< Hebrews 11 >
1 Fayth is a sure confidence of thynges which are hoped for and a certayntie of thynges which are not sene.
೧ನಂಬಿಕೆಯೋ ನಾವು ನಿರೀಕ್ಷಿಸುವಂಥವುಗಳ ಭರವಸೆಯೂ, ಇನ್ನೂ ಕಣ್ಣಿಗೆ ಕಾಣದವುಗಳ ಮೇಲಿನ ನಿಶ್ಚಯವೂ ಆಗಿದೆ.
2 By it ye elders were well reported of.
೨ನಮ್ಮ ಹಿರಿಯರು ತಮ್ಮ ನಂಬಿಕೆಯಿಂದಲೇ ದೈವಸಮ್ಮತಿಯನ್ನು ಪಡೆದರು.
3 Thorow fayth we vnderstonde that the worlde was ordeyned by the worde of god: and that thynges which are sene were made of thynges which are not sene. (aiōn )
೩ವಿಶ್ವವು ದೇವರ ಮಾತಿನಿಂದಲೇ ನಿರ್ಮಿತವಾಯಿತೆಂದು ನಾವು ನಂಬಿಕೆಯಿಂದಲೇ ತಿಳಿದುಕೊಂಡಿದ್ದೇವೆ. ಈ ಕಾರಣದಿಂದ ಕಾಣಿಸುವ ಈ ಜಗತ್ತು ದೃಶ್ಯವಸ್ತುಗಳಿಂದ ಉಂಟಾಗಲಿಲ್ಲವೆಂದು ಗ್ರಹಿಸುತ್ತೇವೆ. (aiōn )
4 By fayth Abell offered vnto god a more plenteous sacrifice then Cayn: by which he obteyned witnes that he was righteous god testifyinge of his gyftes: by which also he beynge deed yet speaketh.
೪ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಶ್ರೇಷ್ಠ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಇದರ ಮೂಲಕ ಅವನು ನೀತಿವಂತನೆಂದು ಸಾಕ್ಷಿ ಹೊಂದಿದನು. ದೇವರು ಅವನ ಕಾಣಿಕೆಗಳನ್ನು ಕುರಿತು ಪ್ರಶಂಸಿಸಿದನು. ಅವನು ಸತ್ತುಹೋಗಿದ್ದರೂ, ಅವನ ನಂಬಿಕೆಯ ಮೂಲಕ ಇನ್ನೂ ಮಾತನಾಡುವವನಾಗಿದ್ದಾನೆ.
5 By fayth was Enoch traslated yt he shuld not se deeth: nether was he founde: for God had taken him awaye. Before he was taken awaye he was reported of that he had pleased God:
೫ನಂಬಿಕೆಯಿಂದಲೇ ಹನೋಕನು ಮರಣವನ್ನು ಅನುಭವಿಸದೇ ಒಯ್ಯಲ್ಪಟ್ಟನು. ದೇವರು ಅವನನ್ನು ತೆಗೆದುಕೊಂಡು ಹೋದದ್ದರಿಂದ ಅವನು ಯಾರಿಗೂ ಕಾಣಿಸಿಗಲಿಲ್ಲ. ಅವನು ಒಯ್ಯಲ್ಪಡುವುದಕ್ಕಿಂತ ಮೊದಲು ದೇವರನ್ನು ಮೆಚ್ಚಿಸುವವನಾಗಿದ್ದನೆಂದು ಸಾಕ್ಷಿ ಹೊಂದಿದನು.
6 but with out fayth it is vnpossible to please him. For he that commeth to God must beleve that God is and that he is a rewarder of them that seke him.
೬ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ ಮತ್ತು ತನ್ನನ್ನು ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬಬೇಕು.
7 By fayth Noe honored God after that he was warned of thinges which were not sene and prepared the arcke to the savinge of his houssholde thorowe the which arcke he condempned the worlde and became heyre of the rightewesnes which commeth by fayth.
