< Matthew 19 >
1 And it came to pass when Jesus had finished these words, he departed from Galilee, and came into the borders of Judaea beyond Jordan;
೧ಹೀಗಿರುವಾಗ ಯೇಸು ಈ ಮಾತುಗಳನ್ನು ಮುಗಿಸಿದ ಮೇಲೆ ಗಲಿಲಾಯವನ್ನು ಬಿಟ್ಟು ಯೊರ್ದನ್ ಹೊಳೆಯ ಆಚೆಯಿರುವ ಯೂದಾಯ ಪ್ರಾಂತ್ಯಗಳಿಗೆ ಹೋದನು.
2 and great multitudes followed him; and he healed them there.
೨ಜನರ ದೊಡ್ಡ ಗುಂಪುಗಳು ಆತನನ್ನು ಹಿಂಬಾಲಿಸಿದವು, ಆತನು ಅವರನ್ನು ಅಲ್ಲಿಯೇ ಸ್ವಸ್ಥಮಾಡಿದನು.
3 And there came unto him Pharisees, tempting him, and saying, Is it lawful [for a man] to put away his wife for every cause?
೩ಫರಿಸಾಯರು ಯೇಸುವನ್ನು ಪರೀಕ್ಷಿಸಲು ಆತನ ಹತ್ತಿರಕ್ಕೆ ಬಂದು, “ಒಬ್ಬನು ಯಾವುದಾದರೂ ಒಂದು ಕಾರಣದಿಂದ ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಶಾಸ್ತ್ರ ಸಮ್ಮತವೋ?” ಎಂದು ಕೇಳಲು,
4 And he answered and said, Have ye not read, that he which made [them] from the beginning made them male and female,
೪ಆತನು ಪ್ರತ್ಯುತ್ತರವಾಗಿ, “ಮನುಷ್ಯರನ್ನು ಉಂಟುಮಾಡಿದವನು ಆದಿಯಿಂದಲೇ ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟುಮಾಡಿದನು,
5 and said, For this cause shall a man leave his father and mother, and shall cleave to his wife; and the twain shall become one flesh?
೫‘ಈ ಕಾರಣದಿಂದಲೇ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು ಎಂದು ನೀವು ಓದಲಿಲ್ಲವೋ?’
6 So that they are no more twain, but one flesh. What therefore God hath joined together, let not man put asunder.
೬ಹೀಗಿರುವುದರಿಂದ ಅವರು ಇನ್ನು ಇಬ್ಬರಲ್ಲ ಒಂದೇ ಶರೀರವಾಗಿದ್ದಾರೆ. ಆದುದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು” ಅಂದನು.
7 They say unto him, Why then did Moses command to give a bill of divorcement, and to put [her] away?
೭ಅದಕ್ಕೆ ಅವರು ಆತನನ್ನು, “ಹಾಗಾದರೆ ವಿಚ್ಛೇದನ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಏಕೆ ಆಜ್ಞೆ ಕೊಟ್ಟನು?” ಎಂದು ಕೇಳಿದರು.
8 He saith unto them, Moses for your hardness of heart suffered you to put away your wives: but from the beginning it hath not been so.
೮ಅದಕ್ಕೆ ಯೇಸು ಅವರಿಗೆ, “ಮೋಶೆಯು ನಿಮ್ಮ ಮೊಂಡತನದ ದೆಸೆಯಿಂದ ನಿಮ್ಮ ಹೆಂಡತಿಯರನ್ನು ಬಿಟ್ಟುಬಿಡುವುದಕ್ಕೆ ಅಪ್ಪಣೆ ಕೊಟ್ಟನು. ಆದರೆ ಆದಿಯಿಂದ ಹೀಗೆ ಇರಲಿಲ್ಲ ಅಂದನು.
9 And I say unto you, Whosoever shall put away his wife, except for fornication, and shall marry another, committeth adultery: and he that marrieth her when she is put away committeth adultery.
