< 1 Chronicles 28 >
1 And David assembles all the heads of Israel, heads of the tribes, and heads of the divisions who are serving the king, and heads of the thousands, and heads of the hundreds, and heads of all the substance and possessions of the king, and of his sons, with the officers and the mighty ones, and of every mighty man of valor—to Jerusalem.
ದಾವೀದನು ಇಸ್ರಾಯೇಲಿನ ಸಮಸ್ತ ಪ್ರಧಾನ ಗೋತ್ರಗಳ ಪ್ರಧಾನರನ್ನೂ, ವರ್ಗ ವರ್ಗವಾಗಿ ಅರಸನನ್ನು ಸೇವೆಮಾಡಿದ ಸಭೆಗಳ ಪ್ರಧಾನರನ್ನೂ, ಸಹಸ್ರಾಧಿಪತಿಗಳನ್ನೂ, ಶತಾಧಿಪತಿಗಳನ್ನೂ ಅರಸನ ಸ್ವತ್ತಿನ ಮೇಲೆಯೂ, ಅವನ ಪುತ್ರರ ಸ್ವತ್ತಿನ ಮೇಲೆಯೂ ಪಶುಗಳ ಮೇಲೆಯೂ ಇರುವ ಪ್ರಧಾನರನ್ನೂ, ಅಧಿಕಾರಿಗಳನ್ನೂ, ಪರಾಕ್ರಮಶಾಲಿಗಳನ್ನೂ, ಶೂರರನ್ನೂ ಯೆರೂಸಲೇಮಿನಲ್ಲಿ ಕೂಡಿ ಬರಲು ಕರೆಸಿದನು.
2 And David the king rises on his feet and says, “Hear me, my brothers and my people, I [had it] with my heart to build a house of rest for the Ark of the Covenant of YHWH, and for the footstool of our God, and I prepared to build,
ಆಗ ಅರಸನಾದ ದಾವೀದನು ಎದ್ದು ನಿಂತು, “ನನ್ನ ಸಹೋದರರೇ, ನನ್ನ ಜನರೇ, ನನ್ನ ಮಾತು ಕೇಳಿರಿ. ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ನಿಮಿತ್ತವಾಗಿಯೂ, ನಮ್ಮ ದೇವರ ಪಾದಪೀಠದ ನಿಮಿತ್ತವಾಗಿಯೂ ವಿಶ್ರಾಂತಿಗೆ ಆಲಯವನ್ನು ನಾನು ಕಟ್ಟಿಸಲು ಮನಸ್ಸು ಮಾಡಿ, ಅದಕ್ಕಾಗಿ ಎಲ್ಲವನ್ನೂ ಸಿದ್ಧಪಡಿಸಿದೆನು.
3 and God has said to me, You do not build a house for My Name, for you [are] a man of wars, and you have shed blood.
ಆಗ ದೇವರು ನನಗೆ, ‘ನೀನು ಮಹಾ ಯುದ್ಧಗಳನ್ನು ನಡೆಸಿ, ಬಹಳ ರಕ್ತವನ್ನು ಸುರಿಸಿದವನು; ನನ್ನ ಹೆಸರಿಗೆ ನೀನು ಆಲಯವನ್ನು ಕಟ್ಟಿಸಬಾರದು,’ ಎಂದು ಹೇಳಿದರು.
4 And YHWH, God of Israel, fixes on me out of all the house of my father to be for king over Israel for all time, for He has fixed on Judah for a leader, and in the house of Judah, the house of my father, and among the sons of my father, He has been pleased with me to make [me] king over all Israel;
“ಆದರೆ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಎಂದೆಂದಿಗೂ ಇಸ್ರಾಯೇಲಿನ ಮೇಲೆ ಅರಸನಾಗಿರಲು ನನ್ನ ತಂದೆಯ ಮನೆಯ ಸಮಸ್ತರೊಳಗಿಂದ ನನ್ನನ್ನು ಆರಿಸಿಕೊಂಡರು. ಏಕೆಂದರೆ ಅವನು ನಾಯಕನಾಗಿರಲು ಯೆಹೂದ ಗೋತ್ರವನ್ನೂ, ಯೆಹೂದ ಗೋತ್ರದಿಂದ ನನ್ನ ಕುಟುಂಬವನ್ನೂ ಆದುಕೊಂಡು, ನನ್ನ ತಂದೆಯ ಪುತ್ರರಲ್ಲಿ ನನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಮಾಡಲು ಚಿತ್ತವುಳ್ಳವರಾಗಿದ್ದರು.