೭ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ದೈವೋಕ್ತಿಯನ್ನು ಹೊಂದಿ, ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ನಂಬಿಕೆಯಿಂದಲೇ ಅವನು ಲೋಕದವರು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡನು. ಆದುದ್ದರಿಂದ ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.
8 By fayth Abraha whe he was called obeyed to goo out into a place which he shuld afterwarde receave to inheritaunce and he wet out not knowynge whether he shuld goo.
೮ನಂಬಿಕೆಯಿಂದಲೇ ಅಬ್ರಹಾಮನು ಕರೆಯಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟು ಹೋದನು. ತಾನು ಹೋಗುವುದು ಎಲ್ಲಿಗೆ ಎಂದು ತಿಳಿಯದೆ ಹೊರಟನು.
9 By fayth he removed into the londe yt was promysed him as into a straunge countre and dwelt in tabernacles: and so dyd Isaac and Iacob heyres with him of the same promes.
೯ನಂಬಿಕೆಯಿಂದಲೇ ಅವನು ವಾಗ್ದಾನದ ದೇಶಕ್ಕೆ ಬಂದಾಗ, ಅಲ್ಲಿ ಅನ್ಯ ದೇಶದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿ ಬದುಕಿದನು. ಅದೇ ವಾಗ್ದಾನಕ್ಕೆ ಸಹಭಾಧ್ಯರಾಗಿದ್ದ ಇಸಾಕನೂ, ಯಾಕೋಬನೂ ಅವನಂತೆಯೇ ಗುಡಾರಗಳಲ್ಲಿ ವಾಸಿಸಿದರು.
10 For he loked for a citie havinge a foundacio whose bylder and maker is God.
೧೦ಯಾಕೆಂದರೆ ಅವನು ಶಾಶ್ವತವಾದ ಅಸ್ತಿವಾರಗಳುಳ್ಳ ಪಟ್ಟಣವನ್ನು ಅಂದರೆ ದೇವರು ಸಂಕಲ್ಪಿಸಿ ನಿರ್ಮಿಸಿದ ಪಟ್ಟಣವನ್ನು ಎದುರುನೋಡುತ್ತಿದ್ದನು.
11 Thorow fayth Sara also receaved stregth to be with chylde and was delivered of a chylde when she was past age because she iudged him faythfull which had promysed.
೧೧ಇದಲ್ಲದೆ ಸಾರಳು ವಾಗ್ದಾನ ಮಾಡಿದಾತನನ್ನು ನಂಬತಕ್ಕವನೆಂದೆಣಿಸಿ ತಾನು ಪ್ರಾಯ ಮೀರಿದವಳಾಗಿದ್ದರೂ ನಂಬಿಕೆಯಿಂದಲೇ ಗರ್ಭವತಿಯಾಗುವುದಕ್ಕೆ ಶಕ್ತಿಯನ್ನು ಹೊಂದಿದಳು.
12 And therfore spronge therof one (and of one which was as good as deed) so many in multitude as the starres of ye skye and as the sond of the see shore which is innumerable.
೧೨ಆದುದರಿಂದ ಮೃತಪ್ರಾಯನಾಗಿದ್ದ ಒಬ್ಬನಿಂದ ಆಕಾಶದ ನಕ್ಷತ್ರಗಳಂತೆಯೂ ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾದ ಮಕ್ಕಳು ಹುಟ್ಟಿದರು.
13 And they all dyed in fayth and receaved not the promyses: but sawe them a farre of and beleved them and saluted them: and confessed that they were straungers and pilgrems on the erthe.
೧೩ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದಲಿಲ್ಲ. ಆದರೂ ಅವುಗಳನ್ನು ದೂರದಿಂದ ನೋಡಿ ಮತ್ತು ಉಲ್ಲಾಸದೊಡನೆ ಸ್ವೀಕರಿಸಿ ನಂಬಿಕೆಯುಳ್ಳವರಾಗಿ ಮೃತರಾದರು. ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿಗಳು ಆಗಿದ್ದೆವೆಂದು ಒಪ್ಪಿಕೊಂಡರು.
