< Mark 7 >
1 And ye pharises came togedder vnto him and dyvers of ye scribes which came from Ierusalem.
೧ತರುವಾಯ ಯೆರೂಸಲೇಮಿನಿಂದ ಬಂದಿದ್ದ ಫರಿಸಾಯರೂ ಶಾಸ್ತ್ರಿಗಳಲ್ಲಿ ಕೆಲವರೂ ಯೇಸುವಿನ ಬಳಿಗೆ ಕೂಡಿ ಬಂದರು.
2 And whe they sawe certayne of his disciples eate breed wt comen hondes (that is to saye wt vnwesshen hondes) they coplayned.
೨ಆಗ ಯೇಸುವಿನ ಶಿಷ್ಯರಲ್ಲಿ ಕೆಲವರು ಅಶುದ್ಧ ಕೈಗಳಿಂದ ಅಂದರೆ ಕೈತೊಳೆದುಕೊಳ್ಳದೆ ಊಟಮಾಡುವುದನ್ನು ಕಂಡರು.
3 For the pharises and all the Iewes excepte they washe their hondes ofte eate not observinge the tradicions of the elders.
೩ಫರಿಸಾಯರೂ ಯೆಹೂದ್ಯರೆಲ್ಲರೂ ಹಿರಿಯರಿಂದ ಬಂದ ಪದ್ಧತಿಯಂತೆ ತಮ್ಮ ಕೈಗಳನ್ನು ವಿಧಿಬದ್ಧವಾಗಿ ತೊಳೆಯದೆ ಆಹಾರ ತೆಗೆದುಕೊಳ್ಳುತ್ತಿರಲಿಲ್ಲ.
4 And whe they come from the market except they washe they eate not. And many other thinges ther be which they have taken apon them to observe as the wasshinge of cuppes and cruses and of brasen vessels and of tables.
೪ಮತ್ತು ಸಂತೆಗೆ ಹೋಗಿ ಬಂದರೆ ನೀರನ್ನು ಪ್ರೋಕ್ಷಿಸಿಕೊಳ್ಳದೆ ಇರುತ್ತಿರಲಿಲ್ಲ. ಬಹು ಸ್ವಚ್ಛವಾಗಿ ಸ್ನಾನಮಾಡಿಯೇ ಊಟಮಾಡುವುದು; ತಂಬಿಗೆ, ಚೆಂಬು, ತಪ್ಪಲೆಗಳನ್ನು ತೊಳೆಯುವುದು; ಇವೇ ಮೊದಲಾದ ಅನೇಕ ಆಚಾರಗಳು ಅವರಲ್ಲಿ ರೂಢಿಯಲ್ಲಿದ್ದುವು.
5 Then axed him the pharises and sribes why walke not thy disciples accordinge to ye tradicions of the elders but eate breede with vnweshen hondes?
೫ಆದುದರಿಂದ ಫರಿಸಾಯರೂ ಶಾಸ್ತ್ರಿಗಳೂ ಯೇಸುವನ್ನು, “ನಿನ್ನ ಶಿಷ್ಯರು ಹಿರಿಯರ ಆಚಾರಗಳನ್ನೇಕೆ ಅನುಸರಿಸುವುದಿಲ್ಲ? ಅಶುದ್ಧವಾದ ಕೈಗಳಿಂದಲೇ ಅವರು ಊಟಮಾಡುತ್ತಿದ್ದಾರಲ್ಲಾ?” ಎಂದು ಕೇಳಿದರು.
6 He answered and sayde vnto them: well prophesied Esaias of you ypocrites as it is writte: This people honoreth me with their lyppes but their hert is farre from me:
೬ಅದಕ್ಕೆ ಆತನು, “ಕಪಟಿಗಳಾದ ನಿಮ್ಮ ವಿಷಯದಲ್ಲಿ ಯೆಶಾಯನು ಸರಿಯಾಗಿ ಪ್ರವಾದಿಸಿದ್ದಾನೆ; ಅವನು ಬರೆದಿರುವಂತೆ: “‘ಈ ಜನರು ಮಾತಿನಿಂದ ನನ್ನನ್ನು ಗೌರವಿಸುತ್ತಾರೆ, ಆದರೆ ಅವರ ಹೃದಯ ನನ್ನಿಂದ ದೂರವಾಗಿದೆ.
