< Psalms 64 >
1 to/for to conduct melody to/for David to hear: hear God voice my in/on/with complaint my from dread enemy to watch life my
೧ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ದೇವರೇ, ನನ್ನ ಸ್ವರವನ್ನು ಕೇಳಿ, ಶತ್ರುಭಯದಿಂದ ನನ್ನ ಜೀವವನ್ನು ರಕ್ಷಿಸು.
2 to hide me from counsel be evil from scheming to work evil: wickedness
೨ದುಷ್ಟರ ಒಳಸಂಚಿಗೂ, ಕೆಡುಕರ ಗುಪ್ತ ಆಲೋಚನೆಗೂ ಸಿಕ್ಕದಂತೆ, ನನ್ನನ್ನು ತಪ್ಪಿಸಿ ಭದ್ರಪಡಿಸು.
3 which to sharpen like/as sword tongue their to tread arrow their word bitter
೩ಅವರು ನಾಲಿಗೆಯೆಂಬ ಕತ್ತಿಯನ್ನು ಮಸೆದಿದ್ದಾರೆ; ವಿಷವಚನವೆಂಬ ಬಾಣವನ್ನು ಹೂಡಿದ್ದಾರೆ.
4 to/for to shoot in/on/with hiding complete suddenly to shoot him and not to fear
೪ಗುಪ್ತಸ್ಥಳಗಳಲ್ಲಿದ್ದು ಸಜ್ಜನನಿಗೆ ಗುರಿಯಿಟ್ಟಿದ್ದಾರೆ. ಸ್ವಲ್ಪವೂ ಹೆದರದೆ ಅವನ ಮೇಲೆ ಫಕ್ಕನೆ ಎಸೆಯುತ್ತಾರೆ.
5 to strengthen: hold to/for them word: deed bad: evil to recount to/for to hide snare to say who? to see: see to/for them
೫ದುಷ್ಕೃತ್ಯಕ್ಕಾಗಿ ಮನಸ್ಸನ್ನು ದೃಢಪಡಿಸಿಕೊಂಡು ತಮ್ಮೊಳಗೆ, “ರಹಸ್ಯವಾಗಿ ಬಲೆಗಳನ್ನು ಒಡ್ಡೋಣ; ನಮ್ಮನ್ನು ನೋಡುವವರು ಯಾರು?” ಅಂದುಕೊಳ್ಳುತ್ತಾರೆ.
6 to search injustice to finish plot to search and entrails: inner parts man and heart deep
೬ಅವರು, “ಕೇಡನ್ನು ಕಲ್ಪಿಸಿ, ಒಳ್ಳೆಯ ಉಪಾಯವನ್ನು ಕಂಡುಕೊಂಡಿದ್ದೇವೆ” ಅಂದುಕೊಳ್ಳುತ್ತಾರೆ; ಅವರ ಹೃದಯವೂ, ಅಂತರಂಗದ ಆಲೋಚನೆಯೂ ಅಶೋಧ್ಯವಾಗಿವೆ.
7 and to shoot them God arrow suddenly to be wound their
೭ಆದರೆ ದೇವರು ಬಾಣವನ್ನು ಎಸೆಯಲು, ಫಕ್ಕನೆ ಅವರಿಗೆ ಗಾಯವಾಗುವುದು.
8 and to stumble him upon them tongue their to wander all to see: see in/on/with them
೮ಅವರ ನಾಲಿಗೆಗಳೇ ಅವರಿಗೆ ವಿಘ್ನವಾಗಿ ಅವರು ಎಡವಿಬೀಳುವರು; ಆಗ ನೋಡುವವರೆಲ್ಲರು ತಲೆ ಅಲ್ಲಾಡಿಸಿ ಅಣಕಿಸುವರು.
9 and to fear: revere all man and to tell work God and deed: work his be prudent
೯ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕೆಲಸವೆಂದು ಹೇಳಿ, ಆತನ ಕೃತ್ಯಗಳನ್ನು ಆಲೋಚಿಸಿಕೊಳ್ಳುವರು.
10 to rejoice righteous in/on/with LORD and to seek refuge in/on/with him and to boast: boast all upright heart
೧೦ಸದ್ಭಕ್ತರು ಯೆಹೋವನಲ್ಲಿ ಆನಂದಪಟ್ಟು ಆತನನ್ನೇ ಆಶ್ರಯಿಸಿಕೊಳ್ಳುವರು; ಸರಳಹೃದಯದವರೆಲ್ಲರೂ ಹಿಗ್ಗುವರು.