< Psalms 31 >
1 To the chief Musician, A Psalm of David. In thee, O LORD, do I put my trust; let me never be ashamed: deliver me in thy righteousness.
ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ದಾವೀದನ ಕೀರ್ತನೆ. ಯೆಹೋವ ದೇವರೇ, ನಿಮ್ಮನ್ನೇ ಆಶ್ರಯಿಸಿಕೊಂಡಿದ್ದೇನೆ; ನಾನು ಎಂದಿಗೂ ನಾಚಿಕೆಪಡದಂತೆ ಮಾಡಿರಿ; ನಿಮ್ಮ ನೀತಿಯಲ್ಲಿ ನನ್ನನ್ನು ವಿಮೋಚಿಸಿರಿ.
2 Bow down thine ear to me; deliver me speedily: be thou my strong rock, for an house of defence to save me.
ನಿಮ್ಮ ಕಿವಿಯನ್ನು ನನ್ನ ಕಡೆಗೆ ತಿರುಗಿಸಿರಿ; ಬೇಗ ಬಂದು ನನ್ನನ್ನು ಬಿಡಿಸಿರಿ; ನನ್ನನ್ನು ರಕ್ಷಿಸುವುದಕ್ಕೆ ನನ್ನ ಆಶ್ರಯದ ಬಂಡೆಯೂ, ಬಲವಾದ ಕೋಟೆಯೂ ಆಗಿರಿ.
3 For thou [art] my rock and my fortress; therefore for thy name’s sake lead me, and guide me.
ನನ್ನ ಬಂಡೆಯೂ ನನ್ನ ಕೋಟೆಯೂ ನೀವೇ; ನಿಮ್ಮ ಹೆಸರಿನ ನಿಮಿತ್ತ ನನ್ನನ್ನು ನಡೆಸಿರಿ; ನನಗೆ ಮಾರ್ಗದರ್ಶಕರಾಗಿರಿ.
4 Pull me out of the net that they have laid privily for me: for thou [art] my strength.
ವೈರಿಯು ಗುಪ್ತವಾಗಿ ಒಡ್ಡಿದ ಬಲೆಯೊಳಗಿಂದ ನನ್ನನ್ನು ಹೊರಗೆ ಎಳೆಯಿರಿ; ನೀವೇ ನನಗೆ ಆಶ್ರಯ.
5 Into thine hand I commit my spirit: thou hast redeemed me, O LORD God of truth.
ನಿಮ್ಮ ಕೈಗೆ ನನ್ನ ಆತ್ಮವನ್ನು ಒಪ್ಪಿಸಿದ್ದೇನೆ; ನಂಬಿಗಸ್ತದ ದೇವರಾದ ನನ್ನ ಯೆಹೋವ ದೇವರೇ, ನೀವು ನನ್ನನ್ನು ವಿಮೋಚಿಸಿದ್ದೀರಿ.
6 I have hated them that regard lying vanities: but I trust in the LORD.
ದೇವರಲ್ಲದವುಗಳನ್ನು ಅನುಸರಿಸುವವರಿಂದ ನಾನು ಪ್ರತ್ಯೇಕವಾಗಿದ್ದೇನೆ; ನಾನು ಯೆಹೋವ ದೇವರಲ್ಲಿಯೇ ಭರವಸೆ ಇಟ್ಟಿದ್ದೇನೆ.
7 I will be glad and rejoice in thy mercy: for thou hast considered my trouble; thou hast known my soul in adversities;
ನಿಮ್ಮ ಒಡಂಬಡಿಕೆಯ ಪ್ರೀತಿಯಲ್ಲಿ ಉಲ್ಲಾಸಿಸಿ ಸಂತೋಷ ಪಡುವೆನು; ಏಕೆಂದರೆ ನೀವು ನನ್ನ ಕಷ್ಟಗಳನ್ನು ಲಕ್ಷ್ಯಕ್ಕೆ ತಂದು, ನನ್ನ ಪ್ರಾಣದ ಸಂಕಟಗಳನ್ನು ಅರಿತಿದ್ದೀರಿ.
8 And hast not shut me up into the hand of the enemy: thou hast set my feet in a large room.
ಶತ್ರುವಿನ ಕೈಯಲ್ಲಿ ನನ್ನನ್ನು ಒಪ್ಪಿಸಿ ಬಿಡಲಿಲ್ಲ; ನನ್ನ ಪಾದಗಳನ್ನು ವಿಶಾಲವಾದ ಸ್ಥಳದಲ್ಲಿ ನಿಲ್ಲಿಸಿದ್ದೀರಿ.
