< Leviticus 6 >
1 Yahweh spoke to Moses, saying,
ಯೆಹೋವ ದೇವರು ಮೋಶೆಯೊಡನೆ ಮಾತನಾಡಿ,
2 “If anyone sins and acts unfaithfully against Yahweh by deceiving his neighbor regarding something held in trust, or was left in his care, or about something that was stolen, or if he has oppressed his neighbor,
“ಯಾರಾದರೂ ಪಾಪಮಾಡಿದರೆ ಮತ್ತು ನೆರೆಯವರಿಗೆ ಮೋಸ ಮಾಡುವ ಮೂಲಕ ಯೆಹೋವ ದೇವರಿಗೆ ವಿಶ್ವಾಸದ್ರೋಹಿ ಆಗಿದ್ದರೆ ಅಥವಾ ಅವರ ಆರೈಕೆಯಲ್ಲಿ ಏನಾದರೂ ಉಳಿಸಿಕೊಂಡಿದ್ದರೆ ಅಥವಾ ಯಾವುದನ್ನಾದರೂ ಕದ್ದುಕೊಂಡಿದ್ದರೆ ಅಥವಾ ಅವರು ತಮ್ಮ ನೆರೆಹೊರೆಯವರಿಗೆ ಮೋಸ ಮಾಡಿದ್ದರೆ,
3 or he has found something that his neighbor lost and lies about it, or if he swears falsely, or in any matters like these by which people sin,
ಇಲ್ಲವೆ ಕಳೆದುಹೋಗಿದ ವಸ್ತು ಸಿಕ್ಕಿ, ಅದರ ವಿಷಯದಲ್ಲಿ ಸುಳ್ಳಾಡಿದ್ದರೆ ಮತ್ತು ಸುಳ್ಳಾಗಿ ಪ್ರಮಾಣ ಮಾಡಿದ್ದರೆ, ಇವೆಲ್ಲವುಗಳಲ್ಲಿ ಯಾವುದನ್ನಾದರೂ ಒಬ್ಬನು ಮಾಡಿದ್ದರೆ, ಅವನು ಪಾಪಮಾಡುವವನಾಗಿದ್ದಾನೆ.
4 and if he has sinned and is found to be guilty, he must restore whatever he took by robbery or oppression, or that which was entrusted to him, or that which was lost but that he had found.
ಅವನು ಪಾಪಮಾಡಿ, ಅಪರಾಧಿಯಾಗಿರುವುದರಿಂದ ಬಲಾತ್ಕಾರವಾಗಿ ಪಡೆದುಕೊಂಡದ್ದನ್ನೂ ಇಲ್ಲವೆ ಅವನು ಮೋಸದಿಂದ ಪಡೆದ ವಸ್ತುವನ್ನೂ ಇಲ್ಲವೆ ಅವನ ವಶಕ್ಕೆ ಸಿಕ್ಕಿದ ವಸ್ತುವನ್ನೂ ಹಿಂದಕ್ಕೆ ತಂದುಕೊಡಬೇಕು.
5 In addition, in any matter in which he swore falsely, he must restore it in full and he must add one-fifth of the value of it and pay it all to the owner on the day that he is found guilty.
ಅಥವಾ ಅವನು ಸುಳ್ಳಾಗಿ ಪ್ರಮಾಣಮಾಡಿ, ಪಡೆದವುಗಳೆಲ್ಲವುಗಳನ್ನೂ ಕೂಡಿಸಿ, ಹಿಂದಕ್ಕೆ ಕೊಡಬೇಕು. ಪ್ರಾಯಶ್ಚಿತ್ತದ ಬಲಿ ಅರ್ಪಿಸುವ ದಿನದಲ್ಲಿ, ಅದರ ಯಜಮಾನನು ಯಾವನಾಗಿರುವನೋ, ಅವನಿಗೆ ಕೊಡಬೇಕು.
6 Then he must bring his guilt offering to Yahweh, a ram without blemish from the flock that is worth the current value, as a guilt offering to the priest.
