< Esther 3 >

1 After - the things these he made great the king Ahasuerus Haman [the] son of Hammedatha the Agagite and he exalted him and he placed seat his above all the officials who [were] with him.
ಇದಾದನಂತರ ಅರಸನಾದ ಅಹಷ್ವೇರೋಷನು ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನನ್ನು ಪದವಿಯಲ್ಲಿ ಹೆಚ್ಚಿಸಿ, ಅವನಿಗೆ ದೊಡ್ಡ ಅಧಿಕಾರವನ್ನು ಕೊಟ್ಟು, ತನ್ನ ಆಸ್ಥಾನದ ಎಲ್ಲಾ ಸರದಾರರಲ್ಲಿ ಅವನಿಗೆ ಪ್ರಥಮ ಸ್ಥಾನವನ್ನು ಅನುಗ್ರಹಿಸಿದನು.
2 And all [the] servants of the king who [were] at [the] gate of the king [were] kneeling and bowing down to Haman for thus he had commanded to him the king and Mordecai not he knelt and not he bowed down.
ರಾಜನ ಅರಮನೆಯಲ್ಲಿದ್ದ ಸೇವಕರೆಲ್ಲರೂ ಹಾಮಾನನಿಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿದ್ದರು; ಆದರೆ ಮೊರ್ದೆಕೈಯು ಅವನಿಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿರಲಿಲ್ಲ.
3 And they said [the] servants of the king who [were] at [the] gate of the king to Mordecai why? [are] you transgressing [the] commandment of the king.
ಅರಮನೆಯ ದ್ವಾರಪಾಲಕರು ಮೊರ್ದೆಕೈಗೆ, “ನೀನು ರಾಜಾಜ್ಞೆಯನ್ನು ಮೀರುವುದೇಕೆ?” ಎಂದು ಪ್ರತಿದಿನ ಅವನನ್ನು ಎಚ್ಚರಿಸುತ್ತಿದ್ದರು.
4 And it was (just as spoke they *Q(K)*) to him a day and a day and not he listened to them and they told to Haman to see ¿ will they stand [the] words of Mordecai that he had told to them that he [was] a Jew.
ಮೊರ್ದೆಕೈಯು ತಾನು ಯೆಹೂದ್ಯನೆನ್ನುವ ಹೆಮ್ಮೆಯ ಹಾಗೂ ಮಾನವನಿಗೆ ಸಾಷ್ಟಾಂಗನಮಸ್ಕಾರ ಮಾಡುವುದಿಲ್ಲ ಎಂಬ ಅವನ ಹಟ ಸಾಗುವುದೇನೋ ನೋಡೋಣ ಎಂದುಕೊಂಡು ಅವರು ಅದನ್ನು ಹಾಮಾನನಿಗೆ ತಿಳಿಸಿದರು.
5 And he saw Haman that not Mordecai [was] kneeling and bowing down to him and he was filled Haman rage.
ಮೊರ್ದೆಕೈಯು ತನಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿಲ್ಲವೆಂದು ತಿಳಿದ ಹಾಮಾನನು ಬಹಳ ಕೋಪಗೊಂಡನು.
6 And he despised in view his to stretch out a hand on Mordecai to only him if people had told to him [the] people of Mordecai and he sought Haman to annihilate all the Jews who [were] in all [the] kingdom of Ahasuerus [the] people of Mordecai.
ಅವನು ಮೊರ್ದೆಕೈಯೊಬ್ಬನ ಮೇಲೆಯೇ ಕೈಯೆತ್ತುವುದು ಸಾಲದೆಂದೆಣಿಸಿ, ಇವನು ಯೆಹೂದ ಜನಾಂಗದವನೆಂದು ಕೇಳಿದ ಮೇಲೆ ಅಹಷ್ವೇರೋಷನ ರಾಜ್ಯದಲ್ಲಿದ್ದ ಮೊರ್ದೆಕೈಯ ಬಂಧುಬಳಗದವರನ್ನು ಅಂದರೆ ಎಲ್ಲಾ ಯೆಹೂದ್ಯರನ್ನು ಸಂಹರಿಸಬೇಕೆಂದು ನಿರ್ಣಯಿಸಿಕೊಂಡನು.
7 In the month first that [is] [the] month of Nisan in year two [plus] ten of the king Ahasuerus someone cast Pur it [is] the lot before Haman from day - to day and from month to month (and it fell the lot on three [plus] ten day of month *X*) two [plus] ten that [is] [the] month of Adar.
