< Leviticus 22 >
1 YHWH spoke to Moses, saying,
೧ಯೆಹೋವನು ಮೋಶೆಯೊಂದಿಗೆ ಮಾತನಾಡಿ,
2 "Tell Aaron and his sons to separate themselves from the holy things of the children of Israel, which they make holy to me, and that they not profane my holy name. I am YHWH.
೨“ಆರೋನನೂ ಮತ್ತು ಅವನ ಮಕ್ಕಳೂ ತಾವು ಅಶುದ್ಧರಾಗಿರುವಾಗ ಇಸ್ರಾಯೇಲರಿಂದ ನನಗೆ ಸಮರ್ಪಿಸಲ್ಪಟ್ಟ ಪರಿಶುದ್ಧ ದ್ರವ್ಯಗಳನ್ನು ಮುಟ್ಟಬಾರದೆಂದು ಅವರಿಗೆ ಆಜ್ಞಾಪಿಸು. ಅವರು ನನ್ನ ಪರಿಶುದ್ಧ ನಾಮದ ಘನತೆಗೆ ಕುಂದನ್ನು ತರಬಾರದು; ನಾನು ಯೆಹೋವನು.
3 "Tell them, 'If anyone of all your descendants throughout your generations approaches the holy things, which the children of Israel make holy to YHWH, having his uncleanness on him, that soul shall be cut off from before me. I am YHWH.
೩ಅವರಿಗೆ ನೀನು ಹೀಗೆ ಆಜ್ಞಾಪಿಸಬೇಕು, ‘ನಿಮ್ಮಲ್ಲಿಯಾಗಲಿ ಅಥವಾ ನಿಮ್ಮ ಸಂತತಿಯವರಲ್ಲಾಗಲಿ ಯಾವನಾದರೂ ಅಶುದ್ಧನಾಗಿರುವಾಗ ಇಸ್ರಾಯೇಲರು ಯೆಹೋವನಿಗೆ ಮೀಸಲೆಂದು ಸಮರ್ಪಿಸುವ ದ್ರವ್ಯಗಳ ಬಳಿಗೆ ಬಂದರೆ, ಅವನು ನನ್ನ ಸಾನ್ನಿಧ್ಯಸೇವೆಯಿಂದ ತೆಗೆದು ಹಾಕಬೇಕು; ನಾನು ಯೆಹೋವನು.
4 "'No man of the descendants of Aaron is a leper or has an issue, may eat of the holy things, until he is clean. Whoever touches anything that is unclean by the dead, a man who has had a seminal emission;
೪ಆರೋನನ ಸಂತತಿಯವರಲ್ಲಿ ಯಾವನಿಗಾದರೂ ಕುಷ್ಠರೋಗವಾಗಲಿ ಅಥವಾ ಮೇಹವಾಗಲಿ ಇದ್ದರೆ ಅವನು ಶುದ್ಧನಾಗುವ ತನಕ ದೇವರಿಗೆ ನೈವೇದ್ಯವಾದ ಪದಾರ್ಥಗಳನ್ನು ಊಟಮಾಡಬಾರದು. ಹೆಣದ ಸಂಪರ್ಕದಿಂದ ಅಶುದ್ಧವಾದುದನ್ನು ಮುಟ್ಟಿದವನಾಗಲಿ, ವೀರ್ಯಸ್ಖಲನ ಮಾಡಿಕೊಂಡವನಾಗಲಿ,
5 or whoever touches any crawling creature, whereby he may be made unclean, or a man of whom he may take uncleanness, whatever uncleanness he has;
೫ಹರಿದಾಡುವ ಅಶುದ್ಧವಾದ ಕ್ರಿಮಿಕೀಟ ಅಥವಾ ಅಶುದ್ಧನಾದ ಮನುಷ್ಯನನ್ನು ಮುಟ್ಟಿದವನು ಅಶುದ್ಧನಾಗಿರುವನು.
6 the person that touches any such shall be unclean until the evening, and shall not eat of the holy things, unless he bathe his body in water.
