< Matthew 13 >

1 On that day Jesus went out of the house and sat by the sea,
ಅದೇ ದಿನದಲ್ಲಿ ಯೇಸು ಮನೆಯಿಂದ ಹೊರಟುಹೋಗಿ ಸರೋವರದ ಬಳಿಯಲ್ಲಿ ಕುಳಿತುಕೊಂಡರು.
2 and large crowds gathered around him. So he got into the boat and sat down, while the entire crowd stood on the shore.
ಆಗ ಜನರ ದೊಡ್ಡ ಸಮೂಹವು ಯೇಸುವಿನ ಬಳಿಗೆ ಕೂಡಿಬಂದದ್ದರಿಂದ ಅವರು ದೋಣಿಯನ್ನು ಹತ್ತಿ ಕುಳಿತುಕೊಂಡರು, ಆ ಸಮೂಹದವರೆಲ್ಲಾ ದಡದ ಮೇಲೆ ನಿಂತಿದ್ದರು.
3 Then he told them many things in parables, saying, “Behold, a sower went out to sow.
ಆಗ ಯೇಸು ಅನೇಕ ವಿಷಯಗಳನ್ನು ಅವರಿಗೆ ಸಾಮ್ಯಗಳಲ್ಲಿ ಹೇಳಿದ್ದು: “ಒಬ್ಬ ರೈತನು ಬಿತ್ತುವುದಕ್ಕೆ ಹೊರಟನು;
4 As he sowed, some seeds fell along the path, and the birds came and devoured them.
ಅವನು ಬಿತ್ತುತ್ತಿರುವಾಗ ಕೆಲವು ಬೀಜಗಳು ದಾರಿಯ ಪಕ್ಕದಲ್ಲಿ ಬಿದ್ದವು, ಪಕ್ಷಿಗಳು ಬಂದು ಅವುಗಳನ್ನು ತಿಂದುಬಿಟ್ಟವು.
5 Other seeds fell on rocky ground, where they did not have much soil, and they sprang up immediately because they had no depth of soil.
ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಬಂಡೆಯ ಸ್ಥಳಗಳಲ್ಲಿ ಬಿದ್ದವು. ಅಲ್ಲಿ ಆಳವಾದ ಮಣ್ಣಿಲ್ಲದ ಕಾರಣ ಅವು ಬೇಗನೆ ಮೊಳೆತವು.
6 But when the sun rose, they were scorched. And because they had no root, they withered away.
ಆದರೆ ಬಿಸಿಲೇರಿದಾಗ ಅವು ಬಾಡಿಹೋಗಿ, ಬೇರಿಲ್ಲದ ಕಾರಣ ಒಣಗಿಹೋದವು.
7 Other seeds fell among the thorns, and the thorns grew up and choked them.
ಕೆಲವು ಬೀಜಗಳು ಮುಳ್ಳುಗಿಡಗಳ ಮಧ್ಯದಲ್ಲಿ ಬಿದ್ದವು, ಆ ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.
8 But other seeds fell on good soil and produced fruit, some a hundred, some sixty, and some thirty times more than what was sown.
ಆದರೆ ಕೆಲವು ಬೀಜಗಳು ಒಳ್ಳೆಯ ಭೂಮಿಯಲ್ಲಿ ಬಿದ್ದು, ಒಂದು ನೂರರಷ್ಟು ಮತ್ತೆ ಕೆಲವು ಅರವತ್ತರಷ್ಟು ಇನ್ನು ಕೆಲವು ಮೂವತ್ತರಷ್ಟು ಫಲಕೊಟ್ಟವು.
9 He who has ears to hear, let him hear.”
ಕೇಳುವುದಕ್ಕೆ ಕಿವಿಯುಳ್ಳವರು ಕೇಳಲಿ.”
10 Then the disciples came and said to him, “Why do yoʋ speak to the people in parables?”
ತರುವಾಯ ಶಿಷ್ಯರು ಬಂದು ಯೇಸುವಿಗೆ, “ನೀವು ಸಾಮ್ಯಗಳಲ್ಲಿ ಅವರೊಡನೆ ಮಾತನಾಡುವುದೇಕೆ?” ಎಂದು ಕೇಳಿದರು.
11 Jesus answered them, “To you it has been given to know the mysteries of the kingdom of heaven, but to them it has not been given.
