< Acts 28 >

1 And when we were escaped, then we knew that the island was called Melita.
ನಾವು ಸುರಕ್ಷಿತವಾಗಿ ದಡವನ್ನು ಸೇರಿದ ಮೇಲೆ, ಅದು ಮೆಲೀತೆ ದ್ವೀಪವೆಂದು ತಿಳಿದುಬಂತು.
2 And the barbarians shewed us no common kindness: for they kindled a fire, and received us all, because of the present rain, and because of the cold.
ಅನ್ಯಭಾಷೆಯವರಾದ ಆ ದ್ವೀಪದವರು ನಮಗೆ ವಿಶೇಷ ಸಹಾನುಭೂತಿಯನ್ನು ತೋರಿದರು. ಮಳೆಯು ಆಗಲೇ ಹೊಯ್ದು ಚಳಿಯಾಗುತ್ತಿದ್ದುದರಿಂದ, ಅವರು ಬೆಂಕಿಯನ್ನು ಹೊತ್ತಿಸಿ ನಮ್ಮೆಲ್ಲರನ್ನು ಸೇರಿಸಿಕೊಂಡರು.
3 But when Paul had gathered a bundle of sticks, and laid them on the fire, a viper came out by reason of the heat, and fastened on his hand.
ಪೌಲನು ಒಂದು ಹೊರೆ ಕಟ್ಟಿಗೆಯನ್ನು ಕೂಡಿಸಿ, ತಂದು ಬೆಂಕಿಯ ಮೇಲೆ ಹಾಕಲು, ಆ ಶಾಖಕ್ಕೆ ಒಂದು ಸರ್ಪವು ಹೊರಗೆ ಬಂದು, ಅವನ ಕೈಯನ್ನು ಬಿಗಿಯಾಗಿ ಹಿಡಿದುಕೊಂಡಿತು.
4 And when the barbarians saw the beast hanging from his hand, they said one to another, No doubt this man is a murderer, whom, though he hath escaped from the sea, yet Justice hath not suffered to live.
ಆ ಸರ್ಪವು ಅವನ ಕೈಯಿಂದ ಜೋತಾಡುವುದನ್ನು ದ್ವೀಪದವರು ನೋಡಿ; “ಈ ಮನುಷ್ಯನು ಕೊಲೆಪಾತಕನೇ ಸರಿ; ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯದೇವತೆಯು ಇವನನ್ನು ಬದುಕಗೊಡಿಸುವುದಿಲ್ಲವೆಂದು” ತಮ್ಮತಮ್ಮೊಳಗೆ ಮಾತನಾಡಿಕೊಂಡರು.
5 Howbeit he shook off the beast into the fire, and took no harm.
ಆದರೆ ಪೌಲನು ಆ ಸರ್ಪವನ್ನು ಬೆಂಕಿಯೊಳಕ್ಕೆ ಝಾಡಿಸಿಬಿಟ್ಟನು; ಅವನಿಗೆ ಏನೂ ಅಪಾಯ ಉಂಟಾಗಲಿಲ್ಲ.
6 But they expected that he would have swollen, or fallen down dead suddenly: but when they were long in expectation, and beheld nothing amiss came to him, they changed their minds, and said that he was a god.
ಅವರು; “ಇವನ ಮೈ ಈಗ ಊದಿಕೊಳ್ಳುತ್ತದೆ, ಇಲ್ಲವೆ ಇವನು ಫಕ್ಕನೆ ಸತ್ತುಬೀಳುತ್ತಾನೆ” ಎಂದು ಕಾದಿದ್ದರು. ಎಷ್ಟು ಹೊತ್ತು ಕಾದರು ಅವನಿಗೆ ಯಾವ ಹಾನಿಯೂ ಆಗಲಿಲ್ಲ. ಇದನ್ನು ಕಂಡ ಅವರು ತಮ್ಮ ಅಭಿಪ್ರಾಯವನ್ನು ಬದಲಿಸಿಕೊಂಡು “ಇವನೊಬ್ಬ ದೇವನೇ” ಇರಬೇಕು ಎಂದುಕೊಂಡರು.
7 Now in the neighbourhood of that place were lands belonging to the chief man of the island, named Publius; who received us, and entertained us three days courteously.