14 They that saye soche thinges declare that they seke a coutre.
೧೪ಇಂಥ ಮಾತುಗಳನ್ನಾಡುವವರು ತಾವು ಸ್ವದೇಶವನ್ನು ಹುಡುಕುವವರಾಗಿದ್ದರೆಂಬುದನ್ನು ವ್ಯಕ್ತಪಡಿಸುತ್ತದೆ.
15 Also yf they had bene myndfull of that countre from whence they came oute they had leasure to have returned agayne.
೧೫ತಾವು ಬಿಟ್ಟು ಬಂದ ದೇಶದ ಮೇಲೆ ಮನಸ್ಸಿಟ್ಟವರಾಗಿದ್ದರೆ ಅಲ್ಲಿಗೆ ಹಿಂದಿರುಗಿ ಹೋಗುವ ಅವಕಾಶಗಳು ಅವರಿಗಿದ್ದವು.
16 But now they desyre a better that is to saye a hevenlye. Wherfore God is not ashamed of them even to be called their God: for he hath prepared for them a citie.
೧೬ಆದರೆ ಅವರು ಪರಲೋಕವೆಂಬ ಉತ್ತಮ ದೇಶವನ್ನು ಹಾರೈಸುವವರು. ಆದ್ದರಿಂದ ದೇವರು ಅವರ ದೇವರೇ ಎನ್ನಿಸಿಕೊಳ್ಳುವುದಕ್ಕೆ ನಾಚಿಕೆಗೊಳ್ಳದೇ, ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ.
17 In fayth Abraham offered vp Isaac whe he was tempted and he offered him beinge his only begotten sonne which had receaved the promyses
೧೭ಅಬ್ರಹಾಮನು ಪರೀಕ್ಷಿಸಲ್ಪಟ್ಟಾಗ ಇಸಾಕನನ್ನು ನಂಬಿಕೆಯಿಂದಲೇ ಸಮರ್ಪಿಸಿದನು. ಆ ವಾಗ್ದಾನಗಳನ್ನು ಹೊಂದಿದ ಅವನು, “ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು” ಎಂದು ದೇವರು ಅವನಿಗೆ ಹೇಳಿದ್ದರೂ ತನ್ನ ಏಕಪುತ್ರನನ್ನು ಅರ್ಪಿಸಿದನು.
18 of who it was sayde in Isaac shall thy seed be called:
೧೮
19 for he cosidered that God was able to rayse vp agayne fro deeth. Wherfore receaved he him for an ensample.
೧೯ನನ್ನ ಮಗನು ಸತ್ತರೂ ದೇವರು ಅವನನ್ನು ಬದುಕಿಸಲು ಸಮರ್ಥನಾಗಿದ್ದಾನೆಂದು ತಿಳಿದುಕೊಂಡಿದ್ದನು. ಮತ್ತು ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಪಡೆದುಕೊಂಡನು.
20 In fayth Isaac blessed Iacob and Esau concerninge thinges to come.
೨೦ನಂಬಿಕೆಯಿಂದಲೇ ಇಸಾಕನು ಯಾಕೋಬನನ್ನು ಮತ್ತು ಏಸಾವನನ್ನು ಆಶೀರ್ವದಿಸಿದಾಗ ಮುಂದೆ ಸಂಭವಿಸಬಹುದಾದ ವಿಷಯಗಳನ್ನು ಸೂಚಿಸಿದನು.
21 By fayth Iacob when he was a dyinge blessed both the sonnes of Ioseph and bowed him selfe towarde the toppe of his cepter.
