< John 7 >
1 After that Iesus wet about in Galile and wolde not go about in Iewry for the Iewes sought to kill him.
೧ಈ ಸಂಗತಿಗಳಾದ ಮೇಲೆ ಯೇಸು ಗಲಿಲಾಯದಲ್ಲಿ ಸಂಚಾರ ಮಾಡಿದನು. ಯೆಹೂದ್ಯರು ಆತನನ್ನು ಕೊಲ್ಲುವ ಪ್ರಯತ್ನದಲ್ಲಿದುದ್ದರಿಂದ ಆತನಿಗೆ ಯೂದಾಯದಲ್ಲಿ ಸಂಚರಿಸಲು ಮನಸ್ಸಾಗಲಿಲ್ಲ.
2 The Iewes tabernacle feast was at honde.
೨ಆಗ ಯೆಹೂದ್ಯರ ಗುಡಾರಗಳ ಹಬ್ಬವು ಸಮೀಪವಾಗಿತ್ತು,
3 His brethren therfore sayde vnto him: get ye hence and go into Iewry yt thy disciples maye se thy workes yt thou doest.
೩ಆದುದರಿಂದ ಆತನ ಸಹೋದರರು ಆತನಿಗೆ “ನೀನು ಮಾಡುವ ಕಾರ್ಯಗಳನ್ನು ನಿನ್ನ ಶಿಷ್ಯರೂ ಸಹ ನೋಡುವಂತೆ, ಇಲ್ಲಿಂದ ಹೊರಟು, ಯೂದಾಯಕ್ಕೆ ಹೋಗು.
4 For ther is no man yt doeth eny thing secretly and he him selfe seketh to be knowen. Yf thou do soche thinges shewe thy selfe to the worlde.
೪ಪ್ರಸಿದ್ಧಿಗೆ ಬರಬೇಕೆಂದಿರುವವನು ಯಾರೂ ರಹಸ್ಯವಾಗಿ ಯಾವುದನ್ನೂ ಮಾಡುವುದಿಲ್ಲ. ನೀನು ಇವುಗಳನ್ನು ಮಾಡುವುದರಿಂದ, ಲೋಕಕ್ಕೆ ನಿನ್ನನ್ನು ನೀನೇ ತೋರ್ಪಡಿಸಿಕೋ” ಎಂದು ಹೇಳಿದರು.
5 For as yet his brethre beleved not in him.
೫ಏಕೆಂದರೆ ಆತನ ಸಹೋದರರು ಸಹ ಆತನನ್ನು ನಂಬಲಿಲ್ಲ.
6 Then Iesus sayd vnto them: My tyme is not yet come youre tyme is all waye redy.
೬ಅದಕ್ಕೆ ಯೇಸು ಅವರಿಗೆ, “ನನ್ನ ಸಮಯವು ಇನ್ನೂ ಬಂದಿಲ್ಲ. ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ.
7 The worlde canot hate you. Me it hateth: because I testify of it that the workes of it are evyll.
೭ಲೋಕವು ನಿಮ್ಮನ್ನು ದ್ವೇಷಿಸಲಾರದು, ಆದರೆ ನಾನು ಅದರ ಕ್ರಿಯೆಗಳು ಕೆಟ್ಟವುಗಳೆಂದು ಸಾಕ್ಷಿ ಹೇಳುವುದರಿಂದ, ಅದು ನನ್ನನ್ನು ದ್ವೇಷಿಸುತ್ತದೆ.
8 Go ye vp vnto this feast. I will not go vp yet vnto this feast for my tyme is not yet full come.
೮ನೀವು ಈ ಹಬ್ಬಕ್ಕೆ ಹೋಗಿರಿ, ನನ್ನ ಸಮಯವು ಇನ್ನೂ ಬಾರದಿರುವುದರಿಂದ ನಾನು ಈ ಹಬ್ಬಕ್ಕೆ ಈಗ ಹೋಗುವುದಿಲ್ಲ” ಎಂದು ಹೇಳಿದನು.
