< 2 Chronicles 22 >
1 And the inhabitants of Jerusalem made Achazyahu his youngest son king in his stead; for the predatory band that was come with the Arabians to the camp had slain all the eldest. So became Achazyahu, the son of Jehoram the king of Judah, king.
ಯೆರೂಸಲೇಮಿನ ನಿವಾಸಿಗಳು ಯೆಹೋರಾಮನಿಗೆ ಬದಲಾಗಿ ಅವನ ಚಿಕ್ಕ ಮಗನಾದ ಅಹಜ್ಯನನ್ನು ಅರಸನಾಗಿ ಮಾಡಿದರು. ಏಕೆಂದರೆ ಪಾಳೆಯಕ್ಕೆ ಬಂದ ಅರಬಿಯರ ಗುಂಪು ಹಿರಿಯ ಮಕ್ಕಳನ್ನೆಲ್ಲಾ ಕೊಂದುಹಾಕಿದರು. ಹೀಗೆಯೇ ಯೆಹೋರಾಮನ ಮಗನಾದ ಅಹಜ್ಯನು ಯೆಹೂದದ ಅರಸನಾಗಿ ಆಳಲು ಆರಂಭಿಸಿದನು.
2 Forty and two years old was Achazyahu when he became king, and one year did he reign in Jerusalem: and his mother's name was Athalyahu the [grand-]daughter of 'Omri.
ಅಹಜ್ಯನು ಆಳಲು ಆರಂಭಿಸಿದಾಗ ಇಪ್ಪತ್ತೆರಡು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಒಂದು ವರ್ಷ ಆಳಿದನು. ಅವನ ತಾಯಿಯ ಹೆಸರು ಅತಲ್ಯಳು, ಈಕೆಯು ಒಮ್ರಿಯ ಮೊಮ್ಮಗಳು.
3 Also he walked in the ways of the house of Achab; for his mother was his counsellor to act wickedly.
ಅವನ ತಾಯಿಯ ದುರ್ಬೋಧನೆಯಿಂದ ಅವನು ದುಷ್ಟನಾಗಿ ಅಹಾಬನ ಮನೆಯವರ ಮಾರ್ಗಗಳಲ್ಲಿ ನಡೆದನು.
4 And he did what is evil in the eyes of the Lord like the house of Achab; for these were his counsellors after the death of his father to his destruction.
ಅವನು ಅಹಾಬನ ಕುಟುಂಬದಂತೆಯೇ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು, ಏಕೆಂದರೆ ಅವನ ತಂದೆಯ ಮರಣದ ನಂತರ ಅವರು ಅವನ ಸಲಹೆಗಾರರಾದರು. ಆದಕಾರಣ ಎಲ್ಲವೂ ನಾಶವಾಯಿತು.
5 He walked also after their counsel, and went with Jehoram the son of Achab the king of Israel to war against Chazael the king of Syria at Ramoth-gil'ad: and the Syrians smote Joram.
ಅಹಜ್ಯನು ಇವರ ಯೋಚನೆಯ ಪ್ರಕಾರ ನಡೆದು, ಗಿಲ್ಯಾದಿನ ರಾಮೋತಿಗೆ ಅರಾಮಿನ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಲು ಇಸ್ರಾಯೇಲಿನ ಅರಸನಾಗಿರುವ ಅಹಾಬನ ಮಗ ಯೋರಾಮನ ಸಂಗಡ ಹೋದನು. ಆದರೆ ಅರಾಮ್ಯರು ಯೋರಾಮನನ್ನು ಹೊಡೆದು ಗಾಯಗೊಳಿಸಿದರು.
6 And he returned to be healed in Yizre'el because of the wounds which had been given him at Ramah, when he fought with Chazael the king of Syria. And 'Azaryahu the son of Jehoram the king of Judah went down to see Jehoram the son of Achab at Yizre'el, because he was sick.
ಆದ್ದರಿಂದ ಅವನು ಅರಾಮ್ಯ ದೇಶದ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಿದಾಗ, ರಾಮೋತಿನಲ್ಲಿ ತನ್ನನ್ನು ಹೊಡೆದ ಗಾಯಗಳನ್ನು ಗುಣಪಡಿಸಿಕೊಳ್ಳುವುದಕ್ಕೆ ಇಜ್ರೆಯೇಲ್ ಪಟ್ಟಣಕ್ಕೆ ತಿರುಗಿಹೋದನು. ಆಗ ಅಹಾಬನ ಮಗ ಯೋರಾಮನು ಇಜ್ರೆಯೇಲಿನಲ್ಲಿ ಅಸ್ವಸ್ಥನಾಗಿದ್ದುದರಿಂದ ಯೆಹೂದದ ಅರಸನಾಗಿರುವ ಯೆಹೋರಾಮನ ಮಗ ಅಜರ್ಯನು ಅವನನ್ನು ನೋಡಲು ಹೋದನು.
7 But from God was the confusion of Achazyahu that he should come to Joram: and when he was come, he went out with Jehoram against Jehu the son of Nimshi, whom the Lord had anointed to cut off the house of Achab.
ಯೋರಾಮನ ಬಳಿಗೆ ಅಹಜ್ಯನು ಬಂದಿದ್ದರಿಂದ ಅವನಿಗೆ ಉಂಟಾದ ನಷ್ಟವು ದೇವರಿಂದ ಆಯಿತು. ಹೇಗೆಂದರೆ, ಅಹಜ್ಯನು ಬಂದ ತರುವಾಯ ಯೆಹೋವ ದೇವರು ಅಹಾಬನ ಮನೆಯನ್ನು ಕಡಿದು ಬಿಡಲು ಅಭಿಷೇಕಿಸಿದ ನಿಂಷಿಯ ಮಗ ಯೇಹುವಿಗೆ ವಿರೋಧವಾಗಿ ಯೆಹೋರಾಮನ ಸಂಗಡ ಹೊರಟರು.
