< 1 Corinthians 4 >
1 Let a man so account of us, as of ministers of Christ, and stewards of the mysteries of God.
೧ಜನರು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರ ಗುಪ್ತವಾಗಿದ್ದ ಸತ್ಯಾರ್ಥಗಳ ವಿಷಯದಲ್ಲಿ ದೇವರ ಮನೆವಾರ್ತೆಯವರೆಂತಲೂ ಪರಿಗಣಿಸಲಿ.
2 Here, moreover, it is required in stewards, that a man be found faithful.
೨ಹೀಗಿರಲು ನಿರ್ವಾಹಕರು ನಂಬಿಗಸ್ತರಾಗಿ ಕಂಡುಬರುವದು ಅಗತ್ಯವಲ್ಲವೇ.
3 But with me it is a very small thing that I should be judged of you, or of man’s judgment: yea, I judge not mine own self.
೩ನನಗಾದರೂ ನಿಮ್ಮಿಂದಾಗಲಿ ಅಥವಾ ಮನುಷ್ಯರು ಮಾಡುವ ವಿಚಾರಣೆಯಾಗಲಿ ತೀರಾ ಲಘುವೆನಿಸಿದೆ. ನಾನೂ ನನ್ನನ್ನು ನ್ಯಾಯತೀರ್ಪು ಮಾಡಿಕೊಳ್ಳುವುದಿಲ್ಲ.
4 For I know nothing against myself; yet am I not hereby justified: but he that judgeth me is the Lord.
೪ನನ್ನಲ್ಲಿ ದೋಷವಿದೆಯೆಂದು ನನ್ನ ಮನಸ್ಸಿಗೆ ತೋರುವುದಿಲ್ಲವಾದರೂ ನಾನು ನಿರ್ದೋಷಿಯೆಂದು ನಿರ್ಣಯಿಸುವಂತಿಲ್ಲ. ನನ್ನನ್ನು ನ್ಯಾಯವಿಚಾರಣೆ ಮಾಡುವವನು ಕರ್ತನೇ.
5 Wherefore judge nothing before the time, until the Lord come, who will both bring to light the hidden things of darkness, and make manifest the counsels of the hearts; and then shall each man have his praise from God.
೫ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು.
6 Now these things, brethren, I have in a figure transferred to myself and Apollos for your sakes; that in us ye might learn not [to go] beyond the things which are written; that no one of you be puffed up for the one against the other.
೬ಪ್ರಿಯರೇ, ನಾನು ನಿಮಗೋಸ್ಕರವಾಗಿ ನನ್ನಗೂ ಅಪೊಲ್ಲೋಸನಿಗೂ ಈ ನಿಯಮಗಳನ್ನೆಲ್ಲಾ ಅನ್ವಯಿಸಿಕೊಂಡು ಹೇಳಿದ್ದೇನೆ. ಆದ್ದರಿಂದ ನೀವು “ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನು ಮೀರಿಹೋಗಬಾರದು,” ಎಂಬ ಈ ವಾಕ್ಯದ ಅರ್ಥವನ್ನು ನಮ್ಮಿಂದ ಕಲಿತುಕೊಂಡು, ನಿಮ್ಮಲ್ಲಿ ಯಾವನಾದರೂ ಒಬ್ಬನನ್ನು ವಿರೋಧಿಸಿ ಮತ್ತೊಬ್ಬನ ಪಕ್ಷವನ್ನು ಹಿಡಿದು ಉಬ್ಬಿಕೊಳ್ಳಬಾರದು ಎಂಬುದಕ್ಕಾಗಿದೆ.
7 For who maketh thee to differ? and what hast thou that thou didst not receive? but if thou didst receive it, why dost thou glory, as if thou hadst not received it?