9 These wordes he sayde vnto them and abode still in Galile.
೯ಇದನ್ನು ಹೇಳಿದ ಮೇಲೆ ಆತನು ಗಲಿಲಾಯದಲ್ಲಿಯೇ ಉಳಿದುಕೊಂಡನು.
10 But assone as his brethren were goone vp then went he also vp vnto the feast: not openly but as it were prevely.
೧೦ಆದರೆ ಆತನ ಸಹೋದರರು ಹೋದ ಮೇಲೆ ಆತನು ಸಹ ಹಬ್ಬಕ್ಕೆ ಬಹಿರಂಗವಾಗಿ ಹೋಗದೆ, ರಹಸ್ಯವಾಗಿ ಹೋದನು.
11 Then sought him the Iewes at ye feast and sayde: Where is he?
೧೧ಆ ಹಬ್ಬದಲ್ಲಿ ಯೆಹೂದ್ಯರು, “ಆ ಮನುಷ್ಯನು ಎಲ್ಲಿ?” ಎಂದು ಹುಡುಕುತ್ತಿದ್ದರು.
12 And moche murmurynge was ther of him amonge the people. Some sayde: He is good. Wother sayde naye but he deceaveth the people.
೧೨ಜನರು ಗುಂಪುಗಳಲ್ಲಿ ಆತನ ವಿಷಯವಾಗಿ ಗೊಣಗುಟ್ಟುತಿದ್ದರು. ಕೆಲವರು “ಆತನು ಒಳ್ಳೆಯ ಮನುಷ್ಯನು” ಎಂದರು, ಇನ್ನು ಕೆಲವರು “ಇಲ್ಲ ಆತನು ಜನರಿಗೆ ಮೋಸ ಮಾಡುತ್ತಾನೆ” ಎಂದರು.
13 How be it no ma spake openly of him for feare of the Iewes
೧೩ಆದರೂ ಯೆಹೂದ್ಯರ ಭಯದಿಂದ ಯಾರೂ ಆತನ ವಿಷಯದಲ್ಲಿ ಬಹಿರಂಗವಾಗಿ ಮಾತನಾಡಲಿಲ್ಲ.
14 In ye middes of the feast Iesus went vp into the temple and taught.
೧೪ಹಬ್ಬದ ಮಧ್ಯಕಾಲದಲ್ಲಿ ಯೇಸು ದೇವಾಲಯಕ್ಕೆ ಹೋಗಿ ಬೋಧಿಸತೊಡಗಿದನು.
15 And the Iewes marveylled sayinge: How knoweth he ye scriptures seynge yt he never learned?
೧೫ಯೆಹೂದ್ಯರು ಅದಕ್ಕೆ ಆಶ್ಚರ್ಯಪಟ್ಟು, “ಶಾಸ್ತ್ರಭ್ಯಾಸ ಮಾಡದಿರುವ ಈತನಿಗೆ ಶಾಸ್ತ್ರಗಳು ತಿಳಿದಿರುವುದಾದರೂ ಹೇಗೆ?” ಎಂದರು.
16 Iesus answered them and sayde: My doctrine is not myne: but his that sent me.
೧೬ಅದಕ್ಕೆ ಯೇಸು “ನಾನು ಹೇಳುವ ಬೋಧನೆಯು ನನ್ನದಲ್ಲ. ನನ್ನನ್ನು ಕಳುಹಿಸಿದಾತನದೇ.
17 If eny man will do his will he shall knowe of the doctrine whether it be of God or whether I speake of my selfe.
೧೭ಯಾರಿಗಾದರೂ ಆತನ ಚಿತ್ತದಂತೆ ನಡೆಯುವುದಕ್ಕೆ ಮನಸ್ಸಿದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದ್ದದ್ದೋ ಅಥವಾ ನಾನೇ ಮಾತನಾಡುತ್ತೇನೋ ಎಂಬುದು ಗೊತ್ತಾಗುವುದು.