೨೧ಯಾಕೋಬನು ತಾನು ಮರಣ ಹೊಂದುವ ಸಮಯದಲ್ಲಿ ನಂಬಿಕೆಯಿಂದಲೇ ಯೋಸೇಫನ ಮಕ್ಕಳಿಬ್ಬರನ್ನು ಆಶೀರ್ವದಿಸಿದನು. ತನ್ನ ಕೋಲಿನ ಮೇಲೆ ಒರಗಿಕೊಂಡು ದೇವರನ್ನು ಆರಾಧಿಸಿದನು.
22 By fayth Ioseph when he dyed remebred the departinge of the chyldren of Israel and gave commaundement of his bones.
೨೨ಯೋಸೇಫನು ತನ್ನ ಮರಣ ಸಮಯದಲ್ಲಿ ಇಸ್ರಾಯೇಲ್ಯರು ಐಗುಪ್ತದೇಶದಿಂದ ಹೊರಡುವುದನ್ನು ಕುರಿತು ನಂಬಿಕೆಯಿಂದಲೇ ಮಾತನಾಡಿ ತನ್ನ ಎಲುಬುಗಳನ್ನು ತೆಗೆದುಕೊಂಡು ಹೋಗುವ ವಿಷಯದಲ್ಲಿ ಅಪ್ಪಣೆ ಕೊಟ್ಟನು.
23 By fayth Moses when he was borne was hid thre monethes of his father and mother be cause they sawe he was a proper chylde: nether feared they the kynges commaundemet.
೨೩ಮೋಶೆ ಹುಟ್ಟಿದಾಗ ಅವನ ತಂದೆತಾಯಿಗಳು ಕೂಸು ಸುಂದರವಾಗಿದೆ ಎಂದು ನೋಡಿ ಅರಸನ ಅಪ್ಪಣೆಗೆ ಭಯಪಡದೇ ನಂಬಿಕೆಯಿಂದಲೇ ಅವನನ್ನು ಮೂರು ತಿಂಗಳು ಬಚ್ಚಿಟ್ಟರು.
24 By fayth Moses when he was great refused to be called ye sonne of Pharaos doughter
೨೪ನಂಬಿಕೆಯಿಂದಲೇ ಮೋಶೆಯು ದೊಡ್ಡವನಾದ ಮೇಲೆ ಫರೋಹನ ಪುತ್ರಿಯ ಮಗನೆನಿಸಿಕೊಳ್ಳುವುದು ಬೇಡವೆಂದುಕೊಂಡನು.
25 and chose rather to suffre adversitie wt the people of God then to enioye the pleasurs of synne for a ceason
೨೫ಸ್ವಲ್ಪ ಕಾಲದಲ್ಲಿ ಗತಿಸಿ ಹೋಗುವ ಪಾಪಭೋಗಗಳನ್ನು ಅನುಭವಿಸುವುದಕ್ಕಿಂತ, ದೇವಜನರೊಂದಿಗೆ ಕಷ್ಟವನ್ನು ಅನುಭವಿಸುವುದೇ ಮೇಲೆಂದು ತೀರ್ಮಾನಿಸಿಕೊಂಡನು.
26 and estemed the rebuke of Christ greater ryches then the treasure of Egypt. For he had a respect vnto ye rewarde.
೨೬ಐಗುಪ್ತದೇಶದ ಸರ್ವಐಶ್ವರ್ಯಕ್ಕಿಂತಲೂ, ಕ್ರಿಸ್ತನ ನಿಮಿತ್ತವಾಗಿ ಉಂಟಾಗುವ ನಿಂದೆಯೇ ಶ್ರೇಷ್ಠ ಭಾಗ್ಯವೆಂದೆಣಿಸಿಕೊಂಡನು. ಏಕೆಂದರೆ ಮುಂಬರುವ ಪ್ರತಿಫಲದ ಮೇಲೆ ಕಣ್ಣಿಟ್ಟಿದ್ದನು.
27 By fayth he forsoke Egypt and feared not the fearcenes of the kynge. For he endured even as he had sene him which is invisible.
