< Revelation 11 >

1 A reed like a rod was given to me. Someone said, "Rise and measure God's temple, and the altar, and those who worship in it.
ತರುವಾಯ ಅಳತೆಗೊಲಿನಂಥ ಒಂದು ಕೋಲನ್ನು ನನಗೆ ಕೊಟ್ಟು ಹೀಗೆ ತಿಳಿಸಲಾಯಿತು, “ನೀನೆದ್ದು ದೇವರ ಆಲಯವನ್ನೂ ಯಜ್ಞವೇದಿಯನ್ನೂ ಅಳತೆಮಾಡಿ ಆಲಯದಲ್ಲಿ ಆರಾಧನೆಮಾಡುವವರನ್ನು ಎಣಿಕೆಮಾಡು.
2 Leave out the court which is outside of the temple, and do not measure it, for it has been given to the nations. They will tread the holy city under foot for forty-two months.
ಆಲಯದ ಹೊರಗಿರುವ ಹೊರಾಂಗಣವನ್ನು ಅಳೆಯದೆ ಬಿಟ್ಟುಬಿಡು, ಅದು ಅನ್ಯಜನರಿಗಾಗಿ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಲವತ್ತೆರಡು ತಿಂಗಳು ತುಳಿದಾಡುವರು.
3 I will give power to my two witnesses, and they will prophesy one thousand two hundred sixty days, clothed in sackcloth."
ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟುಗಳನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.”
4 These are the two olive trees and the two lampstands, standing before the Lord of the earth.
ಭೂಲೋಕದ ಒಡೆಯನ ಮುಂದೆ ನಿಂತಿರುವ ಎರಡು ಎಣ್ಣೆಯ ಮರಗಳೂ ಮತ್ತು ಎರಡು ದೀಪಸ್ತಂಭಗಳೂ ಇವರೇ.
5 If anyone desires to harm them, fire proceeds out of their mouth and devours their enemies. If anyone desires to harm them, he must be killed in this way.
ಇವರಿಗೆ ಯಾವನಾದರೂ ಕೇಡನ್ನುಂಟುಮಾಡಬೇಕೆಂದಿದ್ದರೆ ಇವರ ಬಾಯೊಳಗಿಂದ ಬೆಂಕಿಯು ಹೊರಟು ಇವರ ಶತ್ರುಗಳನ್ನು ದಹಿಸಿಬಿಡುವುದು. ಇವರಿಗೆ ಕೇಡನ್ನು ಉಂಟುಮಾಡಬಯಸುವವರಿಗೆ ಆ ರೀತಿಯಾಗಿ ಹತರಾಗಬೇಕು.
6 These have the power to shut up the sky, that it may not rain during the days of their prophecy. They have power over the waters, to turn them into blood, and to strike the earth with every plague, as often as they desire.
ಅವರು ಪ್ರವಾದಿಸುವ ದಿನಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಅವರಿಗೆ ಇರುವುದು. ಇದಲ್ಲದೆ ಅವರಿಗೆ ಇಷ್ಟಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವುದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹಿಂಸಿಸುವುದಕ್ಕೂ ಅಧಿಕಾರವುಂಟು.
7 When they have finished their testimony, the beast that comes up out of the abyss will make war with them, and overcome them, and kill them. (Abyssos g12)
ಅವರು ತಮ್ಮ ಸಾಕ್ಷಿಗಳನ್ನು ಹೇಳಿ ಮುಗಿಸಿದ ನಂತರ, ಅಧೋಲೋಕದಿಂದ ಬರುವ ಮೃಗವು ಇವರ ಮೇಲೆ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವುದು. (Abyssos g12)
8 Their dead bodies will be in the street of the great city, which spiritually is called Sodom and Egypt, where also their Lord was crucified.
ಈ ಸಾಕ್ಷಿಗಳ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಸಾಂಕೇತಿಕವಾಗಿ ಸೊದೋಮ್ ಎಂದು, ಐಗುಪ್ತ ಎಂದೂ ಹೆಸರುಗಳುಂಟು. ಇವರ ಒಡೆಯನು ಸಹ ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟಿದ್ದನು.
9 From among the peoples, tribes, languages, and nations people will look at their dead bodies for three and a half days, and will not allow their dead bodies to be placed in a tomb.
ಸಕಲ ಜನ, ಕುಲ, ಭಾಷೆ, ಜನಾಂಗಗಳಿಗೆ ಸೇರಿದವರು ಈ ಸಾಕ್ಷಿಗಳ ಶವಗಳನ್ನು ಮೂರುವರೆ ದಿನಗಳವರೆಗೂ ನೋಡುವರು ಮತ್ತು ಅವರ ಶವಗಳನ್ನು ಸಮಾಧಿಯಲ್ಲಿ ಇಡಗೊಡಿಸುವುದಿಲ್ಲ.
10 Those who dwell on the earth rejoice over them, and they will be glad. They will give gifts to one another, because these two prophets tormented those who dwell on the earth.
೧೦ಈ ಇಬ್ಬರು ಪ್ರವಾದಿಗಳು ಭೂನಿವಾಸಿಗಳನ್ನು ಹಿಂಸಿಸಿದ್ದರಿಂದ ಇವರು ಸತ್ತದ್ದಕ್ಕೆ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು.
11 After the three and a half days, the breath of life from God entered into them, and they stood on their feet. Great fear fell on those who saw them.
