< Proverbs 4 >
1 Listen, sons, to a father's instruction, and pay attention so you will know what understanding is.
೧ಮಕ್ಕಳೇ, ತಂದೆಯ ಉಪದೇಶವನ್ನು ಕೇಳಿರಿ, ವಿವೇಕವನ್ನು ಗ್ರಹಿಸುವಂತೆ ಕಿವಿಗೊಡಿರಿ.
2 I am giving you good instructions; do not forsake my teaching.
೨ನಾನು ನಿಮಗೆ ಸುಬೋಧೆಯನ್ನು ಮಾಡುವೆನು, ನನ್ನ ಉಪದೇಶವನ್ನು ಬಿಡಬೇಡಿರಿ.
3 When I was a son of my father, the tender and only child of my mother,
೩ನಾನೂ ನನ್ನ ತಂದೆಗೆ ಅಧೀನನಾದ ಮಗನೂ, ತಾಯಿಯ ದೃಷ್ಟಿಗೆ ಕೋಮಲನಾದ ಏಕಪುತ್ರನೂ ಆಗಿದ್ದೆನು.
4 he taught me and said to me, “Let your heart hold fast to my words; keep my commands and live.
೪ಆಗ ತಂದೆಯು ನನಗೆ ಬೋಧಕನಾಗಿ ಹೀಗೆಂದನು, “ನಿನ್ನ ಮನಸ್ಸು ನನ್ನ ಮಾತುಗಳನ್ನು ಹಿಡಿದುಕೊಳ್ಳಲಿ, ನನ್ನ ಆಜ್ಞೆಯನ್ನು ಕೈಕೊಂಡು ಸುಖವಾಗಿ ಬಾಳು.
5 Acquire wisdom and understanding; do not forget and do not reject the words of my mouth;
೫ಜ್ಞಾನವನ್ನು ಪಡೆ, ವಿವೇಕವನ್ನು ಸಂಪಾದಿಸು, ಮರೆಯಬೇಡ, ನನ್ನ ಮಾತುಗಳಿಗೆ ಅಸಡ್ಡೆ ತೋರಿಸಬೇಡ.
6 do not abandon wisdom and she will watch over you; love her and she will keep you safe.
೬ಜ್ಞಾನವನ್ನು ಬಿಡದಿದ್ದರೆ ಅದು ನಿನ್ನನ್ನು ಕಾಪಾಡುವುದು, ಪ್ರೀತಿಸಿದರೆ, ಅದು ನಿನ್ನನ್ನು ಕಾಯುವುದು.
7 Wisdom is the most important thing, so acquire wisdom and spend all you own so you can get understanding.
೭ಜ್ಞಾನವನ್ನು ಪಡೆಯಬೇಕೆಂಬುದೇ ಜ್ಞಾನಬೋಧೆಯ ಪ್ರಥಮಪಾಠ, ನಿನ್ನ ಎಲ್ಲಾ ಸಂಪತ್ತಿನಿಂದಲೂ ವಿವೇಕವನ್ನು ಪಡೆ.
8 Cherish wisdom and she will exalt you; she will honor you when you embrace her.
೮ಜ್ಞಾನವೆಂಬಾಕೆಯು ಶ್ರೇಷ್ಠಳು ಎಂದು ನೀನು ಭಾವಿಸಿದರೆ ಆಕೆಯು ನಿನ್ನನ್ನು ಉನ್ನತಿಗೆ ತರುವಳು, ಆಕೆಯನ್ನು ಅಪ್ಪಿಕೊಂಡರೆ ನಿನ್ನನ್ನು ಘನಪಡಿಸುವಳು.
9 She will put a wreath of honor on your head; she will give you a beautiful crown.”
೯ಆಕೆಯು ನಿನ್ನ ತಲೆಗೆ ಅಂದದ ಪುಷ್ಪಮಾಲೆಯನ್ನು ಇಟ್ಟು, ಸುಂದರ ಕಿರೀಟವನ್ನು ನಿನಗೆ ಒಪ್ಪಿಸುವಳು.”
10 Listen, my son, and pay attention to my words, and you will have many years in your life.
೧೦ಕಂದಾ, ಗಮನಿಸಿ ನನ್ನ ಮಾತುಗಳನ್ನು ಕೇಳು, ಕೇಳಿದರೆ, ನಿನ್ನ ಜೀವಮಾನದ ವರ್ಷಗಳು ಹೆಚ್ಚುವವು.
11 I direct you in the way of wisdom; I lead you down straight paths.
೧೧ನಾನು ಜ್ಞಾನಮಾರ್ಗವನ್ನು ಉಪದೇಶಿಸಿ, ಧರ್ಮಮಾರ್ಗದಲ್ಲಿ ನಿನ್ನನ್ನು ನಡೆಸುವೆನು.
12 When you walk, no one will stand in your way and if you run, you will not stumble.
೧೨ನೀನು ನಡೆಯುವಾಗ ನಿನ್ನ ಹೆಜ್ಜೆಗೆ ಅಡ್ಡಿಯಾಗುವುದಿಲ್ಲ, ಓಡಿದರೆ ಮುಗ್ಗರಿಸುವುದಿಲ್ಲ.
