< Job 7 >
1 “Is there not warfare to man on earth? And his days as the days of a hired worker?
೧ಭೂಲೋಕದಲ್ಲಿ ಮನುಷ್ಯನಿಗೆ ದುಡಿಯುವ ಕಾಲ ಉಂಟಲ್ಲವೇ. ಅವನ ದಿನಗಳು ಜೀತದಾಳಿನ ದಿನಗಳಂತೆ ಕಳೆಯುತ್ತವೆ.
2 As a servant desires the shadow, And as a hired worker expects his wage,
೨ನಾನು ಸಂಜೆಯನ್ನು ಬಯಸುವ ದಾಸನಂತೆಯೂ, ಕೂಲಿಯನ್ನು ನಿರೀಕ್ಷಿಸುವ ಆಳಿನಂತೆಯೂ ಇದ್ದೇನೆ.
3 So I have been caused to inherit months of vanity, And they numbered nights of misery to me.
೩ಬೇಸರಿಕೆಯ ಮಾಸಗಳೂ, ಆಯಾಸದ ರಾತ್ರಿಗಳೂ ನನ್ನ ಪಾಲಿಗೆ ನೇಮಕವಾಗಿವೆ.
4 If I lay down, then I have said, When do I rise, And evening has been measured? And I have been full of tossings until dawn.
೪ಮಲಗುವ ವೇಳೆಯಲ್ಲಿ ಯಾವಾಗ ಏಳುವೆನೋ ಅಂದುಕೊಳ್ಳುವೆನು; ರಾತ್ರಿಯು ಬೆಳೆಯುತ್ತಾ ಹೋಗುತ್ತದೆ. ಉದಯದವರೆಗೂ ಹೊರಹೊರಳಿ ಸಾಕಾಗುತ್ತದೆ.
5 My flesh has been clothed [with] worms, And a clod of dust, My skin has been shriveled and is loathsome,
೫ಹುಳಗಳೂ, ಮಣ್ಣುಹಕ್ಕಳೆಗಳೂ ನನ್ನ ಮಾಂಸವನ್ನು ಮುಸುಕಿವೆ. (ಬಿರಿದ) ಚರ್ಮವು ಕೂಡುತ್ತಾ ಬಂದು ಬಿರಿಯುತ್ತದೆ.
6 My days swifter than a loom, And they are consumed without hope.
೬ನನ್ನ ದಿನಗಳು ಮಗ್ಗದ ಲಾಳಿಗಿಂತ ವೇಗವಾಗಿ, ನಿರೀಕ್ಷೆಯಿಲ್ಲದೆ ಕಳೆದು ಹೋಗುತ್ತವೆ.
7 Remember that my life [is] a breath, My eye does not turn back to see good.
೭ನನ್ನ ಜೀವವು ಗಾಳಿಯಂತೆ ಇದೆಯೆಂತಲೂ, ನನ್ನ ಕಣ್ಣು ಇನ್ನು ಸುಖವನ್ನು ಕಾಣುವುದಿಲ್ಲವೆಂತಲೂ ನೆನಪು ಮಾಡಿಕೋ.
8 The eye of my beholder does not behold me. Your eyes [are] on me—and I am not.
೮ನನ್ನನ್ನು ನೋಡುವವನ ಕಣ್ಣಿಗೆ ನಾನು ಕಾಣಿಸುವುದಿಲ್ಲ, ನಿನ್ನ ಕಣ್ಣುಗಳು ನನ್ನ ಕಡೆ ಇದ್ದರೂ ನಾನು ಇರುವುದಿಲ್ಲ.
9 A cloud has been consumed, and it goes, So he who is going down to Sheol does not come up. (Sheol )
೯ಮೋಡ ಹರಿದು ಮಾಯವಾಗುವಂತೆ, ಪಾತಾಳಕ್ಕೆ ಇಳಿದು ಹೋದವನು ತಿರುಗಿ ಬರುವುದಿಲ್ಲ. (Sheol )
10 He does not turn to his house again, Nor does his place discern him again.
೧೦ಅವನು ತನ್ನ ಮನೆಗೆ ಪುನಃ ಸೇರುವುದಿಲ್ಲ, ಇನ್ನು ಮೇಲೆ ಅವನ ನಿವಾಸಕ್ಕೆ ಅವನ ಪರಿಚಯ ಇರುವುದಿಲ್ಲ.
11 Also I do not withhold my mouth—I speak in the distress of my spirit, I talk in the bitterness of my soul.
೧೧ನಾನಂತೂ ಬಾಯಿಮುಚ್ಚುವುದಿಲ್ಲ; ಆತ್ಮವೇದನೆಯಿಂದ ಮಾತನಾಡುವೆನು, ಮನೋವ್ಯಥೆಯಿಂದ ಪ್ರಲಾಪಿಸುವೆನು.
