laid the foundation of the earth; and the heavens are the works of your hands:
೧೦“ಕರ್ತನೇ ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀ. ಆಕಾಶವು ನಿನ್ನ ಕೈಕೆಲಸವಾಗಿದೆ,
11 They shall perish; but you remain; and they all shall wax old as does a garment;
೧೧ಅವು ನಾಶವಾಗುವವು. ಆದರೆ ನೀನು ಶಾಶ್ವತವಾಗಿರುತ್ತೀ. ಅವೆಲ್ಲವೂ ವಸ್ತ್ರದಂತೆ ಹಳೆಯದಾಗುವವು.
12 And as a vesture shall you fold them up, and they shall be changed: but you are the same, and your years shall not fail.
೧೨ಅವುಗಳನ್ನು ಮೇಲಂಗಿಯಂತೆ ಮಡಿಸುತ್ತೀ ಮತ್ತು ಅವು ವಸ್ತ್ರದಂತೆ ಬದಲಾಗುವವು. ನೀನಾದರೂ ಅನನ್ಯನು. ನಿನ್ನ ವರ್ಷಗಳಿಗೆ ಅಂತ್ಯವೇ ಇಲ್ಲ” ಎಂತಲೂ ಹೇಳುತ್ತಾನೆ.
13 But to which of the angels said he at any time, Sit on my right hand, until I make your enemies your footstool?
೧೩ಆದರೆ ಯಾವ ದೇವದೂತನಿಗಾದರೂ ದೇವರು, “ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂಬುದಾಗಿ ಎಂದಾದರೂ ಹೇಳಿದ್ದಾನೋ?
14 Are they not all ministering spirits, (pneuma) sent forth to minister for them who shall be heirs of salvation?
೧೪ಈ ಎಲ್ಲಾ ದೇವದೂತರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಟ್ಟ ಸೇವಕಾತ್ಮಗಳಲ್ಲವೋ?