< Mark 12 >

1 And he began to speak unto them in parables. A man planted a vineyard, and set a hedge about it, and digged a pit for the winepress, and built a tower, and let it out to husbandmen, and went into another country.
ಆಗ ಯೇಸು ಅವರೊಂದಿಗೆ ಸಾಮ್ಯಗಳಿಂದ ಮಾತನಾಡುವುದಕ್ಕೆ ಪ್ರಾರಂಭಿಸಿದನು, “ಒಬ್ಬ ಮನುಷ್ಯನುಒಂದು ದ್ರಾಕ್ಷಿಯ ತೋಟವನ್ನು ಮಾಡಿ ಸುತ್ತಲೂ ಬೇಲಿ ಹಾಕಿಸಿ ದ್ರಾಕ್ಷಿಯ ಆಲೆಗಾಗಿ ಒಂದು ಗುಂಡಿಯನ್ನು ತೆಗೆಸಿಕಾವಲು ಗೋಪುರವನ್ನು ಕಟ್ಟಿಸಿದನು. ಬಳಿಕ ಆ ತೋಟವನ್ನು ದ್ರಾಕ್ಷಿಯ ತೋಟಗಾರರಿಗೆ ಗುತ್ತಿಗೆಗೆ ಕೊಟ್ಟು, ಹೊರದೇಶಕ್ಕೆ ಹೊರಟು ಹೋದನು.
2 And at the season he sent to the husbandmen a servant, that he might receive from the husbandmen of the fruits of the vineyard.
ಫಲಕಾಲವು ಬಂದಾಗ ತನಗೆ ಬರತಕ್ಕ ಪಾಲನ್ನು ತೆಗೆದುಕೊಳ್ಳುವುದಕ್ಕಾಗಿ ಒಬ್ಬ ಸೇವಕನನ್ನು ಗುತ್ತಿಗೆದಾರರ ಬಳಿಗೆ ಕಳುಹಿಸಿದನು.
3 And they took him, and beat him, and sent him away empty.
ಆದರೆ ಅವರು ಅವನನ್ನು ಹಿಡಿದುಕೊಂಡು ಹೊಡೆದು ಏನೂ ಕೊಡದೆ ಬರಿಗೈಯಲ್ಲಿ ಕಳುಹಿಸಿಬಿಟ್ಟರು.
4 And again he sent unto them another servant; and him they wounded in the head, and handled shamefully.
ಆ ತೋಟದ ಯಜಮಾನನು ಪುನಃ ಮತ್ತೊಬ್ಬ ಸೇವಕನನ್ನು ಅವರ ಬಳಿಗೆ ಕಳುಹಿಸಲು ಅವರು ಅವನ ತಲೆಯ ಮೇಲೆ ಹೊಡೆದು ಗಾಯಗೊಳಿಸಿ ಅಪಮಾನಮಾಡಿ ಕಳುಹಿಸಿಬಿಟ್ಟರು.
5 And he sent another; and him they killed: and many others; beating some, and killing some.
ಆದರೂ ಇನ್ನೊಬ್ಬ ಸೇವಕನನ್ನು ಕಳುಹಿಸಿದನು. ಇವನನ್ನು ಅವರು ಕೊಂದು ಹಾಕಿದರು. ಇನ್ನೂ ಅನೇಕರಿಗೆ ಅವರು ಹಾಗೆಯೇ ಮಾಡಿ, ಅವರಲ್ಲಿ ಕೆಲವರನ್ನು ಹೊಡೆದರು ಮತ್ತು ಕೆಲವರನ್ನು ಕೊಂದು ಹಾಕಿದರು.
6 He had yet one, a beloved son: he sent him last unto them, saying, They will reverence my son.
ಅವನಿಗೆ ಕಳುಹಿಸಲು ಇನ್ನು ಒಬ್ಬನಿದ್ದನು. ಯಾರೆಂದರೆ ತನಗೆ ಪ್ರಿಯನಾಗಿದ್ದ ಒಬ್ಬನೇ ಮಗನು. ತನ್ನ ಮಗನಿಗೆ ಅವರು ಮರ್ಯಾದೆ ಕೊಡಬಹುದೆಂದು ಯಜಮಾನನು ಕೊನೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು.