ಅವನು ತನ್ನ ಪ್ರಾಯಶ್ಚಿತ್ತಕ್ಕಾಗಿ ಕಳಂಕರಹಿತವಾದ ಒಂದು ಟಗರನ್ನು ಹಿಂಡಿನಿಂದ ತಂದು ಅದನ್ನು ಯೆಹೋವ ದೇವರಿಗೆಂದು ಯಾಜಕನ ಬಳಿಗೆ ತರಬೇಕು.
7 The priest will make atonement for him before Yahweh, and he will be forgiven concerning whatever he has become guilty of doing.”
ಯಾಜಕನು ಅವನಿಗಾಗಿ ಯೆಹೋವ ದೇವರ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಬೇಕು. ಅತಿಕ್ರಮದಲ್ಲಿ ಅವನು ಏನನ್ನಾದರೂ ಮಾಡಿದ್ದರೆ, ಆ ವಿಷಯದಲ್ಲಿ ಅವನಿಗೆ ಕ್ಷಮಾಪಣೆಯಾಗುವುದು,” ಎಂದರು.
8 Then Yahweh spoke to Moses, saying,
ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ,
9 “Command Aaron and his sons, saying, 'This is the law of the burnt offering: The burnt offering must be on the hearth of the altar all night until morning, and the fire of the altar will be kept burning.
“ಆರೋನನಿಗೂ ಅವನ ಪುತ್ರರಿಗೂ ಆಜ್ಞಾಪಿಸಿ ಹೀಗೆ ಹೇಳು, ‘ಇದು ದಹನಬಲಿಯ ನಿಯಮವಾಗಿದೆ. ದಹನಬಲಿ ಇಡೀ ರಾತ್ರಿ, ಅಂದರೆ ಬೆಳಗಿನವರೆಗೆ ಬಲಿಪೀಠದ ಅಗ್ನಿಕುಂಡದ ಮೇಲೆ ಇರಬೇಕು. ಬಲಿಪೀಠದ ಬೆಂಕಿಯು ಅದರೊಳಗೆ ಸುಡುತ್ತಾ ಇರುವುದು.
10 The priest will put on his linen clothes, and he will also put on his linen underclothes. He will pick up the ashes that are left after the fire has consumed the burnt offering on the altar, and he will put the ashes beside the altar.
ಯಾಜಕನು ತನ್ನ ನಾರುಮಡಿಯ ಉಡುಪನ್ನೂ ತನ್ನ ಶರೀರದ ಮೇಲೆ ನಾರುಮಡಿಯ ಒಳಉಡುಪುಗಳನ್ನೂ ಧರಿಸಿಕೊಂಡು, ಬಲಿಪೀಠದ ಮೇಲೆ ದಹನಬಲಿಯೊಂದಿಗೆ ಸುಟ್ಟ ಬೂದಿಯನ್ನು ತೆಗೆದುಕೊಂಡು, ಅದನ್ನು ಬಲಿಪೀಠದ ಬಳಿಯಲ್ಲಿ ಹಾಕಬೇಕು.
11 He will take off his garments and put on other garments to carry the ashes outside the camp to a place that is clean.
ಆಮೇಲೆ ಅವನು ತನ್ನ ಉಡುಪುಗಳನ್ನು ತೆಗೆದುಹಾಕಿ, ಬೇರೆ ಉಡುಪುಗಳನ್ನು ಧರಿಸಿಕೊಂಡು, ಆ ಬೂದಿಯನ್ನು ಪಾಳೆಯದ ಆಚೆಗೆ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.
12 The fire on the altar will be kept burning. It must not go out, and the priest will burn wood on it every morning. He will arrange the burnt offering as required on it, and he will burn on it the fat of the peace offerings.
ಬಲಿಪೀಠದ ಮೇಲೆ ಬೆಂಕಿಯು ಅದರೊಳಗೆ ಸುಡುತ್ತಲೇ ಇರಬೇಕು. ಅದು ಆರಿಹೋಗಿರಬಾರದು. ಪ್ರತಿ ಮುಂಜಾನೆ ಯಾಜಕನು ಅದರ ಮೇಲೆ ಕಟ್ಟಿಗೆಯನ್ನು ಹಾಕಬೇಕು. ದಹನಬಲಿಯನ್ನು ಅದರ ಮೇಲೆ ಕ್ರಮವಾಗಿ ಇಡಬೇಕು. ಇದಲ್ಲದೆ ಅವನು ಅದರ ಮೇಲೆ ಸಮಾಧಾನ ಬಲಿ ಅರ್ಪಣೆಗಳ ಕೊಬ್ಬನ್ನು ಸುಡಬೇಕು.
