< Joshua 20 >
1 And the Lord spoke to Joshua, saying,
೧ಯೆಹೋವನು ಯೆಹೋಶುವನನ್ನು ಕುರಿತು,
2 Speak to the children of Israel, saying, Assign the cities of refuge, [of] which I spoke to you by Moses.
೨“ನೀನು ಇಸ್ರಾಯೇಲರಿಗೆ ‘ನಾನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ನೀವು ನಿಮಗೋಸ್ಕರ ಕೆಲವು ಆಶ್ರಯ ನಗರಗಳನ್ನು ಗೊತ್ತು ಮಾಡಿಕೊಳ್ಳಿರಿ;
3 [Even] a refuge to the slayer who has struck a man unintentionally; and the cities shall be to you a refuge, and the slayer shall not be put to death by the avenger of blood, until he have stood before the congregation for judgment.
೩ನಿಮ್ಮಲ್ಲಿ ತಿಳಿಯದೆ ಆಕಸ್ಮಾತ್ತಾಗಿ ನರಹತ್ಯಮಾಡಿದವನು ಅಲ್ಲಿಗೆ ಓಡಿಹೋಗಲಿ. ಹತವಾದವನ ಸಮೀಪ ಬಂಧುವು ಮುಯ್ಯಿತೀರಿಸದಂತೆ ಅವು ನಿಮಗೆ ಆಶ್ರಯಸ್ಥಾನಗಳಾಗಿರಲಿ.
4 And Joshua separated Cades in Galilee in the mount Nephthali, and Sychem in the mount Ephraim, and the city of Arboc; this is Chebron, in the mountain of Juda.
೪ಅಂಥ ಪಟ್ಟಣಕ್ಕೆ ಓಡಿ ಹೋದವನು ಮೊದಲು ಊರ ಬಾಗಿಲಲ್ಲೇ ನಿಂತುಕೊಂಡು ಅಲ್ಲಿನ ಹಿರಿಯರಿಗೆ ತನ್ನ ಸಂಗತಿಯನ್ನು ತಿಳಿಯಪಡಿಸಲಿ. ಅವರು ಅವನನ್ನು ಊರೊಳಕ್ಕೆ ಸೇರಿಸಿಕೊಂಡು, ಅವನ ವಾಸಕ್ಕೆ ಸ್ಥಳ ಕೊಡಲಿ
5 And beyond Jordan he appointed Bosor in the wilderness in the plain out of the tribe of Ruben, and Aremoth in Galaad out of the tribe of Gad, and Gaulon in the country of Basan out of the tribe of Manasse.
೫ಹತವಾದವನ ಸಮೀಪ ಬಂಧುವು ಕೊಂದವನನ್ನು ಹಿಂದಟ್ಟಿಕೊಂಡು ಅಲ್ಲಿಗೆ ಬಂದರೆ ಅವರು ಅವನನ್ನು ಅವನ ಕೈಗೆ ಒಪ್ಪಿಸಬಾರದು. ಏಕೆಂದರೆ ಅವನು ನೆರೆಯವನನ್ನು ಹಳೆಯ ದ್ವೇಷವೇನೂ ಇಲ್ಲದೆ ಆಕಸ್ಮಾತ್ತಾಗಿ ಕೊಂದನು.
6 These [were] the cities selected for the sons of Israel, and for the stranger dwelling among them, that every one who smites a soul unintentionally should flee there, that he should not die by the hand of the avenger of blood, until he should stand before the congregation for judgment.
೬ಒಂದು ಸಭೆಯನ್ನು ಸೇರಿಸಿ ಅಂಥವನನ್ನು ವಿಚಾರಿಸಬೇಕು; ಮತ್ತು ಅವನು ಆಗಿನ ಮಹಾಯಾಜಕನ ಜೀವಮಾನವೆಲ್ಲಾ ಅದೇ ಪಟ್ಟಣದಲ್ಲಿ ಇರಬೇಕು. ಆ ನಂತರ ತಾನು ಬಿಟ್ಟು ಬಂದ ಪಟ್ಟಣದಲ್ಲಿರುವ ಮನೆಗೆ ಹಿಂತಿರುಗಿ ಹೋಗಬಹುದು’ ಎಂದು ಹೇಳು” ಎಂದನು.
೭ಇಸ್ರಾಯೇಲ್ಯರು ನಫ್ತಾಲಿ ಕುಲದವರ ಪರ್ವತಪ್ರದೇಶವಾದ ಗಲಿಲಾಯ ಪ್ರಾಂತ್ಯದಲ್ಲಿನ ಕೆದೆಷ್, ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿನ ಶೆಕೆಮ್ ಹಾಗೂ ಯೆಹೂದ್ಯರ ಬೆಟ್ಟದ ಸೀಮೆಯಲ್ಲಿ ಹೆಬ್ರೋನ್ ಅನ್ನಿಸಿಕೊಳ್ಳುವ ಕಿರ್ಯತರ್ಬ ಎಂಬ ಪಟ್ಟಣಗಳನ್ನು ನೇಮಿಸಿದರು.
೮ಇವುಗಳನ್ನು ಮಾತ್ರವಲ್ಲದೆ, ಯೆರಿಕೋವಿನ ಪೂರ್ವದಲ್ಲಿರುವ ಯೊರ್ದನಿನ ಆಚೆಯಲ್ಲಿ ರೂಬೇನ್ಯರ ಬೆಟ್ಟದ ಮೇಲಿನ ಅರಣ್ಯ ಪ್ರದೇಶದಲ್ಲಿರುವ ಬೆಚೆರ್, ಗಾದ್ಯರಿಗೆ ಸೇರಿದ ಗಿಲ್ಯಾದ್ ಪ್ರಾಂತ್ಯದ ರಾಮೋತ್, ಮನಸ್ಸೆಯವರಿಗೆ ಸೇರಿದ ಬಾಷಾನಿನಲ್ಲಿರುವ ಗೋಲಾನ್ ಎಂಬ ಪಟ್ಟಣಗಳನ್ನು ನೇಮಿಸಿದನು.
೯ಇಸ್ರಾಯೇಲ್ಯರೆಲ್ಲರಿಗೂ ಹಾಗೂ ಅವರ ಮಧ್ಯದಲ್ಲಿ ವಾಸಮಾಡುತ್ತಿದ್ದ ಪರದೇಶಿಗಳಿಗೂ ಇವು ಆಶ್ರಯ ನಗರಗಳಾಗಿ ನೇಮಕ ಆಗಿದ್ದವು. ಬೇರೊಬ್ಬನನ್ನು ಆಕಸ್ಮಾತ್ತಾಗಿ ಕೊಂದವನು ಓಡಿಹೋಗಿ ಹತನಾದವನ ಹತ್ತಿರದ ಬಂಧುವಿನಿಂದ ತಲೆ ತಪ್ಪಿಸಿ ಕೊಳ್ಳಬಹುದು. ಅಲ್ಲದೆ ತಾನು ನ್ಯಾಯ ಸಭೆಯ ಮುಂದೆ ನಿಲ್ಲುವವರೆಗೆ ಅಲ್ಲೇ ಇರಬಹುದಾಗಿದೆ.