೭ನಿನ್ನನ್ನು ಇತರರಿಗಿಂತಲೂ ಶ್ರೇಷ್ಠನನ್ನಾಗಿ ಮಾಡಿದವರು ಯಾರು? ದೇವರಿಂದ ಹೊಂದದೆ ಇರುವಂಥದು ನಿನ್ನಲ್ಲಿ ಒಂದಾದರೂ ಉಂಟೋ? ಹೊಂದಿದ ಮೇಲೆ ಹೊಂದಿದ್ದಲ್ಲವೆಂಬಂತೆ ಯಾಕೆ ಕೊಚ್ಚಿಕೊಳ್ಳುತ್ತೀ?
8 Already are ye filled, already ye are become rich, ye have reigned without us: yea and I would that ye did reign, that we also might reign with you.
೮ಇಷ್ಟು ಬೇಗನೆ ನೀವು ತೃಪ್ತರಾದಿರಿ. ಇಷ್ಟುಬೇಗನೆ ಐಶ್ವರ್ಯವಂತರಾದಿರಿ. ನಮ್ಮ ಸಹಾಯವಿಲ್ಲದೆ ಅರಸರಂತೆ ಆದಿರಿ. ನೀವು ನಿಜವಾಗಿ ಆಳುವವರಾಗಿದ್ದರೇ ನನಗೆ ಆನಂದವಾಗುತ್ತಿತ್ತು. ಆಗ ನಾವು ಸಹ ನಿಮ್ಮೊಂದಿಗೆ ಆಳುತ್ತಿದ್ದೇವು.
9 For, I think, God hath set forth us the apostles last of all, as men doomed to death: for we are made a spectacle unto the world, and to angels, and to men.
೯ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣದ ತೀರ್ಪು ಹೊಂದಿದವರಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ. ನಾವು ಲೋಕದಲ್ಲಿ ದೇವದೂತರಿಗೂ, ಮನುಷ್ಯರಿಗೂ ಅಂತೂ ಜಗತ್ತಿಗೆಲ್ಲಾ ಹಾಸ್ಯಾಸ್ಪದವಾದ ನೋಟವಾದೆವು.
10 We are fools for Christ’s sake, but ye are wise in Christ; we are weak, but ye are strong; ye have glory, but we have dishonour.
೧೦ನಾವಂತೂ ಕ್ರಿಸ್ತನ ನಿಮಿತ್ತ ಮೂರ್ಖರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ. ನಾವು ಬಲಹೀನರು, ನೀವು ಬಲಿಷ್ಠರು, ನೀವು ಗೌರವವುಳ್ಳವರು, ನಾವು ನಿಂದಿಸಲ್ಪಟ್ಟವರು.
11 Even unto this present hour we both hunger, and thirst, and are naked, and are buffeted, and have no certain dwelling place;
೧೧ಈ ಗಳಿಗೆಯವರೆಗೂ ನಾವು ಹಸಿದವರೂ, ಬಾಯಾರಿಕೆಯುಳ್ಳವರೂ, ವಸ್ತ್ರವಿಲ್ಲದವರೂ, ಪೆಟ್ಟು ತಿನ್ನುವವರೂ ಮನೆಯಿಲ್ಲದವರೂ,
12 and we toil, working with our own hands: being reviled, we bless; being persecuted, we endure;
೧೨ಸ್ವಂತ ಕೈಗಳಿಂದ ಕೆಲಸಮಾಡಿ ದುಡಿಯುವವರೂ ಆಗಿದ್ದೇವೆ. ಶಪಿಸುವವರನ್ನು ಆಶೀರ್ವದಿಸುತ್ತೇವೆ. ಜನರು ಹಿಂಸಿಸುವಾಗ ಸಹಿಸಿಕೊಳ್ಳುತ್ತೇವೆ.
13 being defamed, we entreat: we are made as the filth of the world, the offscouring of all things, even until now.
೧೩ಅಪವಾದ ಹೊರಿಸುವವರನ್ನು ಕನಿಕರದಿಂದ ಮಾತನಾಡಿಸುತ್ತೇವೆ. ನಾವು ಈಗಿನವರೆಗೂ ಲೋಕದ ಕಸವೋ ಎಲ್ಲಾದಕ್ಕಿಂತಲೂ ಹೀನವೋ ಎಂಬಂತೆ ಆಗಿದ್ದೇವೆ.
