< Ephesians 5 >
1 Therefore be imitators of God, as dearly loved children.
ಆದ್ದರಿಂದ ನೀವು ದೇವರ ಪ್ರಿಯರಾದ ಮಕ್ಕಳಂತೆ ದೇವರ ಮಾದರಿಯನ್ನು ಅನುಸರಿಸಿ ಬಾಳಿರಿ.
2 And walk in love, as also Christ loved us and gave himself up for us, a fragrant offering and sacrifice to God.
ಕ್ರಿಸ್ತ ಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ದೇವರಿಗೆ ಸುಗಂಧ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಸಹ ಪ್ರೀತಿಯಿಂದ ಬಾಳಿರಿ.
3 But there must not be even a suggestion among you of sexual immorality or any kind of impurity or of greed, for these are improper for God's holy people.
ಆದರೆ ನಿಮ್ಮೊಳಗೆ ಅನೈತಿಕತೆಯಾಗಲಿ, ಯಾವ ಅಶುದ್ಧತ್ವವಾಗಲಿ, ಇಲ್ಲವೆ ಲೋಭವಾಗಲಿ ಇರಲೇಬಾರದು. ಇವು ದೇವರ ಪರಿಶುದ್ಧರಿಗೆ ಯೋಗ್ಯವಲ್ಲ.
4 Let there be no filthiness, no foolish talk, and no crude jokes—all of which are improper. Instead there should be thanksgiving.
ಅಶ್ಲೀಲತೆ, ಬುದ್ಧಿಹೀನ ಮಾತು, ಅಸಭ್ಯ ಹರಟೆ ಇವು ಬೇಡ, ಇವು ಅಯುಕ್ತವಾಗಿವೆ, ಪ್ರತಿಯಾಗಿ ದೇವರಿಗೆ ಕೃತಜ್ಞತಾ ಸ್ತುತಿಮಾಡಿರಿ.
5 For you can be sure of this, that no sexually immoral, impure, or greedy person—that is, an idolater—has any inheritance in the kingdom of Christ and God.
ಏಕೆಂದರೆ ಯಾವ ಜಾರನಾಗಲಿ, ಅಶುದ್ಧನಾಗಲಿ, ದೇವರಲ್ಲದವುಗಳನ್ನು ಪೂಜಿಸುವ ಲೋಭಿಯಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಹಕ್ಕುಬಾಧ್ಯತೆಯನ್ನು ಹೊಂದುವುದಿಲ್ಲವೆಂಬುದು ನಿಮಗೆ ಮನದಟ್ಟಾಗಿರಲಿ.
6 Let no one deceive you with empty words, for because of these things the anger of God is coming upon the sons of disobedience.
ಪ್ರಯೋಜನವಿಲ್ಲದ ಮಾತುಗಳಿಂದ ಯಾರೂ ನಿಮ್ಮನ್ನು ವಂಚಿಸದಿರಲಿ. ಏಕೆಂದರೆ ಇಂಥವುಗಳ ದೆಸೆಯಿಂದ ದೇವರ ಕೋಪಾಗ್ನಿಯು ಅವರಿಗೆ ಅವಿಧೇಯರಾದ ಮಕ್ಕಳ ಮೇಲೆ ಬರುತ್ತದೆ.
7 Therefore, do not join in with them.
ಆದ್ದರಿಂದ ನೀವು ಅವರೊಂದಿಗೆ ಪಾಲುಗಾರರಾಗಿರಬೇಡಿರಿ.
8 For you were once darkness, but now you are light in the Lord. Walk as children of light
ನೀವು ಹಿಂದೊಮ್ಮೆ ಕತ್ತಲೆಯಾಗಿದ್ದಿರಿ. ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿದ್ದೀರಿ. ಬೆಳಕಿನ ಮಕ್ಕಳಾಗಿ ಬಾಳಿರಿ.
9 (for the fruit of the light consists in all goodness, righteousness, and truth),
ಬೆಳಕಿನ ಫಲವು ಎಲ್ಲಾ ಒಳ್ಳೆಯತನದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಇರುತ್ತದೆ.
10 and find out what is pleasing to the Lord.
ಕರ್ತನಿಗೆ ಮೆಚ್ಚಿಗೆಯಾದದ್ದು ಏನೆಂಬುದನ್ನು ಪರಿಶೋಧಿಸಿರಿ.