7 But those husbandmen said among themselves, This is the heir; come, let us kill him, and the inheritance shall be ours.
ಆದರೆ ಆ ಗುತ್ತಿಗೆದಾರರು, ‘ತೋಟಕ್ಕೆ ಇವನೇ ಉತ್ತರಾಧಿಕಾರಿ; ಬನ್ನಿ ಇವನನ್ನು ನಾವು ಕೊಂದು ಹಾಕೋಣ. ಆಗ ಆಸ್ತಿ ನಮ್ಮದಾಗುವುದು’ ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡು,
8 And they took him, and killed him, and cast him forth out of the vineyard.
ಅವರು ಅವನನ್ನು ಹಿಡಿದು ಕೊಂದು ಹಾಕಿ ದ್ರಾಕ್ಷಿಯ ತೋಟದಿಂದ ಹೊರಗೆ ಬಿಸಾಡಿದರು.
9 What therefore will the lord of the vineyard do? he will come and destroy the husbandmen, and will give the vineyard unto others.
ಹಾಗಾದರೆ ಆ ದ್ರಾಕ್ಷಾ ತೋಟದ ಯಜಮಾನನು ಏನು ಮಾಡುವನು? ಅವನು ಬಂದು ಆ ಗುತ್ತಿಗೆದಾರರನ್ನು ಸಂಹರಿಸಿ ತನ್ನ ದ್ರಾಕ್ಷಾತೋಟವನ್ನು ಬೇರೆಯವರಿಗೆ ಒಪ್ಪಿಸುವನು.
10 Have ye not read even this scripture; The stone which the builders rejected, The same was made the head of the corner:
೧೦“‘ಮನೆಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
11 This was from the Lord, And it is marvelous in our eyes?
೧೧ಇದು ಕರ್ತನಿಂದಲೇ ಆಯಿತು, ಇದು ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿ ತೋರುತ್ತದೆ ಎಂಬ ಶಾಸ್ತ್ರವಚನಗಳನ್ನೂ ನೀವು ಓದಲಿಲ್ಲವೇ?’” ಎಂದನು.
12 And they sought to lay hold on him; and they feared the multitude; for they perceived that he spake the parable against them: and they left him, and went away.
೧೨ಯೇಸು ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದ್ದಾನೆ ಎಂದು ಅವರು ತಿಳಿದುಕೊಂಡು ಆತನನ್ನು ಹಿಡಿಯುವುದಕ್ಕೆ ಸಂದರ್ಭನೋಡುತ್ತಿದ್ದರು. ಆದರೆ ಜನರಿಗೆ ಭಯಪಟ್ಟು ಆತನನ್ನು ಬಿಟ್ಟುಹೋದರು.
13 And they send unto him certain of the Pharisees and of the Herodians, that they might catch him in talk.
೧೩ಆ ಮೇಲೆ ಅವರು ಯೇಸುವನ್ನು ಮಾತುಗಳಲ್ಲಿ ಹಿಡಿಯಬೇಕೆಂದು ಫರಿಸಾಯರಲ್ಲಿಯೂ, ಹೆರೋದ್ಯರಲ್ಲಿಯೂ ಕೆಲವರನ್ನು ಆತನ ಬಳಿಗೆ ಕಳುಹಿಸಿದರು.
14 And when they were come, they say unto him, Master, we know that thou art true, and carest not for any one: for thou regardest not the person of men, but of a truth teachest the way of God: Is it lawful to give tribute unto Caesar, or not?
೧೪ಇವರು ಬಂದು, “ಬೋಧಕನೇ ನೀನು ಸತ್ಯವಂತನು, ಯಾವ ಮನುಷ್ಯನನ್ನು ಲಕ್ಷಿಸದವನೂ, ಮುಖದಾಕ್ಷಿಣ್ಯ ತೋರಿಸದವನೂ, ಸತ್ಯಕ್ಕನುಸಾರವಾಗಿ ದೈವಮಾರ್ಗವನ್ನು ಬೋಧಿಸುವವನೂ ಎಂದು ನಾವು ಬಲ್ಲೆವು. ಕೈಸರನಿಗೆ ಸುಂಕ ಕೊಡುವುದು ಧರ್ಮಸಮ್ಮತವೋ? ಅಲ್ಲವೋ? ನಾವದನ್ನು ಕೊಡಬೇಕೋ ಬೇಡವೋ?” ಎಂದು ಆತನನ್ನು ಕೇಳಿದರು.