14 I write not these things to shame you, but to admonish you as my beloved children.
೧೪ನಿಮ್ಮನ್ನು ನಾಚಿಕೆಪಡಿಸುವುದಕ್ಕಾಗಿ ಬರೆಯದೆ ನನ್ನ ಪ್ರಿಯ ಮಕ್ಕಳೆಂದು ಭಾವಿಸಿ ನಿಮಗೆ ಬುದ್ಧಿ ಹೇಳುವುದಕ್ಕಾಗಿಯೇ ಈ ಮಾತುಗಳನ್ನು ಬರೆದಿದ್ದೇನೆ.
15 For though ye should have ten thousand tutors in Christ, yet [have ye] not many fathers: for in Christ Jesus I begat you through the gospel.
೧೫ನಿಮಗೆ ಕ್ರಿಸ್ತನಲ್ಲಿ ಬೋಧಕರು ಸಾವಿರಾರು ಮಂದಿ ಇದ್ದರೂ ತಂದೆಗಳು ಬಹು ಮಂದಿ ಇಲ್ಲ ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದ ತಂದೆಯಾಗಿದ್ದೇನೆ.
16 I beseech you therefore, be ye imitators of me.
೧೬ಆದ್ದರಿಂದ ನನ್ನನ್ನು ಅನುಸರಿಸುವವರಾಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
17 For this cause have I sent unto you Timothy, who is my beloved and faithful child in the Lord, who shall put you in remembrance of my ways which be in Christ, even as I teach everywhere in every church.
೧೭ಈ ಕಾರಣದಿಂದ ಕರ್ತನಲ್ಲಿ ನನ್ನ ಪ್ರಿಯ ಮತ್ತು ನಂಬಿಗಸ್ತ ಮಗನಾದ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೇನೆ. ನಾನು ಪ್ರತಿಯೊಂದು ಸಭೆಗಳಲ್ಲಿಯೂ, ಎಲ್ಲೆಲ್ಲಿಯೂ ಬೋಧಿಸುವ ಹಾಗೆ ಕ್ರಿಸ್ತನಲ್ಲಿರುವ ನನ್ನ ನಡವಳಿಕೆಗಳನ್ನು ಅವನು ನಿಮ್ಮ ನೆನಪಿಗೆ ತರುವನು.
18 Now some are puffed up, as though I were not coming to you.
೧೮ನಿಮ್ಮಲ್ಲಿ ಕೆಲವರು ಪೌಲನು ನಮ್ಮ ಬಳಿಗೆ ಬರುವುದಿಲ್ಲವೆಂದು ತಿಳಿದು ಉಬ್ಬಿಕೊಂಡಿದ್ದಾರೆ.
19 But I will come to you shortly, if the Lord will; and I will know, not the word of them which are puffed up, but the power.
೧೯ಆದರೆ ಕರ್ತನ ಚಿತ್ತವಾದರೆ ನಾನು ಬೇಗನೆ ನಿಮ್ಮ ಬಳಿಗೆ ಬಂದು ಉಬ್ಬಿಕೊಂಡಿರುವವರ ಮಾತನ್ನು ಮಾತ್ರವಲ್ಲ ಅವರ ಬಲವನ್ನು ಕಂಡುಹಿಡಿಯುತ್ತೇನೆ.
20 For the kingdom of God is not in word, but in power.
೨೦ದೇವರ ರಾಜ್ಯವು ಮಾತಿನಲ್ಲಿ ಅಲ್ಲ, ಶಕ್ತಿಯಲ್ಲಿ ಅಡಗಿದೆ.
21 What will ye? shall I come unto you with a rod, or in love and a spirit of meekness?
೨೧ನಿಮ್ಮ ಇಷ್ಟವೇನು? ಬೆತ್ತ ತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯದ ಆತ್ಮದಿಂದಲೂ ಕೂಡಿದವನಾಗಿ ಬರಲೋ?