7 In vayne they worshippe me teachinge doctryns which are nothinge but ye comaundementes of men.
೭ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಉಪದೇಶವನ್ನಾಗಿ ಅವರು ಬೋಧಿಸುವುದರಿಂದ ನನಗೆ ಆರಾಧನೆ ಮಾಡುವುದು ವ್ಯರ್ಥ’ ಎಂಬುದೇ.
8 For ye laye the commaundement of God aparte and observe the tradicions of men as the wesshinge of cruses and of cuppes and many other suche lyke thinges ye do.
೮ನೀವು ದೇವರ ಆಜ್ಞೆಯನ್ನು ಬಿಟ್ಟು ಮನುಷ್ಯರು ನೇಮಿಸಿದ ಸಂಪ್ರದಾಯಗಳನ್ನು ಬಿಡದೆ ಹಿಡಿದುಕೊಂಡಿದ್ದೀರಿ” ಎಂದು ಹೇಳಿದನು.
9 And he sayde vnto them: well ye cast asyde the comaundement of God to mayntayne youre owne tradicios.
೯ಆತನು ಇನ್ನೂ ಅವರಿಗೆ, “ನೀವು ನಿಮ್ಮ ಸಂಪ್ರದಾಯಗಳನ್ನು ಪಾಲಿಸುವುದಕ್ಕಾಗಿ ಬಹು ಜಾಣತನದಿಂದದೇವರ ಆಜ್ಞೆಯನ್ನು ನಿರ್ಲಕ್ಷಿಸುತ್ತೀರಿ;
10 For Moses sayde: Honoure thy father and thy mother: and whosoever cursseth father or mother let him dye for it.
೧೦‘ನಿನ್ನತಂದೆತಾಯಿಗಳನ್ನು ಗೌರವಿಸಬೇಕು’ ಮತ್ತು‘ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣದಂಡನೆ ಆಗಬೇಕೆಂತಲೂ’ ಮೋಶೆಯು ಹೇಳಿದ್ದಾನೆ.
11 But ye saye: a man shall saye to father or mother Corban: which is: that thou desyrest of me to helpe the with is geven God.
೧೧ನೀವಾದರೋ ‘ಒಬ್ಬನು ತನ್ನ ತಂದೆಯನ್ನಾಗಲಿ, ತಾಯಿಯನ್ನಾಗಲಿ ನೋಡಿ, ನಾನು ನಿನ್ನ ಸಂರಕ್ಷಣೆಗಾಗಿ ಕೊಡತಕ್ಕದ್ದನ್ನು ಕೊರ್ಬಾನ್ (ಅಂದರೆ ದೇವರಿಗೆ ಮುಡಿಪು) ಮಾಡಿದ್ದೇನೆ’ ಎಂದು ಹೇಳುವುದಾದರೆ
12 And so ye soffre him no more to do ought for his father or his mother
೧೨ಅವನು ತನ್ನ ತಂದೆಗಾಗಲಿ, ತಾಯಿಗಾಗಲಿ ಇನ್ನೇನೂ ಸಹಾಯ ಮಾಡಬೇಕಾಗಿಲ್ಲ ಎಂದು ಹೇಳುತ್ತೀರಿ.
13 makinge the worde of God of none effecte through youre awne tradicions which ye have ordeyned. And many soche thinges ye do.
೧೩ಹೀಗೆ ನೀವು ಕಲಿಸುತ್ತಾ ಬಂದಿರುವ ಸಂಪ್ರದಾಯದಿಂದ ದೇವರ ವಾಕ್ಯವನ್ನು ನಿರರ್ಥಕಮಾಡುತ್ತಿದ್ದೀರಿ, ಮತ್ತು ಇಂಥ ಕಾರ್ಯಗಳನ್ನು ಇನ್ನೂ ಎಷ್ಟೋ ಮಾಡುತ್ತೀರಿ” ಎಂದು ಹೇಳಿದನು.
14 And he called all the people vnto him and sayde vnto them: Herken vnto me every one of you and vnderstonde.
೧೪ಆ ಮೇಲೆ ಯೇಸು ಜನರ ಗುಂಪನ್ನು ಪುನಃ ಹತ್ತಿರಕ್ಕೆ ಕರೆದು, “ಎಲ್ಲರೂ ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ ಮತ್ತು ಅರ್ಥ ಮಾಡಿಕೊಳ್ಳಿರಿ.