ಯೇಸು ಅದಕ್ಕೆ ಉತ್ತರವಾಗಿ ಹೇಳಿದ್ದು: “ಪರಲೋಕ ರಾಜ್ಯದ ರಹಸ್ಯಗಳನ್ನು ತಿಳಿದುಕೊಳ್ಳುವ ಜ್ಞಾನವು ನಿಮಗೆ ಕೊಡಲಾಗಿದೆ, ಆದರೆ ಅವರಿಗಲ್ಲ.
12 For whoever has will be given more, and he will have an abundance. But whoever does not have, even what he has will be taken away from him.
ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲಾಗುವುದು, ಅವರಿಗೆ ಹೆಚ್ಚು ಸಮೃದ್ಧಿಯಾಗುವುದು. ಇಲ್ಲದವರ ಕಡೆಯಿಂದ ಇದ್ದ ಅಲ್ಪವನ್ನೂ ತೆಗೆದುಕೊಳ್ಳಲಾಗುವುದು.”
13 That is why I speak to them in parables, because ‘they see but do not perceive, and they hear but do not listen or understand.’
ಆದ್ದರಿಂದ, ನಾನು ಅವರೊಡನೆ ಸಾಮ್ಯಗಳಲ್ಲಿ ಮಾತನಾಡುತ್ತೇನೆ: “ಏಕೆಂದರೆ ಅವರು ಕಣ್ಣಾರೆ ನೋಡಿದರೂ ಕಾಣುವುದಿಲ್ಲ; ಕೇಳಿದರೂ ತಿಳಿದುಕೊಳ್ಳುವುದಿಲ್ಲ; ಅವರು ಗ್ರಹಿಸುವುದೂ ಇಲ್ಲ.
14 In them is fulfilled the prophecy of Isaiah, which says, ‘Yoʋ will hear but never understand, and you will see but never perceive.
ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನೆಂದರೆ, “‘ನೀವು ಕೇಳುತ್ತಲೇ ಇರುವಿರಿ, ಎಂದೆಂದೂ ಅರ್ಥಮಾಡಿಕೊಳ್ಳಲಾರಿರಿ; ನೀವು ಕಾಣುತ್ತಲೇ ಇರುವಿರಿ, ಎಂದೆಂದೂ ಅರಿತುಕೊಳ್ಳಲಾರಿರಿ.
15 For the heart of this people has become calloused; with their ears they have barely heard, and their eyes they have closed, lest they should see with their eyes, hear with their ears, and understand with their hearts and turn back, and I would heal them.’
ಈ ಜನರ ಹೃದಯವು ಕಠೋರವಾಗಿದೆ; ಇವರ ಕಿವಿಗಳು ಕೇಳದ ಹಾಗೆ ಮಂದವಾಗಿವೆ, ಇವರು ತಮ್ಮ ಕಣ್ಣುಗಳನ್ನು ಮುಚ್ಚಿಕೊಂಡಿದ್ದಾರೆ. ಇಲ್ಲವಾದರೆ ತಾವು ಕಣ್ಣಿನಿಂದ ಕಂಡು, ಕಿವಿಯಿಂದ ಕೇಳಿ. ತಮ್ಮ ಹೃದಯದಿಂದ ತಿಳಿದು, ನನ್ನ ಕಡೆಗೆ ತಿರುಗಿಕೊಂಡಿದ್ದರೆ, ನಾನು ಅವರನ್ನು ಸ್ವಸ್ಥಪಡಿಸುತ್ತಿದ್ದೆನು,’ ಎಂಬುದೇ.
16 But blessed are your eyes because they see, and your ears because they hear.
ಆದರೆ ನಿಮ್ಮ ಕಣ್ಣುಗಳು ಕಾಣುವುದರಿಂದಲೂ ನಿಮ್ಮ ಕಿವಿಗಳು ಕೇಳುವುದರಿಂದಲೂ ನೀವು ಧನ್ಯರು.
17 For truly I say to you, many prophets and righteous people desired to see the things you see but did not see them, and to hear the things you hear but did not hear them.