5 and out of all my sons—for YHWH has given many sons to me—He also fixes on my son Solomon, to sit on the throne of the kingdom of YHWH over Israel,
ಯೆಹೋವ ದೇವರು ನನಗೆ ಅನೇಕ ಪುತ್ರರನ್ನು ಕೊಟ್ಟಿರುವಾಗ, ನನ್ನ ಸಮಸ್ತ ಪುತ್ರರಲ್ಲಿ ಇಸ್ರಾಯೇಲಿನ ಮೇಲಿಗಾಗಿ, ಯೆಹೋವ ದೇವರ ರಾಜ್ಯದ ಸಿಂಹಾಸನದ ಮೇಲೆ ಕುಳಿತುಕೊಳ್ಳುವುದಕ್ಕೆ ನನ್ನ ಮಗ ಸೊಲೊಮೋನನನ್ನು ಆದುಕೊಂಡರು.
6 and says to me, Your son Solomon builds My house and My courts, for I have fixed on him [to be] to Me for a son, and I am to him for a father.
ಇದಲ್ಲದೆ ದೇವರು ನನಗೆ, ‘ನಿನ್ನ ಮಗ ಸೊಲೊಮೋನನು ತಾನೇ ನನ್ನ ಆಲಯವನ್ನೂ, ನನ್ನ ಅಂಗಳಗಳನ್ನೂ ಕಟ್ಟಿಸುವನು. ಏಕೆಂದರೆ ಅವನನ್ನು ನನಗೆ ಮಗನಾಗಿರಲು ಆಯ್ದುಕೊಂಡೆನು. ನಾನು ಅವನಿಗೆ ತಂದೆಯಾಗಿರುವೆನು.
7 And I have established his kingdom for all time, if he is strong to do My commands and My judgments, as at this day.
ಈ ಹೊತ್ತಿನ ಹಾಗೆ ನನ್ನ ಆಜ್ಞೆಗಳನ್ನೂ, ನನ್ನ ನ್ಯಾಯಗಳನ್ನೂ ಅವನು ನಡೆಸಲು ದೃಢನಾಗಿದ್ದರೆ, ಅವನ ರಾಜ್ಯವನ್ನು ಯುಗಯುಗಾಂತರಕ್ಕೂ ಸ್ಥಿರಪಡಿಸುವೆನು,’ ಎಂದರು.
8 And now, before the eyes of all Israel, the assembly of YHWH, and in the ears of our God, keep and seek all the commands of your God YHWH, so that you possess this good land, and have caused your sons to inherit after you for all time.
“ಆದ್ದರಿಂದ ನೀವು ಈ ಉತ್ತಮ ದೇಶವನ್ನು ಸ್ವಾಧೀನಮಾಡಿಕೊಂಡು, ಅದನ್ನು ನಿರಂತರದಲ್ಲಿ ನಿಮ್ಮ ತರುವಾಯ ಇರುವ ನಿಮ್ಮ ಮಕ್ಕಳಿಗೆ ಬಾಧ್ಯತೆಯಾಗಿ ಕೊಡುವ ಹಾಗೆ, ಯೆಹೋವ ದೇವರ ಸಭೆಯಾದ ಸಮಸ್ತ ಇಸ್ರಾಯೇಲಿನ ಸಮ್ಮುಖದಲ್ಲಿಯೂ, ನಮ್ಮ ದೇವರು ಕೇಳಿಸುವಂತೆ ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನೆಲ್ಲಾ ಹುಡುಕಿ ಕೈಗೊಳ್ಳಿರಿ ಎಂದು ಎಚ್ಚರಿಸುತ್ತೇನೆ.