೯ಮತ್ತು ವ್ಯಭಿಚಾರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುವವನು ವ್ಯಭಿಚಾರ ಮಾಡಿದಂತೆ; ಮತ್ತು ಗಂಡ ಬಿಟ್ಟವಳನ್ನು ಮದುವೆಯಾಗುವವನು ವ್ಯಭಿಚಾರ ಮಾಡಿದಂತೆ” ಎಂದು ನಿಮಗೆ ಹೇಳುತ್ತೇನೆ ಅಂದನು.
10 The disciples say unto him, If the case of the man is so with his wife, it is not expedient to marry.
೧೦ಅದಕ್ಕೆ ಶಿಷ್ಯರು ಯೇಸುವಿಗೆ, “ಹೆಂಡತಿಯೊಂದಿಗೆ ಗಂಡನ ಸಂಬಂಧ ಹೀಗಿದ್ದರೆ ಮದುವೆಯಾಗುವುದು ಒಳ್ಳೆಯದಲ್ಲ” ಅಂದರು.
11 But he said unto them, All men cannot receive this saying, but they to whom it is given.
೧೧ಆದರೆ ಯೇಸು ಅವರಿಗೆ, “ಈ ಮಾತನ್ನು ಎಲ್ಲರೂ ಅಂಗೀಕರಿಸಲಾರರು ಆದರೆ ಯಾರಿಗೆ ಆ ವರವು ಕೊಡಲ್ಪಟ್ಟಿದೆಯೋ ಅವರು ಮಾತ್ರ ಅದನ್ನು ಅಂಗೀಕರಿಸುವರು.
12 For there are eunuchs, which were so born from their mother’s womb: and there are eunuchs, which were made eunuchs by men: and there are eunuchs, which made themselves eunuchs for the kingdom of heaven’s sake. He that is able to receive it, let him receive it.
೧೨ತಾಯಿಯ ಗರ್ಭದಿಂದ ನಪುಂಸಕರಾಗಿ ಹುಟ್ಟಿದವರು ಕೆಲವರು ಇದ್ದಾರೆ ಮತ್ತು ಮನುಷ್ಯರಿಂದ ನಪುಂಸಕರಾಗಿ ಮಾಡಲ್ಪಟ್ಟವರು ಕೆಲವರು ಇದ್ದಾರೆ ಮತ್ತುಪರಲೋಕ ರಾಜ್ಯದ ನಿಮಿತ್ತವಾಗಿ ತಮ್ಮನ್ನು ತಾವೇ ನಪುಂಸಕರಾಗಿ ಮಾಡಿಕೊಂಡವರು ಕೆಲವರು ಇದ್ದಾರೆ. ಈ ಬೋಧನೆಯನ್ನು ಅಂಗೀಕರಿಸಬಲ್ಲವರು ಅಂಗೀಕರಿಸಲಿ” ಎಂದು ಹೇಳಿದನು.
13 Then were there brought unto him little children, that he should lay his hands on them, and pray: and the disciples rebuked them.
೧೩ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನ ಬಳಿಗೆ ಕರೆತಂದು, ಅವರ ಮೇಲೆ ಆತನು ಕೈಗಳನ್ನಿಟ್ಟು ಪ್ರಾರ್ಥಿಸುವಂತೆ ಕೇಳಿದರು. ಆದರೆ ಶಿಷ್ಯರು ಅವರನ್ನು ಗದರಿಸಿದರು.
14 But Jesus said, Suffer the little children, and forbid them not, to come unto me: for of such is the kingdom of heaven.
೧೪ಆದರೆ ಯೇಸು, “ಮಕ್ಕಳನ್ನು ಬಿಡಿರಿ. ನನ್ನ ಹತ್ತಿರ ಬರುವುದಕ್ಕೆ ಅವರಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ಪರಲೋಕ ರಾಜ್ಯವು ಇಂಥವರದೇ” ಎಂದು ಹೇಳಿದನು.