ನಾನು ಸತ್ಯವಾಗಿ ನಿಮಗೆ ಹೇಳುತ್ತೇನೆ, ಅನೇಕ ಪ್ರವಾದಿಗಳು ಮತ್ತು ನೀತಿವಂತರು ನೀವು ಕಾಣುವಂಥವುಗಳನ್ನು ಕಾಣಬೇಕೆಂದು ಅಪೇಕ್ಷಿಸಿದರೂ ಕಾಣಲಿಲ್ಲ ಮತ್ತು ನೀವು ಕೇಳುವಂಥವುಗಳನ್ನು ಕೇಳಬೇಕೆಂದು ಅಪೇಕ್ಷಿಸಿದರೂ ಅವರು ಕೇಳಲಿಲ್ಲ.
18 “So hear what the parable of the sower means:
“ಆದ್ದರಿಂದ ಬಿತ್ತುವವನ ಸಾಮ್ಯದ ಅರ್ಥವನ್ನು ನೀವು ಕೇಳಿರಿ:
19 When anyone hears the word of the kingdom and does not understand it, the evil one comes and snatches away what was sown in his heart. This is the seed sown along the path.
ಯಾರಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ, ಕೆಡುಕನು ಬಂದು ಅವರ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದುಹಾಕುತ್ತಾನೆ, ಇದೇ ದಾರಿಯ ಪಕ್ಕದಲ್ಲಿ ಬಿತ್ತಲಾಗಿರುವ ಬೀಜವಾಗಿರುವದು.
20 The seed sown on rocky ground is he who hears the word and immediately receives it with joy.
ಕಲ್ಲು ನೆಲದ ಮೇಲೆ ಬಿತ್ತಲಾಗಿರುವ ಬೀಜವಾಗಿರುವವರು, ವಾಕ್ಯವನ್ನು ಕೇಳಿದ ಕೂಡಲೇ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ.
21 Yet he has no root in himself, but is only temporary. When tribulation or persecution arises on account of the word, he immediately falls away.
ಆದರೆ ಅವರಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇದ್ದು, ವಾಕ್ಯದ ನಿಮಿತ್ತವಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ, ಅವರು ಬೇಗನೆ ಬಿದ್ದು ಹೋಗುತ್ತಾರೆ.
22 The seed sown among the thorns is he who hears the word, but the cares of this world and the deceitfulness of riches choke the word, and it becomes unfruitful. (aiōn g165)
ಮುಳ್ಳುಗಿಡಗಳಲ್ಲಿ ಬಿತ್ತಲಾಗಿರುವ ಬೀಜವಾಗಿರುವವರು ವಾಕ್ಯವನ್ನು ಕೇಳುತ್ತಾರೆ, ಆದರೆ ಈ ಜೀವನದ ಚಿಂತೆಗಳೂ ಐಶ್ವರ್ಯದ ವ್ಯಾಮೋಹವೂ ವಾಕ್ಯವನ್ನು ಅಡಗಿಸುವುದರಿಂದ, ವಾಕ್ಯವು ಫಲವನ್ನು ಕೊಡುವುದಿಲ್ಲ. (aiōn g165)
23 But the seed sown on the good soil is he who hears the word and understands it, who bears fruit and produces a hundred, sixty, or thirty times more than what was sown.”
ಆದರೆ ಒಳ್ಳೆಯ ಭೂಮಿಯಲ್ಲಿ ಬಿತ್ತಲಾಗಿರುವ ಬೀಜವಾಗಿರುವವರು, ವಾಕ್ಯವನ್ನು ಕೇಳಿ ಅದನ್ನು ಗ್ರಹಿಸಿಕೊಳ್ಳುತ್ತಾರೆ. ಇವರು ಫಲ ಫಲಿಸುವವರಾಗಿ ನೂರರಷ್ಟು ಅರವತ್ತರಷ್ಟು ಮತ್ತು ಮೂವತ್ತರಷ್ಟು ಫಲವನ್ನು ಕೊಡುತ್ತಾರೆ.”
24 Jesus presented another parable to them, saying, “The kingdom of heaven can be compared to a person who sowed good seed in his field,
ಯೇಸು ಮತ್ತೊಂದು ಸಾಮ್ಯವನ್ನು ಹೇಳಿದರು: “ಪರಲೋಕ ರಾಜ್ಯವು ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ.
25 but while people were sleeping, his enemy came and sowed tares among the wheat, and then went away.
ಆದರೆ ಜನರು ನಿದ್ರಿಸುತ್ತಿರುವಾಗ, ಅವನ ವೈರಿಯು ಬಂದು ಗೋಧಿಯ ನಡುವೆ ಕಳೆಯನ್ನು ಬಿತ್ತಿ ಹೊರಟುಹೋದನು.
