< Nehemiah 2 >

1 And it came to pass in the month Nisan of the twentieth year of king Arthasastha, that the wine was before me: and I took the wine, and gave [it] to the king: and there was not another before him.
ನಾನು ಅರಸನ ಪಾನಸೇವಕನಾಗಿದ್ದನು. ಅರಸನಾದ ಅರ್ತಷಸ್ತನ ಆಳ್ವಿಕೆಯ ಇಪ್ಪತ್ತನೆಯ ವರ್ಷದ ಚೈತ್ರಮಾಸದಲ್ಲಿ ದ್ರಾಕ್ಷಾರಸ ಪಾನಮಾಡುವ ಹೊತ್ತಿನಲ್ಲಿ ನಾನು ದ್ರಾಕ್ಷಾರಸವನ್ನು ತಂದು ಅವನಿಗೆ ಕೊಟ್ಟೆನು. ನಾನು ಅರಸನ ಸನ್ನಿಧಿಯಲ್ಲಿ ಇದ್ದಾಗ ಹಿಂದೆ ಎಂದೂ ಮನಗುಂದಿದವನಂತೆ ಇರಲಿಲ್ಲ.
2 And the king said to me, Why is your countenance sad, and do you not control yourself? and now this is nothing but sorrow of heart. Then I was very much alarmed,
ಅರಸನು ನನಗೆ, “ನಿನ್ನ ಮುಖ ಕಳೆಗುಂದಿರುವುದೇಕೆ? ನೀನು ಅಸ್ವಸ್ಥನಂತೆ ಕಾಣುವುದಿಲ್ಲ; ಇದು ಮನೋವೇದನೆಯಿಂದಾಗಿದೆಯೇ ಹೊರತು ಬೇರೇನೂ ಕಾರಣ ಇರಲಾರದು” ಎಂದು ಹೇಳಲು ನನಗೆ ಮಹಾ ಭೀತಿಯುಂಟಾಯಿತು.
3 and I said to the king, Let the king live for ever: why should not my countenance be said, forasmuch as the city, even the home of the sepulchres of my fathers, has been laid waste, and her gates have been devoured with fire?
ನಾನು ಅರಸನಿಗೆ, “ಅರಸನು ಚಿರಂಜೀವಿಯಾಗಿರಲಿ! ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳಾಗಿ, ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟು ಹೋಗಿವೆ; ಹೀಗಿರುವಲ್ಲಿ ನನ್ನ ಮುಖವು ಕಳೆಗುಂದದೆ ಇರುವುದು ಹೇಗೆ?” ಎಂದು ಹೇಳಿದೆನು.
4 And the king said to me, For what do you ask thus? So I prayed to the God of heaven.
ಆಗ ಅರಸನು, “ನಿನ್ನ ಅಪೇಕ್ಷೆಯೇನು” ಎಂದು ನನ್ನನ್ನು ಕೇಳಿದನು. ಆಗ ನಾನು ಪರಲೋಕದ ದೇವರನ್ನು ಪ್ರಾರ್ಥಿಸಿ,
5 And I said to the king, If [it seem] good to the king, and if your servant shall have found favor in your sight, [I ask] that [you] would send him into Juda, to the city of the sepulchres of my fathers; then will I rebuild it.
ಅರಸನಿಗೆ ಹೀಗೆ ಉತ್ತರಕೊಟ್ಟೆನು, “ಅರಸನೇ ನಿಮ್ಮ ಚಿತ್ತವಿರುವುದಾದರೆ ಮತ್ತು ತಮ್ಮ ಸೇವಕನಾದ ನಾನು ತಮ್ಮ ದೃಷ್ಟಿಯಲ್ಲಿ ದಯೆಗೆ ಪಾತ್ರನಾಗಿದ್ದರೆ ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವನ್ನು ತಿರುಗಿ ಕಟ್ಟುವುದಕ್ಕಾಗಿ ಯೆಹೂದ ದೇಶಕ್ಕೆ ಹೋಗಲು ನನಗೆ ಅಪ್ಪಣೆಯಾಗಬೇಕು” ಎಂದು ಹೇಳಿದೆನು.
6 And the king, and his concubine that sat next to him, said to me, For how long will your journey be, and when will you return? and [the proposal] was pleasing before the king, and he sent me away, and I appointed him a time.
