< 1 Chronicles 5 >
1 And [the] sons of Reuben [the] firstborn of Israel for he [was] the firstborn and when profaned he [the] beds of father his it was given birthright his to [the] sons of Joseph [the] son of Israel and not to have themselves enrolled to the birthright.
೧ಇಸ್ರಾಯೇಲನ ಚೊಚ್ಚಲ ಮಗನಾದ ರೂಬೇನನ ವಂಶಾವಳಿ. ರೂಬೇನನು ಚೊಚ್ಚಲ ಮಗನಾಗಿದ್ದರೂ ಅವನು ತನ್ನ ತಂದೆಯ ಉಪಪತ್ನಿಯೊಂದಿಗೆ ಸಂಗಮಿಸಿ ಹಾಸಿಗೆಯನ್ನು ಹೊಲೆ ಮಾಡಿದ್ದರಿಂದ ಅವನ ಹಕ್ಕು ಇಸ್ರಾಯೇಲನ ಮಗನಾದ ಯೋಸೇಫನ ಕುಲಕ್ಕೆ ಕೊಡಲ್ಪಟ್ಟಿತು.
2 For Judah he was strong among brothers his and to a leader [was] from him and the birthright [belonged] to Joseph.
೨ಆದರೆ ಯೆಹೂದನು ಎಲ್ಲಾ ಸಹೋದರರಲ್ಲಿ ಬಲಿಷ್ಠನಾದುದರಿಂದಲೂ, ರಾಜಾಧಿಕಾರವು ಇವನ ಕುಲಕ್ಕೆ ಬಂದುದರಿಂದಲೂ ಯೋಸೇಫನು ವಂಶಾವಳಿಯ ಪಟ್ಟಿಗಳಲ್ಲಿ ಚೊಚ್ಚಲ ಮಗನೆಂದು ಲಿಖಿತವಾಗಲಿಲ್ಲ. ಆದರೂ ಚೊಚ್ಚಲ ಮಗನಿಗೆ ಸಿಕ್ಕತಕ್ಕ ಪಾಲು ಅವನಿಗೆ ಸಿಕ್ಕಿತು.
3 [the] sons of Reuben [the] firstborn of Israel Hanoch and Pallu Hezron and Carmi.
೩ಇಸ್ರಾಯೇಲನ ಚೊಚ್ಚಲ ಮಗನಾದ ರೂಬೇನನ ಮಕ್ಕಳು: ಹನೋಕ್, ಫಲ್ಲೂ, ಹೆಚ್ರೋನ್ ಮತ್ತು ಕರ್ಮೀ.
4 [the] descendants of Joel Shemaiah son his Gog son his Shimei son his.
೪ಯೋವೇಲನ ವಂಶಾವಳಿ: ಇವನ ಮಗ ಶೆಮಾಯ; ಶೆಮಾಯನ ಮಗ ಗೋಗ್.
5 Micah son his Reaiah son his Baal son his.
೫ಗೋಗನ ಮಗ ಶಿಮ್ಮೀ; ಇವನ ಮಗ ಮೀಕ. ಮೀಕನ ಮಗ ರೆವಾಯ, ಇವನ ಮಗ ಬಾಳ್.
6 Beerah son his whom he took into exile Tiglath-pileser [the] king of Assyria he [was] a leader of the Reubenite[s].
೬ಬಾಳನ ಮಗ ಬೇರ. ರೂಬೇನ್ಯರ ಪ್ರಭುಗಳಲ್ಲೊಬ್ಬನಾಗಿದ್ದ ಇವನನ್ನು ಅಶ್ಶೂರದ ಅರಸನಾದ ತಿಗ್ಲತ್ ಫಿಲ್ನೇಸರನು ಸೆರೆಯೊಯ್ದನು.
7 And relatives his to clans his by genealogical enrolment to generations their [were] the chief Jeiel and Zechariah.
೭ವಂಶಾವಳಿಯ ಪಟ್ಟಿಯಲ್ಲಿ ಇವನ ಗೋತ್ರ ಸಂಬಂಧಿಗಳಾಗಿ ಲಿಖಿತರಾದವರು ನಾಯಕನಾದ ಯೆಗೀಯೇಲ್, ಜೆಕರ್ಯ, ಬೆಳ ಇವರೇ. ಬೆಳನು ಅಜಾಜನ ಮಗ.