೬“‘ಅಶುದ್ಧವಾದುದನ್ನು ಮುಟ್ಟುವ ಯಾಜಕನು ಆ ದಿನದ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. ಆದುದರಿಂದ ಸ್ನಾನಮಾಡುವ ತನಕ ಅವನು ನೈವೇದ್ಯದ್ರವ್ಯವನ್ನು ತಿನ್ನಬಾರದು.
7 When the sun is down, he shall be clean; and afterward he shall eat of the holy things, because it is his bread.
೭ಹೊತ್ತುಮುಣುಗಿದ ನಂತರ ಅವನು ಶುದ್ಧನಾಗಿ ನೈವೇದ್ಯದ್ರವ್ಯವನ್ನು ಊಟಮಾಡಬಹುದು. ಅದು ಅವನ ಆಹಾರವೇ.
8 That which dies of itself, or is torn by animals, he shall not eat, defiling himself by it. I am YHWH.
೮ಅವನು ತಾನಾಗಿ ಸತ್ತುಬಿದ್ದದ್ದನ್ನಾಗಲಿ, ಕಾಡುಮೃಗದಿಂದ ಕೊಲ್ಲಲ್ಪಟ್ಟ ಪ್ರಾಣಿಗಳನ್ನು ತಿಂದು ತನ್ನನ್ನು ಅಪವಿತ್ರಮಾಡಿಕೊಳ್ಳಬಾರದು; ನಾನು ಯೆಹೋವನು.
9 "'They shall therefore follow my requirements, lest they bear sin for it, and die because of it, if they profane it. I am YHWH who sanctifies them.
೯ಯಾಜಕರು ಈ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯಬೇಕು. ಇವುಗಳನ್ನು ಮೀರಿ ನನ್ನ ನೈವೇದ್ಯವನ್ನು ಅಪವಿತ್ರಪಡಿಸಿದರೆ ಆ ದೋಷದ ಫಲವನ್ನು ಅನುಭವಿಸಿ ಸತ್ತಾರು. ಅವರನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು.
10 "'No stranger shall eat of the holy thing: a foreigner living with the priests, or a hired servant, shall not eat of the holy thing.
೧೦“‘ಯಾಜಕನಲ್ಲದೆ ಇತರರು ನೈವೇದ್ಯದ ಪದಾರ್ಥವನ್ನು ಊಟಮಾಡಬಾರದು. ಯಾಜಕನ ಬಳಿಯಲ್ಲಿರುವ ಅತಿಥಿಯಾಗಲಿ ಅಥವಾ ಕೂಲಿಯಾಳಾಗಲಿ ಅದನ್ನು ಊಟಮಾಡಬಾರದು.
11 But if a priest buys a slave, purchased by his money, he shall eat of it; and such as are born in his house, they shall eat of his bread.
೧೧ಆದರೆ ಯಾಜಕನು ಕ್ರಯಕ್ಕೆ ತೆಗೆದುಕೊಂಡ ಗುಲಾಮರೂ ಮತ್ತು ಅವನ ಮನೆಯಲ್ಲಿ ಹುಟ್ಟಿದ ಗುಲಾಮರು ಅದನ್ನು ಊಟಮಾಡಬಹುದು.
12 If a priest's daughter is married to an outsider, she shall not eat of the heave offering of the holy things.
೧೨ಯಾಜಕನ ಮಗಳು ಯಾಜಕನಲ್ಲದ ಇತರರಿಗೆ ಮದುವೆಯಾಗಿದ್ದರೆ ಅವಳು ನೈವೇದ್ಯದ ಪದಾರ್ಥಗಳನ್ನು ಊಟಮಾಡಬಾರದು.
13 But if a priest's daughter is a widow, or divorced, and has no child, and has returned to her father's house, as in her youth, she may eat of her father's bread: but no stranger shall eat any of it.