ಆ ದ್ವೀಪದ ಮುಖ್ಯಸ್ಥನಾದ ಪೊಪ್ಲಿಯನ ಹೊಲಗದ್ದೆಗಳು ನಾವಿದ್ದ ಸ್ಥಳದ ಸಮೀಪದಲ್ಲಿ ಇದ್ದವು. ಅವನು ನಮ್ಮನ್ನು ಸ್ವಾಗತಿಸಿ ಮೂರು ದಿನಗಳವರೆಗೆ ಆದರದಿಂದ ಸತ್ಕರಿಸಿದನು.
8 And it was so, that the father of Publius lay sick of fever and dysentery: unto whom Paul entered in, and prayed, and laying his hands on him healed him.
ಅವನ ತಂದೆಯು ಜ್ವರದಿಂದಲೂ ರಕ್ತಭೇದಿಯಿಂದಲೂ ಹಾಸಿಗೆ ಹಿಡಿದಿದ್ದನು. ಪೌಲನು ಅವನ ಬಳಿಗೆ ಹೋಗಿ ಪ್ರಾರ್ಥನೆ ಮಾಡಿ ಅವನ ಮೇಲೆ ಕೈಗಳನ್ನಿಟ್ಟು ಅವನನ್ನು ಗುಣಪಡಿಸಿದನು.
9 And when this was done, the rest also which had diseases in the island came, and were cured:
ಇದಾದ, ನಂತರ ಆ ದ್ವೀಪದಲ್ಲಿದ್ದ ಉಳಿದ ರೋಗಿಗಳು, ಪೌಲನ ಬಳಿಗೆ ಬಂದು ಸ್ವಸ್ಥರಾದರು.
10 who also honoured us with many honours; and when we sailed, they put on board such things as we needed.
೧೦ಅವರು ನಮ್ಮನ್ನು ಬಹಳವಾಗಿ ಸನ್ಮಾನಿಸಿದ್ದಲ್ಲದೆ, ನಾವು ಅಲ್ಲಿಂದ ನಮ್ಮ ಪಯಣ ಮುಂದುವರಿಸಿದಾಗ, ನಮಗೆ ಅವಶ್ಯವಾದ ಪದಾರ್ಥಗಳನ್ನು ತಂದು ಹಡಗಿನಲ್ಲಿಟ್ಟರು.
11 And after three months we set sail in a ship of Alexandria, which had wintered in the island, whose sign was The Twin Brothers.
೧೧ಮೂರು ತಿಂಗಳಾದ ಮೇಲೆ ಅಲೆಕ್ಸಾಂದ್ರಿಯದಿಂದ ಬಂದು, ಆ ದ್ವೀಪದಲ್ಲಿ ಹಿಮಕಾಲವನ್ನು ಕಳೆಯಲು ತಂಗಿದ್ದ ಒಂದು ಹಡಗನ್ನು ಹತ್ತಿ ಹೊರಟೆವು. ಆ ಹಡಗಿಗೆ ಅಶ್ವಿನೀದೇವತೆಗಳೆಂಬ ಚಿಹ್ನೆ ಇತ್ತು.
12 And touching at Syracuse, we tarried there three days.
೧೨ನಾವು ಸುರಕೂಸಿಗೆ ತಲುಪಿ ಅಲ್ಲಿ ಮೂರು ದಿನ ತಂಗಿದೆವು.
13 And from thence we made a circuit, and arrived at Rhegium: and after one day a south wind sprang up, and on the second day we came to Puteoli:
೧೩ಅಲ್ಲಿಂದ ಮುಂದುವರೆದು ರೇಗಿಯ ಪಟ್ಟಣಕ್ಕೆ ಸೇರಿದೆವು. ಒಂದು ದಿನವಾದ ಮೇಲೆ ತೆಂಕಣ ಗಾಳಿ ಬೀಸಿದ್ದರಿಂದ, ಎರಡನೆಯ ದಿನದಲ್ಲಿ ಪೊತಿಯೋಲಕ್ಕೆ ಬಂದೆವು.
14 where we found brethren, and were entreated to tarry with them seven days: and so we came to Rome.