26 When the plants sprouted and produced grain, the tares also appeared.
ಗೋಧಿಯು ಮೊಳೆತು ಬೆಳೆಯುತ್ತಿರುವಾಗ, ಕಳೆ ಸಹ ಕಾಣಿಸಿಕೊಂಡಿತು.
27 So the servants of the master of the house came and said to him, ‘Master, did yoʋ not sow good seed in yoʋr field? How then does it have tares?’
“ಮನೆಯ ಯಜಮಾನನ ಸೇವಕರು ಅವನ ಬಳಿಗೆ ಬಂದು ಅವನಿಗೆ, ‘ಅಯ್ಯಾ, ನೀನು ನಿನ್ನ ಹೊಲದಲ್ಲಿ ಒಳ್ಳೆಯ ಬೀಜವನ್ನು ಬಿತ್ತಿದೆಯಲ್ಲಾ? ಆದರೆ ಈ ಕಳೆಯು ಎಲ್ಲಿಂದ ಬಂತು?’ ಎಂದು ಕೇಳಿದರು.
28 He said to them, ‘An enemy has done this.’ So the servants said to him, ‘Do yoʋ want us to go and gather them up?’
“ಯಜಮಾನನು ಅವರಿಗೆ, ‘ವೈರಿಯು ಇದನ್ನು ಮಾಡಿದ್ದಾನೆ,’ ಎಂದನು. “ಆಗ ಸೇವಕರು ಅವನಿಗೆ, ‘ನಾವು ಹೋಗಿ ಅವುಗಳನ್ನು ಕಿತ್ತುಹಾಕೋಣವೇ?’ ಎಂದು ಕೇಳಿದರು.
29 He said, ‘No, lest in gathering the tares you uproot the wheat with them.
“ಆದರೆ ಯಜಮಾನನು, ‘ಬೇಡ, ನೀವು ಕಳೆಯನ್ನು ಕೀಳುವಾಗ, ಅವುಗಳೊಂದಿಗೆ ಗೋಧಿಯನ್ನೂ ಕಿತ್ತುಬಿಟ್ಟೀರಿ.
30 Let them both grow together until the harvest, and at the time of the harvest I will say to the reapers, “Gather the tares first and bind them into bundles to burn them up, but gather the wheat into my barn.”’”
ಸುಗ್ಗಿಯ ಕಾಲದವರೆಗೆ ಎರಡೂ ಜೊತೆಯಲ್ಲಿ ಬೆಳೆಯಲಿ. ಸುಗ್ಗಿಯ ಕಾಲದಲ್ಲಿ ನಾನು ಕೊಯ್ಯುವವರಿಗೆ: ಮೊದಲು ಕಳೆಯನ್ನು ಕೂಡಿಸಿ ಅವುಗಳನ್ನು ಸುಡುವುದಕ್ಕೆ ಬೇರೆ ಕಟ್ಟಿಡಿರಿ, ಗೋಧಿಯನ್ನು ನನ್ನ ಕಣಜದಲ್ಲಿ ಕೂಡಿಸಿರಿ ಎಂದು ಹೇಳುವೆನು,’ ಅಂದನು.”
31 He presented another parable to them, saying, “The kingdom of heaven is like a grain of mustard seed that a man took and sowed in his field.
ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದರು: “ಪರಲೋಕ ರಾಜ್ಯವು, ಒಬ್ಬ ಮನುಷ್ಯನು ಸಾಸಿವೆ ಕಾಳನ್ನು ತೆಗೆದುಕೊಂಡುಹೋಗಿ ತನ್ನ ಹೊಲದಲ್ಲಿ ಬಿತ್ತಿದ್ದಕ್ಕೆ ಹೋಲಿಕೆಯಾಗಿದೆ.
32 Although it is the smallest of all seeds, it grows larger than the other garden plants and becomes a tree, and the birds of the sky come and nest in its branches.”
ಅದು ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದ್ದರೂ ಅದು ಬೆಳೆದಾಗ, ಎಲ್ಲಾ ಸಸ್ಯಗಳಿಗಿಂತಲೂ ದೊಡ್ಡದಾಗಿ ಮರವಾಯಿತು. ಹೀಗೆ ಆಕಾಶದ ಪಕ್ಷಿಗಳು ಬಂದು, ಅದರ ಕೊಂಬೆಗಳಲ್ಲಿ ಗೂಡು ಕಟ್ಟಿ ವಾಸಮಾಡುತ್ತವೆ.”
