< Hosea 13 >
1 [Previously], when [the leaders of] Israel spoke, the people trembled; those leaders were highly respected by the Israeli people. But the people sinned greatly by [worshiping] Baal, so now they will be killed [by their enemies].
೧ಪೂರ್ವದಲ್ಲಿ ಎಫ್ರಾಯೀಮು ನುಡಿದ ಮಾತಿಗೆ ಎಲ್ಲರೂ ನಡುಗಿದರು, ಅದು ಇಸ್ರಾಯೇಲಿನಲ್ಲಿ ಉನ್ನತಸ್ಥಿತಿಗೆ ಬಂದಿತ್ತು; ಆದರೆ ಬಾಳ್ ದೇವತೆಯ ವಿಷಯದಲ್ಲಿ ದೋಷಿಯಾದಾಗ ನಾಶವಾಯಿತು.
2 Now they sin more and more; they make idols for themselves [and coat the idols] with their silver. Those idols are statues that are very cleverly made, but those statues are made by [mere] humans. But [the people are told], “Kiss those idols [that resemble a] calf, and offer sacrifices to them!”
೨ಈಗ ಎಫ್ರಾಯೀಮ್ಯರು ಹೆಚ್ಚೆಚ್ಚಾಗಿ ಪಾಪಮಾಡುತ್ತಾರೆ, ತಮ್ಮ ಬೆಳ್ಳಿಯಿಂದ ಸ್ವಬುದ್ಧಿಗೆ ತಕ್ಕ ಎರಕದ ಬೊಂಬೆಗಳನ್ನು ರೂಪಿಸಿಕೊಂಡಿದ್ದಾರೆ; ಅವೆಲ್ಲಾ ಶಿಲ್ಪಿಗಳ ಕೈಕೆಲಸವೇ; ಇಂಥವುಗಳನ್ನು ಮಾತನಾಡಿಸುತ್ತಾರೆ, ಮನುಷ್ಯರಾದ ಪೂಜಾರಿಗಳು ಪಶುವಿನ ಮೂರ್ತಿಗಳನ್ನು ಮುದ್ದಿಸುತ್ತಾರೆ.
3 Therefore, those people will [disappear quickly] like [SIM] the morning mist or the dew that lies [on the ground] early [in the morning]; [they will disappear] like [SIM] chaff that is blown away from where [the wheat] is threshed, like [SIM] smoke that goes out of a chimney.
೩ಹೀಗಿರಲು ಅವರು ಪ್ರಾತಃಕಾಲದ ಮೋಡದ ಹಾಗೆ, ಬೇಗನೆ ಮಾಯವಾಗುವ ಇಬ್ಬನಿಯಂತೆಯೂ, ಬಿರುಗಾಳಿಯು ಕಣದಿಂದ ಬಡಿದುಕೊಂಡುಹೋಗುವ ಹೊಟ್ಟಿನ ಹಾಗೂ, ಚಿಮಿಣಿಯಿಂದ ಹೊರಡುವ ಹೊಗೆಯೋಪಾದಿಯಲ್ಲಿಯೂ ಇರುವರು.
4 But [Yahweh says to his people], “I am Yahweh, your God, [the one who brought your ancestors] out of Egypt. You must believe that only I am God and that there is no other God, and that there is no one else who can save you!
೪ನಾನಾದರೋ ನೀನು ಐಗುಪ್ತ ದೇಶದಲ್ಲಿದ್ದ ಕಾಲದಿಂದ ಯೆಹೋವನೆಂಬ ನಿನ್ನ ದೇವರಾಗಿದ್ದೇನೆ; ನನ್ನ ಹೊರತು ಯಾವ ದೇವರೂ ನಿನಗೆ ಗೊತ್ತಿಲ್ಲ, ನನ್ನ ಹೊರತು ಯಾವ ರಕ್ಷಕನೂ ಇಲ್ಲ.
5 I took care of your [ancestors when they were] in the desert, where it was extremely [hot and] dry.
೫ಅರಣ್ಯದಲ್ಲಿ, ಘೋರ ಮರುಭೂಮಿಯಲ್ಲಿ ನಿನ್ನನ್ನು ಲಕ್ಷಿಸಿದವನು ನಾನೇ.
6 When I provided food for them, their [stomachs] were full, and they were satisfied. But then they became proud and they forgot [about] me, [and you are like your ancestors]!
೬ಆಹಾರವು ನಿನ್ನವರಿಗೆ ಸಿಕ್ಕಿದಾಗ ಹೊಟ್ಟೆತುಂಬಿಸಿಕೊಂಡರು; ಹೊಟ್ಟೆ ತುಂಬಿದಾಗ ಅವರ ಮನಸ್ಸು ಉಬ್ಬಿಕೊಂಡಿತು; ಇದರಿಂದ ನನ್ನನ್ನು ಮರೆತುಬಿಟ್ಟರು.
7 So I will attack you like [SIM] a lion [attacks other animals]; I will be like [SIM] a leopard that waits beside the road [to attack another animal].
೭ಆದಕಾರಣ ನಾನು ಅವರ ಪಾಲಿಗೆ ಸಿಂಹ; ಚಿರತೆಯ ಹಾಗೆ ದಾರಿಯ ಮಗ್ಗುಲಲ್ಲಿ ಹೊಂಚುಹಾಕುವೆನು.
8 Like [SIM] a female bear attacks anyone that steals her cubs, I will attack you Israelis and rip you open. I will completely destroy you like [SIM] lions or [other] wild animals tear apart the animals that they catch and devour them.