15 Shall we give, or shall we not give? But he, knowing their hypocrisy, said unto them, Why tempt ye me? bring me a penny, that I may see it.
೧೫ಆದರೆ ಯೇಸು ಅವರ ಕಪಟತನವನ್ನು ಗ್ರಹಿಸಿ, “ನೀವು ನನ್ನನ್ನು ಪರೀಕ್ಷಿಸುವುದೇಕೆ? ಒಂದು ನಾಣ್ಯವನ್ನು ತಂದು ನನಗೆ ತೋರಿಸಿರಿ ನಾನು ಅದನ್ನು ನೋಡುತ್ತೇನೆ” ಎಂದು ಹೇಳಲು ಅವರು ತಂದರು.
16 And they brought it. And he saith unto them, Whose is this image and superscription? And they said unto him, Caesar’s.
೧೬ಆಗ ಆತನು ಇದರ “ಮೇಲಿರುವುದು ಯಾರ ಮುಖಮುದ್ರೆ? ಮತ್ತು ಯಾರ ಲಿಪಿ?” ಎಂದು ಕೇಳಿದ್ದಕ್ಕೆ ಅವರು ಕೈಸರನದು ಅಂದರು.
17 And Jesus said unto them, Render unto Caesar the things that are Caesar’s, and unto God the things that are God’s. And they marveled greatly at him.
೧೭ಯೇಸು, “ಕೈಸರನಿಗೆ ಸಂಬಂಧಪಟ್ಟವುಗಳನ್ನು ಕೈಸರನಿಗೂ ದೇವರಿಗೆ ಸಂಬಂಧಪಟ್ಟವುಗಳನ್ನು ದೇವರಿಗೂ ಸಲ್ಲಿಸಿರಿ” ಎಂದು ಹೇಳಿದನು. ಅದಕ್ಕೆ ಅವರು ಆತನ ವಿಷಯವಾಗಿ ಬಹು ಆಶ್ಚರ್ಯಪಟ್ಟರು.
18 And there come unto him Sadducees, which say that there is no resurrection; and they asked him, saying,
೧೮ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಆತನ ಬಳಿಗೆ ಬಂದು,
19 Master, Moses wrote unto us, If a man’s brother die, and leave a wife behind him, and leave no child, that his brother should take his wife, and raise up seed unto his brother.
೧೯ಆತನನ್ನು ಪ್ರಶ್ನೆಮಾಡಿದ್ದೇನಂದರೆ, “ಬೋಧಕನೇ, ‘ಅಣ್ಣನಾದವನು ಮಕ್ಕಳಿಲ್ಲದೆ ಹೆಂಡತಿಯನ್ನು ಬಿಟ್ಟು ಸತ್ತರೆ ಆಕೆಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು’ ಮೋಶೆಯು ನಮಗಾಗಿ ಬರೆದಿಟ್ಟಿದ್ದಾನಲ್ಲವೇ.
20 There were seven brethren: and the first took a wife, and dying left no seed;
೨೦“ಒಮ್ಮೆ ಏಳು ಮಂದಿ ಸಹೋದರರಿದ್ದರು. ಮೊದಲನೆಯವನು ಮದುವೆ ಮಾಡಿಕೊಂಡು ಸಂತಾನವಿಲ್ಲದೆ ಸತ್ತನು.
21 and the second took her, and died, leaving no seed behind him; and the third likewise:
೨೧ಎರಡನೆಯವನೂ ಆಕೆಯನ್ನು ಮದುವೆ ಮಾಡಿಕೊಂಡು ಸಂತಾನವಿಲ್ಲದೆ ಸತ್ತನು. ಅದರಂತೆ ಮೂರನೆಯವನು.
22 and the seven left no seed. Last of all the woman also died.
೨೨ಇದೇ ಪ್ರಕಾರ ಏಳು ಮಂದಿಯೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದೆ ಸತ್ತರು. ಕೊನೆಯಲ್ಲಿ ಆ ಸ್ತ್ರೀಯೂ ಸತ್ತಳು.