18 He that speaketh of him selfe seketh his awne prayse. But he that seketh his prayse that sent him the same is true and no vnrightewesnes is in him.
೧೮ತನ್ನಷ್ಟಕ್ಕೆ ತಾನೇ ಮಾತನಾಡುವವನು ತನ್ನ ಸ್ವಂತ ಗೌರವ ಹುಡುಕುತ್ತಾನೆ, ಆದರೆ ತನ್ನನ್ನು ಕಳುಹಿಸಿದಾತನ ಗೌರವನ್ನೇ ಹುಡುಕುವ ಮನುಷ್ಯನೇ ಸತ್ಯವಂತನು; ಆತನಲ್ಲಿ ಕೆಟ್ಟತನವಿಲ್ಲ.
19 Dyd not Moses geve you a lawe and yet none of you kepeth ye lawe? Why goo ye aboute to kyll me?
೧೯ಮೋಶೆಯು ನಿಮಗೆ ಧರ್ಮಶಾಸ್ತ್ರವನ್ನು ಕೊಡಲಿಲ್ಲವೇ? ಆದರೂ ನಿಮ್ಮಲ್ಲಿ ಒಬ್ಬನಾದರೂ ಆ ಧರ್ಮಶಾಸ್ತ್ರದಂತೆ ನಡೆಯಲಿಲ್ಲ. ನೀವು ನನ್ನನ್ನು ಕೊಲ್ಲುವುದಕ್ಕೆ ಹುಡುಕುವುದೇಕೆ?” ಎಂದು ಕೇಳಿದನು.
20 The people answered and sayde: thou hast the devyll: who goeth aboute to kyll the?
೨೦ಅದಕ್ಕೆ ಆ ಜನರು, “ನಿನಗೆ ದೆವ್ವ ಹಿಡಿದಿದೆ. ನಿನ್ನನ್ನು ಕೊಲ್ಲುವುದಕ್ಕೆ ಯಾರು ಹುಡುಕುತ್ತಿದ್ದಾರೆ?” ಎಂದರು.
21 Iesus answered and sayde to them: I have done one worke and ye all marvayle.
೨೧ಯೇಸು ಅವರಿಗೆ “ನಾನುಒಂದು ಸೂಚಕ ಕಾರ್ಯವನ್ನು ಮಾಡಿದೆನು, ಅದಕ್ಕೆ ನೀವೆಲ್ಲರೂ ಬೆರಗಾಗಿದ್ದೀರಿ.
22 Moses therfore gave vnto you circumcision: not because it is of Moses but of the fathers. And yet ye on the Saboth daye circumcise a man.
೨೨ಮೋಶೆಯು ನಿಮಗೆ ಸುನ್ನತಿಯೆಂಬ ನಿಯಮವನ್ನು ನೇಮಿಸಿದನು, (ಅದು ಮೋಶೆಯಿಂದ ಬಂದದ್ದೆಂದು ನಾನು ಹೇಳುವುದಿಲ್ಲ, ಮೂಲಪುರುಷರ ಕಾಲದಿಂದ ಬಂದದ್ದು) ಮತ್ತು ಮನುಷ್ಯನಿಗೆ ಸುನ್ನತಿಯನ್ನು ಸಬ್ಬತ್ ದಿನದಲ್ಲಿಯೂ ಮಾಡುತ್ತೀರಿ.
23 If a man on the Saboth daye receave circumcision without breakinge of the lawe of Moses: disdayne ye at me because I have made a man every whit whoale on the saboth daye?