15 There is no thinge with out a man that can defyle him when it entreth into him: but thoo thinges which procede out of him are those which defyle ye man.
೧೫ಹೊರಗಿನಿಂದ ಮನುಷ್ಯನ ಒಳಗೆ ಹೋಗುವ ಯಾವುದು ಅವನನ್ನು ಮೈಲಿಗೆ ಮಾಡುವುದಿಲ್ಲ; ಆದರೆ ಮನುಷ್ಯನೊಳಗಿನಿಂದ ಹೊರಗೆ ಬರುವಂಥದು ಮನುಷ್ಯನನ್ನು ಮೈಲಿಗೆ ಮಾಡುವಂಥವುಗಳಾಗಿವೆ” ಎಂದು ಹೇಳಿದನು.
16 If eny man have eares to heare let him heare
೧೬“ಯಾರಿಗಾದರೂ ಕೇಳುವುದಕ್ಕೆ ಕಿವಿಯಿದ್ದರೆ ಕೇಳಲಿ” ಅಂದನು.
17 And whe he came to house awaye fro the people his disciples axed him of the similitude.
೧೭ತರುವಾಯ ಆತನು ಜನರನ್ನು ಬಿಟ್ಟು ಮನೆಯೊಳಗೆ ಹೋದಾಗ ಆತನ ಶಿಷ್ಯರು ಆ ಸಾಮ್ಯದ ಅರ್ಥವೇನೆಂದು ಆತನನ್ನು ಕೇಳಲು
18 And he sayd vnto the: Are ye so without vnderstondinge? Do ye not yet perceave yt whatsoever thinge from wt out entreth into a man it can not defyle him
೧೮ಆತನು ಅವರಿಗೆ, “ನಿಮಗೆ ಇನ್ನೂ ತಿಳಿವಳಿಕೆಯಿಲ್ಲವೇ? ಹೊರಗಿನಿಂದ ಮನುಷ್ಯನೊಳಗೆ ಹೋಗುವಂಥದು,
19 because it entrith not in to his hert but into ye belly: and goeth out into the draught that porgeth oute all meates.
೧೯ಅವನ ಹೃದಯದೊಳಕ್ಕೆ ಸೇರದೆ ಹೊಟ್ಟೆಯಲ್ಲಿ ಸೇರಿ, ಬಳಿಕ ಹೊರಗೆ ವಿಸರ್ಜಿಸಲ್ಪಡುತ್ತದೆ. ಅವು ಅವನನ್ನು ಅಶುದ್ಧ ಮಾಡಲಾರದೆಂದು ನಿಮಗೆ ಅರ್ಥವಾಗುವುದಿಲ್ಲವೋ?” ಎಂದು ಹೇಳಿದನು. ಹೀಗೆ ಹೇಳಿದ್ದರಿಂದ ಆಹಾರ ಪದಾರ್ಥಗಳೆಲ್ಲಾ ಶುದ್ಧವೆಂದು ಯೇಸು ಸೂಚಿಸಿದನು.
20 And he sayde: yt defileth a ma which cometh oute of a man.
೨೦ಆತನು ಮತ್ತೆ ಹೇಳಿದ್ದೇನೆಂದರೆ, “ಆದರೆ ಮನುಷ್ಯನ ಅಂತರಂಗದಿಂದ ಹೊರಹೊಮ್ಮುವಂಥವುಗಳೇ ಅವನನ್ನು ಅಶುದ್ಧಗೊಳಿಸುತ್ತವೆ;
21 For fro wt in even oute of the herte of men proceade evill thoughtes: advantry fornicacion murder
೨೧ಒಳಗಿನಿಂದ ಅಂದರೆ ಮನುಷ್ಯರ ಹೃದಯದೊಳಗಿನಿಂದ ಬರುವ ದುರಾಲೋಚನೆಗಳು, ಹಾದರ, ಕಳ್ಳತನ, ಕೊಲೆ,
22 theeft coveteousnes wickednes diceyte vnclennes and a wicked eye blasphemy pryde folysshnes:
೨೨ವ್ಯಭಿಚಾರ, ದುರಾಶೆ, ಕೆಡುಕುತನ, ಮೋಸ, ಕಾಮಾಭಿಲಾಷೆ, ಹೊಟ್ಟೆಕಿಚ್ಚು, ಅಪನಿಂದೆ, ಗರ್ವ, ಬುದ್ಧಿಗೇಡಿತನ ಇವೇ ಮೊದಲಾದವುಗಳು ಹೊರಡುತ್ತವೆ.
