< Psalms 133 >

1 [A Song of Ascents. By David.] See how good and how pleasant it is for brothers to live together in unity.
ಯಾತ್ರಾಗೀತೆ; ದಾವೀದನದು. ಆಹಾ, ಸಹೋದರರು ಒಂದಾಗಿರುವುದು, ಎಷ್ಟೋ ಒಳ್ಳೆಯದು, ಎಷ್ಟೋ ರಮ್ಯವಾದದ್ದು!
2 It is like the precious oil on the head, that ran down on the beard, even Aaron's beard; that came down on the edge of his robes;
ಅದು ಆರೋನನ ತಲೆಯ ಮೇಲೆ ಹಾಕಲ್ಪಟ್ಟು, ಅವನ ಗಡ್ಡದ ಮೇಲೆಯೂ, ಅವನ ಅಂಗಿಗಳ ಕೊರಳ ಪಟ್ಟಿಯವರೆಗೂ ಹರಿದು ಬರುವ ಶ್ರೇಷ್ಠ ತೈಲದಂತೆಯೂ,
3 like the dew of Hermon, that comes down on the hills of Zion: for there the LORD gives the blessing, even life forevermore.
ಹೆರ್ಮೋನ್ ಪರ್ವತದಲ್ಲಿ ಹುಟ್ಟಿ, ಚೀಯೋನ್ ಪರ್ವತದ ಮೇಲೆ ಬೀಳುವ ಮಂಜಿನಂತೆಯೂ ಇದೆ. ಅಲ್ಲಿ ಆಶೀರ್ವಾದವೂ, ಜೀವವೂ ಸದಾಕಾಲ ಇರಬೇಕೆಂದು, ಯೆಹೋವನು ಆಜ್ಞಾಪಿಸಿದ್ದಾನೆ.

< Psalms 133 >