ರಾಣಿಯು ಅರಸನ ಹತ್ತಿರದಲ್ಲೇ ಕುಳಿತುಕೊಂಡಿದ್ದಳು. ಅರಸನು ನನಗೆ, “ಪ್ರಯಾಣಕ್ಕೆ ನಿನಗೆಷ್ಟು ಕಾಲ ಬೇಕು? ಯಾವಾಗ ಹಿಂದಿರುಗುವಿ” ಎಂದು ವಿಚಾರಿಸಿದಾಗ ನಾನು ಕಾಲವನ್ನು ಸೂಚಿಸಲು ಅರಸನು ಒಪ್ಪಿಕೊಂಡು ಅಪ್ಪಣೆಕೊಟ್ಟನು.
7 And I said to the king, If [it seem] good to the king, let him give me letters to the governors beyond the river, so as to forward me till I come to Juda;
ತರುವಾಯ ನಾನು ಅರಸನಿಗೆ, “ನದಿಯಾಚೆಯ ದೇಶಾಧಿಪತಿಗಳು ತಮ್ಮ ಪ್ರಾಂತ್ಯಗಳ ಮೂಲಕ ಹಾದು ಯೆಹೂದ ಸೀಮೆಗೆ ಹೋಗುವುದಕ್ಕೆ ನನಗೆ ಅಪ್ಪಣೆಕೊಡುವ ಹಾಗೂ
8 and a letter to Asaph the keeper of the garden which belongs to the king, that he may give me timber to cover the gates, and for the wall of the city, and for the house into which I shall enter. And the king gave to me, according as the good hand of God [was upon me].
ರಾಜವನಪಾಲಕನಾದ ಆಸಾಫನು ದೇವಾಲಯದ ಕೋಟೆಯ ಬಾಗಿಲುಗಳು, ಪಟ್ಟಣದ ಪೌಳಿಗೋಡೆ, ನಾನು ಸೇರುವ ಮನೆ ಇವುಗಳಿಗೆ ಬೇಕಾಗುವ ತೊಲೆಗಳಿಗಾಗಿ ಮರಗಳನ್ನು ಕೊಡುವ ಹಾಗೆ ಅರಸನು ನನಗೆ ಪತ್ರಗಳನ್ನು ಕೊಡಬೇಕು” ಎಂದು ಬಿನ್ನವಿಸಲು, ನನ್ನ ದೇವರ ಕೃಪಾಹಸ್ತಪಾಲನೆ ನನಗಿದ್ದುದರಿಂದ ಅರಸನು ಅವುಗಳನ್ನು ನನಗೆ ಕೊಟ್ಟನು.
9 And I came to the governors beyond the river, and I gave them the king's letters. (Now the king had sent with me captains of the army and horsemen.)
ಅರಸನು ನನ್ನನ್ನು ಕಳುಹಿಸುವಾಗ ಸೇನಾಧಿಪತಿಗಳನ್ನೂ, ರಾಹುತರನ್ನೂ ನನ್ನೊಡನೆ ಕಳುಹಿಸಿದನು. ಹೀಗೆ ನಾನು ನದಿಯಾಚೆಯ ದೇಶಾಧಿಪತಿಗಳ ಬಳಿಗೆ ಬಂದು ಅರಸನ ಪತ್ರಗಳನ್ನು ಅವರಿಗೆ ಕೊಟ್ಟೆನು.
10 And Sanaballat the Aronite heard [it], and Tobia the servant, the Ammonite, and it was grievous to them that a man was come to seek good for the children of Israel.
೧೦ಇಸ್ರಾಯೇಲರ ಹಿತಚಿಂತಕನೊಬ್ಬನು ಬಂದಿದ್ದಾನೆಂಬ ವರ್ತಮಾನವು ಹೋರೋನ್ ಪಟ್ಟಣದವನಾದ ಸನ್ಬಲ್ಲಟನಿಗೂ, ಅಮ್ಮೋನ್ ದೇಶದವನಾದ ಟೋಬೀಯ ಎಂಬ ದಾಸನಿಗೂ ತಲುಪಿದಾಗ ಅವರು ಬಹಳವಾಗಿ ಹೊಟ್ಟೆಕಿಚ್ಚುಪಟ್ಟರು.
11 So I came to Jerusalem, and was there three days.
೧೧ಅನಂತರ ನಾನು ಯೆರೂಸಲೇಮಿಗೆ ಬಂದು ಅಲ್ಲಿ ಮೂರು ದಿನಗಳವರೆಗೂ ಇದ್ದೆನು.