೧೩ಯಾಜಕನ ಮಗಳು ವಿಧವೆಯಾಗಲಿ ಅಥವಾ ಗಂಡನಿಂದ ಬಿಡಲ್ಪಟ್ಟವಳಾಗಲಿ, ಮಕ್ಕಳಿಲ್ಲದೆ ಇದ್ದರೆ ಬಾಲ್ಯದಲ್ಲಿ ತಂದೆಯ ಬಳಿಯಲ್ಲಿ ಇದ್ದಂತೆಯೇ ಕನ್ಯೆಯಾಗಿಯೇ ತಂದೆಯ ಮನೆಯನ್ನು ಸೇರಿ ತಂದೆಯ ಆಹಾರದಲ್ಲಿ ಭಾಗಿಯಾಗಬಹುದು. ಯಾಜಕರಲ್ಲದ ಇತರರು ಅದನ್ನು ಊಟಮಾಡಲೇಬಾರದು.
14 "'If a man eats something holy unwittingly, then he shall add the fifth part of its value to it, and shall give the holy thing to the priest.
೧೪ಯಾವನಾದರೂ ತಿಳಿಯದೆ ನೈವೇದ್ಯವಾದದ್ದನ್ನು ಊಟಮಾಡಿದರೆ ಅದನ್ನು ಮತ್ತು ಅದರ ಐದನೆಯ ಭಾಗವನ್ನು ಯಾಜಕನಿಗೆ ತಂದುಕೊಡಬೇಕು.
15 The priests shall not profane the holy things of the children of Israel, which they offer to YHWH,
೧೫ಇಸ್ರಾಯೇಲರು ಯೆಹೋವನಿಗೆ ಮೀಸಲೆಂದು ಇಟ್ಟ ನೈವೇದ್ಯದ ಪದಾರ್ಥಗಳನ್ನು ಯಾಜಕರು ಸಾಧಾರಣವೆಂದು ಎಣಿಸಬಾರದು.
16 and so cause them to bear the iniquity that brings guilt, when they eat their holy things: for I am YHWH who sanctifies them.'"
೧೬ಹಾಗೆ ಎಣಿಸಿದರೆ ತಾವು ಆ ನೈವೇದ್ಯಪದಾರ್ಥಗಳನ್ನು ಊಟಮಾಡುವುದರಿಂದ ಪಾಪಕ್ಕೆ ಒಳಗಾಗಿ ಶಿಕ್ಷೆಹೊಂದುವರು. ನನ್ನ ಸೇವೆಗೆ ಅವರನ್ನು ಪ್ರತಿಷ್ಠಿಸಿಕೊಂಡ ಯೆಹೋವನು ನಾನು’” ಎಂದು ಹೇಳಿದನು.
17 YHWH spoke to Moses, saying,
೧೭ಯೆಹೋವನು ಮೋಶೆಯೊಂದಿಗೆ ಮಾತನಾಡಿ,
18 "Speak to Aaron, and to his sons, and to all the children of Israel, and say to them, 'Any man of the house of Israel or the foreigners who sojourn in Israel, who offers his offering, whether it be any of their vows, or any of their freewill offerings, which they offer to YHWH for a burnt offering;
೧೮“ನೀನು ಆರೋನನಿಗೂ, ಅವನ ಮಕ್ಕಳಿಗೂ ಹಾಗೂ ಇಸ್ರಾಯೇಲರೆಲ್ಲರಿಗೂ ಹೀಗೆ ಆಜ್ಞಾಪಿಸಬೇಕು, ‘ಇಸ್ರಾಯೇಲರಲ್ಲಿ ಆಗಲಿ, ಅವರ ನಡುವೆ ವಾಸಿಸುವ ಇತರರಲ್ಲಿಯಾಗಲಿ ಯಾವನಾದರೂ ಹರಕೆಯಾಗಿ ಅಥವಾ ಕಾಣಿಕೆಯಾಗಿ ಯೆಹೋವನಿಗೆ ಸರ್ವಾಂಗಹೋಮ ಮಾಡುವಾಗ,
19 that you may be accepted, you shall offer a male without blemish, of the bulls, of the sheep, or of the goats.
೧೯ಅದು ಸಮರ್ಪಕವಾಗುವಂತೆ ದನಗಳಿಂದಾಗಲಿ ಅಥವಾ ಆಡು ಮತ್ತು ಕುರಿಗಳಿಂದಾಗಲಿ ಪೂರ್ಣಾಂಗವಾದ ಗಂಡನ್ನೇ ಸಮರ್ಪಿಸಬೇಕು.