೨೩ಮೋಶೆಯ ಧರ್ಮಶಾಸ್ತ್ರವನ್ನು ಮೀರಬಾರದೆಂದು ಒಬ್ಬನು ಸಬ್ಬತ್ ದಿನದಲ್ಲಿ ಸುನ್ನತಿಯನ್ನು ಮಾಡಿಸಿಕೊಳ್ಳುವುದಾದರೆ, ನಾನು ಸಬ್ಬತ್ ದಿನದಲ್ಲಿ ಒಬ್ಬ ಮನುಷ್ಯನನ್ನು ಸ್ವಸ್ಥಮಾಡಿದ್ದಕ್ಕೆ ನನ್ನ ಮೇಲೆ ನೀವು ಏಕೆ ಕೋಪಗೊಳ್ಳುತ್ತೀರಿ?
24 Iudge not after the vtter aperaunce: but iudge rightewes iudgement.
೨೪ತೋರಿಕೆಗೆ ಅನುಸಾರವಾಗಿ ತೀರ್ಪುಮಾಡಬೇಡಿರಿ. ನ್ಯಾಯಬದ್ಧವಾಗಿ ತೀರ್ಪುನ್ನು ಮಾಡಿರಿ” ಎಂದನು.
25 Then sayd some of them of Ierusalem: Is not this he who they goo aboute to kyll?
೨೫ಆಮೇಲೆ ಯೆರೂಸಲೇಮಿನವರಲ್ಲಿ ಕೆಲವರು “ಅವರು ಕೊಲ್ಲಬೇಕೆಂದು ಹುಡುಕುವುದು ಈತನನ್ನೇ ಅಲ್ಲವೇ?
26 Beholde he speaketh boldly and they saye nothinge to him. Do the rulars knowe in dede that this is very Christ?
೨೬ನೋಡಿರಿ, ಈತನು ಬಹಿರಂಗವಾಗಿ ಮಾತನಾಡುತ್ತಿದ್ದಾನೆ ಮತ್ತು ಅವರು ಆತನಿಗೆ ಏನೂ ಹೇಳುತ್ತಿಲ್ಲ. ಬಹುಶಃ ಈತನೇ ನಿಜವಾದ ಕ್ರಿಸ್ತನೆಂದು ಅಧಿಕಾರಿಗಳು ತಿಳಿದುಕೊಂಡಿದ್ದಾರೋ?
27 How be it we knowe this man whence he is: but when Christ cometh no man shall knowe whence he is.
೨೭ಆದರೆ ಇವನು ಎಲ್ಲಿಂದ ಬಂದವನೆಂದು ನಾವು ಬಲ್ಲೆವು, ಕ್ರಿಸ್ತನು ಬರುವಾಗ ಆತನು ಎಲ್ಲಿಂದ ಬಂದವನೆಂದು ಒಬ್ಬರಿಗೂ ತಿಳಿಯುವುದಿಲ್ಲವೆಂದು ಮಾತನಾಡಿಕೊಳ್ಳುತ್ತಿದ್ದರು.”
28 Then cryed Iesus in ye temple as he taught sayinge: ye knowe me and whence I am ye knowe. And yet I am not come of my selfe but he yt sent me is true whom ye knowe not.
೨೮ಯೇಸುವು ಇದನ್ನು ತಿಳಿದು ದೇವಾಲಯದಲ್ಲಿ ಉಪದೇಶ ಮಾಡುವಾಗ, “ನೀವು ನನ್ನನ್ನು ಬಲ್ಲಿರಿ, ನಾನು ಎಲ್ಲಿಂದ ಬಂದವನೆಂದೂ ನೀವು ಬಲ್ಲಿರಿ, ಆದರೂ ನಾನು ನನ್ನಷ್ಟಕ್ಕೆ ನಾನೇ ಬಂದವನಲ್ಲ. ನನ್ನನ್ನು ಕಳುಹಿಸಿದಾತನು ಸತ್ಯವಂತನು. ನೀವು ಆತನನ್ನು ಅರಿತವರಲ್ಲ.
