< Leviticus 2 >
1 When anyone brings a grain offering to Yahweh, his offering must be fine flour, and he will pour oil on it and put incense on it.
“‘ಯಾರಾದರೂ ಯೆಹೋವ ದೇವರಿಗೆ ಧಾನ್ಯ ಸಮರ್ಪಣೆಯನ್ನು ಸಮರ್ಪಿಸುವುದಾದರೆ ಅವನ ಸಮರ್ಪಣೆಯು ನಯವಾದ ಹಿಟ್ಟಿನದ್ದಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಸುರಿಸಬೇಕು, ಅದರ ಮೇಲೆ ಸಾಂಬ್ರಾಣಿಯನ್ನು ಹಾಕಬೇಕು.
2 He is to take the offering to Aaron's sons the priests, and there the priest will take out a handful of the fine flour with the oil and the incense on it. Then the priest will burn the offering on the altar as a representative offering. It will produce a sweet aroma for Yahweh; it will be an offering made to him by fire.
ಇದಲ್ಲದೆ ಅವನು ಅದನ್ನು ಯಾಜಕರಾದ ಆರೋನನ ಪುತ್ರರ ಬಳಿಗೆ ತರಬೇಕು. ಅವನು ಹಿಟ್ಟಿನಲ್ಲಿಯೂ, ಎಣ್ಣೆಯಲ್ಲಿಯೂ ಒಂದು ಹಿಡಿಯನ್ನು ಅದರ ಎಲ್ಲಾ ಸಾಂಬ್ರಾಣಿಯ ಸಂಗಡ ತೆಗೆದುಕೊಳ್ಳಬೇಕು. ಯಾಜಕನು ಅದನ್ನು ಜ್ಞಾಪಕಾರ್ಥವಾಗಿ ಬಲಿಪೀಠದ ಮೇಲೆ ಯೆಹೋವ ದೇವರಿಗೆ ಸುವಾಸನೆಯ ಸಮರ್ಪಣೆಯಾಗಿ ಬೆಂಕಿಯಿಂದ ಸುಡಬೇಕು.
3 Whatever is left of the grain offering will belong to Aaron and his sons. It is very holy to Yahweh from the offerings to Yahweh made by fire.
ಧಾನ್ಯ ಸಮರ್ಪಣೆಯಲ್ಲಿ ಉಳಿದದ್ದನ್ನು ಆರೋನನೂ ಅವನ ಪುತ್ರರೂ ತೆಗೆದುಕೊಳ್ಳಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಯೆಹೋವ ದೇವರ ಸಮರ್ಪಣೆಗಳಲ್ಲಿ ಮಹಾಪರಿಶುದ್ಧವಾಗಿರುವುದು.
4 When you offer a grain offering without yeast that is baked in an oven, it must be soft bread of fine flour mixed with oil, or hard bread without yeast, which is spread with oil.
“‘ನೀನು ಒಲೆಯಲ್ಲಿ ಸುಟ್ಟ ಧಾನ್ಯ ಸಮರ್ಪಣೆಯನ್ನು ಕಾಣಿಕೆಯಾಗಿ ತರುವುದಾದರೆ, ಅದು ಹುಳಿಯಿಲ್ಲದ ಮತ್ತು ಎಣ್ಣೆಯಿಂದ ಬೆರೆಸಿದ ನಯವಾದ ಹಿಟ್ಟಿನ ರೊಟ್ಟಿಗಳು ಇಲ್ಲವೆ ಹುಳಿಯಿಲ್ಲದ ಎಣ್ಣೆ ಹೊಯ್ದ ದೋಸೆಗಳಾಗಿರಬೇಕು.