33 He spoke to them another parable: “The kingdom of heaven is like leaven that a woman took and mixed into three measures of flour until it had all been leavened.”
ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದರು: “ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಸ್ತ್ರೀಯು ತೆಗೆದುಕೊಂಡು ಹುಳಿಯಿಲ್ಲದ ಸುಮಾರು ಇಪ್ಪತ್ತೇಳು ಕಿಲೋಗ್ರಾಂ ಹಿಟ್ಟಿನಲ್ಲಿ ಕಲಸಿದಾಗ ಆ ಹಿಟ್ಟೆಲ್ಲಾ ಹುಳಿಯಾಯಿತು.”
34 All these things Jesus spoke to the crowds in parables; he did not speak to them without using a parable.
ಯೇಸು ಇವೆಲ್ಲವನ್ನು ಜನಸಮೂಹದೊಂದಿಗೆ ಸಾಮ್ಯಗಳಲ್ಲಿಯೇ ಹೇಳಿದರು; ಸಾಮ್ಯವಿಲ್ಲದೆ ಯೇಸು ಅವರಿಗೆ ಏನೂ ಹೇಳುತ್ತಿರಲಿಲ್ಲ.
35 This was to fulfill what had been spoken through the prophet: “I will open my mouth in parables; I will declare things hidden from the foundation of the world.”
ಹೀಗೆ ಒಬ್ಬ ಪ್ರವಾದಿಯ ಮೂಲಕ ಹೇಳಿದ ಮಾತು ನೆರವೇರಿತು: “ನಾನು ಸಾಮ್ಯಗಳನ್ನು ಹೇಳುವಂತೆ ನನ್ನ ಬಾಯಿ ತೆರೆಯುವೆನು. ನಾನು ಲೋಕ ಪ್ರಾರಂಭದಿಂದ ಮರೆಯಾದವುಗಳನ್ನು ಪ್ರಕಟಪಡಿಸುವೆನು.”
36 Then Jesus left the crowds and went into the house, and his disciples came to him and said, “Explain to us the parable of the tares of the field.”
ತರುವಾಯ ಯೇಸು ಜನಸಮೂಹವನ್ನು ಕಳುಹಿಸಿಬಿಟ್ಟು ಮನೆಯೊಳಕ್ಕೆ ಹೋದರು. ಆಗ ಶಿಷ್ಯರು ಯೇಸುವಿನ ಬಳಿಗೆ ಬಂದು, “ಹೊಲದಲ್ಲಿರುವ ಕಳೆಯ ಸಾಮ್ಯವನ್ನು ನಮಗೆ ವಿವರಿಸಿರಿ,” ಎಂದರು.
37 So he said to them in response, “He who sows the good seed is the Son of Man.
ಯೇಸು ಉತ್ತರವಾಗಿ ಅವರಿಗೆ, “ಒಳ್ಳೆಯ ಬೀಜ ಬಿತ್ತುವವನು ಮನುಷ್ಯಪುತ್ರನು.
38 The field is the world, and the good seeds are the sons of the kingdom. The tares are the sons of the evil one,
ಹೊಲವು ಈ ಲೋಕ; ಒಳ್ಳೆಯ ಬೀಜವು ದೇವರ ರಾಜ್ಯದ ಮಕ್ಕಳು; ಕಳೆಯು ಕೆಡುಕನ ಮಕ್ಕಳಾಗಿದ್ದಾರೆ.
39 and the enemy who sowed them is the devil. The harvest is the end of the age, and the reapers are angels. (aiōn g165)
ಅದನ್ನು ಬಿತ್ತಿದ ವೈರಿಯು ಸೈತಾನನೇ. ಸುಗ್ಗಿಯ ಕಾಲವು ಲೋಕಾಂತ್ಯವಾಗಿದೆ. ಕೊಯ್ಯುವವರು ದೇವದೂತರೇ. (aiōn g165)
40 Therefore, just as the tares are gathered and burned with fire, so it will be at the end of this age. (aiōn g165)
“ಹೇಗೆ ಕಳೆಯನ್ನು ಕಿತ್ತು ಬೆಂಕಿಯಲ್ಲಿ ಸುಡುವರೋ, ಹಾಗೆಯೇ ಈ ಲೋಕಾಂತ್ಯದಲ್ಲಿ ಆಗುವುದು. (aiōn g165)
41 The Son of Man will send his angels, and they will gather out of his kingdom all stumbling blocks and those who practice lawlessness.
ಮನುಷ್ಯಪುತ್ರನು ತನ್ನ ದೂತರನ್ನು ಕಳುಹಿಸುವನು. ಅವರು ಪಾಪಕ್ಕೆ ಆತಂಕವಾದ ಎಲ್ಲವನ್ನೂ, ಕೇಡುಮಾಡುವ ಎಲ್ಲರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ,
42 They will throw them into the fiery furnace. In that place there will be weeping and gnashing of teeth.
ದೂತರು ಅವರನ್ನು ಅಗ್ನಿಕುಂಡದಲ್ಲಿ ಹಾಕುವರು. ಅಲ್ಲಿ ಗೋಳಾಟವೂ ಹಲ್ಲು ಕಡಿಯುವಿಕೆಯೂ ಇರುವವು.
43 Then the righteous will shine like the sun in the kingdom of their Father. He who has ears to hear, let him hear.
ಆಗ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವುದಕ್ಕೆ ಕಿವಿಯುಳ್ಳವರು ಕೇಳಲಿ.
44 “Again, the kingdom of heaven is like a treasure hidden in a field, which a man found and hid again, and in his joy he went and sold all that he had and bought the field.
“ಪರಲೋಕ ರಾಜ್ಯವು ಹೊಲದಲ್ಲಿ ಹೂಳಿಟ್ಟ ನಿಕ್ಷೇಪಕ್ಕೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಮನುಷ್ಯನು ಕಂಡುಕೊಂಡು ಮುಚ್ಚಿಟ್ಟು, ಅದರ ಸಂತೋಷದ ನಿಮಿತ್ತ ಹೊರಟುಹೋಗಿ, ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಳ್ಳುತ್ತಾನೆ.
45 “Again, the kingdom of heaven is like a merchant seeking fine pearls.
“ಪರಲೋಕ ರಾಜ್ಯವು ಒಳ್ಳೆಯ ಮುತ್ತುಗಳನ್ನು ಹುಡುಕುವ ವ್ಯಾಪಾರಸ್ಥನಿಗೆ ಹೋಲಿಕೆಯಾಗಿದೆ.
46 When he found one pearl of great price, he went and sold all that he had and bought it.
ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡು, ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಅದನ್ನು ಕೊಂಡುಕೊಳ್ಳುತ್ತಾನೆ.
47 “Again, the kingdom of heaven is like a dragnet that was cast into the sea, catching all kinds of fish.
“ಪರಲೋಕ ರಾಜ್ಯವು, ಸರೋವರದಲ್ಲಿ ಬೀಸಲಾಗಿ ಎಲ್ಲಾ ತರವಾದ ಮೀನುಗಳನ್ನು ಕೂಡಿಸಿದ ಬಲೆಗೆ ಹೋಲಿಕೆಯಾಗಿದೆ.
48 When it was full, the fishermen drew it to shore. Then they sat down and put the good fish into containers, but the bad ones they threw away.
ಬಲೆ ತುಂಬಿದಾಗ, ಬೆಸ್ತರು ಅದನ್ನು ದಡಕ್ಕೆ ಎಳೆದು ಕೂತುಕೊಂಡು ಒಳ್ಳೆಯವುಗಳನ್ನು ಬುಟ್ಟಿಗಳಲ್ಲಿ ತುಂಬಿಸಿ, ಕೆಟ್ಟವುಗಳನ್ನು ಹೊರಗೆ ಬಿಸಾಡುತ್ತಾರೆ.
49 So it will be at the end of the age. The angels will come and separate the evil from the righteous (aiōn g165)
ಹಾಗೆಯೇ ಲೋಕಾಂತ್ಯದಲ್ಲಿ ಇರುವುದು. ದೇವದೂತರು ಹೊರಟುಬಂದು ನೀತಿವಂತರ ಮಧ್ಯದಿಂದ ಕೆಡುಕರನ್ನು ಪ್ರತ್ಯೇಕಿಸಿ, (aiōn g165)
50 and throw them into the fiery furnace. In that place there will be weeping and gnashing of teeth.”