13 Fire must be kept burning on the altar continually. It must not go out.
ಬಲಿಪೀಠದ ಮೇಲೆ ಬೆಂಕಿಯು ಯಾವಾಗಲೂ ಉರಿಯುತ್ತಿರಬೇಕು, ಅದು ಎಂದಿಗೂ ಆರಬಾರದು.
14 This is the law of the grain offering. The sons of Aaron will offer it before Yahweh before the altar.
“‘ಧಾನ್ಯ ಸಮರ್ಪಣೆಯ ನಿಯಮವು ಇದೇ. ಆರೋನನ ಪುತ್ರರು ಬಲಿಪೀಠದ ಮುಂದೆ ಯೆಹೋವ ದೇವರ ಸನ್ನಿಧಿಯಲ್ಲಿ ಅದನ್ನು ಸಮರ್ಪಿಸಬೇಕು.
15 The priest will take up a handful of the fine flour of the grain offering and of the oil and the incense which is on the grain offering, and he will burn it on the altar to produce a sweet aroma as a representative offering.
ಯಾಜಕನು ಧಾನ್ಯ ಸಮರ್ಪಣೆಯ ಹಿಟ್ಟಿನಲ್ಲಿ ಒಂದು ಹಿಡಿ ಹಿಟ್ಟನ್ನೂ, ಧಾನ್ಯ ಸಮರ್ಪಣೆಯ ಮೇಲಿರುವ ಅದರ ಎಣ್ಣೆಯನ್ನೂ, ಅದರ ಎಲ್ಲಾ ಸಾಂಬ್ರಾಣಿಯನ್ನೂ ತೆಗೆದುಕೊಂಡು ಜ್ಞಾಪಕಾರ್ಥವಾಗಿ ಯೆಹೋವ ದೇವರಿಗೆ ಬಲಿಪೀಠದ ಮೇಲೆ ಸುವಾಸನೆಗಾಗಿ ಅದನ್ನು ಸುಡಬೇಕು.
16 Aaron and his sons will eat whatever is left of the offering. It must be eaten without yeast in a holy place. They will eat it in the courtyard of the tent of meeting.
ಅದರಲ್ಲಿ ಉಳಿದದ್ದನ್ನು ಆರೋನನೂ, ಅವನ ಪುತ್ರರೂ ತಿನ್ನಬೇಕು. ಅದನ್ನು ಪರಿಶುದ್ಧ ಸ್ಥಳದಲ್ಲಿ ಹುಳಿಯಿಲ್ಲದ ರೊಟ್ಟಿಯೊಂದಿಗೆ ತಿನ್ನಬೇಕು. ಅದನ್ನು ಅವರು ದೇವದರ್ಶನದ ಗುಡಾರದ ಅಂಗಳದಲ್ಲಿ ತಿನ್ನಬೇಕು.
17 It must not be baked with yeast. I have given it as their part of my offerings made by fire. It is most holy, as the sin offering and the guilt offering.
ಅದನ್ನು ಹುಳಿಯೊಂದಿಗೆ ಬೇಯಿಸಬಾರದು. ಅವರು ನನಗೆ ಬೆಂಕಿಯಿಂದ ಮಾಡಿದ ನನ್ನ ಸಮರ್ಪಣೆಗಳಲ್ಲಿ ಅವರ ಪಾಲನ್ನು ಅವರಿಗೆ ನಾನು ಕೊಟ್ಟಿದ್ದೇನೆ. ಅದು ದೋಷಪರಿಹಾರದ ಬಲಿಯ ಹಾಗೆಯೂ ಮಹಾಪರಿಶುದ್ಧವಾದದ್ದು.