5 If your grain offering is baked with a flat iron pan, it must be of fine flour without yeast that is mixed with oil.
ನಿನ್ನ ಕಾಣಿಕೆಯು ಬೋಗುಣಿಯಲ್ಲಿ ಬೇಯಿಸಿದ ಧಾನ್ಯ ಸಮರ್ಪಣೆಯಾಗಿದ್ದರೆ, ಅದು ಹುಳಿಯಿಲ್ಲದ ನಯವಾದ ಹಿಟ್ಟಿನಿಂದ ಎಣ್ಣೆ ಮಿಶ್ರಿತವಾದದ್ದು ಆಗಿರಬೇಕು.
6 You are to divide it into pieces and pour oil on it. This is a grain offering.
ನೀನು ಅದನ್ನು ತುಂಡುಗಳನ್ನಾಗಿ ವಿಭಾಗಿಸಿ, ಅದರ ಮೇಲೆ ಎಣ್ಣೆ ಸುರಿಯಬೇಕು, ಅದು ಆಹಾರ ಸಮರ್ಪಣೆಯಾಗಿದೆ.
7 If your grain offering is cooked in a pan, it must be made with fine flour and oil.
ನಿನ್ನ ಕಾಣಿಕೆಯು ತವೆಯಲ್ಲಿ ಬೇಯಿಸಿದ ಧಾನ್ಯವಾಗಿದ್ದರೆ, ಅದು ನಯವಾದ ಎಣ್ಣೆಯಿಂದ ಕೂಡಿದ ಹಿಟ್ಟಿನಿಂದ ಮಾಡಿದ್ದಾಗಿರಬೇಕು.
8 You must bring the grain offering made from these things to Yahweh, and it will be presented to the priest, who will bring it to the altar.
ನೀನು ಇವುಗಳಿಂದ ಮಾಡಿದ ಧಾನ್ಯ ಸಮರ್ಪಣೆಯನ್ನು ಯೆಹೋವ ದೇವರಿಗೆ ತರಬೇಕು. ಅದು ಯಾಜಕನಿಗೆ ಒಪ್ಪಿಸಿದಾಗ, ಅವನು ಅದನ್ನು ಬಲಿಪೀಠದ ಬಳಿಗೆ ತರುವನು.
9 Then the priest will take some from the grain offering as a representative offering, and he will burn it on the altar. It will be an offering made by fire, and it will produce a sweet aroma for Yahweh.
ಆಗ ಯಾಜಕನು ಅದರಿಂದ ಜ್ಞಾಪಕಾರ್ಥವಾಗಿ ಧಾನ್ಯ ಸಮರ್ಪಣೆಯನ್ನಾಗಿ ತೆಗೆದುಕೊಂಡು ಅದನ್ನು ಬಲಿಪೀಠದ ಮೇಲೆ ಸುಡಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು, ಯೆಹೋವ ದೇವರಿಗೆ ಸುವಾಸನೆಯ ಸಮರ್ಪಣೆಯಾಗಿರುವುದು.
10 What is left of the grain offering will belong to Aaron and his sons. It is very holy to Yahweh from the offerings to Yahweh made by fire.
ಧಾನ್ಯ ಸಮರ್ಪಣೆಯಲ್ಲಿ ಉಳಿದದ್ದನ್ನು ಆರೋನನೂ ಅವನ ಪುತ್ರರೂ ತೆಗೆದುಕೊಳ್ಳಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಯೆಹೋವ ದೇವರ ಸಮರ್ಪಣೆಗಳಲ್ಲಿ ಮಹಾಪರಿಶುದ್ಧವಾಗಿರುವುದು.
11 No grain offering that you offer to Yahweh is to be made with yeast, for you must burn no leaven, nor any honey, as an offering made by fire to Yahweh.
“‘ಯೆಹೋವ ದೇವರಿಗೆ ನೀನು ತರುವ ಧಾನ್ಯ ಸಮರ್ಪಣೆಯು ಯಾವುದೂ ಹುಳಿಯಿಂದ ಮಾಡಿದ್ದಾಗಿರಬಾರದು. ಏಕೆಂದರೆ ಯೆಹೋವ ದೇವರಿಗೆ ನೀವು ಬೆಂಕಿಯಿಂದ ಮಾಡುವ ಯಾವ ಸಮರ್ಪಣೆಯಲ್ಲಿ ಹುಳಿಯನ್ನಾಗಲಿ, ಜೇನನ್ನಾಗಲಿ ಬೆರೆಸಬಾರದು.