15 And he laid his hands on them, and departed thence.
೧೫ಮತ್ತು ಅವರ ಮೇಲೆ ಕೈಯಿಟ್ಟು ಅನಂತರ ಅಲ್ಲಿಂದ ಹೊರಟು ಹೋದನು.
16 And behold, one came to him and said, Master, what good thing shall I do, that I may have eternal life? (aiōnios )
೧೬ಇಗೋ ಒಬ್ಬನು ಯೇಸುವಿನ ಬಳಿಗೆ ಬಂದು, “ಬೋಧಕನೇ ನಾನು ನಿತ್ಯಜೀವವನ್ನು ಹೊಂದುವುದಕ್ಕೆ ಯಾವ ಒಳ್ಳೆ ಕಾರ್ಯವನ್ನು ಮಾಡಬೇಕು?” ಎಂದು ಕೇಳಿದನು. (aiōnios )
17 And he said unto him, Why askest thou me concerning that which is good? One there is who is good: but if thou wouldest enter into life, keep the commandments.
೧೭ಆತನು ಅವನಿಗೆ, “ಒಳ್ಳೆಯದನ್ನು ಕುರಿತು ನನ್ನನ್ನು ಏಕೆ ಕೇಳುತ್ತೀಯಾ? ಒಳ್ಳೆಯವನು ಒಬ್ಬನೇ. ಆ ಜೀವಕ್ಕೆ ಸೇರಬೇಕೆಂದಿದ್ದರೆ ದೇವರಾಜ್ಞೆಗಳಿಗೆ ವಿಧೇಯನಾಗಿ ನಡೆದುಕೊ” ಎಂದು ಹೇಳಿದನು.
18 He saith unto him, Which? And Jesus said, Thou shalt not kill, Thou shalt not commit adultery, Thou shalt not steal, Thou shalt not bear false witness,
೧೮ಅದಕ್ಕೆ ಅವನು, “ಅವು ಯಾವುವು?” ಎಂದು ಕೇಳಲು ಯೇಸು, “ನರಹತ್ಯ ಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳು ಸಾಕ್ಷಿ ಹೇಳಬಾರದು.
19 Honour thy father and thy mother: and, Thou shalt love thy neighbour as thyself.
೧೯ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಮತ್ತು ನಿನ್ನಂತೆಯೇ ನಿನ್ನ ನೆರೆಯವನನ್ನು ಪ್ರೀತಿಸಬೇಕು” ಇವುಗಳೇ ಅಂದನು.
20 The young man saith unto him, All these things have I observed: what lack I yet?
೨೦ಆ ಯೌವನಸ್ಥನು ಆತನಿಗೆ, “ಇವೆಲ್ಲಕ್ಕೂ ವಿಧೇಯನಾಗಿ ನಾನು ನಡೆದುಕೊಂಡಿದ್ದೇನೆ; ಇನ್ನೂ ನನಗೇನು ಕೊರತೆಯಾಗಿರಬಹುದು?” ಎಂದು ಕೇಳಿದನು.
21 Jesus said unto him, If thou wouldest be perfect, go, sell that thou hast, and give to the poor, and thou shalt have treasure in heaven: and come, follow me.
೨೧ಯೇಸು ಅವನಿಗೆ, “ನೀನು ಪೂರ್ಣನಾಗುವುದಕ್ಕೆ ಬಯಸುವುದಾದರೆ, ಹೋಗಿ ನಿನಗಿರುವುದನ್ನೆಲ್ಲಾ ಮಾರಿ, ಬಡವರಿಗೆ ಕೊಡು, ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.
22 But when the young man heard the saying, he went away sorrowful: for he was one that had great possessions.
೨೨ಆದರೆ ಆ ಯೌವನಸ್ಥನು ಬಹಳ ಆಸ್ತಿಯುಳ್ಳವನಾಗಿದ್ದುದರಿಂದ ಈ ಮಾತನ್ನು ಕೇಳಿ ದುಃಖದಿಂದ ಹೊರಟುಹೋದನು.