8 And it came to pass, when Jehu was executing judgment on the house of Achab, that he found the princes of Judah, and the sons of the brothers of Achazyahu, that ministered to Achazyahu, and he slew them.
ಯೇಹುವು ಅಹಾಬನ ಮನೆಯ ಮೇಲೆ ನ್ಯಾಯ ತೀರಿಸುವಂತೆ ಅವನು ಯೆಹೂದ್ಯರ ಪ್ರಧಾನರನ್ನೂ, ಅಹಜ್ಯನನ್ನು ಸೇವಿಸುತ್ತಿರುವ ಅಹಜ್ಯನ ಸಹೋದರರ ಮಕ್ಕಳನ್ನೂ ಕಂಡುಹಿಡಿದು, ಅವರನ್ನು ಕೊಂದುಹಾಕಿದನು.
9 And he sought Achazyahu, and they caught him while he was hiding himself in Samaria, and they brought him to Jehu, and they slew him, and buried him; because they said, He is son of Jehoshaphat, who sought the Lord with all his heart. And there was none of the house of Achazyahu who had sufficient power [to obtain] the kingdom.
ಇದಲ್ಲದೆ ಯೇಹುವು ಅಹಜ್ಯನನ್ನು ಹುಡುಕಿದನು. ಅವನು ಸಮಾರ್ಯದಲ್ಲಿ ಬಚ್ಚಿಟ್ಟುಕೊಂಡದ್ದರಿಂದ ಅವನನ್ನು ಕಂಡುಹಿಡಿದು, ಯೇಹುವಿನ ಬಳಿಗೆ ಅವನನ್ನು ತೆಗೆದುಕೊಂಡು ಬಂದು, ಅವನನ್ನು ವಧಿಸಿದರು. “ಇವನು ಪೂರ್ಣಹೃದಯದಿಂದ ಯೆಹೋವ ದೇವರನ್ನು ಹುಡುಕಿದ ಯೆಹೋಷಾಫಾಟನ ಮಗನು,” ಎಂದು ಹೇಳಿ ಅವನನ್ನು ಸಮಾಧಿಮಾಡಿದರು. ಹೀಗೆ ರಾಜ್ಯದ ಅಧಿಕಾರವನ್ನು ವಹಿಸಿಕೊಳ್ಳುವದಕ್ಕೆ ಅಹಜ್ಯನ ಮನೆಯವರಲ್ಲಿ ಸಮರ್ಥರಾರೂ ಉಳಿಯಲಿಲ್ಲ.
10 And when 'Athalyahu the mother of Achazyahu saw that her son was dead, she arose and exterminated all the royal seed of the house of Judah.
ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗನು ಸತ್ತು ಹೋದದ್ದನ್ನು ಕಂಡಾಗ, ಅವಳು ಎದ್ದು ಯೆಹೂದನ ಮನೆಯ ರಾಜಸಂತಾನದವರನ್ನೆಲ್ಲಾ ನಾಶಮಾಡಲು ಆರಂಭಿಸಿದಳು.
11 But Yehoshab'ath, the daughter of the king, took Joash the son of Achazyahu, and stole him away from the midst of the king's sons that were slain, and put him and his nurse into the bed-chamber. So did Yehoshab'ath, the daughter of king Jehoram, the wife of Yehoyada' the priest, —for she was the sister of Achazyahu, —hide him from 'Athalyahu, so that she slew him not.
ಆದರೆ ಅರಸನಾದ ಯೆಹೋರಾಮನ ಮಗಳಾದ ಯೆಹೋಷಬತಳು, ಹತರಾಗುವುದಕ್ಕಿದ್ದ ಅರಸನ ಮಕ್ಕಳ ಮಧ್ಯದಿಂದ ಅಹಜ್ಯನ ಮಗನಾದ ಯೋವಾಷನನ್ನು ಕದ್ದುಕೊಂಡು ಹೋಗಿ ಅವನನ್ನೂ ಅವನ ದಾದಿಯನ್ನೂ ಮಲಗುವ ಕೋಣೆಯಲ್ಲಿ ಬಚ್ಚಿಟ್ಟಳು. ಹೀಗೆಯೇ ಅರಸನಾದ ಯೆಹೋರಾಮನ ಪುತ್ರಿಯರಾಗಿರುವ ಯಾಜಕನಾದ ಯೆಹೋಯಾದಾವನ ಹೆಂಡತಿಯಾಗಿರುವ ಅಹಜ್ಯನ ಸಹೋದರಿಯಾದ ಯೆಹೋಷಬತಳು, ಅತಲ್ಯಳು ಅವನನ್ನು ಕೊಲ್ಲದ ಹಾಗೆ ಬಚ್ಚಿಟ್ಟಳು.
12 And he was with them in the house of God hidden six years, while 'Athalyah was reigning over the land.
ಹೀಗೆಯೇ ಇವನು ಅವರ ಸಂಗಡ ಆರು ವರ್ಷ ದೇವರ ಆಲಯದಲ್ಲಿ ಗುಪ್ತವಾಗಿದ್ದನು. ಈ ಆರು ವರ್ಷ ಅತಲ್ಯಳು ದೇಶವನ್ನು ಆಳುತ್ತಾ ಇದ್ದಳು.