9 Have mercy upon me, O LORD, for I am in trouble: mine eye is consumed with grief, [yea], my soul and my belly.
ಯೆಹೋವ ದೇವರೇ, ನನ್ನನ್ನು ಕರುಣಿಸಿರಿ, ನಾನು ಇಕ್ಕಟ್ಟಿನಲ್ಲಿದ್ದೇನೆ; ನನ್ನ ಕಣ್ಣೂ ನನ್ನ ಪ್ರಾಣವೂ ನನ್ನ ದೇಹವೂ ದುಃಖದಿಂದ ಕ್ಷೀಣವಾಗಿವೆ.
10 For my life is spent with grief, and my years with sighing: my strength faileth because of mine iniquity, and my bones are consumed.
ನನ್ನ ಜೀವವು ಚಿಂತೆಯಿಂದಲೂ, ನನ್ನ ವರ್ಷಗಳು ನಿಟ್ಟುಸಿರಿನಿಂದಲೂ ಕಳೆದುಹೋಗಿವೆ; ನನ್ನ ಅಪರಾಧದಿಂದ ನನ್ನ ಶಕ್ತಿಯು ಕುಂದಿಹೋಗಿದೆ; ನನ್ನ ಎಲುಬುಗಳು ಕ್ಷೀಣವಾಗಿವೆ.
11 I was a reproach among all mine enemies, but especially among my neighbours, and a fear to mine acquaintance: they that did see me without fled from me.
ನನ್ನ ವೈರಿಗಳೆಲ್ಲರ ನಿಮಿತ್ತವಾಗಿ ನನ್ನ ನೆರೆಯವರಿಗೆ ನಾನು ನಿಂದೆಯೂ, ಮಿತ್ರರಿಗೆ ಹೆದರಿಕೆಯೂ ಆಗಿದ್ದೇನೆ; ದಾರಿಯಲ್ಲಿ ನನ್ನನ್ನು ಕಂಡವರು ನನ್ನನ್ನು ಬಿಟ್ಟು ಓಡಿಹೋಗುತ್ತಾರೆ.
12 I am forgotten as a dead man out of mind: I am like a broken vessel.
ನಾನು ಸತ್ತುಹೋದವರಂತೆ ಎಲ್ಲರು ನನ್ನನ್ನು ಮರೆತುಬಿಟ್ಟಿದ್ದಾರೆ; ನಾನು ಒಡೆದ ಮಡಕೆಯಂತೆ ಇದ್ದೇನೆ.
13 For I have heard the slander of many: fear [was] on every side: while they took counsel together against me, they devised to take away my life.
ಅನೇಕರು ಹೀಗೆ ಪಿಸುಗುಟ್ಟುವುದನ್ನು ಕೇಳಿದ್ದೇನೆ. ಸುತ್ತಲೂ ಅಂಜಿಕೆ ಇದೆ; ಅನೇಕರು ನನ್ನ ಪ್ರಾಣವನ್ನು ತೆಗೆಯಬೇಕೆಂದು ಒಳಸಂಚು ಮಾಡುತ್ತಿದ್ದಾರೆ.
14 But I trusted in thee, O LORD: I said, Thou [art] my God.
ಯೆಹೋವ ದೇವರೇ, ನಾನು ನಿಮ್ಮಲ್ಲಿ ಭರವಸೆ ಇಟ್ಟಿದ್ದೇನೆ; “ನನ್ನ ದೇವರು ನೀವೇ,” ಎಂದು ಹೇಳಿಕೊಂಡಿದ್ದೇನೆ.
15 My times [are] in thy hand: deliver me from the hand of mine enemies, and from them that persecute me.
ನನ್ನ ಸಮಯವು ನಿಮ್ಮ ಕೈಯಲ್ಲಿ ಇವೆ; ನನ್ನ ಶತ್ರುಗಳ ಕೈಯಿಂದಲೂ ಹಿಂಸೆಪಡಿಸುವವರಿಂದಲೂ ನನ್ನನ್ನು ಬಿಡಿಸಿರಿ.
16 Make thy face to shine upon thy servant: save me for thy mercies’ sake.
ನಿಮ್ಮ ಮುಖವು ನಿಮ್ಮ ಸೇವಕನ ಮೇಲೆ ಪ್ರಕಾಶಿಸಲಿ; ನಿಮ್ಮ ಒಡಂಬಡಿಕೆಯ ಪ್ರೀತಿಯಿಂದ ನನ್ನನ್ನು ರಕ್ಷಿಸಿರಿ.