12 Am I a sea [monster], or a dragon, That You set a watch over me?
೧೨ನೀನು ನನ್ನ ಮೇಲೆ ಕಾವಲಿಡುವುದೇಕೆ? ನಾನೇನು ಸಮುದ್ರವೋ, ಸಾಗರವೆಂಬ ಘಟಸರ್ಪವೋ?
13 When I said, My bed comforts me, In my talking He takes away my couch.
೧೩ನನ್ನ ಹಾಸಿಗೆಯು ನನ್ನನ್ನು ಸಂತೈಸುವುದು, ನನ್ನ ಮಂಚವು ನನ್ನ ಬಾಧೆಯನ್ನು ಹೊರುವುದು ಅಂದುಕೊಳ್ಳುವಾಗ
14 And You have frightened me with dreams, And You terrify me from visions,
೧೪ನೀನು ಸ್ವಪ್ನಗಳಿಂದ ನನ್ನನ್ನು ಬೆದರಿಸಿ, ದರ್ಶನಗಳ ಮೂಲಕ ಭಯಪಡಿಸುವಿ.
15 And my soul chooses strangling, Death rather than my bones.
೧೫ನನ್ನ ಆತ್ಮವು ಈ ಅಸ್ಥಿಪಂಜರದಲ್ಲಿ ಉಳಿಯುವುದಕ್ಕಿಂತಲೂ, ಉಸಿರುಕಟ್ಟಿ ಸಾಯುವುದೇ ಲೇಸೆಂದು ಬಯಸುತ್ತದೆ.
16 I have wasted away—I do not live for all time. Cease from me, for my days [are] vanity.
೧೬ನಾನು ಬೇಸರಗೊಂಡಿದ್ದೇನೆ, ಹೀಗೆ ನಿರಂತರ ಬದುಕುವುದಕ್ಕೆ ಇಷ್ಟವಿಲ್ಲ. ನನ್ನನ್ನು ಬಿಟ್ಟುಬಿಡು; ನನ್ನ ದಿನಗಳು ಉಸಿರಿನಂತಿವೆ.
17 What [is] man that You magnify him? And that You set Your heart to him?
೧೭ಮಾನವನು ಎಷ್ಟರವನು, ಅವನನ್ನು ನೀನು ಏಕೆ ಲಕ್ಷಿಸಬೇಕು? ಅವನಲ್ಲಿ ಏಕೆ ಮನಸ್ಸಿಡಬೇಕು?
18 And inspect him in the mornings, [And] in the evenings try him?
೧೮ದಿನಂಪ್ರತಿ ಅವನ ಮೇಲೆ ಲಕ್ಷ್ಯವಿಟ್ಟು, ಕ್ಷಣಕ್ಷಣಕ್ಕೂ ಅವನನ್ನು ಪರಿಶೋಧಿಸುವುದೇಕೆ?
19 How long do You not look from me? You do not desist until I swallow my spittle.
೧೯ಇನ್ನೆಷ್ಟರವರೆಗೆ ನೀನು ನನ್ನ ಕಡೆಯಿಂದ ದೃಷ್ಟಿ ತಿರುಗಿಸದೆ ಇರುವಿ? ಉಗುಳನ್ನು ನುಂಗುವಷ್ಟು ಕಾಲವಾದರೂ ನನ್ನನ್ನು ಬಿಡುವುದಿಲ್ಲವೇ?
20 I have sinned, what do I do to You, O watcher of man? Why have You set me for a mark to You, And I am for a burden to myself—and what?
೨೦ಮನುಷ್ಯರ ಮೇಲೆ ಕಾವಲಿಡುವವನೇ, ನಾನು ಪಾಪ ಮಾಡಿದ್ದರೂ ನನ್ನ ಕೃತ್ಯದಿಂದ ನಿನಗೆ ಏನಾಯಿತು? ನನ್ನನ್ನು ಶಿಕ್ಷೆಗೆ ಗುರಿಮಾಡಿಕೊಂಡದ್ದೇಕೆ? ನನಗೆ ನಾನೇ ಭಾರವಾಗಿದ್ದೇನೆ.
21 You do not take away my transgression, And [do not] cause my iniquity to pass away, Because now, I lie down in dust, And You have sought me—and I am not!”
೨೧ನೀನು ನನ್ನ ಅಪರಾಧವನ್ನು ಕ್ಷಮಿಸಿ ನನ್ನ ದೋಷವನ್ನು ಏಕೆ ಪರಿಹರಿಸುವುದಿಲ್ಲ? ನಾನು ಈಗ ಮಣ್ಣಿನಲ್ಲಿ ಮಲಗಿಕೊಳ್ಳುವೆನು; ನೀನು ನನ್ನನ್ನು ಹುಡುಕುವಾಗ ನಾನು ಇಲ್ಲದೆ ಹೋಗಿರುವೆನು.