18 For all time to come throughout your people's generations, any male descended from Aaron may eat it as his share, taken from the offerings of Yahweh made by fire. Whoever touches them will become holy.'”
ಆರೋನನ ಮಕ್ಕಳಲ್ಲಿ ಎಲ್ಲಾ ಗಂಡುಮಕ್ಕಳೂ ಅದನ್ನು ತಿನ್ನಬಹುದು. ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳ ವಿಷಯದಲ್ಲಿ ನಿಮ್ಮ ಸಂತತಿಗಳಿಗೆ ಇದು ಒಂದು ಶಾಶ್ವತ ಕಟ್ಟಳೆಯಾಗಿರುವುದು. ಅವುಗಳನ್ನು ಮುಟ್ಟುವ ಪ್ರತಿಯೊಬ್ಬನೂ ಪರಿಶುದ್ಧನಾಗಿರಬೇಕು,’” ಎಂದರು.
19 So Yahweh spoke to Moses again, saying,
ಯೆಹೋವ ದೇವರು ಮೋಶೆಯೊಡನೆ ಮಾತನಾಡಿ,
20 “This is the offering of Aaron and of his sons, which they will offer to Yahweh on the day when each son is anointed: a tenth part of an ephah of fine flour as a regular grain offering, half of it in the morning and half of it in the evening.
“ಆರೋನನೂ, ಅವನ ಪುತ್ರರೂ ಅಭಿಷಿಕ್ತರಾದ ದಿನದಲ್ಲಿ, ಅವರು ಯೆಹೋವ ದೇವರಿಗೆ ಸಮರ್ಪಿಸಬೇಕಾದ ಬಲಿಯು ಇದೇ. ಮೂರು ಸೇರು ಗೋಧಿ ಹಿಟ್ಟಿನಲ್ಲಿ ನಿರಂತರವಾಗಿರುವ ಧಾನ್ಯ ಸಮರ್ಪಣೆಗಾಗಿ ಮುಂಜಾನೆ ಅದರಲ್ಲಿ ಅರ್ಧಭಾಗವನ್ನು ಮತ್ತು ರಾತ್ರಿ ಅದರಲ್ಲಿ ಅರ್ಧಭಾಗವನ್ನು ಸಮರ್ಪಿಸಬೇಕು.
21 It will be made with oil in a baking pan. When it is soaked, you will bring it in. In baked pieces you will offer the grain offering to produce a sweet aroma for Yahweh.
ಅದನ್ನು ಒಂದು ಬೋಗುಣಿಯಲ್ಲಿ ಎಣ್ಣೆಯೊಂದಿಗೆ ಮಾಡಬೇಕು. ಅದನ್ನು ತರುವಾಗ ಅದು ಎಣ್ಣೆಯಿಂದ ನೆನೆದೇ ಇರಬೇಕು. ಬೇಯಿಸಿದ ಧಾನ್ಯ ಸಮರ್ಪಣೆಯ ತುಂಡುಗಳನ್ನು ನೀನು ಯೆಹೋವ ದೇವರಿಗೆ ಸುವಾಸನೆಯಾಗಿ ಸಮರ್ಪಿಸಬೇಕು.
22 The son of the high priest who is becoming the new high priest from among his sons will offer it. As commanded forever, all of it shall be burned to Yahweh.
ಅವನ ಪುತ್ರರಲ್ಲಿ ಅವನಿಗೆ ಬದಲಾಗಿ ಅಭಿಷಿಕ್ತನಾದ ಯಾಜಕನು ಅದನ್ನು ಸಮರ್ಪಿಸಬೇಕು. ಇದು ಯೆಹೋವ ದೇವರಿಗಾಗಿ ನಿರಂತರವಾದ ಒಂದು ಕಟ್ಟಳೆಯಾಗಿದೆ. ಅದು ಸಂಪೂರ್ಣವಾಗಿ ಸುಟ್ಟಿರಬೇಕು.