9 And you, my son Solomon, know the God of your father, and serve Him with a perfect heart and with a willing mind, for YHWH is seeking all hearts, and He is understanding every imagination of the thoughts; if you seek Him, He is found by you, and if you forsake Him, He casts you off forever.
“ಇದಲ್ಲದೆ ನನ್ನ ಮಗ ಸೊಲೊಮೋನನೇ, ನೀನು ನಿನ್ನ ತಂದೆಯ ದೇವರನ್ನು ಅರಿತುಕೊಂಡು, ಪೂರ್ಣಹೃದಯದಿಂದಲೂ, ಪೂರ್ಣಮನಸ್ಸಿನಿಂದಲೂ ದೇವರನ್ನು ಸೇವಿಸು. ಏಕೆಂದರೆ, ಯೆಹೋವ ದೇವರು ಸಕಲ ಹೃದಯಗಳನ್ನು ಪರಿಶೋಧಿಸಿ, ಯೋಚನೆಗಳ ಕಲ್ಪನೆಯನ್ನೆಲ್ಲಾ ತಿಳಿದಿದ್ದಾರೆ. ನೀನು ದೇವರನ್ನು ಹುಡುಕಿದರೆ, ದೇವರು ನಿನಗೆ ಸಿಕ್ಕುವರು. ನೀನು ದೇವರನ್ನು ಬಿಟ್ಟುಬಿಟ್ಟರೆ, ದೇವರು ಸಹ ನಿನ್ನನ್ನು ಎಂದೆಂದಿಗೂ ತೊರೆದುಬಿಡುವರು.
10 See, now, for YHWH has fixed on you to build a house for a sanctuary; be strong, and do.”
ಆದ್ದರಿಂದ ಜಾಗ್ರತೆಯಾಗಿರು. ಏಕೆಂದರೆ, ಯೆಹೋವ ದೇವರು ಪರಿಶುದ್ಧ ಆಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾರೆ. ನೀನು ಧೈರ್ಯದಿಂದ ಕೆಲಸಕ್ಕೆ ಕೈ ಹಚ್ಚು,” ಎಂದನು.
11 And David gives to his son Solomon the pattern of the porch, and of its houses, and of its treasures, and of its upper chambers, and of its innermost chambers, and of the house of the atonement;
ಆಗ ದಾವೀದನು ತನ್ನ ಮಗ ಸೊಲೊಮೋನನಿಗೆ, “ದ್ವಾರಾಂಗಳದ ಮಾದರಿಯನ್ನೂ, ಅದರ ಮನೆಗಳು, ಅದರ ಉಗ್ರಾಣಗಳು, ಅದರ ಮೇಲಿನ ಕೊಠಡಿಗಳು, ಅದರ ಅಂತರಂಗದ ಕೊಠಡಿಗಳು, ಕರುಣಾಸನದ ಸ್ಥಾನವು,
12 and the pattern of all that has been with him by the Spirit, for the courts of the house of YHWH, and for all the surrounding chambers, for the treasures of the house of God, and for the treasures of the things sacrificed;
ಯೆಹೋವ ದೇವರ ಮನೆಯ ಅಂಗಳಗಳು, ಸುತ್ತಲಿರುವ ಕೊಠಡಿಗಳಾದ ಯೆಹೋವ ದೇವರ ಮನೆಯ ಉಗ್ರಾಣಗಳು, ಪ್ರತಿಷ್ಠೆ ಮಾಡಿದವುಗಳ ಉಗ್ರಾಣಗಳು, ಆತ್ಮದಿಂದ ತನಗುಂಟಾದ ಇವುಗಳ ಸಮಸ್ತ ಮಾದರಿಯನ್ನೂ ಕೊಟ್ಟನು.