29 I knowe him: for I am of him and he hath sent me.
೨೯ಆದರೆ ನಾನು ಆತನನ್ನು ಬಲ್ಲೆನು ಏಕೆಂದರೆ, ನಾನು ಆತನ ಕಡೆಯಿಂದ ಬಂದವನು ಮತ್ತು ಆತನೇ ನನ್ನನ್ನು ಕಳುಹಿಸಿದನು” ಎಂದು ಕೂಗಿ ಹೇಳಿದನು.
30 Then they sought to take him: but no ma layde hondes on him because his tyme was not yet come.
೩೦ಇದಕ್ಕಾಗಿ ಆತನನ್ನು ಬಂಧಿಸುವುದಕ್ಕೆ ಪ್ರಯತ್ನಿಸಿದರೂ ಆತನ ಸಮಯ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನ ಮೇಲೆ ಕೈ ಹಾಕಲಿಲ್ಲ.
31 Many of the people beleved on him and sayde: when Christ cometh will he do moo miracles then this man hath done?
೩೧ಜನರಲ್ಲಿ ಅನೇಕರು ಆತನನ್ನು ನಂಬಿ, “ಕ್ರಿಸ್ತನು ಬಂದಾಗ ಈತನು ಮಾಡಿದ್ದಕ್ಕಿಂತ ಹೆಚ್ಚು ಸೂಚಕ ಕಾರ್ಯಗಳನ್ನು ಮಾಡುವನೇನೋ?” ಎಂದು ಹೇಳಿದರು.
32 The pharises hearde that the people murmured suche thinges about him. Wherfore ye pharises and hye prestes sent ministres forthe to take him.
೩೨ಜನರು ಆತನ ವಿಷಯವಾಗಿ ಗೊಣಗುಟ್ಟಿದ ಮಾತುಗಳನ್ನು ಫರಿಸಾಯರು ಕೇಳಿಸಿಕೊಂಡು ಮುಖ್ಯಯಾಜಕರೂ ಮತ್ತು ಫರಿಸಾಯರೂ ಆತನನ್ನು ಬಂಧಿಸಲು ದೇವಾಲಯದ ಕಾವಲುಗಾರರನ್ನು ಕಳುಹಿಸಿದರು.
33 Then sayde Iesus vnto the: Yet am I a lytell whyle with you and then goo I vnto him that sent me.
೩೩ಆಗ ಯೇಸು ಅವರಿಗೆ “ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿದ್ದು ಆಮೇಲೆ ನನ್ನನ್ನು ಕಳುಹಿಸಿದಾತನ ಬಳಿಗೆ ಹೊರಟು ಹೋಗುತ್ತೇನೆ.
34 Ye shall seke me and shall not fynde me: and where I am thyther can ye not come.
೩೪ನೀವು ನನ್ನನ್ನು ಹುಡುಕುವಿರಿ, ಆದರೆ ಕಂಡುಕೊಳ್ಳದೆ ಹೋಗುವಿರಿ. ನಾನು ಇರುವಲ್ಲಿಗೆ ನೀವು ಬರಲಾರಿರಿ” ಎಂದನು.
35 Then sayde the Iewes bitwene the selves: whyther will he goo that we shall not fynde him? Will he goo amonge the gentyls which are scattered all a broade and teache the gentyls?
೩೫ಅದಕ್ಕೆ ಯೆಹೂದ್ಯರು “ಇವನು ನಮಗೆ ಸಿಕ್ಕದ ಹಾಗೆ ಎಲ್ಲಿ ಹೋಗಬೇಕೆಂದಿದ್ದಾನೆ? ಗ್ರೀಕರ ನಡುವೆ ಚದುರಿಕೊಂಡಿರುವ ನಮ್ಮವರ ಬಳಿಗೆ ಹೋಗಿ ಆ ಗ್ರೀಕರಿಗೆ ಬೋಧನೆ ಮಾಡಬೇಕೆಂದಿರುವನೋ?
36 What maner of sayinge is this that he sayde: ye shall seke me and shall not fynde me: and where I am thyther can ye not come?
೩೬‘ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಂಡುಕೊಳ್ಳದೆ ಹೋಗುವಿರಿ ಮತ್ತು ನಾನು ಇರುವಲ್ಲಿಗೆ ನೀವು ಬರಲಾರಿರಿ’ ಎಂದು ಹೇಳಿದ ಮಾತಿನ ಅರ್ಥ ಏನಾಗಿರಬಹುದು?” ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು.
37 In the last daye that great daye of the feaste Iesus stode and cryed sayinge: If eny man thyrst let him come vnto me and drinke.
೩೭ಜಾತ್ರೆಯ ಮಹಾದಿನವಾದ ಕಡೆಯ ದಿನದಲ್ಲಿ ಯೇಸು ನಿಂತುಕೊಂಡು “ಯಾವನಿಗಾದರೂ ನೀರಡಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.
38 He that beleveth on me as sayeth the scripture out of his belly shall flowe ryvers of water of lyfe.
೩೮ಶಾಸ್ತ್ರದಲ್ಲಿ ಹೇಳಿರುವ ಪ್ರಕಾರ ನನ್ನಲ್ಲಿ ಯಾವನು ನಂಬಿಕೆಯಿಡುವನೋ ಅವನೊಳಗಿನಿಂದ ಜೀವಕರವಾದ ನೀರಿನ ಬುಗ್ಗೆಗಳು ಹರಿಯುವವು” ಎಂದು ಕೂಗಿ ಹೇಳಿದನು.
39 This spak he of the sprete which they that beleved on him shuld receave. For the holy goost was not yet there because that Iesus was not yet glorifyed.
೩೯ಆದರೆ ಯೇಸು ತನ್ನನ್ನು ನಂಬುವವರು ಹೊಂದಲಿರುವ ಪವಿತ್ರಾತ್ಮವರವನ್ನು ಕುರಿತು ಹೀಗೆ ಹೇಳಿದನು. ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ ಕಾರಣ ಪವಿತ್ರಾತ್ಮವರವು ಇನ್ನೂ ಕೊಡಲ್ಪಟ್ಟಿರಲಿಲ್ಲ.
40 Many of the people when they hearde this sayinge sayd: of a truth this is a prophet
೪೦ಜನರಲ್ಲಿ ಕೆಲವರು ಆ ಮಾತುಗಳನ್ನು ಕೇಳಿದಾಗ “ನಿಜವಾಗಿಯೂ ಈತನು ಪ್ರವಾದಿಯಾಗಿದ್ದಾನೆ” ಎಂದರು.
41 Other sayde: this is Christ. Some sayde: shall Christ come out of Galile?
೪೧ಕೆಲವರು, “ಈತನು ಕ್ರಿಸ್ತನು” ಎಂದರು, ಆದರೆ ಇನ್ನೂ ಕೆಲವರು “ಕ್ರಿಸ್ತನು ಗಲಿಲಾಯದಿಂದ ಬರುವುದುಂಟೆ?
42 Sayeth not the scripture that Christ shall come of the seed of David: and out of the toune of Bethleem where David was?
೪೨ದಾವೀದನ ಸಂತಾನದಿಂದಲೂ ದಾವೀದನು ಇದ್ದ ಬೇತ್ಲೆಹೇಮೆಂಬ ಗ್ರಾಮದಿಂದಲೂ ಕ್ರಿಸ್ತನು ಬರುವನು ಎಂಬುದಾಗಿ ಪವಿತ್ರ ಗ್ರಂಥವು ಹೇಳುತ್ತದಲ್ಲವೇ?” ಅಂದರು.
43 So was ther dissencion amonge the people aboute him.
೪೩ಹೀಗೆ ಆತನ ನಿಮಿತ್ತವಾಗಿ ಜನರಲ್ಲಿ ಭೇದ ಉಂಟಾಯಿತು.