೧೪ಅಲ್ಲಿ ಕ್ರೈಸ್ತ ಸಹೋದರರನ್ನು ಕಂಡೆವು. ಅವರು ನಮ್ಮನ್ನು ತಮ್ಮ ಬಳಿಯಲ್ಲಿ ಏಳು ದಿನ ಇರಬೇಕೆಂದು ಬೇಡಿಕೊಂಡರು. ತರುವಾಯ ರೋಮಾಪುರಕ್ಕೆ ಬಂದೆವು.
15 And from thence the brethren, when they heard of us, came to meet us as far as The Market of Appius, and The Three Taverns: whom when Paul saw, he thanked God, and took courage.
೧೫ಅಲ್ಲಿದ್ದ ಸಹೋದರರು ನಮ್ಮ ಸಮಾಚಾರವನ್ನು ಕೇಳಿದಾಗ, ನಮ್ಮನ್ನು ಭೇಟಿಮಾಡುವುದಕ್ಕಾಗಿ ಕೆಲವರು ಅಪ್ಪಿಯಪೇಟೆಯ ವರೆಗೂ, ಕೆಲವರು ತ್ರಿಛತ್ರವೆಂಬ ಸ್ಥಳದ ವರೆಗೂ ಬಂದರು. ಪೌಲನು ಅವರನ್ನು ನೋಡಿ ದೇವರಿಗೆ ಸ್ತೋತ್ರವನ್ನು ಸಲ್ಲಿಸಿ ಧೈರ್ಯಗೊಂಡನು.
16 And when we entered into Rome, Paul was suffered to abide by himself with the soldier that guarded him.
೧೬ನಾವು ರೋಮಾಪುರಕ್ಕೆ ಬಂದ ಮೇಲೆ, ಪೌಲನು ತನ್ನನ್ನು ಕಾಯುತ್ತಿದ್ದ ಸಿಪಾಯಿಯೊಂದಿಗೆ ಪ್ರತ್ಯೇಕವಾಗಿರಬಹುದೆಂಬ ಅಪ್ಪಣೆಯನ್ನು ಹೊಂದಿದನು.
17 And it came to pass, that after three days he called together those that were the chief of the Jews: and when they were come together, he said unto them, I, brethren, though I had done nothing against the people, or the customs of our fathers, yet was delivered prisoner from Jerusalem into the hands of the Romans:
೧೭ಮೂರು ದಿನಗಳಾದ ಮೇಲೆ ಪೌಲನು ಯೆಹೂದ್ಯರ ಪ್ರಮುಖರನ್ನು ತನ್ನ ಬಳಿಗೆ ಕರೆಯಿಸಿಕೊಂಡನು. ಅವರು ಬಂದಾಗ ಅವನು ಅವರಿಗೆ; “ಸಹೋದರರೇ, ನಾನು ನಮ್ಮ ಜನರಿಗೂ, ನಮ್ಮ ಪೂರ್ವಿಕರ ಆಚಾರಗಳಿಗೂ ವಿರುದ್ಧವಾಗಿ ಏನೂ ಮಾಡದವನಾದರೂ ಯೆರೂಸಲೇಮಿನಿಂದ ರೋಮಾಯರ ಕೈಗೆ ಸೆರೆಯವನಾಗಿ ಒಪ್ಪಿಸಲ್ಪಟ್ಟೆನು.
18 who, when they had examined me, desired to set me at liberty, because there was no cause of death in me.
೧೮ಅವರು ನನ್ನನ್ನು ವಿಚಾರಣೆಮಾಡಿ, ನನ್ನಲ್ಲಿ ಮರಣದಂಡನೆಗೆ ಕಾರಣವೇನೂ ಇಲ್ಲದ್ದರಿಂದ ನನ್ನನ್ನು ಬಿಡಿಸಬೇಕೆಂದಿದ್ದರು.
19 But when the Jews spake against it, I was constrained to appeal unto Caesar; not that I had aught to accuse my nation of.
೧೯ಅದಕ್ಕೆ ಯೆಹೂದ್ಯರು ವಿರೋಧಿಸಿದ್ದರಿಂದ, ನಾನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆಂದು ಹೇಳಬೇಕಾಗಿ ಬಂದಿತು. ನನ್ನ ಸ್ವಂತ ದೇಶದವರ ಮೇಲೆ ದೋಷಾರೋಪಣೆ ಮಾಡಬೇಕೆಂಬ ಅಭಿಪ್ರಾಯದಿಂದ ಅದನ್ನು ಹೇಳಲಿಲ್ಲ.
