< Ecclesiastes 3 >
1 For everything an appointed time and an time for every matter under the heavens.
೧ಪ್ರತಿಯೊಂದು ಕಾರ್ಯಕ್ಕೂ ನಿಗದಿಯಾದ ಸಮಯವಿದೆ, ಆಕಾಶದ ಕೆಳಗೆ ನಡೆಯುವ ಒಂದೊಂದು ಕೆಲಸಕ್ಕೂ ತಕ್ಕ ಸಮಯವುಂಟು.
2 A time to bear a child and a time to die a time to plant and a time to pluck up [what] is planted.
೨ಹುಟ್ಟುವ ಸಮಯ, ಸಾಯುವ ಸಮಯ, ನೆಡುವ ಸಮಯ, ನೆಟ್ಟದ್ದನ್ನು ಕಿತ್ತುಹಾಕುವ ಸಮಯ,
3 A time to kill and a time to heal a time to break down and a time to build.
೩ಕೊಲ್ಲುವ ಸಮಯ, ಸ್ವಸ್ಥಮಾಡುವ ಸಮಯ ಕೆಡುವಿಬಿಡುವ ಸಮಯ, ಕಟ್ಟುವ ಸಮಯ,
4 A time to weep and a time to laugh a time to mourn and a time to dance.
೪ಅಳುವ ಸಮಯ, ನಗುವ ಸಮಯ, ಗೋಳಾಡುವ ಸಮಯ, ಕುಣಿದಾಡುವ ಸಮಯ,
5 A time to throw away stones and a time to gather stones a time to embrace and a time to be far from embracing.
೫ಕಲ್ಲುಗಳನ್ನು ಚೆಲ್ಲುವ ಸಮಯ, ಕಲ್ಲುಗಳನ್ನು ಕೂಡಿಸುವ ಸಮಯ, ಅಪ್ಪಿಕೊಳ್ಳುವ ಸಮಯ ಅಪ್ಪಿಕೊಳ್ಳದಿರುವ ಸಮಯ,
6 A time to seek and a time to count as lost a time to keep and a time to throw away.
೬ಸಂಪಾದಿಸುವ ಸಮಯ, ಕಳೆದುಕೊಳ್ಳುವ ಸಮಯ, ಕಾಪಾಡುವ ಸಮಯ, ಬಿಸಾಡುವ ಸಮಯ,
7 A time to tear and a time to sew a time to be silent and a time to speak.
೭ಹರಿಯುವ ಸಮಯ, ಹೊಲಿಯುವ ಸಮಯ, ಸುಮ್ಮನಿರುವ ಸಮಯ, ಮಾತನಾಡುವ ಸಮಯ,
8 A time to love and a time to hate a time of warfare and a time of peace.
೮ಪ್ರೀತಿಸುವ ಸಮಯ, ದ್ವೇಷಿಸುವ ಸಮಯ, ಯುದ್ಧದ ಸಮಯ, ಸಮಾಧಾನದ ಸಮಯ.
9 What? [is] [the] profit of the worker in [that] which he [is] a laborer.
೯ದುಡಿಯುವವನಿಗೆ ಅವನ ಪ್ರಯಾಸದಿಂದ ಲಾಭವೇನು?
10 I have seen the task which he has given God to [the] children of humankind to be busy with it.
೧೦ಮನುಷ್ಯನಿಗೆ ಕರ್ತವ್ಯವೆಂದು ದೇವರು ನೇಮಿಸಿರುವ ಪ್ರಯಾಸವನ್ನು ನೋಡಿದ್ದೇನೆ.
11 Everything he has made beautiful in time its also perpetuity he has put in heart their because not which not he will find humankind the work which he has done God from beginning and to end.