20 But whatever has a blemish, that you shall not offer: for it shall not be acceptable for you.
೨೦ಕುಂದುಕೊರತೆ ಇರುವಂಥದ್ದನ್ನು ತರಬಾರದು; ಅಂಥದು ಸಮರ್ಪಣೆ ಆಗುವುದಿಲ್ಲ.
21 Whoever offers a sacrifice of peace offerings to YHWH to accomplish a vow, or for a freewill offering, of the herd or of the flock, it shall be perfect to be accepted; there shall be no blemish in it.
೨೧ಯಾವನಾದರೂ ಸಮಾಧಾನಯಜ್ಞಕ್ಕಾಗಿ ಹರಕೆಯಾಗಿ ಅಥವಾ ಕಾಣಿಕೆಯಾಗಿ ದನವನ್ನು ಅಥವಾ ಹಿಂಡಿನ ಆಡು ಇಲ್ಲವೇ ಕುರಿಗಳನ್ನು ತಂದರೆ ಅವು ಯೆಹೋವನಿಗೆ ಸಮರ್ಪಕವಾಗುವುದಕ್ಕಾಗಿ ಅದು ಪೂರ್ಣಾಂಗವಾಗಿಯೇ ಇರಬೇಕು; ಅದರಲ್ಲಿ ಯಾವ ಕುಂದುಕೊರತೆಯೂ ಇರಬಾರದು.
22 Blind, injured, maimed, having a wart, festering, or having a running sore, you shall not offer these to YHWH, nor make an offering by fire of them on the altar to YHWH.
೨೨ಕುರುಡಾದದ್ದು, ಕುಂಟಾದದ್ದು, ಗಾಯವಾದದ್ದು, ಹುಣ್ಣುಳ್ಳದ್ದು, ಕಜ್ಜಿ ತುರಿಯುಳ್ಳದ್ದು ಇಂಥವುಗಳನ್ನು ಯೆಹೋವನಿಗೆ ಸಮರ್ಪಿಸಲೇಬಾರದು, ಯಜ್ಞವೇದಿಯ ಮೇಲೆ ಹೋಮ ಮಾಡಲೇಬಾರದು.
23 Either a bull or a lamb that has any deformity or lacking in his parts, that you may offer for a freewill offering; but for a vow it shall not be accepted.
೨೩ಹೋರಿಯ ಇಲ್ಲವೆ ಕುರಿಯ ಅವಯವಗಳಲ್ಲಿ ಏನಾದರೂ ಹೆಚ್ಚುಕಡಿಮೆ ಇದ್ದರೆ ಅದನ್ನು ಕಾಣಿಕೆಯಾಗಿ ಸಮರ್ಪಿಸಬಹುದೇ ಹೊರತು ಹರಕೆಯಾಗಿ ಒಪ್ಪಿಸಿದರೆ ಅದು ಸಮರ್ಪಣೆ ಆಗುವುದಿಲ್ಲ.
24 That which has its testicles bruised, crushed, broken, or cut, you shall not offer to YHWH; neither shall you do thus in your land.
೨೪ಬೀಜಹೊಡೆದ, ಕುಟ್ಟಿದ, ಒಡೆದ ಮತ್ತು ಕೊಯ್ದ ಪಶುವನ್ನು ಯೆಹೋವನಿಗೆ ಸಮರ್ಪಿಸಬಾರದು, ಮತ್ತು ನಿಮ್ಮ ದೇಶದಲ್ಲಿ ಪಶುಗಳಿಗೆ ಹಾಗೆ ಮಾಡಲೇ ಬಾರದು.
25 Neither shall you offer the bread of your God from the hand of a foreigner of any of these; because their corruption is in them. There is a blemish in them. They shall not be accepted for you.'"