23 And Jesus said unto his disciples, Verily I say unto you, It is hard for a rich man to enter into the kingdom of heaven.
೨೩ಆಗ ಯೇಸು ತನ್ನ ಶಿಷ್ಯರಿಗೆ, “ಐಶ್ವರ್ಯವಂತನು ಪರಲೋಕ ರಾಜ್ಯದಲ್ಲಿ ಸೇರುವುದು ಕಷ್ಟ” ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
24 And again I say unto you, It is easier for a camel to go through a needle’s eye, than for a rich man to enter into the kingdom of God.
೨೪“ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವುದು ಸುಲಭ ಎಂದು ನಿಮಗೆ ತಿರುಗಿ ಹೇಳುತ್ತೇನೆ” ಅಂದನು.
25 And when the disciples heard it, they were astonished exceedingly, saying, Who then can be saved?
೨೫ಶಿಷ್ಯರು ಇದನ್ನು ಕೇಳಿ ಅತ್ಯಾಶ್ಚರ್ಯಪಟ್ಟು, “ಹೀಗಿದ್ದರೆ ರಕ್ಷಣೆ ಹೊಂದಲು ಯಾರಿಂದಾದೀತು?” ಎಂದು ಕೇಳಿದರು.
26 And Jesus looking upon [them] said to them, With men this is impossible; but with God all things are possible.
೨೬ಯೇಸು ಅವರನ್ನು ದೃಷ್ಟಿಸಿ ನೋಡಿ “ಇದು ಮನುಷ್ಯರಿಂದ ಅಸಾಧ್ಯ. ಆದರೆ ದೇವರಿಗೆ ಎಲ್ಲವು ಸಾಧ್ಯವೇ” ಅಂದನು.
27 Then answered Peter and said unto him, Lo, we have left all, and followed thee; what then shall we have?
೨೭ಆಗ ಪೇತ್ರನು ಆತನನ್ನು, ಇಗೋ, ನಾವು ಎಲ್ಲವನ್ನೂ ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು; ಇದರಿಂದ ನಮಗೆ ಏನು ದೊರಕುವುದು? ಎಂದು ಕೇಳಿದನು.
28 And Jesus said unto them, Verily I say unto you, that ye which have followed me, in the regeneration when the Son of man shall sit on the throne of his glory, ye also shall sit upon twelve thrones, judging the twelve tribes of Israel.
೨೮ಯೇಸು ಅವರಿಗೆ, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವಾಗ, ನನ್ನನ್ನು ಹಿಂಬಾಲಿಸಿದವರಾದನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.
29 And every one that hath left houses, or brethren, or sisters, or father, or mother, or children, or lands, for my name’s sake, shall receive a hundredfold, and shall inherit eternal life. (aiōnios )
೨೯ಮತ್ತು ನನ್ನ ಹೆಸರಿನ ನಿಮಿತ್ತ ಮನೆಗಳನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಭೂಮಿಯನ್ನಾಗಲಿ, ತೊರೆದುಬಿಟ್ಟಿರುವ ಪ್ರತಿಯೊಬ್ಬನೂ ಎಲ್ಲವನ್ನೂ ನೂರರಷ್ಟು ಹೊಂದುವನು. ಅಲ್ಲದೆ ನಿತ್ಯಜೀವಕ್ಕೆ ಬಾಧ್ಯನಾಗುವನು. (aiōnios )
30 But many shall be last [that are] first; and first [that are] last.
೩೦ಆದರೆ ಈಗ ಮೊದಲಿನವರಾದ ಬಹು ಮಂದಿ ಕಡೆಯವರಾಗುವರು ಮತ್ತು ಕಡೆಯವರಾದ ಬಹು ಮಂದಿ ಮೊದಲಿನವರಾಗುವರು.