< Psalms 42 >
1 Deer pant, desiring to drink water from a stream [when there is a drought] (OR, [when they are being pursued by hunters].) In the same way [SIM], God, I need you very much.
೧ದೇಶಾಂತರದಲ್ಲಿರುವ ಭಕ್ತನು ದೇವದರ್ಶನಕ್ಕಾಗಿ ಹಂಬಲಿಸುವುದು. ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಪದ್ಯ. ದೇವರೇ, ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಹೇಗೋ, ಹಾಗೆಯೇ ನನ್ನ ಮನಸ್ಸು ನಿನ್ನನ್ನು ಬಯಸುತ್ತದೆ.
2 I desire to have fellowship with [MET] you, the all-powerful God. [I wonder], “When will I be able to go [back to the temple in Israel] and worship in your presence again?”
೨ನನ್ನ ಮನಸ್ಸು ದೇವರಿಗಾಗಿ, ಚೈತನ್ಯಸ್ವರೂಪನಾದ ದೇವರಿಗಾಗಿ ಹಾರೈಸುತ್ತದೆ; ನಾನು ಯಾವಾಗ ಹೋಗಿ ದೇವರ ಸನ್ನಿಧಿಯಲ್ಲಿ ಸೇರುವೆನೋ?
3 Every day and every night I cry; [it is as though] the only thing I have to drink is my tears; and while I do that, my enemies are continually asking me, “Why does your god not [help you]?”
೩“ನಿನ್ನ ದೇವರು ಎಲ್ಲಿ?” ಎಂದು ಜನರು ಯಾವಾಗಲೂ ನನ್ನನ್ನು ಪರಿಹಾಸ್ಯ ಮಾಡುವುದರಿಂದ, ಹಗಲಿರುಳು ನನಗೆ ಕಣ್ಣೀರೇ ಆಹಾರವಾಯಿತು.
4 I am very distressed [IDM] as I remember when I went with the crowd of people to the temple [in Jerusalem], leading them as we walked along; we were all shouting joyfully and singing to thank God [for what he had done]; we were a large group who were celebrating.
೪ನಾನು ಭಜನೋತ್ಸವದಲ್ಲಿ ಸೇರಿ, ಜನಸಮೂಹದೊಡನೆ ಹರ್ಷಧ್ವನಿಮಾಡುತ್ತಾ, ಸ್ತೋತ್ರಪದಗಳನ್ನು ಹಾಡುತ್ತಾ, ದೇವಾಲಯಕ್ಕೆ ಹೋಗುತ್ತಿದ್ದದ್ದನ್ನೇ ನೆನಪಿಗೆ ತಂದುಕೊಂಡು, ನನ್ನೊಳಗೆ ನಾನೇ ಹಂಬಲಿಸುತ್ತಿರುವೆನು.
5 So [I say to] myself, “(Why am I sad and discouraged?/I should not be sad and discouraged!) [RHQ] I confidently expect God [to help me], and again I will praise him, my God, the one who saves me.”
೫ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ ದೇವರೂ ಆಗಿದ್ದಾನೆ. ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.
6 [But now, Yahweh], I am very discouraged [IDM], so I think about you, even from where the Jordan [River] gushes out from the bottom of Hermon [Mountain] and from Mizar Mountain.
೬ನನ್ನ ದೇವರೇ, ನನ್ನ ಪ್ರಾಣವು ಕುಗ್ಗಿಹೋಗಿದೆ; ಆದುದರಿಂದ ಯೊರ್ದನ್ ಹೊಳೆಯ ದೇಶ, ಹೆರ್ಮೋನ್ ಪರ್ವತ, ಮಿಸಾರ್ ಬೆಟ್ಟ ಇವುಗಳಲ್ಲಿರುವವನಾಗಿ ನಿನ್ನನ್ನು ಸ್ಮರಿಸುತ್ತೇನೆ.
7 But here, the great sorrow that I feel is like water that you send down [MET]; [it is like] a waterfall that tumbles down and floods over me.
೭ನಿನ್ನ ಜಲಪಾತಗಳಿಂದ ಉಂಟಾಗುವ ಮಹಾಘೋಷವು ಒಂದು ಪ್ರವಾಹವು ಮತ್ತೊಂದು ಪ್ರವಾಹವನ್ನು ಕರೆಯುತ್ತದೋ ಎಂಬಂತಿರುವುದು. ಹಾಗೆಯೇ ನೀನು ಅಲ್ಲಕಲ್ಲೋಲವಾದ ದುಃಖ ಪ್ರವಾಹದ ತೆರೆಗಳನ್ನು ನನ್ನ ತಲೆಯ ಮೇಲಿಂದ ದಾಟಿಸಿದಿಯಲ್ಲಾ.
8 Yahweh shows me each day that he faithfully loves me, and each night I sing to him and pray to him, the God who causes me to live.
೮ಯೆಹೋವನು ಹಗಲಿನಲ್ಲಿ ತನ್ನ ಪ್ರೀತಿಯನ್ನು ನನಗೆ ಅನುಗ್ರಹಿಸುವನು; ರಾತ್ರಿ ವೇಳೆಯಲ್ಲಿಯೂ ಆತನ ಕೀರ್ತನೆ ನನ್ನಲ್ಲಿರುವುದು. ನನ್ನ ಜೀವಾಧಾರಕನಾದ ದೇವರನ್ನು ಪ್ರಾರ್ಥಿಸುವೆನು.
9 I say to God, [who is like] an [overhanging] rock [under which I can hide] [MET], “It seems that you have forgotten me. I (mourn/cry) constantly because my enemies act cruelly toward me” [RHQ].
೯ನಾನು ನನ್ನ ಶರಣನಿಗೆ, “ದೇವರೇ, ಏಕೆ ನನ್ನನ್ನು ಮರೆತುಬಿಟ್ಟಿದ್ದಿ? ನಾನು ಏಕೆ ಶತ್ರುಬಾಧೆಯಿಂದ ದುಃಖಿಸುತ್ತಾ ವಿಕಾರಿಯಾಗಿ ಅಲೆಯಬೇಕು?” ಎಂದು ಮೊರೆಯಿಡುವೆನು.
10 They make fun of me constantly; they continually ask, “Why does your god not help you?” [RHQ] And when they insult me [like that], [it is like] wounds that I feel even in my bones.
೧೦ನನ್ನ ವಿರೋಧಿಗಳು, “ನಿನ್ನ ದೇವರು ಎಲ್ಲಿ?” ಎಂದು ಯಾವಾಗಲೂ ನನ್ನನ್ನು ಪರಿಹಾಸ್ಯ ಮಾಡುವುದರಿಂದ ನನ್ನ ಎಲುಬುಗಳೆಲ್ಲಾ ಮುರಿದ ಹಾಗಿವೆ.
11 But [I think, ] “(Why am I sad and discouraged?/I should not be sad and discouraged!) [RHQ] I will confidently expect God [to help me], and I will praise him again, my God, the one who saves me.”
೧೧ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ, ದೇವರೂ ಆಗಿದ್ದಾನೆ; ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.