೨೭ನಂಬಿಕೆಯಿಂದಲೇ ಅವನು ಅರಸನ ರೌದ್ರಕ್ಕೆ ಭಯಪಡದೇ ಐಗುಪ್ತದೇಶವನ್ನು ಬಿಟ್ಟುಹೋದನು. ಏಕೆಂದರೆ ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನಂತೆ ದೃಢಚಿತ್ತನಾಗಿದ್ದನು.
28 Thorow fayth he ordeyned the ester lambe and the effusion of bloud lest he that destroyed the fyrst borne shuld touche them.
೨೮ಚೊಚ್ಚಲ ಮಕ್ಕಳನ್ನು ಸಂಹರಿಸುವವನು, ಇಸ್ರಾಯೇಲ್ಯರ ಚೊಚ್ಚಲ ಮಕ್ಕಳನ್ನು ಮುಟ್ಟದಂತೆ, ನಂಬಿಕೆಯಿಂದಲೇ ಅವನು ಪಸ್ಕವನ್ನೂ ರಕ್ತಪೋಕ್ಷಣಾಚಾರವನ್ನೂ ಆಚರಿಸಿದನು.
29 By fayth they passed thorow the reed see as by drye londe which when the Egypcians had assayed to do they were drouned.
೨೯ಇಸ್ರಾಯೇಲ್ಯರು ನಂಬಿಕೆಯಿಂದಲೇ ಕೆಂಪು ಸಮುದ್ರವನ್ನು ಒಣ ಭೂಮಿಯನ್ನು ದಾಟುವಂತೆ ದಾಟಿದರು. ಐಗುಪ್ತದೇಶದವರು ಅದನ್ನು ದಾಟುವುದಕ್ಕೆ ಪ್ರಯತ್ನಿಸಿದಾಗ ಮುಳುಗಿ ಹೋದರು.
30 By fayth the walles of Ierico fell doune after they were copased about seven dayes.
೩೦ನಂಬಿಕೆಯಿಂದಲೇ ಅವರು ಏಳು ದಿನಗಳ ತನಕ ಯೆರಿಕೋ ಪಟ್ಟಣದ ಗೋಡೆಗಳನ್ನು ಸುತ್ತಿದ ಮೇಲೆ ಅವು ಬಿದ್ದವು.
31 By fayth ye harlot Raab perisshed not with the vnbelevers whe she had receaved the spyes to lodgynge peaseably.
೩೧ನಂಬಿಕೆಯಿಂದಲೇ ರಾಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿಕೊಂಡು, ಅವಿಧೇಯರೊಂದಿಗೆ ನಾಶವಾಗದೆ ಉಳಿದಳು.
32 And what shall I more saye ye tyme wold be to short for me to tell of Gedeo of Barach and of Samson and of Iephthae: also of David and Samuel and of the Prophetes:
೩೨ಇನ್ನೂ ಏನು ಹೇಳಬೇಕು? ಗಿದ್ಯೋನ್, ಬಾರಾಕ ಸಂಸೋನ, ಯೆಪ್ತಾಹ, ದಾವೀದ, ಸಮುವೇಲ ಮತ್ತು ಪ್ರವಾದಿಗಳ ವಿಷಯವಾಗಿ ಹೇಳಬೇಕಾದರೆ ನನಗೆ ಸಮಯ ಸಾಲದು.
33 which thorowe fayth subdued kyngdomes wrought righteousnes obteyned the promyses stopped the mouthes of lyons
೩೩ನಂಬಿಕೆಯ ಮೂಲಕ ಅವರು ರಾಜ್ಯಗಳನ್ನೂ ಸ್ವಾಧೀನ ಮಾಡಿಕೊಂಡರು, ನೀತಿಯನ್ನು ಸ್ಥಾಪಿಸಿದರು, ವಾಗ್ದಾನಗಳನ್ನು ಪಡೆದುಕೊಂಡರು, ಸಿಂಹಗಳ ಬಾಯಿ ಕಟ್ಟಿದರು.,
34 queched the violence of fyre escaped the edge of the swearde of weake were made stroge waxed valient in fight turned to flyght the armyes of the alientes.