23 In the resurrection whose wife shall she be of them? for the seven had her to wife.
೨೩ಪುನರುತ್ಥಾನದಲ್ಲಿ ಅವರು ಎದ್ದುಬರುವಾಗ ಅವರಲ್ಲಿ ಆಕೆಯು ಯಾರ ಹೆಂಡತಿಯಾಗಿರುವಳು? ಆ ಏಳು ಮಂದಿಗೂ ಆಕೆಯು ಹೆಂಡತಿಯಾಗಿದ್ದಳಲ್ಲಾ” ಎಂದರು.
24 Jesus said unto them, Is it not for this cause that ye err, that ye know not the scriptures, nor the power of God?
೨೪ಅದಕ್ಕೆ ಯೇಸು, “ನೀವು ಶಾಸ್ತ್ರವಚನಗಳನ್ನಾದರೂ, ದೇವರ ಶಕ್ತಿಯನ್ನಾದರೂ ತಿಳಿಯದೆ ಇರುವುದರಿಂದಲೇ ತಪ್ಪುವವರಾಗಿದ್ದೀರಿ?
25 For when they shall rise from the dead, they neither marry, nor are given in marriage; but are as angels in heaven.
೨೫ಸತ್ತವರು ಬದುಕಿ ಎದ್ದಮೇಲೆ ಮದುವೆ ಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ. ಆದರೆ ಅವರು ಪರಲೋಕದಲ್ಲಿರುವ ದೇವದೂತರಂತೆ ಇರುತ್ತಾರೆ.
26 But as touching the dead, that they are raised; have ye not read in the book of Moses, in [the place concerning] the Bush, how God spake unto him, saying, I [am] the God of Abraham, and the God of Isaac, and the God of Jacob?
೨೬ಆದರೆ ಸತ್ತವರು ಬದುಕಿ ಬರುತ್ತಾರೆಂಬುದನ್ನು ಕುರಿತು ಹೇಳಬೇಕಾದರೆ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಮಾತನಾಡಿದನೆಂದು ನೀವು ಮೋಶೆಯ ಗ್ರಂಥದಲ್ಲಿ ಓದಲಿಲ್ಲವೋ?’
27 He is not the God of the dead, but of the living: ye do greatly err.
೨೭ಆತನು ಜೀವಂತರಿಗೆ ದೇವರಾಗಿದ್ದಾನೆ ಹೊರತು ಸತ್ತವರಿಗಲ್ಲ. ಈ ವಿಷಯದಲ್ಲಿ ನೀವು ಬಹು ತಪ್ಪಾದ ಅಭಿಪ್ರಾಯವುಳ್ಳವರಾಗಿದ್ದಿರಿ” ಎಂದು ಹೇಳಿದನು.
28 And one of the scribes came, and heard them questioning together, and knowing that he had answered them well, asked him, What commandment is the first of all?
೨೮ಶಾಸ್ತ್ರಿಗಳಲ್ಲಿ ಒಬ್ಬನು ಅವರ ವಾದವನ್ನು ಕೇಳಿ ಯೇಸು ಅವರಿಗೆ ಸರಿಯಾಗಿ ಉತ್ತರ ಕೊಟ್ಟನೆಂದು ತಿಳಿದು ಆತನ ಹತ್ತಿರಕ್ಕೆ ಬಂದು, “ಎಲ್ಲಾ ಆಜ್ಞೆಗಳಲ್ಲಿ ಮುಖ್ಯವಾದ್ದದು ಯಾವುದು?” ಎಂದು ಆತನನ್ನು ಕೇಳಿದರು.
29 Jesus answered, The first is, Hear, O Israel; The Lord our God, the Lord is one:
೨೯ಅದಕ್ಕೆ ಯೇಸು, “‘ಇಸ್ರಾಯೇಲ್ ಜನರೇ ಕೇಳಿ, ನಮ್ಮ ದೇವರಾದ ಕರ್ತನುಒಬ್ಬನೇ ದೇವರು.
30 and thou shalt love the Lord thy God with all thy heart, and with all thy soul, and with all thy mind, and with all thy strength.