13 Hold on to instruction, do not let it go; guard it, for it is your life.
೧೩ಸದುಪದೇಶವನ್ನು ಗ್ರಹಿಸಿಕೋ, ಸಡಿಲಬಿಡಬೇಡ, ಅದನ್ನು ಕಾಪಾಡಿಕೋ, ಅದೇ ನಿನ್ನ ಜೀವವು.
14 Do not follow the path of the wicked and do not go along the way of those who do evil.
೧೪ದುಷ್ಟರ ಮಾರ್ಗದಲ್ಲಿ ಸೇರಬೇಡ, ಕೆಟ್ಟವರ ದಾರಿಯಲ್ಲಿ ನಡೆಯಬೇಡ.
15 Avoid it, do not go on it; turn away from it and go another way.
೧೫ಅದಕ್ಕೆ ದೂರವಾಗಿರು, ಅದರಲ್ಲಿ ನಡೆಯಬೇಡ, ಅದರಿಂದ ಹಿಂತಿರುಗಿ ಮುಂದೆ ನಡೆ.
16 For they cannot sleep until they do evil and they are robbed of sleep until they cause someone to stumble.
೧೬ಕೇಡುಮಾಡದಿದ್ದರೆ ಅವರಿಗೆ ನಿದ್ರೆಬಾರದು; ಯಾರನ್ನಾದರೂ ಎಡವಿಬೀಳಿಸದಿದ್ದರೆ ಅವರ ನಿದ್ರೆಗೆ ಭಂಗವಾಗುವುದು.
17 For they eat the bread of wickedness and drink the wine of violence.
೧೭ದುಷ್ಟತನವೇ ಅವರ ಆಹಾರ; ಬಲಾತ್ಕಾರವೇ ಅವರ ದ್ರಾಕ್ಷಾರಸ ಪಾನ.
18 But the path of righteous people is like the first light that grows brighter; it shines more and more until the fullness of the day comes.
೧೮ನೀತಿವಂತರ ಮಾರ್ಗವು ಮಧ್ಯಾಹ್ನದ ವರೆಗೂ ಹೆಚ್ಚುತ್ತಾ ಬರುವ ಬೆಳಗಿನ ಬೆಳಕಿನಂತಿದೆ.
19 The way of the wicked is like darkness— they do not know what it is they stumble over.
೧೯ದುಷ್ಟರ ಮಾರ್ಗವೋ ಕತ್ತಲಿನಂತಿದೆ; ತಾವು ಯಾವುದಕ್ಕೆ ಎಡವಿಬಿದ್ದೆವೆಂದು ಅವರಿಗೆ ಗೊತ್ತಾಗದು.
20 My son, pay attention to my words; incline your ear to my sayings.
೨೦ಕಂದಾ, ನನ್ನ ಮಾತುಗಳನ್ನು ಆಲಿಸು, ನನ್ನ ನುಡಿಗಳಿಗೆ ಕಿವಿಗೊಡು.
21 Do not let them turn away from your eyes; keep them in your heart.
೨೧ನಿನ್ನ ದೃಷ್ಟಿಯು ಅವುಗಳ ಮೇಲೆ ತಪ್ಪದಿರಲಿ, ಅವುಗಳನ್ನು ನಿನ್ನ ಹೃದಯದೊಳಗೆ ಇಟ್ಟುಕೋ.
22 For my words are life to those who find them and health to their whole body.
೨೨ಅವುಗಳನ್ನು ಹೊಂದುವವರಿಗೆ ಅವು ಜೀವವು, ದೇಹಕ್ಕೆಲ್ಲಾ ಅವೇ ಆರೋಗ್ಯವು.
23 Keep your heart safe and guard it with all diligence, for from it flow the springs of life.
೨೩ನಿನ್ನ ಹೃದಯವನ್ನು ಬಹು ಜಾಗರೂಕತೆಯಿಂದ ಕಾಪಾಡಿಕೋ, ಅದರೊಳಗಿಂದ ಜೀವಬುಗ್ಗೆಗಳು ಹೊರಡುವವು.
24 Put crooked speech away from you and put corrupt talk far from you.
೨೪ಸೊಟ್ಟಮಾತುಗಳನ್ನು ನಿನ್ನಿಂದ ತೊಲಗಿಸಿಬಿಡು, ಕೆಟ್ಟ ನುಡಿಗಳನ್ನು ಬಾಯಿಂದ ದೂರಮಾಡು.
25 Let your eyes look straight ahead and fix your gaze straight before you.
೨೫ನೆಟ್ಟಗೆ ದೃಷ್ಟಿಸು, ನಿನ್ನ ಕಣ್ಣುಗಳು ನಿನ್ನ ಮುಂದೆಯೇ ಇರಲಿ.
26 Make a level path for your foot; then all your ways will be secure.
೨೬ನೀನು ನಡೆಯುವ ದಾರಿಯನ್ನು ಸಮಮಾಡು, ಆಗ ನಿನ್ನ ಮಾರ್ಗಗಳೆಲ್ಲಾ ದೃಢವಾಗಿರುವವು.
27 Do not turn aside to the right or to the left; turn your foot away from evil.
೨೭ಎಡಕ್ಕಾಗಲಿ ಅಥವಾ ಬಲಕ್ಕಾಗಲಿ ತಿರುಗಬೇಡ, ನಿನ್ನ ಕಾಲನ್ನು ಕೇಡಿಗೆ ದೂರಮಾಡು.