13 and for the divisions of the priests and of the Levites, and for all the work of the service of the house of YHWH, and for all vessels of service of the house of YHWH,
ಇದಲ್ಲದೆ ಯಾಜಕರ, ಲೇವಿಯರ ವರ್ಗಗಳಿಗೋಸ್ಕರವೂ, ಯೆಹೋವ ದೇವರ ಮನೆಯ ಸೇವೆಯ ಸಮಸ್ತ ಕೆಲಸಕ್ಕೋಸ್ಕರವೂ ಯೆಹೋವ ದೇವರ ಮನೆಯಲ್ಲಿರುವ ಸೇವೆ ಮಾಡುವ ಸಮಸ್ತ ಪಾತ್ರೆಗಳಿಗೋಸ್ಕರವೂ ಸೂಚನೆಗಳನ್ನು ಕೊಟ್ಟನು.
14 even gold by weight, for [things of] gold, for all instruments of every service; for all instruments of silver by weight, for all instruments of every service;
ಸಕಲ ವಿಧವಾದ ಸೇವೆಗೆ ಸಮಸ್ತ ಬಂಗಾರದ ಸಲಕರಣೆಗಳಿಗೋಸ್ಕರ ಬಂಗಾರವನ್ನೂ, ಸಕಲ ವಿಧವಾದ ಸೇವೆಗೆ ಸಮಸ್ತ ಬೆಳ್ಳಿಯ ಸಾಮಾನುಗಳಿಗೋಸ್ಕರ ಬೆಳ್ಳಿಯನ್ನೂ ತೂಗಿಕೊಟ್ಟನು.
15 and [by] weight for the lampstands of gold, and their lamps of gold, by weight [for] lampstand and lampstand, and its lamps; and for the lampstands of silver, by weight for a lampstand and its lamps, according to the service of lampstand and lampstand;
ಹೇಗೆಂದರೆ, ಬಂಗಾರದ ದೀಪಸ್ತಂಭಗಳಿಗೋಸ್ಕರವೂ, ಅದರ ಬಂಗಾರದ ದೀಪಗಳಿಗೋಸ್ಕರವೂ ಒಂದೊಂದು ಸ್ತಂಭಕ್ಕೋಸ್ಕರ ತೂಕವಾಗಿ ತೂಗಿಕೊಟ್ಟನು. ಬೆಳ್ಳಿಯ ದೀಪಸ್ತಂಭಗಳಿಗೋಸ್ಕರ ದೀಪಸ್ತಂಭಕ್ಕೂ, ಅದರ ದೀಪಗಳಿಗೂ ಒಂದೊಂದು ದೀಪಸ್ತಂಭದ ಕೆಲಸದ ಪ್ರಕಾರ ಅಳತೆಮಾಡಿ ತೂಗಿಕೊಟ್ಟನು.
16 and the gold [by] weight for tables of the arrangement, for table and table, and silver for the tables of silver;
ಆ ಪ್ರಕಾರವೇ ಸಮ್ಮುಖದ ರೊಟ್ಟಿಗಳ ಮೇಜುಗಳಿಗೋಸ್ಕರ ಒಂದೊಂದು ಮೇಜಿಗೆ ತೂಗಿಕೊಟ್ಟನು. ಬೆಳ್ಳಿಯ ಮೇಜುಗಳಿಗೋಸ್ಕರ ಬೆಳ್ಳಿಯನ್ನು ತೂಗಿಕೊಟ್ಟನು.
17 and the forks, and the bowls, and the cups of pure gold, and for the basins of gold, by weight for basin and basin, and for the basins of silver, by weight for basin and basin,
ಅದೇ ಪ್ರಕಾರ ಮುಳ್ಳುಗಳೂ, ಪಾತ್ರೆಗಳೂ, ಹೂಜೆಗಳೂ ಇವುಗಳಿಗೋಸ್ಕರ ಚೊಕ್ಕ ಬಂಗಾರವನ್ನು ಕೊಟ್ಟನು. ಬಂಗಾರದ ಬಟ್ಟಲುಗಳಿಗೋಸ್ಕರ, ಒಂದೊಂದು ಬಟ್ಟಲಿಗೋಸ್ಕರ ಅದರ ತೂಕವಾಗಿಯೂ; ಬೆಳ್ಳಿಯ ಒಂದೊಂದು ಬಟ್ಟಲಿಗೋಸ್ಕರ ಅದರ ತೂಕವಾಗಿಯೂ ಕೊಟ್ಟನು.