11 Do not associate with the unfruitful works of darkness, but rather expose them.
ನಿಷ್ಪ್ರಯೋಜಕವಾದ ಕತ್ತಲೆಯ ಕಾರ್ಯಗಳೊಂದಿಗೆ ಪಾಲುಗಾರರಾಗಿರದೆ ಅವುಗಳನ್ನು ಬೆಳಕಿಗೆ ತನ್ನಿರಿ.
12 For it is shameful even to mention the things they do in secret.
ಆ ಅವಿಧೇಯರು ಗುಟ್ಟಾಗಿ ಮಾಡುವ ಕೃತ್ಯಗಳನ್ನು ಹೇಳುವುದಕ್ಕೂ ಅವಮಾನಕರವಾಗಿವೆ.
13 But when anything is illuminated by the light, it becomes visible.
ಆದರೆ, ಬಹಿರಂಗವಾದವುಗಳೆಲ್ಲವೂ ಬೆಳಕಿನಿಂದ ಪ್ರಕಟವಾಗುತ್ತವೆ. ಎಲ್ಲವನ್ನೂ ಪ್ರಕಾಶಪಡಿಸುವಂಥದ್ದು ಬೆಳಕೇ.
14 For anything that becomes visible is light. Therefore it says, “Awake, you sleeper, and arise from the dead, and Christ will shine on you.”
ಆದ್ದರಿಂದ ಹೀಗೆ ಹೇಳಲಾಗಿದೆ: “ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು, ಕ್ರಿಸ್ತನು ನಿನ್ನ ಮೇಲೆ ಪ್ರಕಾಶಿಸುವನು.”
15 Look carefully how you live—not as unwise but as wise.
ಆದಕಾರಣ ನೀವು ಹೇಗೆ ಜೀವಿಸಬೇಕೆಂದು ಜಾಗರೂಕರಾಗಿರಿ. ಅಜ್ಞಾನಿಗಳಂತಿರದೆ, ಜಾಣರಾಗಿ ಜೀವಿಸಿರಿ.
16 Redeem the time because the days are evil.
ಈ ದಿನಗಳು ಕೆಟ್ಟವುಗಳಾಗಿರುವುದರಿಂದ, ಸರ್ವ ಸದಾವಕಾಶಗಳನ್ನೂ ಸದ್ವಿನಿಯೋಗಿಸಿಕೊಳ್ಳಿರಿ.
17 Therefore, do not be foolish, but understand what the will of the Lord is.
ಆದಕಾರಣ ಬುದ್ಧಿಹೀನರಾಗಿರದೆ ಕರ್ತನ ಚಿತ್ತವೇನೆಂಬುದನ್ನು ತಿಳಿದವರಾಗಿರಿ.
18 And do not get drunk with wine, for that leads to reckless behavior. Instead, be filled with the Holy Spirit,
ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದು ದುಷ್ಟತನಕ್ಕೆ ಎಡೆಮಾಡುತ್ತದೆ. ಆದರೆ ಪವಿತ್ರಾತ್ಮರಿಂದ ತುಂಬಿದವರಾಗಿದ್ದು,
19 speaking to each other in psalms and hymns and spiritual songs, singing and making melody to the Lord with all your heart,
ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮನಿಂದಾದ ಹಾಡುಗಳಿಂದಲೂ ಪರಸ್ಪರ ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯಾಂತರಾಳದಿಂದ ಕರ್ತನಿಗೆ ಹಾಡಿ ಹರಸಿರಿ.
20 always giving thanks for everything, in the name of our Lord Jesus Christ to God the Father,
ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿ ತಂದೆಯಾದ ದೇವರಿಗೆ, ಯಾವಾಗಲೂ ಎಲ್ಲಾ ಕಾರ್ಯಗಳಿಗೋಸ್ಕರ ಕೃತಜ್ಞತೆಯನ್ನು ಸಲ್ಲಿಸಿರಿ.
21 submitting yourselves to one another in reverence for Christ.
ಇದಲ್ಲದೆ ಕ್ರಿಸ್ತನ ಭಯಭಕ್ತಿಯಲ್ಲಿ ಒಬ್ಬರಿಗೊಬ್ಬರು ಅಧೀನರಾಗಿ ನಡೆದುಕೊಳ್ಳಿರಿ.
22 Wives, submit to your husbands, as to the Lord.
ಹೆಂಡತಿಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ.