೩೦ನಿನ್ನ ದೇವರಾದ ಕರ್ತನನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣ ಬುದ್ಧಿಯಿಂದಲೂ, ಪೂರ್ಣ ಶಕ್ತಿಯಿಂದಲೂ ಪ್ರೀತಿಸಬೇಕು’ ಎಂಬುದೇ ಮುಖ್ಯವಾದ ಆಜ್ಞೆ.
31 The second is this, Thou shalt love thy neighbour as thyself. There is none other commandment greater than these.
೩೧‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂಬುದೇ ಎರಡನೆಯ ಆಜ್ಞೆ. ಇವುಗಳಿಗಿಂತ ಹೆಚ್ಚಿನ ಆಜ್ಞೆ ಮತ್ತೊಂದಿಲ್ಲ” ಎಂದು ಉತ್ತರ ಕೊಟ್ಟನು.
32 And the scribe said unto him, Of a truth, Master, thou hast well said that he is one; and there is none other but he:
೩೨ಆಗ ಆ ಶಾಸ್ತ್ರಿಯು, “ಬೋಧಕನೇ, ನೀನು ಚೆನ್ನಾಗಿ ಹೇಳಿದೆ. ಸತ್ಯವನ್ನೇ ಹೇಳಿದಿ ದೇವರು ಒಬ್ಬನೇ, ಆತನ ಹೊರತು ಬೇರೊಬ್ಬ ದೇವರಿಲ್ಲ ಎಂದು ಹೇಳಿದನು.
33 and to love him with all the heart, and with all the understanding, and with all the strength, and to love his neighbour as himself, is much more than all whole burnt offerings and sacrifices.
೩೩ಆತನನ್ನು ಪೂರ್ಣಹೃದಯದಿಂದಲೂ, ಪೂರ್ಣ ಬುದ್ಧಿಯಿಂದಲೂ, ಪೂರ್ಣ ಶಕ್ತಿಯಿಂದಲೂ ಪ್ರೀತಿಸತಕ್ಕದ್ದು. ಇದಲ್ಲದೆ ತನ್ನನ್ನು ಪ್ರೀತಿಸಿಕೊಳ್ಳುವಂತೆ ತನ್ನ ನೆರೆಯವನನ್ನು ಪ್ರೀತಿಸುವುದು ಇವೆರಡೂ ಎಲ್ಲಾ ಸರ್ವಾಂಗಹೋಮಗಳಿಗಿಂತಲೂ ಎಲ್ಲಾ ಯಜ್ಞಗಳಿಗಿಂತಲೂ ಮೇಲಾದುವು” ಅಂದನು.
34 And when Jesus saw that he answered discreetly, he said unto him, Thou art not far from the kingdom of God. And no man after that durst ask him any question.
೩೪ಅವನು ಬುದ್ಧಿಯಿಂದ ಉತ್ತರಕೊಟ್ಟದ್ದನ್ನು ಯೇಸು ಕಂಡು, “ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ” ಎಂದನು. ಅಂದಿನಿಂದ ಆತನನ್ನು ಪ್ರಶ್ನೆಮಾಡುವುದಕ್ಕೆ ಯಾರಿಗೂ ಧೈರ್ಯವಿರಲಿಲ್ಲ.
35 And Jesus answered and said, as he taught in the temple, How say the scribes that the Christ is the son of David?
೩೫ಯೇಸು ದೇವಾಲಯದಲ್ಲಿ ಉಪದೇಶಮಾಡುತ್ತಿರಲಾಗಿ ಆತನು ಅವರನ್ನು, “ಶಾಸ್ತ್ರಿಗಳು ಕ್ರಿಸ್ತನನ್ನು ದಾವೀದನ ಮಗನೆಂದು ಹೇಳುತ್ತಾರಲ್ಲಾ ಅದು ಹೇಗೆ?
36 David himself said in the Holy Spirit, The Lord said unto my Lord, Sit thou on my right hand, Till I make thine enemies the footstool of thy feet.
೩೬“‘ನಾನು ನಿನ್ನ ಶತ್ರುಗಳನ್ನು ನಿನ್ನ ಪಾದದಡಿ ಹಾಕುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು’ ಎಂಬುದಾಗಿ ದಾವೀದನೇ ಪವಿತ್ರಾತ್ಮನ ಪ್ರೇರಣೆಯಿಂದ ಹೇಳಿದ್ದಾನೆ.