ಅವರನ್ನು ಅಗ್ನಿಕುಂಡದಲ್ಲಿ ಹಾಕುವರು. ಅಲ್ಲಿ ಗೋಳಾಟವೂ ಹಲ್ಲು ಕಡಿಯುವಿಕೆಯೂ ಇರುವವು,” ಎಂದು ಹೇಳಿದರು.
51 Jesus said to them, “Do you understand all these things?” They said to him, “Yes, Lord.”
ಯೇಸು ಶಿಷ್ಯರಿಗೆ, “ಇವುಗಳನ್ನೆಲ್ಲಾ ನೀವು ಗ್ರಹಿಸಿದ್ದೀರಾ?” ಎಂದು ಕೇಳಿದರು. ಅದಕ್ಕೆ, ಅವರು ಯೇಸುವಿಗೆ, “ಹೌದು,” ಎಂದು ಹೇಳಿದರು.
52 Then he said to them, “Every scribe that has been trained as a disciple for the kingdom of heaven is like a master of a house who brings out of his treasure things new and old.”
ಯೇಸು ಅವರಿಗೆ, “ಆದಕಾರಣ ಪರಲೋಕ ರಾಜ್ಯದ ಶಿಷ್ಯನಾಗಿರುವ ಪ್ರತಿಯೊಬ್ಬ ನಿಯಮ ಬೋಧಕನು, ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ,” ಎಂದರು.
53 When Jesus had finished these parables, he departed from there.
ಈ ಸಾಮ್ಯಗಳನ್ನು ಮುಗಿಸಿದ ತರುವಾಯ ಯೇಸು ಅಲ್ಲಿಂದ ಹೊರಟು ಹೋದರು.
54 Then he went to his hometown and taught the people in their synagogue. They were astonished and said, “Where did this man get this wisdom and these miraculous powers?
ಯೇಸು ತಮ್ಮ ಸ್ವಂತ ಊರಿಗೆ ಬಂದು ಅವರ ಸಭಾಮಂದಿರದಲ್ಲಿ ಅವರಿಗೆ ಬೋಧನೆ ಮಾಡಲು ಪ್ರಾರಂಭಿಸಲು, ಅವರು ವಿಸ್ಮಯಗೊಂಡು, “ಈ ಜ್ಞಾನವೂ ಈ ಮಹತ್ಕಾರ್ಯಗಳೂ ಈತನಿಗೆ ಎಲ್ಲಿಂದ ಬಂದವು?
55 Is this not the carpenter's son? Is not his mother's name Mary, and are not his brothers James, Joses, Simon, and Judas?
ಈತನು ಬಡಗಿಯ ಪುತ್ರನಲ್ಲವೇ? ಮರಿಯಳೆಂಬುವಳು ಈತನ ತಾಯಿಯಲ್ಲವೇ? ಯಾಕೋಬ, ಯೋಸೇಫ, ಸೀಮೋನ, ಯೂದ ಎಂಬುವರು ಈತನ ತಮ್ಮಂದಿರಲ್ಲವೇ?
56 Are not all his sisters with us? Where then did this man get all these things?”
ಈತನ ತಂಗಿಯರೆಲ್ಲರೂ ನಮ್ಮೊಂದಿಗೆ ಇದ್ದಾರಲ್ಲವೇ? ಹಾಗಾದರೆ, ಇವೆಲ್ಲವು ಈತನಿಗೆ ಎಲ್ಲಿಂದ ಬಂದವು?” ಎಂದು ಮಾತನಾಡಿಕೊಂಡರು.
57 And they took offense at him. Then Jesus said to them, “A prophet is not without honor except in his hometown and in his own household.”
ಅವರು ಯೇಸುವನ್ನು ತಾತ್ಸಾರ ಮಾಡಿದರು. ಆದರೆ ಯೇಸು ಅವರಿಗೆ, “ಪ್ರವಾದಿಗೆ ತನ್ನ ಸ್ವಂತ ಊರಿನಲ್ಲಿ ಹಾಗೂ ತನ್ನ ಸ್ವಂತ ಮನೆಯಲ್ಲಿ ಮಾತ್ರ ಮರ್ಯಾದೆ ಇರುವುದಿಲ್ಲ,” ಎಂದರು.
58 And he did not do many miracles there because of their unbelief.
ಯೇಸು ಅವರ ಅಪನಂಬಿಕೆಯ ದೆಸೆಯಿಂದ ಅಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲ.

< Matthew 13 >