೨೫ಅನ್ಯದೇಶದವನಿಂದ ತೆಗೆದುಕೊಂಡ ಅಂತಹ ಪಶುವನ್ನು ನಿಮ್ಮ ದೇವರಿಗೆ ಆಹಾರವಾಗಿ ಒಪ್ಪಿಸಬಾರದು; ಅದು ಕುಂದುಳ್ಳದ್ದು, ಪೂರ್ಣಾಂಗವಾದುದಲ್ಲ; ಆದಕಾರಣ ಸಮರ್ಪಣೆ ಆಗುವುದಿಲ್ಲ’” ಅಂದನು.
26 YHWH spoke to Moses, saying,
೨೬ಯೆಹೋವನು ಮೋಶೆಯೊಂದಿಗೆ ಮಾತನಾಡಿ,
27 "When a bull, or a sheep, or a goat, is born, then it shall remain seven days with its mother; and from the eighth day and thenceforth it shall be accepted for the offering of an offering made by fire to YHWH.
೨೭“ಕರುವಾಗಲಿ, ಕುರಿಮರಿಯಾಗಲಿ ಅಥವಾ ಆಡುಮರಿಯಾಗಲಿ ಹುಟ್ಟಿದಾಗ ಅದು ಏಳು ದಿನಗಳ ವರೆಗೆ ತಾಯಿಯ ಬಳಿಯಲ್ಲಿ ಇರಬೇಕು. ಎಂಟನೆಯ ದಿನದಿಂದ ಅದನ್ನು ಯೆಹೋವನಿಗೆ ಹೋಮವಾಗಿ ಸಮರ್ಪಿಸಿದರೆ ಅದು ಅಂಗೀಕಾರವಾಗುವುದು.
28 Whether it is an ox or a sheep, you shall not kill it and its young both in one day.
೨೮ಹೆತ್ತ ಆಕಳನ್ನು, ಅದರ ಕರುವನ್ನು ಇಲ್ಲವೆ ಈದ ಆಡು, ಕುರಿಗಳನ್ನು, ಅವುಗಳ ಮರಿಗಳನ್ನು ಒಂದೇ ದಿನದಲ್ಲಿ ವಧಿಸಬಾರದು.
29 "When you sacrifice a sacrifice of thanksgiving to YHWH, you shall sacrifice it so that you may be accepted.
೨೯“ನೀವು ಕೃತಜ್ಞತೆಯನ್ನು ತೋರಿಸುವುದಕ್ಕಾಗಿ ಯೆಹೋವನಿಗೆ ಮಾಡುವ ಯಜ್ಞವನ್ನು ಮೆಚ್ಚಿಗೆಯಾದ ರೀತಿಯಲ್ಲೇ ಸಮರ್ಪಿಸಬೇಕು.
30 It shall be eaten on the same day; you shall leave none of it until the morning. I am YHWH.
೩೦ಅದೇ ದಿನದಲ್ಲಿ ಅದನ್ನು ಊಟಮಾಡಬೇಕು; ಮರುದಿನದ ವರೆಗೆ ಸ್ವಲ್ಪವನ್ನಾದರೂ ಉಳಿಸಬಾರದು. ನಾನು ಯೆಹೋವನು.
31 "Therefore you shall keep my commandments, and do them. I am YHWH.
೩೧“ಈ ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು; ನಾನು ಯೆಹೋವನು.
32 You shall not profane my holy name, but I will be made holy among the children of Israel. I am YHWH who makes you holy,
೩೨ನನ್ನ ಪರಿಶುದ್ಧ ನಾಮದ ಘನತೆಗೆ ಕುಂದು ತರಬಾರದು; ಇಸ್ರಾಯೇಲರಲ್ಲಿ ನಾನು ಪರಿಶುದ್ಧನೆಂದು ಎಣಿಸಲ್ಪಡಬೇಕು; ನಾನು ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು.
33 who brought you out of the land of Egypt, to be your God. I am YHWH."
೩೩ನಿಮ್ಮ ದೇವರಾಗುವುದಕ್ಕೆ ನಿಮ್ಮನ್ನು ಐಗುಪ್ತದೇಶದಿಂದ ಬರಮಾಡಿದೆನಲ್ಲಾ; ನಾನು ಯೆಹೋವನು” ಎಂದು ಹೇಳಿದನು.