44 And some of them wolde have taken him: but no man layed hondes on him.
೪೪ಅವರಲ್ಲಿ ಕೆಲವರು ಆತನನ್ನು ಬಂಧಿಸಬೇಕೆಂದಿದ್ದರೂ ಆದರೆ ಯಾರು ಆತನ ಮೇಲೆ ಕೈ ಹಾಕಲಿಲ್ಲ.
45 Then came ye ministres to ye hye prestes and pharises. And they sayde vnto the: why have ye not brought him?
೪೫ಬಳಿಕ ಆ ದೇವಾಲಯದ ಕಾವಲುಗಾರರು, ಮುಖ್ಯಯಾಜಕರ ಮತ್ತು ಫರಿಸಾಯರ ಬಳಿಗೆ ಬಂದಾಗ ಅವರು, “ನೀವು ಏಕೆ ಆತನನ್ನು ಕರೆತರಲಿಲ್ಲ?” ಎಂದು ಅವರನ್ನು ಕೇಳಿದ್ದಕ್ಕೆ,
46 The servautes answered never man spake as this man doeth.
೪೬ಕಾವಲುಗಾರರು “ಈ ಮನುಷ್ಯನು ಮಾತನಾಡುವ ರೀತಿಯಲ್ಲಿ ಯಾರೂ ಎಂದೂ ಮಾತನಾಡಿದ್ದಿಲ್ಲ” ಎಂದು ಉತ್ತರ ಕೊಟ್ಟರು.
47 Then answered the the pharises: are ye also disceaved?
೪೭ಆಗ ಫರಿಸಾಯರು ಅವರಿಗೆ “ನೀವೂ ಸಹ ಆತನ ಮಾತಿಗೆ ಮರುಳಾದೀರಾ?
48 Doth eny of the rulers or of the pharises beleve on him?
೪೮ಹಿರೀಸಭೆಯವರಲ್ಲಾಗಲಿ ಫರಿಸಾಯರಲ್ಲಾಗಲಿ ಯಾರಾದರೂ ಅವನನ್ನು ನಂಬಿದ್ದಾರೋ?
49 But the comen people whiche knowe not ye lawe are cursed.
೪೯ಧರ್ಮಶಾಸ್ತ್ರವನ್ನು ಅರಿಯದ ಈ ಹಿಂಡು ಶಾಪಗ್ರಸ್ತರೇ” ಎಂದು ಹೇಳಿದರು.
50 Nicodemus sayde vnto them: He that came to Iesus by nyght and was one of them.
೫೦ಮೊದಲು ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಅವರಲ್ಲಿ ಒಬ್ಬನಾಗಿದ್ದನು,
51 Doth oure lawe iudge eny man before it heare him and knowe what he hath done?
೫೧ಅವನು ಅವರಿಗೆ “ನಮ್ಮ ಧರ್ಮಶಾಸ್ತ್ರವು ಮೊದಲು ಒಬ್ಬನನ್ನು ವಿಚಾರಿಸಿ ಅವನು ಮಾಡುವುದೇನೆಂದು ತಿಳಿದುಕೊಳ್ಳದೆ ಅವನ ವಿಷಯವಾಗಿ ಖಂಡನೆ ಮಾಡುವುದುಂಟೇ?” ಎಂದು ಹೇಳಿದ್ದಕ್ಕೆ,
52 They answered and sayde vnto him: arte thou also of Galile? Searche and loke for out of Galile aryseth no Prophet.
೫೨ಅವರು ಅವನಿಗೆ “ನೀನು ಸಹ ಗಲಿಲಾಯದವನೋ? ನೀನೇ ಪರಿಶೋಧಿಸಿ ನೋಡು ಗಲಿಲಾಯದಿಂದ ಪ್ರವಾದಿಯು ಬರುವುದಿಲ್ಲ,” ಎಂದರು.
53 And every man went vnto his awne housse.
೫೩ಬಳಿಕ ಎಲ್ಲರೂ ತಮ್ಮ ತಮ್ಮ ಮನೆಗೆ ಹೋದರು.