23 For the husband is the head of the wife as Christ also is the head of the church, and Christ himself is its savior.
ಏಕೆಂದರೆ, ಕ್ರಿಸ್ತ ಯೇಸು ಸಭೆಗೆ ಶಿರಸ್ಸಾಗಿರುವ ಪ್ರಕಾರ ಗಂಡನು ಹೆಂಡತಿಗೆ ಶಿರಸ್ಸಾಗಿದ್ದಾನೆ. ಕ್ರಿಸ್ತ ಯೇಸು ತಮ್ಮ ಸಭೆ ಎಂಬ ದೇಹಕ್ಕೆ ರಕ್ಷಕರಾಗಿದ್ದಾರೆ.
24 But as the church submits to Christ, so also wives must submit to their husbands in everything.
ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮ ತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನರಾಗಿರಬೇಕು.
25 Husbands, love your wives, as Christ loved the church and gave himself up for her.
ಗಂಡಂದಿರೇ, ಕ್ರಿಸ್ತ ಯೇಸು ಸಭೆಯನ್ನು ಪ್ರೀತಿಸಿ, ಅದಕ್ಕಾಗಿ ತಮ್ಮನ್ನು ತಾವೇ ಒಪ್ಪಿಸಿಕೊಟ್ಟಂತೆಯೇ ನೀವು ನಿಮ್ಮ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ.
26 Christ gave himself for the church so that he might make her holy, having cleansed her by the washing of water with the word,
ಕ್ರಿಸ್ತ ಯೇಸು ತಮ್ಮ ಸಭೆಯನ್ನು ವಾಕ್ಯದ ನೀರಿನ ಸ್ನಾನದಿಂದ ಪವಿತ್ರಗೊಳಿಸಿ, ಶುದ್ಧಮಾಡಿ,
27 so that he might present her to himself as glorious, without stain or wrinkle or any such thing, but holy and without fault.
ಅದನ್ನು ಕಳಂಕ, ಸುಕ್ಕು ಇಂಥದ್ದು ಯಾವುದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯನ್ನಾಗಿ ತಮ್ಮ ಮುಂದೆ ನಿಲ್ಲಿಸಿಕೊಳ್ಳಬೇಕೆಂದು ತಮ್ಮನ್ನೇ ಒಪ್ಪಿಸಿಕೊಟ್ಟರು.
28 In the same way husbands ought to love their own wives as their own bodies. He who loves his own wife loves himself.
ಗಂಡಂದಿರು ಸಹ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವಂತೆಯೇ ತಮ್ಮ ಹೆಂಡತಿಯರನ್ನು ಪ್ರೀತಿಸಬೇಕು. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸುತ್ತಾನೆ.
29 For no one ever hated his own body, but nourishes and treats it with care, just as Christ nourishes and treats the church with care,
ಏಕೆಂದರೆ, ಯಾರೂ ಸ್ವಂತ ಶರೀರವನ್ನು ಎಂದೂ ದ್ವೇಷಿಸುವುದಿಲ್ಲ, ಬದಲಿಗೆ ತಮ್ಮ ಶರೀರವನ್ನು ಪೋಷಿಸಿ ಸಂರಕ್ಷಿಸುತ್ತಾರೆ. ಅದೇ ಪ್ರಕಾರ ಕರ್ತ ಯೇಸು ಸಭೆಯನ್ನು ಪೋಷಿಸಿ, ಸಂರಕ್ಷಿಸುವವರಾಗಿದ್ದಾರೆ.
30 because we are members of his body.
ನಾವು ಕ್ರಿಸ್ತ ಯೇಸುವಿನ ದೇಹದ ಅಂಗಗಳಾಗಿದ್ದೇವೆ.
31 “For this reason a man will leave his father and mother and will be joined to his wife, and the two will become one flesh.”
“ಇದರ ನಿಮಿತ್ತದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು, ಅವರಿಬ್ಬರೂ ಒಂದೇ ಶರೀರವಾಗಿರುವರು.”
32 This hidden truth is great—but I am speaking about Christ and the church.
ಈ ರಹಸ್ಯವು ಮಹತ್ತಾದದ್ದು. ಆದರೆ ನಾನು ಕ್ರಿಸ್ತನ ಹಾಗೂ ಸಭೆಯ ವಿಷಯವಾಗಿ ಮಾತನಾಡುತ್ತಿದ್ದೇನೆ.
33 Nevertheless, each of you also must love his own wife as himself, and the wife must respect her husband.
ಆದರೂ ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನನ್ನು ಪ್ರೀತಿಸುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು. ಹೆಂಡತಿಯು ತನ್ನ ಗಂಡನನ್ನು ಗೌರವಿಸುವವಳಾಗಿರಬೇಕು.