ಅರಸನಾದ ಅಹಷ್ವೇರೋಷನ ಆಳ್ವಿಕೆಯ ಹನ್ನೆರಡನೆಯ ತಿಂಗಳಾದ ಚೈತ್ರಮಾಸದಲ್ಲಿ ಹಾಮಾನನ ಮುಂದೆ ಶುಭ ಮಾಸವು ಮತ್ತು ಶುಭದಿನವು ಯಾವುದೆಂದು ತಿಳಿದುಕೊಳ್ಳುವುದಕ್ಕೆ “ಪೂರ್” ಅಂದರೆ ಚೀಟನ್ನು ಹಾಕಿದರು. ಚೀಟು ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನಕ್ಕೆ ಬಿತ್ತು.
8 And he said Haman to the king Ahasuerus there it [is] a people one scattered and separated among the peoples in all [the] provinces of kingdom your and laws their [are] differing from every people and [the] laws of the king not they [are] doing and for the king not [is] appropriate to let remain them.
ಹಾಮಾನನು ಅರಸನಾದ ಅಹಷ್ವೇರೋಷನಿಗೆ, “ನಿನ್ನ ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ಒಂದು ಜನಾಂಗವಿರುತ್ತದೆ; ಅದು ಇತರ ಜನಾಂಗಗಳವರ ಮಧ್ಯದಲ್ಲಿ ಹರಡಿದ್ದರೂ ಎಲ್ಲರಿಂದ ಪ್ರತ್ಯೇಕವಾಗಿಯೇ ಇರುತ್ತದೆ. ಆ ಜನಾಂಗಗಳವರ ನಿಯಮಗಳು ಇತರ ಎಲ್ಲಾ ಜನಾಂಗಗಳವರ ನಿಯಮಗಳಿಗಿಂತ ಭಿನ್ನವಾಗಿರುತ್ತವೆ. ಅರಸನ ನಿಯಮಗಳನ್ನಂತೂ ಅವರು ಅನುಸರಿಸುವುದೇ ಇಲ್ಲ, ಅರಸನು ಅವರನ್ನು ಸುಮ್ಮನೆ ಬಿಡುವುದು ಉಚಿತವಲ್ಲ.
9 If [is] on the king good let it be written to destroy them and ten thousand talent[s] of silver I will weigh out on [the] hands of [the] doers of the work to bring [it] into [the] treasuries of the king.
ಅರಸನ ಚಿತ್ತವಾದರೆ ಅವರನ್ನು ಸಂಹರಿಸಬೇಕು ಎಂಬ ಆಜ್ಞೆಯು ಹೊರಡಲಿ; ಹಾಗೆ ಮಾಡಿದರೆ ನಾನು ರಾಜಭಂಡಾರಕ್ಕಾಗಿ ಹತ್ತು ಸಾವಿರ ತಲಾಂತು ಬೆಳ್ಳಿಯನ್ನು ತೂಕ ಮಾಡಿ ಉದ್ಯೋಗಸ್ಥರ ಕೈಗೆ ಒಪ್ಪಿಸುವೆನು” ಎಂದು ಹೇಳಿದನು.
10 And he removed the king signet-ring his from on hand his and he gave it to Haman [the] son of Hammedatha the Agagite [the] opposer of the Jews.
೧೦ಆಗ ಅರಸನು ತನ್ನ ಕೈಯಲ್ಲಿದ್ದ ಮುದ್ರೆಯುಂಗುರವನ್ನು ತೆಗೆದು ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಯೆಹೂದ್ಯರ ದ್ವೇಷಿಯೂ ಆದ ಹಾಮಾನನಿಗೆ ಒಪ್ಪಿಸಿದನು.
11 And he said the king to Haman the silver [is] given to you and the people to do with it according to the good in view your.
೧೧ಅರಸನು ಹಾಮಾನನಿಗೆ ಕೊಟ್ಟು, “ಆ ಬೆಳ್ಳಿ ನಿನ್ನಲ್ಲೇ ಇರಲಿ; ನೀನು ಆ ಜನರನ್ನು ಏನು ಬೇಕಾದರೂ ಮಾಡಬಹುದು” ಎಂದು ಹೇಳಿದನು.
12 And they were summoned [the] scribes of the king in the month first on thir-teenth day in it and it was written according to all that he commanded Haman to [the] satraps of the king and to the governors who - [were] over province and province and to [the] officials of people and people province and province according to writing its and people and people according to language its in [the] name of the king Ahasuerus [it was] written and [it was] sealed with [the] signet-ring of the king.