12 And I rose up by night, I and a few men with me; and I told no man what God put into my heart to do with Israel; and there was no beast with me, except the beast which I rode upon.
೧೨ಆಮೇಲೆ ಯೆರೂಸಲೇಮಿಗಾಗಿ ಮಾಡತಕ್ಕ ಕಾರ್ಯದ ವಿಷಯವಾಗಿ ನನ್ನ ದೇವರು ನನ್ನಲ್ಲಿ ಯಾವ ಆಲೋಚನೆಯನ್ನು ಹುಟ್ಟಿಸಿದ್ದಾನೆಂಬುದನ್ನು ಯಾರಿಗೂ ತಿಳಿಸದೆ, ರಾತ್ರಿಯಲ್ಲೆದ್ದು ಕೆಲವು ಜನರನ್ನು ಮಾತ್ರ ಕರೆದುಕೊಂಡು ಹೊರಟೆನು. ನನ್ನ ವಾಹನಪಶುವಿನ ಹೊರತು ಬೇರೆ ಯಾವ ಪಶುವೂ ನನ್ನೊಂದಿಗಿರಲಿಲ್ಲ.
13 And I went forth by the gate of the valley by night, and to the mouth of the well of fig trees, and to the dung-gate: and I mourned over the wall of Jerusalem which they were destroying, and her gates were devoured with fire.
೧೩ನಾನು ರಾತ್ರಿವೇಳೆಯಲ್ಲಿ ತಗ್ಗಿನ ಬಾಗಿಲಿನಿಂದ ಹೊರಟು ಹಾಳುಬಿದ್ದ ಯೆರೂಸಲೇಮಿನ ಗೋಡೆಗಳನ್ನೂ ಬೆಂಕಿಯಿಂದ ಸುಡಲ್ಪಟ್ಟ ಅದರ ಬಾಗಿಲುಗಳನ್ನೂ ನೋಡುತ್ತಾ, ಹೆಬ್ಬಾವು ಬುಗ್ಗೆಯ ಮಾರ್ಗವಾಗಿ ತಿಪ್ಪೆಬಾಗಿಲಿಗೆ ಹೋದೆನು.
14 And I passed on to the fountain gate, and to the king's pool; and there was no room for the beast to pass under me.
೧೪ಅಲ್ಲಿಂದ ಬುಗ್ಗೆ ಬಾಗಿಲನ್ನು ಹಾದು ಅರಸನ ಕೊಳಕ್ಕೆ ಬಂದೆನು. ನನ್ನ ವಾಹನಪಶುವಿಗೆ ಅಲ್ಲಿಂದ ಮುಂದೆ ಹೋಗುವುದಕ್ಕೆ ಮಾರ್ಗವಿರಲಿಲ್ಲ.
15 And I went up by the wall of the brook by night, and mourned over the wall, and passed through the gate of the valley, and returned.
೧೫ಅದಕಾರಣ ನಾನು ರಾತ್ರಿಯಲ್ಲಿ ಹಳ್ಳದ ಬದಿಯ ಮಾರ್ಗವಾಗಿ ಹೋಗಿ ಗೋಡೆಯನ್ನು ಪರೀಕ್ಷಿಸಿದೆನು. ಆ ಮೇಲೆ ಪುನಃ ತಗ್ಗಿನ ಬಾಗಿಲಿನಿಂದ ಹಿಂತಿರುಗಿ ಮನೆಗೆ ಬಂದೆನು.
16 And the sentinels knew not why I went, nor what I was doing; and until that time I told [it] not to the Jews, or to the priests, or to the nobles, or to the captains, or to the rest [of the men] who wrought the works.
೧೬ನಾನು ಆ ವರೆಗೆ ಯೆಹೂದ್ಯರಿಗೂ, ಯಾಜಕರಿಗೂ, ಶ್ರೀಮಂತರಿಗೂ, ಅಧಿಕಾರಿಗಳಿಗೂ ಕೆಲಸ ಮಾಡುವ ಇತರರಿಗೂ ಏನೂ ತಿಳಿಸದೆ ಇದ್ದುದರಿಂದ ನಾನು ಎಲ್ಲಿ ಹೋಗಿದ್ದೆನು, ಏನು ಮಾಡಿದೆನು ಎಂಬುದು ಯಾರಿಗೂ ಗೊತ್ತಾಗಲಿಲ್ಲ.