37 David himself calleth him Lord; and whence is he his son? And the common people heard him gladly.
೩೭ದಾವೀದನೇ ಆತನನ್ನು ‘ಕರ್ತನೆಂದು’ ಹೇಳಿರುವಲ್ಲಿ ಆತನು ಅವನಿಗೆ ಮಗನಾಗುವುದು ಹೇಗೆ?” ಎಂದು ಪ್ರಶ್ನಿಸಿದನು. ಜನರ ದೊಡ್ಡ ಸಮೂಹವು ಆತನ ಮಾತನ್ನು ಸಂತೋಷದಿಂದ ಕೇಳುತ್ತಿತ್ತು.
38 And in his teaching he said, Beware of the scribes, which desire to walk in long robes, and [to have] salutations in the marketplaces,
೩೮ಆತನು ಉಪದೇಶಮಾಡಿ ಹೇಳಿದ್ದೇನಂದರೆ, “ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿಲುವಂಗಿಯನ್ನು ಧರಿಸಿಕೊಂಡು ತಿರುಗಾಡುತ್ತಾ,
39 and chief seats in the synagogues, and chief places at feasts:
೩೯ಸಂತೆಯ ಬೀದಿಗಳಲ್ಲಿ ನಮಸ್ಕಾರಗಳನ್ನೂ, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳನ್ನೂ, ಔತಣಗಳಲ್ಲಿ ಪ್ರಥಮ ಸ್ಥಾನಗಳನ್ನೂ ಅವರು ಇಷ್ಟಪಡುವವರಾಗಿದ್ದಾರೆ.
40 they which devour widows’ houses, and for a pretence make long prayers; these shall receive greater condemnation.
೪೦ಇವರು ವಿಧವೆಯರ ಮನೆಗಳನ್ನು ದೋಚಿ ತೋರಿಕೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಿನ ದಂಡನೆಯನ್ನು ಹೊಂದುವರು” ಎಂದನು.
41 And he sat down over against the treasury, and beheld how the multitude cast money into the treasury: and many that were rich cast in much.
೪೧ಯೇಸು ದೇವಾಲಯದ ಆವರಣದಲ್ಲಿ ಕಾಣಿಕೆ ಪೆಟ್ಟಿಗೆಯ ಎದುರಿಗೆ ಕುಳಿತುಕೊಂಡು ಜನರು ಅದರಲ್ಲಿ ಹಣ ಹಾಕುವುದನ್ನು ಗಮನಿಸುತ್ತಿದ್ದನು. ಅನೇಕ ಮಂದಿ ಐಶ್ವರ್ಯವಂತರು ಹೆಚ್ಚೆಚ್ಚು ಹಣ ಹಾಕುತ್ತಿದ್ದರು.
42 And there came a poor widow, and she cast in two mites, which make a farthing.
೪೨ಒಬ್ಬ ಬಡ ವಿಧವೆಯು ಬಂದು, ಎರಡು ಕಾಸು ಬೆಲೆಯುಳ್ಳ ಒಂದು ದುಗ್ಗಾಣಿ ಹಾಕಿದಳು.
43 And he called unto him his disciples, and said unto them, Verily I say unto you, This poor widow cast in more than all they which are casting into the treasury:
೪೩ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, “ಈ ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಿದವರೆಲ್ಲರಿಗಿಂತಲೂ ಈ ಬಡ ವಿಧವೆಯು ಹೆಚ್ಚಾಗಿ ಹಾಕಿದ್ದಾಳೆ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ.
44 for they all did cast in of their superfluity; but she of her want did cast in all that she had, [even] all her living.
೪೪ಹೇಗೆಂದರೆ, ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು. ಆದರೆ ಈ ವಿಧವೆಯೋ ತನ್ನ ಬಡತನದಲ್ಲಿಯೂ ತನಗಿದ್ದದ್ದನ್ನೆಲ್ಲಾ ಎಂದರೆ, ತನ್ನ ಜೀವನಕ್ಕೆ ಆಧಾರವಾಗಿದ್ದ ಎಲ್ಲವನ್ನೂ ಕಾಣಿಕೆಯಾಗಿ ಹಾಕಿದ್ದಾಳೆ” ಎಂದನು.

< Mark 12 >