೧೧ಒಂದೊಂದು ವಸ್ತುವನ್ನು ಸಮಯಕ್ಕೆ ತಕ್ಕ ಹಾಗೆ ಅಂದವಾಗಿ ನಿರ್ಮಿಸಿದ್ದಾನೆ. ಇದಲ್ಲದೆ ಮನುಷ್ಯರ ಹೃದಯದಲ್ಲಿ ಅನಂತಕಾಲದ ಯೋಚನೆಯನ್ನು ಇಟ್ಟಿದ್ದಾನೆ. ಆದರೂ ದೇವರು ನಡೆಸುತ್ತಿರುವ ಕೆಲಸವನ್ನು ಅವರು ಗ್ರಹಿಸಲಾರದಂತೆ ಮಾಡಿದ್ದಾನೆ.
12 I know that there not [is] good for them that except to rejoice and to do good in life his.
೧೨ಮನುಷ್ಯರು ತಮ್ಮ ಜೀವಮಾನದಲ್ಲೆಲ್ಲಾ ಉಲ್ಲಾಸವಾಗಿ ಸುಖವನ್ನು ಅನುಭವಿಸುವುದಕ್ಕಿಂತ ಇನ್ನೇನೂ ಅವರಿಗೆ ಮೇಲಿಲ್ಲವೆಂದು ನಾನು ಗ್ರಹಿಸಿದ್ದೇನೆ.
13 And also every person that he will eat and he will drink and he will see good in all toil his [is] a gift of God it.
೧೩ಇದಲ್ಲದೆ ಪ್ರತಿಯೊಬ್ಬನೂ ಅನ್ನಪಾನಗಳನ್ನು ತೆಗೆದುಕೊಂಡು ತನ್ನ ನಾನಾ ಪ್ರಯಾಸಗಳಲ್ಲಿಯೂ ಸುಖವನ್ನನುಭವಿಸುವುದು ದೇವರ ಅನುಗ್ರಹವೇ ಎಂದು ನನಗೆ ಗೊತ್ತಿದೆ.
14 I know that all that he does God it it will be for ever to it not to add and from it not to take away and God he has acted that people will fear from to before him.
೧೪ದೇವರ ಕಾರ್ಯವೆಲ್ಲವು ನಿತ್ಯವೆಂದು ಬಲ್ಲೆನು. ಅದಕ್ಕೆ ಯಾವುದನ್ನೂ ಸೇರಿಸಲಾರೆವು. ಅದರಿಂದ ಯಾವುದನ್ನೂ ತೆಗೆಯಲಾರೆವು. ದೇವರ ಈ ನಿಯಮಕ್ಕೆ ಮನುಷ್ಯರು ತನ್ನ ಎದುರಿನಲ್ಲಿ ಭಯಭಕ್ತಿ ಉಳ್ಳವರಾಗಿರಬೇಕೆಂಬುದೇ ಕಾರಣ.
15 Whatever that is [has been] already it and [that] which [is] to be already it has been and God he will seek [what] was pursued.
೧೫ಈಗಿನದು ಹಿಂದೆ ಇತ್ತು; ಮುಂದಿನದು ಈಗಲೂ ಇದೆ. ಗತಿಸಿ ಹೋದದ್ದನ್ನು ದೇವರು ತಿರುಗಿ ಬರಮಾಡುವನು.
16 And again I have seen under the sun [the] place of justice [was] there wickedness and [the] place of righteousness [was] there wickedness.
೧೬ಇದಲ್ಲದೆ ನಾನು ಲೋಕದಲ್ಲಿ ದೃಷ್ಟಿಸಿ ನ್ಯಾಯಸ್ಥಾನದಲ್ಲಿಯೂ, ಧರ್ಮಸ್ಥಾನದಲ್ಲಿಯೂ ಅಧರ್ಮವಿರುವುದೆಂದು ನೋಡಿದೆನು.
17 I said I in heart my the righteous and the wicked he will judge God for a time [is] for every matter and on every deed there.