೮ಮರಿಗಳನ್ನು ಕಳಕೊಂಡ ಕರಡಿಯಂತೆ ಅವರಿಗೆ ಎದುರು ಬಿದ್ದು ಅವರ ಎದೆಯನ್ನು ಸೀಳಿಬಿಡುವೆನು; ಅಲ್ಲೇ ಮೃಗರಾಜನಂತೆ ಅವರನ್ನು ನುಂಗುವೆನು; ಭೂಜಂತುಗಳು ಅವರನ್ನು ಹರಿದುಬಿಡುವವು.
9 [You people of] Israel, you will be destroyed because you oppose me, the only one who (can help/helps) you.
೯ಇಸ್ರಾಯೇಲೇ, ನಾನು ನಿನ್ನನ್ನು ನಾಶಮಾಡುವೆನು, ಯಾರು ನಿನ್ನನ್ನು ರಕ್ಷಿಸುವರು?
10 You have a king; (why is he [unable to save you]?/but he is [unable to save you].) [RHQ] You have [RHQ] rulers in all your towns, but they are not helping you, [either]. Your [ancestors] said, ‘Appoint for us a king and [other] leaders [to rule over us] [like the other nations have]!’
೧೦ಈಗ ನಿನ್ನ ಅರಸನು ಎಲ್ಲಿ? ನಿನ್ನ ಪಟ್ಟಣಗಳಲ್ಲೆಲ್ಲಾ ನಿನ್ನವರನ್ನು ಉದ್ಧರಿಸುವನೋ? ನನಗೆ ರಾಜನನ್ನೂ ರಾಜ್ಯಾಧಿಕಾರಿಗಳನ್ನೂ ದಯಪಾಲಿಸು ಎಂದು ನನ್ನನ್ನು ಕೇಳಿಕೊಂಡಿಯಷ್ಟೆ; ನಿನ್ನನ್ನು ರಕ್ಷಿಸಬಲ್ಲ ನಗರಪಾಲಕರು ಎಲ್ಲಿ?
11 I was angry with them [for requesting that], but I appointed a king [to rule over] them. But [later] I became very angry with them [again], so I took their king away.
೧೧ನಾನು ಕೋಪಗೊಂಡು ರಾಜರನ್ನು ಕೊಟ್ಟಿದ್ದೇನೆ; ಕೋಪೋದ್ರೇಕನಾಗಿ ಅವರನ್ನು ತೆಗೆದು ಹಾಕಿದ್ದೇನೆ.
12 [I have written on a scroll] a record of the sins that have been committed by you people of Israel, and I have stored away that record.
೧೨ಎಫ್ರಾಯೀಮಿನ ಅಧರ್ಮವು ಗಂಟುಕಟ್ಟಿದೆ, ಅದರ ಪಾಪವು ಭದ್ರಪಡಿಸಿದೆ.
13 You people are not wise; and now [you are helpless]. You are like [MET] a woman who is having birth pains but who is unable to give birth to the baby.
೧೩ಅದಕ್ಕೆ ಪ್ರಸವವೇದನೆಯಾಗುತ್ತಾ ಇದೆ; ಅದು ಮಂಕು ಮಗುವಿನಂತಿದೆ; ಈ ಸಮಯವು ಗರ್ಭದ್ವಾರದಲ್ಲಿ ನಿಲ್ಲತಕ್ಕ ಸಮಯವಲ್ಲ.
14 I certainly will not [RHQ] save you from being killed and from going to the place where the dead people are. I will [RHQ] cause you to be afflicted by plagues and to die and be buried in graves. I will not be merciful [to you]. (Sheol )
೧೪ನಾನು ಅದನ್ನು ಪಾತಾಳದ ಅಧಿಕಾರದಿಂದ ಬಿಡಿಸಲೋ? ಮರಣದಿಂದ ಉದ್ಧರಿಸಲೋ? ಮರಣವೇ, ನಿನ್ನ ಉಪದ್ರವಗಳಲ್ಲಿ? ಪಾತಾಳವೇ, ನೀನು ಮಾಡುವ ನಾಶನವೆಲ್ಲಿ? ಕನಿಕರವು ನನಗೆ ಕಾಣಿಸದು. (Sheol )
15 Even if you people of Israel prosper more than the nearby nations do, [the army of Assyria] will come [like] [MET] an east wind that blows from the desert; the springs and wells in Israel will become dry; and [your enemies] will take away all your valuable possessions.
೧೫ಎಫ್ರಾಯೀಮು ತನ್ನ ಸಹೋದರರಲ್ಲಿ ಫಲಸಮೃದ್ಧವಾಗಿದ್ದರೂ, ಕಾಡಿನಿಂದ ಯೆಹೋವನು ಬೀಸಮಾಡುವ ಮೂಡಣ ಗಾಳಿಯು ಬರಲು ಅದರ ಬುಗ್ಗೆಯು ಬತ್ತುವುದು, ಅದರ ಒರತೆಯು ಒಣಗುವುದು. ಶತ್ರುವು ಅವರ ಪ್ರಿಯವಸ್ತುಗಳ ನಿಧಿಯನ್ನು ಸೂರೆಮಾಡುವನು.
16 [You people of] Samaria must be punished because you have rebelled against [me], your God. You will be killed by [your enemies’] swords; your little children will be [killed by being] dashed/thrown to the ground; the [bellies of] women [among you] will be ripped open.”
೧೬ಸಮಾರ್ಯವು ತನ್ನ ದೇವರಿಗೆ ತಿರುಗಿಬಿದ್ದುದರಿಂದ ತನ್ನ ದೋಷಫಲವನ್ನು ಅನುಭವಿಸಲೇ ಬೇಕು; ಅದರ ಜನರು ಖಡ್ಗದಿಂದ ಹತರಾಗುವರು; ವೈರಿಗಳು ಅಲ್ಲಿನ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳುವರು.