< Psalms 24 >
1 A PSALM OF DAVID. To YHWH [is] the earth and its fullness, The world and the inhabitants in it.
೧ದಾವೀದನ ಕೀರ್ತನೆ. ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನದು; ಲೋಕವೂ ಮತ್ತು ಅದರ ನಿವಾಸಿಗಳೂ ಆತನವೇ.
2 For He has founded it on the seas, And He establishes it on the floods.
೨ಆತನೇ ಅದರ ಅಸ್ತಿವಾರವನ್ನು ಸಾಗರದ ಮೇಲೆ ಹಾಕಿದವನು; ಅದನ್ನು ಜಲರಾಶಿಗಳ ಮೇಲೆ ಸ್ಥಿರಪಡಿಸಿದವನು ಆತನೇ.
3 Who goes up into the hill of YHWH? And who rises up in His holy place?
೩ಯೆಹೋವನ ಪರ್ವತವನ್ನು ಹತ್ತತಕ್ಕವನು ಯಾರು? ಆತನ ಪವಿತ್ರಸ್ಥಾನದಲ್ಲಿ ಪ್ರವೇಶಿಸುವುದಕ್ಕೆ ಎಂಥವನು ಯೋಗ್ಯನು?
4 The clean of hands, and pure of heart, Who has not lifted up his soul to vanity, Nor has sworn to deceit.
೪ಯಾರು ಅಯೋಗ್ಯಕಾರ್ಯಗಳಲ್ಲಿ ಮನಸ್ಸಿಡದೆ, ಮೋಸ ಪ್ರಮಾಣಮಾಡದೆ, ಶುದ್ಧಹಸ್ತವೂ, ನಿರ್ಮಲಮನಸ್ಸೂ ಉಳ್ಳವನಾಗಿದ್ದಾನೋ,
5 He carries away a blessing from YHWH, Righteousness from the God of his salvation.
೫ಅವನೇ ಯೆಹೋವನಿಂದ ಶುಭವನ್ನು ಹೊಂದುವನು; ತನ್ನ ರಕ್ಷಕನಾದ ದೇವರಿಂದ ನೀತಿಫಲವನ್ನು ಪಡೆಯುವನು.
6 This [is] a generation of those seeking Him. Seeking Your face, O Jacob! (Selah)
೬ಇಂಥವರೇ ಆತನ ದರ್ಶನವನ್ನು ಬಯಸುವವರು. ಯಾಕೋಬ್ಯರ ದೇವರೇ, ನಿನ್ನ ಸಾನ್ನಿಧ್ಯವನ್ನು ಸೇರುವವರು ಇಂಥವರೇ. (ಸೆಲಾ)
7 Lift up your heads, O gates! And be lifted up, O perpetual doors! And the King of Glory comes in!
೭ದ್ವಾರಗಳೇ, ಉನ್ನತವಾಗಿರ್ರಿ! ಪುರಾತನವಾದ ಕದಗಳೇ ತೆರೆದುಕೊಂಡಿರ್ರಿ! ಮಹಾಮಹಿಮೆಯುಳ್ಳ ಅರಸನು ಆಗಮಿಸುತ್ತಾನೆ.
8 Who [is] this—“the King of Glory?” YHWH—strong and mighty, YHWH, the mighty in battle.
೮ಮಹಾಮಹಿಮೆಯುಳ್ಳ ಈ ಅರಸನು ಯಾರು? ಮಹಾ ಬಲಿಷ್ಠನೂ, ವಿಶೇಷ ಪರಾಕ್ರಮಿಯೂ ಆಗಿರುವ ಯೆಹೋವ, ಯುದ್ಧವೀರನಾಗಿರುವ ಯೆಹೋವ.
9 Lift up your heads, O gates! And be lifted up, O perpetual doors! And the King of Glory comes in!
೯ದ್ವಾರಗಳೇ, ಉನ್ನತವಾಗಿರ್ರಿ! ಪುರಾತನವಾದ ಕದಗಳೇ, ತೆರೆದುಕೊಂಡಿರ್ರಿ! ಮಹಾಮಹಿಮೆಯುಳ್ಳ ಅರಸನು ಆಗಮಿಸುತ್ತಾನೆ.
10 Who [is] He—this “King of Glory?” YHWH of hosts—He [is] the King of Glory! (Selah)
೧೦ಮಹಾಮಹಿಮೆಯುಳ್ಳ ಈ ಅರಸನು ಯಾರು? ಸೇನಾಧೀಶ್ವರನಾದ ಯೆಹೋವನೇ, ಮಹಾಮಹಿಮೆಯುಳ್ಳ ಅರಸನು ಈತನೇ. (ಸೆಲಾ)