23 all these evyll thinges come from with in and defile a man.
೨೩ಈ ಎಲ್ಲಾ ಕೆಡುಕುಗಳು ಮಾನವನ ಅಂತರಂಗದಿಂದಲೇ ಉದ್ಭವಿಸಿ ಅವನನ್ನು ಅಶುದ್ಧ ಮಾಡುತ್ತವೆ.”
24 And from thence he rose and went into ye borders of Tyre and Sidon and entred into an housse and wolde that no man shnld have knowen: But he coulde not be hyd.
೨೪ಯೇಸು ಅಲ್ಲಿಂದ ಹೊರಟು ತೂರ್ ಪಟ್ಟಣದ ಪ್ರಾಂತ್ಯಗಳಿಗೆ ಹೋಗಿ ಒಂದು ಮನೆಯೊಳಗೆ ಇಳಿದುಕೊಂಡು ಅದು ಯಾರಿಗೂ ತಿಳಿಯಬಾರದೆಂದು ಬಯಸಿದನು; ಆದರೆ ಆತನು ಗುಪ್ತವಾಗಿರುವುದಕ್ಕೆ ಸಾಧ್ಯವಾಗದೆ ಹೋಯಿತು.
25 For a certayne woma whose doughter had a foule sprete hearde of him and came and fell at his fete.
೨೫ಕೂಡಲೆ ಒಬ್ಬ ಹೆಂಗಸು ಆತನ ಸುದ್ದಿಯನ್ನು ಕೇಳಿ ಬಂದು ಆತನ ಪಾದಕ್ಕೆ ಬಿದ್ದಳು. ಆಕೆಯ ಮಗಳಿಗೆ ದೆವ್ವ ಹಿಡಿದಿತ್ತು.
26 The woman was a Greke oute of Syrophenicia and she besought him yt he wolde caste out ye devyll oute of her doughter.
೨೬ಆ ಹೆಂಗಸು ಸುರೋಪೊಯಿನಿಕ್ಯದಲ್ಲಿ ಹುಟ್ಟಿದ ಗ್ರೀಕಳಾಗಿದ್ದಳು. ಆಕೆಯು ತನ್ನ ಮಗಳಿಗೆ ಹಿಡಿದಿದ್ದ ದೆವ್ವವನ್ನು ಬಿಡಿಸಬೇಕೆಂದು ಆತನನ್ನು ಬೇಡಿಕೊಂಡಾಗ,
27 And Iesus sayde vnto her: let the chyldren fyrst be feed. For it is not mete to take the chyldres breed and to caste it vnto whelppes.
೨೭ಆತನು ಆಕೆಗೆ, “ಮೊದಲು ಮಕ್ಕಳು ತಿಂದು ತೃಪ್ತಿಯಾಗಲಿ; ಮಕ್ಕಳು ತಿನ್ನುವ ರೊಟ್ಟಿಯನ್ನು ತೆಗೆದು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ” ಎಂದು ಹೇಳಿದನು.
28 She answered and sayde vnto him: even soo master neverthelesse the whelppes also eate vnder the table of the chyldrens cromes.
೨೮ಆದರೆ ಅದಕ್ಕೆ ಆಕೆಯು, “ಹೌದು ಕರ್ತನೇ, ಮೇಜಿನ ಕೆಳಗಿರುವ ನಾಯಿಮರಿಗಳಂತೂ ಮಕ್ಕಳ ಕೈಯಿಂದ ಬೀಳುವ ರೊಟ್ಟೀತುಂಡುಗಳನ್ನು ತಿನ್ನುತ್ತವಲ್ಲಾ” ಎಂದು ಉತ್ತರಕೊಡಲು
29 And he sayde vnto her: for this sayinge goo thy waye the devyll is gone out of thy doughter.
೨೯ಆತನು, “ಆಕೆಗೆ ನೀನು ಕೊಟ್ಟಿರುವ ಈ ಉತ್ತರದ ನಿಮಿತ್ತ ದೆವ್ವವು ನಿನ್ನ ಮಗಳನ್ನು ಬಿಟ್ಟು ಹೋಗಿದೆ, ನೀನು ಹೋಗು” ಅಂದನು.