೩೪ಬೆಂಕಿಯ ಶಕ್ತಿಯನ್ನು ನಂದಿಸಿದರು, ಕತ್ತಿಯ ಬಾಯಿಂದ ತಪ್ಪಿಸಿಕೊಂಡರು, ದುರ್ಬಲರಾಗಿದ್ದು ಬಲಿಷ್ಠರಾದರು, ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು, ಪರದೇಶದವರ ಸೈನ್ಯಗಳನ್ನು ಓಡಿಸಿಬಿಟ್ಟರು.
35 And the wemen receaved their deed raysed to lyfe agayne. Other were racked and wolde not be delyvered that they myght receave a better resurreccion.
೩೫ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರುಗಿ ಪಡೆದುಕೊಂಡರು. ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವುದಕ್ಕೋಸ್ಕರ, ಬಿಡುಗಡೆಯನ್ನು ತಿರಸ್ಕರಿಸಿದರು.
36 Other tasted of mockynges and scourginginges morover of bondes and presonmet:
೩೬ಬೇರೆ ಕೆಲವರು ಅಪಹಾಸ್ಯ, ಕೊರಡೆಯ ಪೆಟ್ಟು, ಬೇಡಿ, ಸೆರೆಮನೆವಾಸಗಳನ್ನು ಅನುಭವಿಸಿದರು.
37 were stoned were hewen a sunder were tepted were slayne with sweardes walked vppe and doune in shepes skynnes in gotes skynnes in nede tribulacio and vexacio
೩೭ಕೆಲವರನ್ನು ಜನರು ಕಲ್ಲೆಸೆದು ಕೊಂದರು, ಕೆಲವರನ್ನು ಗರಗಸದಿಂದ ಎರಡು ಭಾಗವಾಗಿ ಕೊಯ್ದು ಕೊಂದರು, ಕೆಲವರನ್ನು ಕತ್ತಿಯಿಂದ ಕೊಂದರು. ಕೆಲವರು ಕೊರತೆ, ಹಿಂಸೆ, ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು.
38 which ye worlde was not worthy of: they wadred in wildernes in moutaynes in dennes and caves of the erth.
೩೮ಇಂಥವರಿಗೆ ಈ ಲೋಕವು ಯೋಗ್ಯಸ್ಥಳವಾಗಿರಲಿಲ್ಲ. ಅವರು ತಮ್ಮ ದೇಶದ ಮರುಭೂಮಿ, ಬೆಟ್ಟ, ಗವಿ, ಕುಣಿಗಳಲ್ಲಿ ಅಲೆಯುವವರಾಗಿದ್ದರು.
39 And these all thorow fayth obtayned good reporte and receaved not the promes
೩೯ಇವರೆಲ್ಲರು ತಮ್ಮ ನಂಬಿಕೆಯ ಮೂಲಕ ಒಳ್ಳೆ ಸಾಕ್ಷಿಯನ್ನು ಹೊಂದಿದವರಾಗಿದ್ದರೂ, ವಾಗ್ದಾನದ ಫಲವನ್ನು ಹೊಂದಲಿಲ್ಲ.
40 God provydinge a better thinge for vs that they with out vs shuld not be made parfecte.
೪೦ದೇವರು ನಮಗೋಸ್ಕರ ಶ್ರೇಷ್ಠವಾದ ಭಾಗ್ಯವನ್ನು ಏರ್ಪಡಿಸಿ, ನಾವಿಲ್ಲದೆ ಅವರು ಪರಿಪೂರ್ಣರಾಗಬಾರದೆಂದು ಸಂಕಲ್ಪಿಸಿದನು.