20 For this cause therefore did I entreat you to see and to speak with [me]: for because of the hope of Israel I am bound with this chain.
೨೦ಈ ಕಾರಣದಿಂದ ನಾನು ನಿಮ್ಮನ್ನು ಕಂಡು ಮಾತನಾಡಬೇಕೆಂದು ಕರೆಯಿಸಿದೆನು. ಇಸ್ರಾಯೇಲ್ ಜನರ ನಿರೀಕ್ಷೆಯ ನಿಮಿತ್ತವಾಗಿ ಈ ಬೇಡಿಯಿಂದ ಬಂಧಿತನಾಗಿದ್ದೇನೆ” ಎಂದು ಹೇಳಿದನು.
21 And they said unto him, We neither received letters from Judaea concerning thee, nor did any of the brethren come hither and report or speak any harm of thee.
೨೧ಅದಕ್ಕೆ ಅವರು ಅವನಿಗೆ; “ನಿನ್ನ ವಿಷಯವಾಗಿ ನಮಗೆ ಯೂದಾಯದಿಂದ ವರದಿ ಬರಲಿಲ್ಲ, ಸಹೋದರರಲ್ಲಿ ಒಬ್ಬರೂ ಬಂದು ನಿನ್ನ ವಿಷಯವಾಗಿ ಕೆಟ್ಟದ್ದನ್ನು ತಿಳಿಸಲೂ ಇಲ್ಲ, ಮಾತನಾಡಲೂ ಇಲ್ಲ.
22 But we desire to hear of thee what thou thinkest: for as concerning this sect, it is known to us that everywhere it is spoken against.
೨೨ಆದರೆ, ನಿನ್ನ ಅಭಿಪ್ರಾಯವನ್ನು ನಿನ್ನಿಂದಲೇ ಕೇಳುವುದು ನಮಗೆ ಯುಕ್ತವೆಂದು ತೋರುತ್ತದೆ. ಆ ಪಂಥದ ವಿಷಯದಲ್ಲಿ ಜನರು ಎಲ್ಲೆಲ್ಲಿಯೂ ವಿರುದ್ಧವಾಗಿ ಮಾತನಾಡುತ್ತಾರೆಂಬದೊಂದೇ ನಮಗೆ ಗೊತ್ತದೆ” ಅಂದರು.
23 And when they had appointed him a day, they came to him into his lodging in great number; to whom he expounded [the matter], testifying the kingdom of God, and persuading them concerning Jesus, both from the law of Moses and from the prophets, from morning till evening.
೨೩ಅವರು ಅವನಿಗೆ ಒಂದು ದಿನವನ್ನು ಗೊತ್ತುಮಾಡಲು, ಬಹುಮಂದಿ ಅವನ ಬಿಡಾರದಲ್ಲಿ ಅವನ ಬಳಿಗೆ ಬಂದರು. ಅವನು ಬೆಳಗ್ಗಿನಿಂದ ಸಾಯಂಕಾಲದ ವರೆಗೂ ದೇವರ ರಾಜ್ಯವನ್ನು ಕುರಿತು ಪ್ರಾಮಾಣಿಕವಾಗಿ ಸಾಕ್ಷಿಹೇಳುತ್ತಾ, ಮೋಶೆಯ ಧರ್ಮಶಾಸ್ತ್ರವನ್ನೂ, ಪ್ರವಾದಿಗಳ ಗ್ರಂಥಗಳನ್ನೂ, ಆಧಾರಮಾಡಿಕೊಂಡು ಯೇಸುವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಇದ್ದನು.
24 And some believed the things which were spoken, and some disbelieved.
೨೪ಅವನು ಹೇಳಿದ ಮಾತುಗಳಿಗೆ ಕೆಲವರು ಒಪ್ಪಿಕೊಂಡರು; ಕೆಲವರು ನಂಬದೆ ಹೋದರು.
25 And when they agreed not among themselves, they departed, after that Paul had spoken one word, Well spake the Holy Ghost by Isaiah the prophet unto your fathers,
೨೫ಅವರು ಒಮ್ಮತವಿಲ್ಲದೆ ಇರುವಾಗ ಪೌಲನು ಅವರಿಗೆ; “ಪವಿತ್ರಾತ್ಮನು ಪ್ರವಾದಿಯಾದ ಯೆಶಾಯನ ಬಾಯಿಂದ
26 saying, Go thou unto this people, and say, By hearing ye shall hear, and shall in no wise understand; And seeing ye shall see, and shall in no wise perceive:
೨೬ನಿಮ್ಮ ಪೂರ್ವಿಕರಿಗೆ ವಿವರವಾಗಿ ಹೇಳಿದ್ದೇನೆಂದರೆ; “‘ನೀನು ಈ ಜನರ ಬಳಿಗೆ ಹೋಗಿ ಅವರಿಗೆ; ನೀವು ಕಿವಿಯಿದ್ದು ಕೇಳಿಕೊಂಡರೂ ತಿಳಿದುಕೊಳ್ಳುವುದೇ ಇಲ್ಲ; ಕಣ್ಣಿದ್ದು ನೋಡಿದರೂ ಕಾಣುವುದೇ ಇಲ್ಲ, ಎಂಬುದಾಗಿ ಹೇಳು.
27 For this people’s heart is waxed gross, And their ears are dull of hearing, And their eyes they have closed; Lest haply they should perceive with their eyes, And hear with their ears, And understand with their heart, And should turn again, And I should heal them.
೨೭ಏಕೆಂದರೆ, ಈ ಜನರ ಹೃದಯವು ಕಲ್ಲಾಗಿದೆ; ಇವರ ಕಿವಿ ಕಿವುಡಾಗಿದೆ; ಇವರು ಕಣ್ಣು ಮುಚ್ಚಿಕೊಂಡಿದ್ದಾರೆ; ತಾವು ಕಣ್ಣಿನಿಂದ ಕಂಡು, ಕಿವಿಯಿಂದ ಕೇಳಿ, ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೇಗೂ ಹೊಂದಬಾರದೆಂದು ಹೀಗೆ ಮಾಡಿಕೊಂಡಿದ್ದಾರೆ’ ಎಂಬುದೇ.
28 Be it known therefore unto you, that this salvation of God is sent unto the Gentiles: they will also hear.
೨೮“ಆದಕಾರಣ ದೇವರಿಂದಾದ ಈ ರಕ್ಷಣೆಯು ಅನ್ಯಜನರಿಗೆ ಹೇಳಿಕಳುಹಿಸಲ್ಪಟ್ಟಿದೆ ಎಂದು ನಿಮಗೆ ಚೆನ್ನಾಗಿ ತಿಳಿದಿರಲಿ; ಅವರಾದರೂ ಕೇಳುವರು” ಎಂದು ಹೇಳಿದನು.
೨೯ಅವನು ಈ ಮಾತನ್ನು ಹೇಳಿದ ಮೇಲೆ ಅವರು ಹೊರಟುಹೋದರು.
30 And he abode two whole years in his own hired dwelling, and received all that went in unto him,
೩೦ತರುವಾಯ ಅವನು ತಾನೇ ಬಾಡಿಗೆಗೆ ತೆಗೆದುಕೊಂಡಿದ್ದ ಮನೆಯಲ್ಲಿ ಎರಡು ವರ್ಷಗಳ ಕಾಲ ಇದ್ದು, ತನ್ನ ಬಳಿಗೆ ಬರುವವರೆಲ್ಲರನ್ನು ಆದರದಿಂದ ಬರಮಾಡಿಕೊಳ್ಳುತ್ತಿದ್ದನು.
31 preaching the kingdom of God, and teaching the things concerning the Lord Jesus Christ with all boldness, none forbidding him.
೩೧ಯಾವ ಅಡ್ಡಿಯೂ ಇಲ್ಲದೆ, ತುಂಬಾ ಧೈರ್ಯದಿಂದ ದೇವರ ರಾಜ್ಯದ ಕುರಿತು ಬೋಧಿಸುತ್ತಾ, ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿ ಉಪದೇಶಮಾಡುತ್ತಾ ಇದ್ದನು.

< Acts 28 >