17 Let me not be ashamed, O LORD; for I have called upon thee: let the wicked be ashamed, [and] let them be silent in the grave. (Sheol )
ಯೆಹೋವ ದೇವರೇ, ನಾನು ನಾಚಿಕೆಪಡದಂತೆ ಮಾಡಿರಿ; ನಾನು ನಿಮಗೆ ಮೊರೆಯಿಟ್ಟಿದ್ದೇನೆ; ದುಷ್ಟರು ನಾಚಿಕೆಪಡಲಿ; ಅವರು ಸಮಾಧಿ ಸೇರಲಿ. (Sheol )
18 Let the lying lips be put to silence; which speak grievous things proudly and contemptuously against the righteous.
ನೀತಿವಂತರ ಮೇಲೆ ಗರ್ವದಿಂದಲೂ ತಿರಸ್ಕಾರದಿಂದಲೂ, ಕಠಿಣವಾಗಿಯೂ ಮಾತನಾಡುವ ಸುಳ್ಳಿನ ತುಟಿಗಳು ಮೌನವಾಗಲಿ.
19 [Oh] how great [is] thy goodness, which thou hast laid up for them that fear thee; [which] thou hast wrought for them that trust in thee before the sons of men!
ನಿಮ್ಮ ಒಳ್ಳೆಯತನವು ಎಷ್ಟೋ ಸಮೃದ್ಧ; ನೀವು ನಿಮಗೆ ಭಯಪಡುವವರಿಗೋಸ್ಕರ ಆ ಒಳ್ಳೆಯತನವನ್ನಿಟ್ಟಿದ್ದೀರಿ, ನಿಮ್ಮನ್ನು ಆಶ್ರಯಿಸಿಕೊಳ್ಳುವವರಿಗೆ ನೀವು ನಿಮ್ಮ ಒಳ್ಳೆಯತನವನ್ನು ಎಲ್ಲರ ಮುಂದೆ ದಯಪಾಲಿಸಿದ್ದೀರಿ.
20 Thou shalt hide them in the secret of thy presence from the pride of man: thou shalt keep them secretly in a pavilion from the strife of tongues.
ಮನುಷ್ಯರ ಒಳಸಂಚುಗಳಿಂದ ಹಾನಿ ಉಂಟಾಗದಂತೆ ನೀವು ಅವರನ್ನು ನಿಮ್ಮ ಸಾನಿಧ್ಯದಲ್ಲಿಯೇ ಮರೆಮಾಡುತ್ತೀರಿ; ವಿವಾದಿಸುವ ನಾಲಿಗೆಗಳಿಂದ ಕೇಡಾಗದಂತೆ ಅವರನ್ನು ನಿಮ್ಮ ನಿವಾಸದಲ್ಲಿ ಅಡಗಿಸುತ್ತೀರಿ.
21 Blessed [be] the LORD: for he hath shewed me his marvellous kindness in a strong city.
ಯೆಹೋವ ದೇವರಿಗೆ ಸ್ತುತಿಯುಂಟಾಗಲಿ; ಮುತ್ತಿಗೆ ಹಾಕಲಾದ ನಗರದಲ್ಲಿದ್ದ ನನಗೆ ದೇವರು ಆಶ್ಚರ್ಯಕರವಾದ ಒಡಂಬಡಿಕೆಯ ಪ್ರೀತಿಯನ್ನು ತೋರಿಸಿದ್ದಾರೆ.
22 For I said in my haste, I am cut off from before thine eyes: nevertheless thou heardest the voice of my supplications when I cried unto thee.
“ನಾನು ನಿಮ್ಮ ಕಣ್ಣುಗಳ ಎದುರಿನಿಂದ ತೆಗೆದು ಹಾಕಲಾಗಿದ್ದೇನೆ” ಎಂದು ನನ್ನ ಗಾಬರಿಯಲ್ಲಿ ಹೇಳಿದೆನು; ಆದರೂ ನಾನು ಸಹಾಯಕ್ಕಾಗಿ ನಿಮಗೆ ಮೊರೆಯಿಡಲು ನೀವು ಕರುಣೆಗಾಗಿ ಕೂಗಿದ್ದನ್ನು ಕೇಳಿದ್ದೀರಿ.
23 O love the LORD, all ye his saints: [for] the LORD preserveth the faithful, and plentifully rewardeth the proud doer.
ಭಕ್ತರೇ, ಯೆಹೋವ ದೇವರನ್ನು ಪ್ರೀತಿಸಿರಿ; ಯೆಹೋವ ದೇವರು ನಂಬಿಗಸ್ತರನ್ನು ಕಾಯುತ್ತಾರೆ; ಅಹಂಕಾರಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾರೆ.
24 Be of good courage, and he shall strengthen your heart, all ye that hope in the LORD.
ಯೆಹೋವ ದೇವರಲ್ಲಿ ನಿರೀಕ್ಷಿಸುವವರೆಲ್ಲರೂ ದೃಢವಾಗಿರಿ; ನಿಮ್ಮ ಹೃದಯವು ಧೈರ್ಯದಿಂದ ಇರಲಿ.