೧೧ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಶ್ವಾಸವು ಬಂದು ಆ ಶವಗಳಲ್ಲಿ ಪ್ರವೇಶಿಸಲು, ಅವರು ಕಾಲೂರಿ ನಿಲ್ಲುವರು. ಅವರನ್ನು ನೋಡಿದವರೆಲ್ಲರೂ ಭಯದಿಂದ ನಡುಗಿದರು.
12 I heard a loud voice from heaven saying to them, "Come up here." They went up into heaven in the cloud, and their enemies saw them.
೧೨ಅನಂತರ ಅವರಿಗೆ, “ಇಲ್ಲಿ ಮೇಲಕ್ಕೆ ಏರಿ ಬನ್ನಿರಿ!” ಎಂದು ಆಕಾಶದಿಂದ ಮಹಾ ವಾಣಿಯು ತಿಳಿಸಿತು. ಅದನ್ನು ಕೇಳಿ ಅವರು ಮೇಘದಲ್ಲಿ ಪರಲೋಕಕ್ಕೆ ಏರಿಹೋದರು. ಅವರ ಶತ್ರುಗಳು ಅವರನ್ನು ನೋಡುತ್ತಾ ಇದ್ದರು.
13 In that hour there was a great earthquake, and a tenth of the city fell. Seven thousand people were killed in the earthquake, and the rest were terrified, and gave glory to the God of heaven.
೧೩ಅದೇ ಗಳಿಗೆಯಲ್ಲಿ ಮಹಾ ಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದಂಶವು ಬಿದ್ದುಹೋಯಿತು. ಆ ಭೂಕಂಪದಿಂದ ಏಳು ಸಾವಿರ ಮಂದಿ ಸತ್ತು ಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕದ ದೇವರನ್ನು ಘನಪಡಿಸಿದರು.
14 The second woe is past. Look, the third woe comes quickly.
೧೪ಎರಡನೆಯ ವಿಪತ್ತು ಕಳೆದುಹೋಯಿತು. ಇಗೋ, ಮೂರನೆಯ ವಿಪತ್ತು ಬೇಗನೆ ಬರುತ್ತಿದೆ.
15 The seventh angel sounded, and great voices in heaven followed, saying, "The kingdom of the world now belongs to our Lord and to his Christ, and he will reign forever and ever." (aiōn g165)
೧೫ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು. (aiōn g165)
16 The twenty-four elders, who sit on their thrones before God's throne, fell on their faces and worshiped God,
೧೬ತರುವಾಯ ದೇವರ ಸಮಕ್ಷಮದಲ್ಲಿ ತಮ್ಮ ತಮ್ಮ ಸಿಂಹಾಸನಗಳ ಮೇಲೆ ಕುಳಿತಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ಆತನಿಗೆ ಅಡ್ಡಬಿದ್ದು,
17 saying: "We give you thanks, Lord God Almighty, the one who is and who was; because you have taken your great power, and reigned.
೧೭“ಕರ್ತನೇ, ಸರ್ವಶಕ್ತನಾದ ದೇವರೇ, ಇರುವಾತನೇ ಇದ್ದಾತನೇ, ನೀನು ನಿನ್ನ ಮಹಾ ಅಧಿಕಾರವನ್ನು ವಹಿಸಿಕೊಂಡು ಆಳುತ್ತಿರುವುದರಿಂದ ನಾವು ನಿನಗೆ ಕೃತಜ್ಞತಾಸುತ್ತಿ ಸಲ್ಲಿಸುತ್ತೇವೆ.
18 The nations were angry, and your wrath came, as did the time for the dead to be judged, and to give your servants the prophets, their reward, as well as to the saints, and those who fear your name, to the small and the great; and to destroy those who destroy the earth."
೧೮ಜನಾಂಗಗಳು ಕೋಪಿಸಿಕೊಂಡವು. ನಿನ್ನ ಕೋಪವೂ ಪ್ರಕಟವಾಯಿತು. ಸತ್ತವರು ತೀರ್ಪುಹೊಂದುವ ಸಮಯವು ಬಂದಿದೆ. ನೀನು ನಿನ್ನ ದಾಸರಾದ ಪ್ರವಾದಿಗಳಿಗೂ, ದೇವಜನರಿಗೂ, ನಿನ್ನ ನಾಮಕ್ಕೆ ಭಯಪಡುವ ಹಿರಿಯರೂ ಕಿರಿಯರೂ ಆಗಿರುವ ನಿನ್ನ ಭಕ್ತರಿಗೆ ಪ್ರತಿಫಲವನ್ನು ಕೊಡುವುದಕ್ಕೂ ಲೋಕನಾಶಕರನ್ನು ವಿನಾಶಗೊಳಿಸುವ ಕಾಲವು ಬಂದಿದೆ” ಎಂದು ಆತನನ್ನು ಆರಾಧಿಸಿದರು.
19 God's temple that is in heaven was opened, and the ark of his covenant was seen in his temple. Lightnings, sounds, thunders, an earthquake, and great hail followed.
೧೯ಆಗ ಪರಲೋಕದಲ್ಲಿರುವ ದೇವಾಲಯವು ತೆರೆಯಿತು. ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು. ಇದಲ್ಲದೆ, ಗರ್ಜನೆ, ಗುಡುಗು, ಮಿಂಚುಗಳು, ಭೂಕಂಪವು, ದೊಡ್ಡ ಆಲಿಕಲ್ಲಿನ ಮಳೆಯೂ ಸುರಿಯಿತು.

< Revelation 11 >