೧೭ಆಗ ನಾನು ಮನಸ್ಸಿನಲ್ಲಿ, “ದೇವರು ನೀತಿವಂತನಿಗೂ, ಅನೀತಿವಂತನಿಗೂ ನ್ಯಾಯತೀರಿಸುವನು. ಆತನ ನ್ಯಾಯಕ್ರಮಗಳಿಗೂ, ಎಲ್ಲಾ ಕೆಲಸಕಾರ್ಯಗಳಿಗೂ ತಕ್ಕ ಸಮಯ ಉಂಟು” ಎಂದು ಅಂದುಕೊಂಡೆನು.
18 I said I in heart my on cause of [the] children of humankind to test them God and to see that they [are] animal[s] they for themselves.
೧೮ನಾನು ನನ್ನ ಮನಸ್ಸಿನಲ್ಲಿ ಹೀಗೆ ಯೋಚಿಸಿದೆನು, “ದೇವರು ಮನುಷ್ಯರನ್ನು ಪರೀಕ್ಷಿಸಿ, ಅವರು ಪಶುಗಳಿಗೆ ಸಮಾನರು ಎಂಬುದನ್ನು ತೋರಿಸುತ್ತಾನೆ.”
19 For [the] fate of [the] children of humankind and [the] fate of animal[s] and fate one [belongs] to them like [the] death of this so [the] death of this and breath one [belongs] to all and [the] advantage of humankind [is] more than the animal[s] not for everything [is] futility.
೧೯ಮನುಷ್ಯನ ಗತಿಯೂ ಪಶುವಿನ ಗತಿಯೂ ಒಂದೇ. ಪಶುವಿಗೆ ಸಾವು ಬರುವ ಹಾಗೆ ಮನುಷ್ಯನಿಗೂ ಬರುವುದು. ಎಲ್ಲಕ್ಕೂ ಪ್ರಾಣ ಒಂದೇ. ಮನುಷ್ಯನು ಪಶುವಿಗಿಂತ ಶ್ರೇಷ್ಠನಲ್ಲ. ಎಲ್ಲವು ವ್ಯರ್ಥವೇ.
20 Everything [is] going to place one everything it was from the dust and everything [is] returning to the dust.
೨೦ಎಲ್ಲಾ ಪ್ರಾಣಿಗಳು ಒಂದೇ ಸ್ಥಳಕ್ಕೆ ಹೋಗುವವು. ಎಲ್ಲವು ಮಣ್ಣಿನಿಂದಾದವು. ಎಲ್ಲವೂ ಮಣ್ಣಿಗೆ ಪುನಃ ಸೇರುವವು.
21 Who? [is] knowing [the] spirit of [the] children of humankind that is going up it upwards and [the] spirit of the animal[s] that is going down it downwards to the earth.
೨೧ಮನುಷ್ಯನ ಆತ್ಮವು ಮೇಲಕ್ಕೆ ಏರುತ್ತದೋ, ಪಶುವಿನ ಆತ್ಮವು ಕೆಳಕ್ಕೆ ಇಳಿದು ಭೂಮಿಗೆ ಸೇರುತ್ತದೋ ಯಾರಿಗೆ ಗೊತ್ತು?
22 And I saw that there not [is] good more than that he will be happy humankind in work his for that [is] portion his for who? will he bring him to look on whatever that will be after him.
೨೨ಈ ಪ್ರಕಾರ ನಾನು ಯೋಚಿಸಿ ಮನುಷ್ಯನು ತನ್ನ ಕಾರ್ಯಗಳಲ್ಲಿ ಉಲ್ಲಾಸಗೊಳ್ಳುವುದಕ್ಕಿಂತ ಅವನಿಗೆ ಯಾವ ಮೇಲೂ ಇಲ್ಲ. ಇದೇ ಅವನ ಪಾಲು ಎಂದು ಗ್ರಹಿಸಿಕೊಂಡೆನು. ಜೀವಮಾನದ ನಂತರ ಸಂಭವಿಸುವವುಗಳನ್ನು ನೋಡುವುದಕ್ಕೆ ಮನುಷ್ಯನನ್ನು ಯಾರು ಪುನಃ ಬರಮಾಡುವರು?