8 And Bela [the] son of Azaz [the] son of Shema [the] son of Joel he [was] dwelling in Aroer and to Nebo and Baal Meon.
೮ಬೆಳನು ಅಜಾಜನ ಮಗ. ಅಜಾಜನು ಶೆಮಯನ ಮಗ. ಶೆಮಯನು ಯೋವೇಲನ ಮಗ. ಯೋವೇಲ್ಯರು ಅರೋಯೇರಿನಿಂದ ನೆಬೋ ಮತ್ತು ಬಾಳ್ಮೆಯೋನ್ ಎಂಬ ಸ್ಥಳಗಳವರೆಗೂ ವಾಸಿಸುತ್ತಿದ್ದರು.
9 And to the east he dwelt till to [the] entrance of [the] wilderness from the river Euphrates for livestock their they had increased in [the] land of Gilead.
೯ಪೂರ್ವ ದಿಕ್ಕಿನಲ್ಲಿ ಯೂಫ್ರೆಟಿಸ್ ನದಿಯ ಈಚೆಯಲ್ಲಿರುವ ಅರಣ್ಯವು ಇವರ ಮೇರೆ. ಇವರಿಗೆ ಗಿಲ್ಯಾದ್ ದೇಶದಲ್ಲಿ ಅನೇಕ ದನ ಕುರಿಹಿಂಡುಗಳಿದ್ದವು.
10 And in [the] days of Saul they made war with the Hagrites and they fell by hand their and they dwelt in tents their on all [the] face of [the] east of Gilead.
೧೦ಇವರು ಸೌಲನ ಕಾಲದಲ್ಲಿ ಹಗ್ರೀಯರೊಡನೆ ಯುದ್ಧಮಾಡಿ, ಅವರನ್ನು ಸಂಹರಿಸಿ, ಗಿಲ್ಯಾದಿನ ಪೂರ್ವದಿಕ್ಕಿನ ಪ್ರಾಂತ್ಯಗಳಲ್ಲಿದ್ದ ಅವರ ಡೇರೆಗಳಲ್ಲಿ ವಾಸಮಾಡ ತೊಡಗಿದನು.
11 And [the] descendants of Gad to before them they dwelt in [the] land of Bashan to Salecah.
೧೧ರೂಬೇನ್ಯರ ಎದುರಿನಲ್ಲಿ ಬಾಷಾನ್ ಸೀಮೆಯ ಸಲ್ಕದವರೆಗೂ ವಾಸಿಸುತ್ತಿದ್ದವರು ಗಾದ್ ಕುಲದವರು:
12 Joel [was] the chief and Shapham [was] the second and Janai and Shaphat in Bashan.
೧೨ಪ್ರಧಾನನಾದ ಯೋವೇಲ್, ಎರಡನೆಯವನಾದ ಶಾಫಾಮ್, ಯನ್ನೈ, ಬಾಷಾನಿನಲ್ಲಿರುವ ಶಾಫಾಟ್ ಇವರೂ ನಾಯಕರಾಗಿದ್ದರು.
13 And relatives their to [the] house of ancestors their Michael and Meshullam and Sheba and Jorai and Jakan and Zia and Eber seven.
೧೩ಮೀಕಾಯೇಲ್, ಮೆಷುಲ್ಲಾಮ್, ಶೆಬ, ಯೋರೈ, ಯಕ್ಕಾನ್, ಜೀಯ ಮತ್ತು ಏಬೆರ್ ಎಂಬ ಏಳು ಕುಟುಂಬಗಳೂ ಇವರ ಕುಲಸಂಬಂಧಿಗಳು.
14 These - [were] [the] sons of Abihail [the] son of Huri [the] son of Jaroah [the] son of Gilead [the] son of Michael [the] son of Jeshishai [the] son of Jahdo [the] son of Buz.
೧೪ಇವರು ಅಬೀಹೈಲನ ಮಕ್ಕಳು: ಅಬೀಹೈಲನು ಹೂರೀಯ ಮಗ, ಇವನು ಯಾರೋಹನ ಮಗ. ಯಾರೋಹನು ಗಿಲ್ಯಾದನ ಮಗ, ಇವನು ಮೀಕಾಯೇಲನ ಮಗ. ಮೀಕಾಯೇಲನು ಯೆಷೀಷೈಯನ ಮಗ, ಇವನು ಯಹ್ದೋವಿನ ಮಗ, ಇವನು ಅಹೀಬೂಜನ ಮಗ.
15 Ahi [the] son of Abdiel [the] son of Guni [was] chief of [the] house of ancestors their.
೧೫ಅಹೀಬೂಜನು ಅಬ್ದೀಯೇಲನ ಮಗ. ಅಬ್ದೀಯೇಲನು ಗೂನೀಯನ ಮಗ. ಇವನು ಇವರ ಗೋತ್ರದ ಮೂಲಪುರುಷನು.