೧೨ಮೊದಲನೆಯ ತಿಂಗಳಿನ ಹದಿಮೂರನೆಯ ದಿನದಲ್ಲಿ ರಾಜಲೇಖಕರು ಕೂಡಿ ಬರಬೇಕು ಎಂದು ಅಪ್ಪಣೆಯಾಯಿತು. ಅವರು ಹಾಮಾನನ ಆಜ್ಞಾನುಸಾರ ಉಪರಾಜರಿಗೂ, ಆಯಾ ಸಂಸ್ಥಾನಗಳ ಅಧಿಕಾರಿಗಳಿಗೂ, ಆಯಾ ಜನಾಂಗಗಳ ಅಧಿಪತಿಗಳಿಗೂ ಪತ್ರಗಳನ್ನು ಬರೆದರು. ಆಯಾ ಸಂಸ್ಥಾನಗಳ ಬರಹದಲ್ಲಿಯೂ ಆಯಾ ಜನಾಂಗಗಳ ಭಾಷೆಯಲ್ಲಿಯೂ ಇದ್ದ ಆ ಪತ್ರಗಳು ಅರಸನಾದ ಅಹಷ್ವೇರೋಷನ ಹೆಸರಿನಲ್ಲೇ ಲಿಖಿತವಾಗಿದ್ದವು; ಅವುಗಳಿಗೆ ರಾಜಮುದ್ರೆಯನ್ನು ಹಾಕಲಾಗಿತ್ತು.
13 And they were sent documents by [the] hand of the runners to all [the] provinces of the king to annihilate to kill and to destroy all the Jews from young man and unto old [man] little one[s] and women on a day one on [day] thir-teen of month two [plus] ten that [is] [the] month of Adar and spoil their to take as plunder.
೧೩ಪತ್ರಗಳು ಅಂಚೆಯವರ ಮುಖಾಂತರ ಎಲ್ಲಾ ರಾಜಸಂಸ್ಥಾನಗಳಿಗೆ ಕಳುಹಿಸಲ್ಪಟ್ಟವು. ಅವುಗಳಲ್ಲಿ, “ಒಂದೇ ದಿನದಲ್ಲಿ ಅಂದರೆ ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ಹುಡುಗರು, ಹಿರಿಯರು, ಹೆಂಗಸರು, ಮಕ್ಕಳು ಎಂದು ನೋಡದೆ ಎಲ್ಲಾ ಯೆಹೂದ್ಯರನ್ನು ಕೊಲ್ಲಿರಿ, ಸಂಹರಿಸಿರಿ, ನಿರ್ನಾಮಗೊಳಿಸಿರಿ. ಅವರ ಸೊತ್ತನ್ನು ಸೂರೆಮಾಡಿರಿ” ಎಂದೂ ಬರೆದಿತ್ತು.
14 copy of The writing [was] to be given law in every province and province [was] disclosed to all the peoples to be ready for the day this.
೧೪ಅದು ಮಾತ್ರವಲ್ಲದೆ, “ಈ ಪತ್ರದ ಒಂದೊಂದು ಪ್ರತಿಯು ಪ್ರತಿಯೊಂದು ಸಂಸ್ಥಾನದಲ್ಲಿ ರಾಜವಿಧಿಯೆಂದು ಹೊರಡಿಸಿ ಎಲ್ಲರೂ ಆ ದಿನದಲ್ಲಿ ಸಿದ್ಧರಾಗಿರುವ ಹಾಗೆ ಎಲ್ಲಾ ಜನರಿಗೆ ತಿಳಿಯುವಂತೆ ಪ್ರಕಟಿಸಬೇಕು” ಎಂದು ಬರೆಯಲಾಗಿತ್ತು.
15 The runners they went out being hasty at [the] word of the king and the law it was given in Susa the citadel and the king and Haman they sat down to drink and the city of Susa it was in confusion.
೧೫ಈ ನಿರ್ಣಯವು ಶೂಷನ್ ಅರಮನೆಯಲ್ಲಿ ಪ್ರಕಟವಾದ ಕೂಡಲೇ ಅಂಚೆಯವರು ರಾಜಾಜ್ಞೆಯ ಮೇರೆಗೆ ಶೀಘ್ರವಾಗಿ ಹೊರಟರು. ಅರಸನಾದರೋ ಹಾಮಾನನನೊಡನೆ ಮದ್ಯಪಾನ ಮಾಡುವುದಕ್ಕೆ ಕುಳಿತುಕೊಂಡನು. ಅತ್ತ ಶೂಷನ್ ಪಟ್ಟಣದಲ್ಲಿ ತಳಮಳ ಉಂಟಾಯಿತು.

< Esther 3 >