18 and for the altar of incense, refined gold by weight, and for the pattern of the chariot of the cherubim of gold, spreading and covering over the Ark of the Covenant of YHWH.
ಇದಲ್ಲದೆ ಧೂಪಪೀಠಕ್ಕೋಸ್ಕರ ಬಂಗಾರವನ್ನೂ, ರೆಕ್ಕೆಗಳನ್ನೂ ಚಾಚಿಕೊಂಡು ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಮುಚ್ಚುವ ಕೆರೂಬಿಗಳ ರಥದ ಮಾದರಿಗೋಸ್ಕರ ಬಂಗಾರವನ್ನೂ ತೂಗಿಕೊಟ್ಟನು.
19 The whole [is] in writing from the hand of YHWH, “He caused me to understand all the work of the pattern,” [said David.]
“ಯೆಹೋವ ದೇವರು ತಮ್ಮ ಕೈಯನ್ನು ನನ್ನ ಮೇಲೆ ಇರಿಸಿ, ಈ ಯೋಜನೆಯ ಕೆಲಸಗಳನ್ನೆಲ್ಲಾ ನನಗೆ ತಿಳಿಯುವಂತೆ ಮಾಡಿದರು,” ಎಂದರು.
20 And David says to his son Solomon, “Be strong and courageous, and do; do not fear nor be frightened, for YHWH God, my God, [is] with you; He does not fail you, nor forsake you, to the completion of all the work of the service of the house of YHWH.
ದಾವೀದನು ತನ್ನ ಮಗ ಸೊಲೊಮೋನನಿಗೆ, “ನೀನು ಬಲಗೊಂಡು, ಧೈರ್ಯದಿಂದ ಮಾಡು; ಭಯಪಡಬೇಡ, ನಿರಾಶನಾಗಬೇಡ. ಏಕೆಂದರೆ ನನ್ನ ದೇವರಾಗಿರುವ ಯೆಹೋವ ದೇವರು ನಿನ್ನ ಸಂಗಡ ಇರುತ್ತಾರೆ. ಯೆಹೋವ ದೇವರ ಆಲಯದ ಸೇವೆಯ ಕಾರ್ಯವನ್ನೆಲ್ಲಾ ನೀನು ತೀರಿಸುವವರೆಗೂ, ಅವರು ನಿನ್ನನ್ನು ತೊರೆಯುವುದಿಲ್ಲ, ಕೈಬಿಡುವುದಿಲ್ಲ.
21 And behold, divisions of the priests and of the Levites [are] for all the service of the house of God; and with you in all work [is] every willing one with wisdom, for every service; and the heads and all the people [are] according to all your words.”
ಇಗೋ, ಯೆಹೋವ ದೇವರ ಆಲಯದ ಸಮಸ್ತ ಸೇವೆಗೋಸ್ಕರ ಯಾಜಕರ ಲೇವಿಯರ ವರ್ಗಗಳುಂಟು. ಎಲ್ಲಾ ಕೆಲಸಕ್ಕೂ, ಎಲ್ಲಾ ವಿಧವಾದ ಸೇವೆಗೂ, ಸಿದ್ಧ ಮನಸ್ಸುಳ್ಳಂಥ ಜಾಣತನದಿಂದ ಕೆಲಸ ಮಾಡುವವರು ನಿನ್ನ ಸಂಗಡ ಇದ್ದಾರೆ. ಇದಲ್ಲದೆ ಪ್ರಧಾನರೂ, ಸಕಲ ಜನರೂ ನಿನ್ನ ಮಾತುಗಳಿಗೆಲ್ಲಾ ವಿಧೇಯರಾಗಿರುವರು.”