17 Then I said to them, You see this evil, in which we are, how Jerusalem is desolate, and her gates have been set on fire: come, and let us build throughout the wall of Jerusalem, and we shall be no longer a reproach.
೧೭ನಾನು ಅವರಿಗೆ, “ನಮ್ಮ ದುರಾವಸ್ಥೆ ನಿಮ್ಮ ಕಣ್ಣ ಮುಂದಿರುತ್ತದಲ್ಲವೇ; ಯೆರೂಸಲೇಮ್ ಪಟ್ಟಣವು ಹಾಳು ಬಿದ್ದಿದೆ, ಅದರ ಬಾಗಿಲುಗಳು ಬೆಂಕಿಯಿಂದ ಸುಡಲ್ಪಟ್ಟಿರುತ್ತವೆ; ಬನ್ನಿರಿ, ಯೆರೂಸಲೇಮಿನ ಗೋಡೆಯನ್ನು ಕಟ್ಟೋಣ. ಹೀಗೆ ಮಾಡಿದರೆ ನಮ್ಮ ಮೇಲಣ ನಿಂದೆಯು ಅಳಿಸಿ ಹೋಗುವುದು” ಎಂದು ಹೇಳಿದೆನು.
18 And I told them of the hand of God which was good upon me, also about the words of the king which he spoke to me: and I said, Let us arise and build. And their hands were strengthened for the good [work].
೧೮ಇದಲ್ಲದೆ, ನನ್ನ ದೇವರ ಕೃಪಾಹಸ್ತವು ನನ್ನನ್ನು ಪಾಲಿಸಿದ್ದನ್ನೂ, ಅರಸನು ನನಗೆ ಹೇಳಿದ್ದನ್ನೂ ಅವರಿಗೆ ವಿವರಿಸಿದೆನು. ಆಗ ಅವರು, “ಬನ್ನಿರಿ, ಕಟ್ಟೋಣ” ಎಂದು ಹೇಳಿ ಆ ಒಳ್ಳೇ ಕೆಲಸಕ್ಕೆ ಕೈಹಾಕಲು ಪರಸ್ಪರ ಧೈರ್ಯ ನೀಡಿದರು.
19 And Sanaballat the Aronite, and Tobia the servant, the Ammonite, and Gesam the Arabian, heard [it], and they laughed us to scorn, and came to us, and said, What [is] this thing that you are doing? are you revolting against the king?
೧೯ಹೋರೋನಿನವನಾದ ಸನ್ಬಲ್ಲಟನೂ, ಅಮ್ಮೋನ್ ದೇಶದವನಾದ ಟೋಬೀಯ ಎಂಬ ದಾಸನೂ, ಅರಬಿಯನಾದ ಗೆಷೆಮನೂ ಈ ವರ್ತಮಾನವನ್ನು ಕೇಳಿದಾಗ ಅವರು ನಮ್ಮನ್ನು ತಿರಸ್ಕರಿಸಿ ಗೇಲಿಮಾಡಿ, “ನೀವು ಇಲ್ಲಿ ಮಾಡುವುದೇನು? ಅರಸನಿಗೆ ವಿರುದ್ಧವಾಗಿ ತಿರುಗಿ ಬೀಳಬೇಕೆಂದಿದ್ದೀರೋ?” ಎಂದು ಕೇಳಿದರು.
20 And I answered them, and said to them, The God of heaven, he shall prosper us, and we his servants are pure, and we will build: but you have no part, nor right, nor memorial, in Jerusalem.
೨೦ನಾನು ಅವರಿಗೆ, “ಪರಲೋಕದ ದೇವರು ನಮಗೆ ಕಾರ್ಯವನ್ನು ಸಾಧಿಸಿಕೊಡುವನು. ಆದುದರಿಂದ ಆತನ ಸೇವಕರಾದ ನಾವು ಕಟ್ಟುವುದಕ್ಕೆ ಮನಸ್ಸುಮಾಡಿದ್ದೇವೆ. ನಿಮಗಾದರೋ ಯೆರೂಸಲೇಮಿನಲ್ಲಿ ಯಾವ ಪಾಲೂ, ಹಕ್ಕೂ, ಹೆಸರೂ, ಸ್ಮಾರಕವೂ ಇರುವುದಿಲ್ಲ” ಎಂದು ಉತ್ತರಕೊಟ್ಟೆನು.

< Nehemiah 2 >