30 And when she was come home to her housse she founde the devyll departed and her doughter lyinge on the beed.
೩೦ಆಕೆಯು ತನ್ನ ಮನೆಗೆ ಹೋಗಿ ನೋಡಲಾಗಿ ಆ ಹುಡುಗಿಯು ಹಾಸಿಗೆಯ ಮೇಲೆ ಮಲಗಿದ್ದಳು; ದೆವ್ವ ಅವಳನ್ನು ಬಿಟ್ಟು ಹೋಗಿತ್ತು.
31 And he departed agayne from the coostes of Tyre and Sidon and came vnto the see of Galile thorowe ye middes of the coostos of ye. x. cities.
೩೧ಅನಂತರ ಆತನು ತೂರ್ ಪಟ್ಟಣದ ಪ್ರಾಂತ್ಯಗಳನ್ನು ಬಿಟ್ಟು ಸೀದೋನ್ ಪಟ್ಟಣದ ಮಾರ್ಗವಾಗಿ ದೆಕಪೊಲಿಯ ಪ್ರಾಂತ್ಯಗಳನ್ನು ಹಾದು ಗಲಿಲಾಯ ಸಮುದ್ರದ ದಡಕ್ಕೆ ಬಂದನು.
32 And they brought vnto him one yt was deffe and stambred in his speche and prayde him to laye his honde apon him.
೩೨ಆಗ ಕೆಲವರು ತೊದಲು ಮಾತನಾಡುವ ಒಬ್ಬ ಕಿವುಡನನ್ನು ಆತನ ಬಳಿಗೆ ಕರೆದುಕೊಂಡು ಬಂದು, ಇವನ ಮೇಲೆ ನಿನ್ನ ಕೈಯಿಡಬೇಕು ಎಂದು ಆತನನ್ನು ಬೇಡಿಕೊಂಡರು.
33 And he toke him asyde from ye people and put his fyngers in his eares and dyd spyt and touched his tounge
೩೩ಆತನು ಅವನನ್ನು ಜನರ ಗುಂಪಿನಿಂದ ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ, ತನ್ನ ಬೆರಳುಗಳನ್ನು ಅವನ ಕಿವಿಗಳಲ್ಲಿ ಇಟ್ಟನು ಮತ್ತು ಉಗುಳಿ ನಂತರ ಅವನ ನಾಲಿಗೆಯನ್ನು ಮುಟ್ಟಿ,
34 and loked vp to heven and sygthed and sayde vnto him: ephatha that is to saye be openned.
೩೪ಆಕಾಶದ ಕಡೆಗೆ ನೋಡಿ ದೀರ್ಘವಾಗಿ ನಿಟ್ಟುಸಿರುಬಿಟ್ಟು ಅವನಿಗೆ, “ಎಪ್ಫಥಾ” ಎಂದು ಹೇಳಿದನು. ಆ ಶಬ್ದಕ್ಕೆ “ತೆರೆಯಲಿ” ಎಂದರ್ಥ.
35 And streyght waye his eares were openned and the stringe of his tounge was loosed and he spake playne.
೩೫ಹೇಳುತ್ತಲೇ ಅವನ ಕಿವಿಗಳು ತೆರೆದವು; ಅವನ ನಾಲಿಗೆಯು ಸಡಿಲವಾಯಿತು; ಅವನು ಸ್ಪಷ್ಟವಾಗಿ ಮಾತನಾಡಿದನು.
36 And he comaunded them that they shuld tell no man. But the more he forbad them soo moche the more a greate deale they publesshed it:
೩೬ಆಗ ಆತನು, ಇದನ್ನು ಯಾರಿಗೂ ತಿಳಿಸಬಾರದೆಂದು ಅವರಿಗೆ ಕಟ್ಟಪ್ಪಣೆ ಮಾಡಿದನು. ಆದರೆ ಎಷ್ಟು ಹೇಳಿದರೂ ಕೇಳದೆ ಅವರು ಮತ್ತಷ್ಟು ಹೆಚ್ಚಾಗಿ ಅದನ್ನು ಪ್ರಚಾರ ಮಾಡಿದರು.
37 and were beyonde measure astonyed sayinge: He hath done all thinges well and hath made booth the deffe to heare and the dome to speake.
೩೭ಅವರು ಅತ್ಯಂತ ಆಶ್ಚರ್ಯಪಟ್ಟು, “ಆತನು ಎಲ್ಲವನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾನೆ” ಎಂದು ಅಂದುಕೊಂಡರು.