23 Every grain offering of the priest will be completely burned up. It must not be eaten.”
ಏಕೆಂದರೆ ಯಾಜಕನಿಗಾಗಿರುವ ಪ್ರತಿಯೊಂದು ಧಾನ್ಯ ಸಮರ್ಪಣೆಯೂ ಸಂಪೂರ್ಣವಾಗಿ ಸುಟ್ಟಿರಬೇಕು. ಅದನ್ನು ತಿನ್ನಬಾರದು,” ಎಂದರು.
24 Yahweh spoke to Moses again, saying,
ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ,
25 “Speak to Aaron and to his sons, saying, 'This is the law of the sin offering: The sin offering must be killed at the place where the burnt offering is killed before Yahweh. It is most holy.
“ಆರೋನನಿಗೂ, ಅವನ ಪುತ್ರರಿಗೂ ಹೇಳು: ‘ಪಾಪ ಪರಿಹಾರದ ಬಲಿಯ ನಿಯಮವು ಇದೇ. ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ಪಾಪ ಪರಿಹಾರದ ಬಲಿಯೂ ಯೆಹೋವ ದೇವರ ಸನ್ನಿಧಿಯಲ್ಲಿ ವಧಿಸಬೇಕು. ಅದು ಮಹಾಪರಿಶುದ್ಧವಾದದ್ದು.
26 The priest who offers it for sin will eat it. It must be eaten in a holy place in the courtyard of the tent of meeting.
ಪಾಪ ಪರಿಹಾರದ ಬಲಿಯನ್ನು ಮಾಡುವ ಯಾಜಕನು ಅದನ್ನು ತಿನ್ನಬೇಕು. ಅದನ್ನು ಸಭೆಯ ದೇವದರ್ಶನದ ಗುಡಾರದ ಅಂಗಳದ ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು.
27 Whatever touches its meat will become holy, and if the blood is sprinkled on any garment, you must wash it, the part that was sprinkled on, in a holy place.
ಅದರ ಮಾಂಸವನ್ನು ಮುಟ್ಟಿದ್ದೆಲ್ಲವೂ ಪರಿಶುದ್ಧವಾಗಿರುವುದು. ಅದರ ರಕ್ತದಲ್ಲಿ ಸ್ವಲ್ಪವಾದರೂ ಉಡುಪಿನ ಮೇಲೆ ಬಿದ್ದರೆ, ಅದನ್ನು ಚಿಮುಕಿಸಿದ ಪರಿಶುದ್ಧ ಸ್ಥಳದಲ್ಲಿಯೇ ತೊಳೆಯಬೇಕು.
28 But the clay pot in which it is boiled must be broken. If it is boiled in a bronze pot, it must be scrubbed and rinsed clean in water.
ಆದರೆ ಅದನ್ನು ಬೇಯಿಸಿದ ಮಣ್ಣಿನ ಪಾತ್ರೆಯನ್ನು ಒಡೆಯಬೇಕು. ಅದನ್ನು ಒಂದು ಕಂಚಿನ ಪಾತ್ರೆಯಲ್ಲಿ ಬೇಯಿಸಿದ್ದಾದರೆ, ಅದನ್ನು ಬೆಳಗಿ, ನೀರಿನಿಂದ ತೊಳೆಯಬೇಕು.
29 Any male among the priests may eat some of it because it is most holy.
ಯಾಜಕರ ಕುಟುಂಬದಲ್ಲಿ ಇರುವ ಗಂಡಸರೆಲ್ಲಾ ಅದನ್ನು ತಿನ್ನಬೇಕು. ಅದು ಮಹಾಪರಿಶುದ್ಧವಾದದ್ದು.
30 But any sin offering whose blood is brought into the tent of meeting to make atonement in the holy place must not be eaten. It must be burned.
ಯಾವ ಪಾಪ ಪರಿಹಾರದ ಬಲಿಯ ರಕ್ತವನ್ನು ದೇವದರ್ಶನದ ಗುಡಾರದೊಳಗೆ ಸಮಾಧಾನಕ್ಕಾಗಿ ತರಲಾಗಿದೆಯೋ, ಆ ಬಲಿಯನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬಾರದು, ಅದನ್ನು ಬೆಂಕಿಯಿಂದ ಸುಡಬೇಕು.