16 And they dwelt in Gilead in Bashan and in daughters its and in all [the] pasture lands of Sharon on (extremities their. *LA(bh)*)
೧೬ಗಾದ್ಯರು ಗಿಲ್ಯಾದಿನಲ್ಲಿಯೂ ಬಾಷಾನಿನಲ್ಲಿಯೂ, ಅದರ ಗ್ರಾಮಗಳಲ್ಲಿಯೂ, ಶಾರೋನಿನ ಎಲ್ಲಾ ಹುಲ್ಲುಗಾವಲುಗಳಲ್ಲಿಯೂ ಅವುಗಳ ಮೇರೆಗಳಲ್ಲಿಯೂ ವಾಸಿಸುತ್ತಿದ್ದರು.
17 All of them they had themselves enrolled in [the] days of Jotham [the] king of Judah and in [the] days Jeroboam [the] king of Israel.
೧೭ಅವರೆಲ್ಲರೂ ಯೆಹೂದ್ಯರ ಅರಸನಾದ ಯೋತಾಮನ ಕಾಲದಲ್ಲಿಯೂ, ಇಸ್ರಾಯೇಲರ ಅರಸನಾದ ಯಾರೊಬ್ಬಾಮನ ಕಾಲದಲ್ಲಿಯೂ ವಂಶಾವಳಿಯ ಪಟ್ಟಿಯಲ್ಲಿ ದಾಖಲಿಸಲ್ಪಟ್ಟರು.
18 [the] descendants of Reuben and [the] Gadite[s] and [the] half of [the] tribe of Manasseh from [the] sons of strength men [who] carried shield and sword and [who] bent a bow and [who] were trained of warfare forty and four thousand and seven hundred and sixty [those who] went forth of war.
೧೮ರೂಬೇನ್ಯರು, ಗಾದ್ಯರು, ಮನಸ್ಸೆ ಕುಲದ ಅರ್ಧ ಜನರು ಇವರಲ್ಲಿ ರಣವೀರರೂ ಗುರಾಣಿ ಖಡ್ಗಗಳನ್ನು ಹಿಡಿಯುವವರೂ, ಬಿಲ್ಲನ್ನು ಬೊಗ್ಗಿಸುವವರೂ, ಯುದ್ಧ ನಿಪುಣರೂ ಆಗಿರುವ ನಲ್ವತ್ತನಾಲ್ಕು ಸಾವಿರದ ಏಳು ನೂರ ಅರವತ್ತು ಸೈನಿಕರಿದ್ದರು.
19 And they made war with the Hagrites and Jetur and Naphish and Nodab.
೧೯ಅವರು ಹೋಗಿ ಹಗ್ರೀಯ, ಯೆಟೂರ್, ನಾಫೀಷ್ ಮತ್ತು ನೋದಾಬ್ ಇವರೊಡನೆಯೂ ಯುದ್ಧಮಾಡಿದರು.
20 And they were helped on them and they were given in hand their the Hagrites and all [those] who [were] with them for to God they had cried out in the battle and he was entreated by them for they trusted in him.
೨೦ಅವರು ದೇವರ ಮೇಲೆ ಭರವಸೆ ಇಟ್ಟಿದ್ದರಿಂದ ಮೊರೆಯಿಟ್ಟ ಅವರ ಪ್ರಾರ್ಥನೆಗೆ ಕಿವಿಗೊಟ್ಟು ಯುದ್ಧದಲ್ಲಿ ಜಯವನ್ನು ಅನುಗ್ರಹಿಸಿದನು. ಹಗ್ರೀಯರೂ ಇವರ ಜೊತೆಯಲ್ಲಿದ್ದವರೂ ಅವರ ಕೈಯಲ್ಲಿ ಕೊಡಲ್ಪಟ್ಟರು.
21 And they took captive livestock their camels their fifty thousand and sheep two hundred and fifty thousand and donkeys two thousand and person[s] of humankind one hundred thousand.
೨೧ಈ ಯುದ್ಧದಲ್ಲಿ ಅವರ ಹಿಂಡುಗಳನ್ನು ಅಂದರೆ, ಐವತ್ತು ಸಾವಿರ ಒಂಟೆಗಳು, ಎರಡು ಲಕ್ಷದ ಐವತ್ತು ಸಾವಿರ ಕುರಿಗಳೂ, ಎರಡು ಸಾವಿರ ಕತ್ತೆಗಳು ಮತ್ತು ಒಂದು ಲಕ್ಷ ಜನರನ್ನೂ ಕೊಳ್ಳೆಹಿಡಿದರು.
22 For slain [ones] many they fell for [was] from God the battle and they dwelt in place of them until the exile.
೨೨ಏಕೆಂದರೆ ದೇವರು ಅವರ ಪರವಾಗಿ ಯುದ್ಧಮಾಡಿದ್ದರಿಂದ ಅವರು ವೈರಿಗಳಲ್ಲಿ ಅನೇಕರನ್ನು ತಿವಿದು ಕೊಂದದ್ದಲ್ಲದೆ, ತಾವು ಸೆರೆಯಾಗಿ ಹೋಗುವವರೆಗೂ ಅವರ ಊರುಗಳಲ್ಲಿ ವಾಸಿಸಿದರು.
23 And [the] descendants of [the] half of [the] tribe of Manasseh they dwelt in the land from Bashan to Baal Hermon and Senir and [the] mountain of Hermon they they multiplied.
೨೩ಮನಸ್ಸೆ ಕುಲದ ಅರ್ಧಜನರು ಬಾಷಾನಿನಿಂದ ಬಾಳ್ ಹೆರ್ಮೋನ್, ಸೆನೀರ್, ಹೆರ್ಮೋನ್ ಗಿರಿ ಇವುಗಳ ವರೆಗೂ ವಿಸ್ತರಿಸಿಕೊಂಡಿರುವ ಪ್ರಾಂತ್ಯಗಳಲ್ಲಿ ವಾಸಿಸಿದರು.
24 And these [were] [the] chiefs of [the] house of ancestors their and Epher and Ishi and Eliel and Azriel and Jeremiah and Hodaviah and Jahdiel men mighty of strength men of names chiefs of [the] house of ancestors their.
೨೪ಇವರ ಗೋತ್ರಗಳ ಪ್ರಧಾನ ಪುರುಷರು ಏಫೆರ್, ಇಷ್ಷೀ, ಎಲೀಯೇಲ್, ಅಜ್ರೀಯೇಲ್, ಯೆರೆಮೀಯ, ಹೋದವ್ಯ ಮತ್ತು ಯೆಹ್ತೀಯೇಲ್. ಇವರು ರಣವೀರರೂ ಪ್ರಖ್ಯಾತಿ ಹೊಂದಿದವರು ಗೋತ್ರಪ್ರಧಾನರೂ ಆಗಿದ್ದರು.
25 And they acted unfaithfully against [the] God of ancestors their and they played [the] prostitute after [the] gods of [the] peoples of the land which he had destroyed God from before them.
೨೫ಅವರು ತಮ್ಮ ಪೂರ್ವಿಕರ ದೇವರಿಗೆ ದ್ರೋಹಿಗಳಾಗಿದರು. ಯೆಹೋವನು ತಮ್ಮ ಮುಂದೆಯೇ ಸಂಹರಿಸಿದ ಆ ದೇಶದ ನಿವಾಸಿಗಳ ದೇವರುಗಳನ್ನು ಆರಾಧಿಸತೊಡಗಿದರು.
26 And he stirred up [the] God of Israel [the] spirit of - Pul [the] king of Assyria and [the] spirit of Tiglath-pileser [the] king of Assyria and he took into exile them to the Reubenite[s] and to the Gadite[s] and to [the] half of [the] tribe of Manasseh and he brought them to Halah and Habor and Hara and [the] river of Gozan until the day this.
೨೬ಆದುದರಿಂದ ಅಶ್ಶೂರದ ಅರಸನಾದ ಪೂಲ್, ತಿಗ್ಲತ್ಪಿಲೆಸರ್ ಎಂಬವರು ಇಸ್ರಾಯೇಲ್ ದೇವರ ಪ್ರೇರಣೆಯಿಂದ ಬಂದು ರೂಬೇನ್ಯರು, ಗಾದ್ಯರು, ಮನಸ್ಸೆ ಕುಲದ ಅರ್ಧ ಜನರು ಇವರನ್ನು ಹಲಹ, ಹಾಬೋರ್, ಹಾರ ಎಂಬ ಪ್ರಾಂತ್ಯಗಳಿಗೂ, ಗೋಜಾನ್ ನದಿಯ ಪ್ರದೇಶಗಳಿಗೂ ಸೆರೆ ಹಿಡಿದು ಕರೆದೊಯ್ದರು. ಅವರು ಇಂದಿನವರೆಗೂ ಅಲ್ಲಿಯೇ ನೆಲೆಸುವಂತೆ ದೇವರು ಮಾಡಿದ್ದಾನೆ.