< Psalms 128 >
1 A song of ascents. Happy all who fear the Lord, who walk in his ways.
ಯಾತ್ರಾ ಗೀತೆ. ಯೆಹೋವ ದೇವರಿಗೆ ಭಯಪಟ್ಟು ಅವರ ಮಾರ್ಗಗಳಲ್ಲಿ ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು.
2 You will eat what your hands have toiled for, and be happy and prosperous!
ನಿನ್ನ ಕೈಗಳ ಕಷ್ಟಾರ್ಜಿತವನ್ನು ನೀನು ಊಟಮಾಡಿ ಆಶೀರ್ವಾದವನ್ನೂ ಅಭಿವೃದ್ಧಿಯನ್ನೂ ಹೊಂದುವಿ.
3 Like a fruitful vine shall your wife be in the innermost room of your house: your children, like olive shoots, round about your table.
ನಿನ್ನ ಹೆಂಡತಿಯು ನಿನ್ನ ಮನೆಯಲ್ಲಿರುವ ಫಲಭರಿತವಾದ ದ್ರಾಕ್ಷಿಬಳ್ಳಿಯ ಹಾಗೆ ಇರುವಳು. ನಿನ್ನ ಮೇಜಿನ ಸುತ್ತಲಿರುವ ನಿನ್ನ ಮಕ್ಕಳು, ಓಲಿವ್ ಮರಗಳ ಸಸಿಗಳ ಹಾಗೆ ಇರುವರು.
4 See! This is the blessing of the man who fears the Lord.
ಯೆಹೋವ ದೇವರಿಗೆ ಭಯಪಡುವ ಮನುಷ್ಯನು ಹೀಗೆಯೇ ಆಶೀರ್ವಾದ ಹೊಂದುವನು.
5 The Lord shall bless you from Zion. You will see Jerusalem nourish all the days of your life.
ಯೆಹೋವ ದೇವರು ನಿನ್ನನ್ನು ಚೀಯೋನಿನೊಳಗಿಂದ ನಿನ್ನ ಜೀವಮಾನವೆಲ್ಲಾ ಆಶೀರ್ವದಿಸಲಿ; ನೀನು ಯೆರೂಸಲೇಮಿನ ಸಮೃದ್ಧಿಯನ್ನು ಕಾಣುವಿ.
6 You will see your children’s children. Peace upon Israel.
ನೀನು ಮಕ್ಕಳ ಮಕ್ಕಳನ್ನು ಕಾಣುವ ಬದುಕು ನಿನಗಿರಲಿ ಇಸ್ರಾಯೇಲರ ಮೇಲೆ ಸಮಾಧಾನವಿರಲಿ.