12 You will offer them to Yahweh as an offering of firstfruits, but they will not be used to produce a sweet aroma on the altar.
ಪ್ರಥಮ ಫಲದ ಕಾಣಿಕೆಯ ವಿಷಯದಲ್ಲಿಯಾದರೋ ನೀವು ಅವುಗಳನ್ನು ಯೆಹೋವ ದೇವರಿಗೆ ಸಮರ್ಪಿಸಬೇಕು. ಆದರೆ ಅವುಗಳನ್ನು ಬಲಿಪೀಠದ ಮೇಲೆ ಸುವಾಸನೆಗಾಗಿ ಸುಡಬಾರದು.
13 You must season each of your grain offerings with salt. You must never allow the salt of the covenant of your God to be missing from your grain offering. With all your offerings you must offer salt.
ನಿನ್ನ ಪ್ರತಿಯೊಂದು ಧಾನ್ಯ ಸಮರ್ಪಣೆಯೂ ಉಪ್ಪಿನಲ್ಲಿ ಬೆರಕೆಯಾಗಿರಬೇಕು. ನಿನ್ನ ದೇವರ ಒಡಂಬಡಿಕೆಯ ಉಪ್ಪು ನಿನ್ನ ಸಮರ್ಪಣೆಯಲ್ಲಿ ಇಲ್ಲದೆ ಇರಬಾರದು. ನಿನ್ನ ಎಲ್ಲಾ ಸಮರ್ಪಣೆಗಳಲ್ಲಿ ನೀನು ಉಪ್ಪನ್ನು ಸಮರ್ಪಿಸಬೇಕು.
14 If you offer a grain offering of firstfruits to Yahweh, offer fresh grain that is roasted with fire and then crushed into meal.
“‘ನೀನು ನಿನ್ನ ಪ್ರಥಮ ಫಲಗಳ ಧಾನ್ಯ ಸಮರ್ಪಣೆಯನ್ನು ಯೆಹೋವ ದೇವರಿಗೆ ಮಾಡಿದರೆ, ನಿನ್ನ ಪ್ರಥಮ ಫಲ ಧಾನ್ಯ ಕಾಣಿಕೆಯನ್ನು ಬೆಂಕಿಯಿಂದ ಸುಟ್ಟ ಕಾಳಿನ ಹಸಿರು ತೆನೆಗಳನ್ನೂ ಅಲ್ಲದೆ ತುಂಬಿದ ತೆನೆಗಳಿಂದ ಬಡಿದ ಒಣಗಿದ ಕಾಳುಗಳನ್ನೂ ಸಮರ್ಪಿಸಬೇಕು.
15 Then you must put oil and incense on it. This is a grain offering.
ನೀನು ಅದರ ಮೇಲೆ ಎಣ್ಣೆಯನ್ನು ಸಾಂಬ್ರಾಣಿಯನ್ನು ಹಾಕು. ಇದೇ ಧಾನ್ಯ ಸಮರ್ಪಣೆ.
16 Then the priest will burn part of the crushed grain and oil and incense as a representative offering. This is an offering made by fire to Yahweh.
ಯಾಜಕನು ಬಡಿದ ಕಾಳುಗಳಲ್ಲಿ ಕೆಲವು ಭಾಗವನ್ನು ಅದರ ಜೊತೆಯಲ್ಲಿ ಎಲ್ಲಾ ಸಾಂಬ್ರಾಣಿಯನ್ನು ಜ್ಞಾಪಕಾರ್ಥವಾಗಿ ಸುಡಬೇಕು. ಇದು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯಾಗಿದೆ.