< Psalms 49 >
1 For the chief musician. A psalm of the sons of Korah. Hear this, all you peoples; give ear, all you inhabitants of the world,
೧ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಕೀರ್ತನೆ. ಸಕಲ ದೇಶಗಳ ಜನರೇ, ಕೇಳಿರಿ; ಭೂಲೋಕದ ನಿವಾಸಿಗಳೇ, ಕಿವಿಗೊಡಿರಿ.
2 both low and high, rich and poor together.
೨ಜನರೇ, ಜನಾಧಿಪತಿಗಳೇ, ಬಡವರೇ ಮತ್ತು ಐಶ್ವರ್ಯವಂತರೇ, ನೀವೆಲ್ಲರೂ ಒಂದಾಗಿ ಬಂದು ಆಲಿಸಿರಿ.
3 My mouth will speak wisdom and the meditation of my heart will be of understanding.
೩ನನ್ನ ಬಾಯಿ ಸುಜ್ಞಾನವನ್ನು ಬೋಧಿಸುವುದು; ನನ್ನ ಹೃದಯದ ಧ್ಯಾನವು ವಿವೇಕದಿಂದ ಕೂಡಿದೆ.
4 I will incline my ear to a parable; I will begin my parable with the harp.
೪ನಾನು ಆತನ ಸಾಮ್ಯಕ್ಕೆ ಕಿವಿಗೊಟ್ಟು, ಕಿನ್ನರಿಯನ್ನು ನುಡಿಸುತ್ತಾ, ಅದರ ಗೂಡಾರ್ಥವನ್ನು ಪ್ರಕಟಿಸುವೆನು.
5 Why should I fear the days of evil, when iniquity surrounds me at my heels?
೫ಕೇಡಿನ ದಿನಗಳಲ್ಲಿ ಏಕೆ ಭಯಪಡಬೇಕು? ಶತ್ರುಗಳು ಮೋಸದಿಂದ ಸುತ್ತಿಕೊಂಡಿರುವಾಗ ನಾನು ಏಕೆ ಹೆದರಬೇಕು?
6 Why should I fear those who trust in their wealth and boast about the amount of their riches?
೬ಅವರು ತಮ್ಮ ಐಶ್ವರ್ಯವನ್ನೇ ನಂಬಿದ್ದಾರೆ; ತಾವು ಬಹಳ ಆಸ್ತಿವಂತರೆಂದು ಗರ್ವದಿಂದ ಉಬ್ಬಿದ್ದಾರೆ.
7 It is certain that no one can redeem his brother or give God a ransom for him,
೭ಆದರೆ ಯಾರಾದರೂ ತನ್ನ ಸಹೋದರನು ಸಮಾಧಿಯಲ್ಲಿ ಸೇರದಂತೆ, ದೇವರಿಗೆ ಈಡನ್ನು ಕೊಡಲಾರನು.
8 For the redemption of one's life is costly, and no one can pay what we owe.
೮ಅವನ ಪ್ರಾಣವು ಶಾಶ್ವತವಾಗಿ ಉಳಿಯಲು, ಅಪಾರ ಹಣವನ್ನು ಕೊಟ್ಟು ಬಿಡಿಸಲಾರನು.
9 No one can live forever so that his body should not decay.
೯ಮರಣವನ್ನು ತಪ್ಪಿಸಿಕೊಳ್ಳುವುದಕ್ಕೆ ಎಷ್ಟು ಹಣ ಕೊಟ್ಟರೂ, ಸಾಲುವುದೇ ಇಲ್ಲ, ಅಂಥ ಪ್ರಯತ್ನ ನಿಷ್ಫಲವೆಂದು ತಿಳಿಯಬೇಕು.
10 For he will see decay. Wise men die; the fool and the brute alike perish and leave their wealth to others.
೧೦ಸುಜ್ಞಾನಿಗಳು ಸಾಯುವುದನ್ನು ನೋಡುತ್ತೇವಲ್ಲಾ; ಹಾಗೆಯೇ ಪಶುಗಳಂತಿರುವ ಜ್ಞಾನಹೀನರೂ ನಾಶವಾಗುತ್ತಾರೆ. ಅವರು ನಂಬಿದ್ದ ಆಸ್ತಿಯು ಇತರರ ಪಾಲಾಗುತ್ತದೆ.
11 Their inner thought is that their families will continue forever, and the places where they live, to all generations; they call their lands after their own names.
೧೧ಅವರ ಸಮಾಧಿಯೇ ಶಾಶ್ವತಮಂದಿರವು; ತಮ್ಮ ನಿವಾಸಗಳು ತಲತಲಾಂತರಕ್ಕೂ ಇರುವುದೆಂದು ಯೋಚಿಸಿ, ಭೂಮಿಗಳಿಗೆ ತಮ್ಮ ಹೆಸರುಗಳನ್ನು ಕೊಟ್ಟಿದ್ದಾರೆ.
12 But man, having wealth, does not remain alive; he is like the beasts that perish.
೧೨ಆದರೂ ಮನುಷ್ಯನು ಎಷ್ಟು ಘನವಾದ ಪದವಿಯಲ್ಲಿದ್ದರೂ ಸ್ಥಿರವಲ್ಲ; ನಾಶವಾಗುವ ಪಶುಗಳಂತೆಯೇ ಇಲ್ಲವಾಗುತ್ತಾನೆ.
13 This, their way, is their folly; yet after them, men approve of their sayings. (Selah)
೧೩ಮೂರ್ಖರಿಗೂ ಅವರ ಮಾತಿನಂತೆ ನಡೆಯುವವರಿಗೂ ಇದೇ ಗತಿ. (ಸೆಲಾ)
14 Like sheep they are appointed for Sheol, and death will be their shepherd. The upright will rule over them in the morning, and their bodies will be consumed in Sheol, with no place for them to live. (Sheol )
೧೪ಅವರು ಕುರಿಗಳಂತೆ ಪಾತಾಳದಲ್ಲಿ ಸೇರಿಸಲ್ಪಡುವರು; ಮೃತ್ಯುವೇ ಅವರ ಪಾಲಕನು. ಅವರು ನೇರವಾಗಿ ಪಾತಾಳಕ್ಕೆ ಇಳಿದುಹೋಗುವರು, ಅವರಿಗೆ ನಿವಾಸವಿಲ್ಲದ ಹಾಗೆ, ಪಾತಾಳವು ಅವರ ರೂಪವನ್ನು ನಾಶಮಾಡುವುದು. (Sheol )
15 But God will redeem my life from the power of Sheol; he will receive me. (Selah) (Sheol )
೧೫ಆದರೆ ದೇವರು ನನ್ನ ಪ್ರಾಣವನ್ನು ಮೃತ್ಯುಹಸ್ತದಿಂದ ತಪ್ಪಿಸಿ, ನನ್ನನ್ನು ಸ್ವೀಕಾರಮಾಡುವನು. (ಸೆಲಾ) (Sheol )
16 Do not be afraid when one becomes rich, and the glory of his house increases.
೧೬ಒಬ್ಬನ ಐಶ್ವರ್ಯವೂ, ಗೃಹವೈಭವವೂ ವೃದ್ಧಿಯಾದಾಗ ಕಳವಳಪಡಬೇಡ.
17 For when he dies he will take nothing away; his glory will not go down after him.
೧೭ಅವನು ಸಾಯುವಾಗ ಏನೂ ತೆಗೆದುಕೊಂಡು ಹೋಗುವುದಿಲ್ಲ; ಅವನ ವೈಭವವು ಅವನೊಡನೆ ಹೋಗುವುದಿಲ್ಲ.
18 He blessed his soul while he lived— and men praise you when you live for yourself—
೧೮ಸಿರಿ ಬಂದಾಗ ನೆರೆಯವರ ಹೊಗಳಿಕೆ ತಪ್ಪದು ಎಂಬಂತೆ, ಅವನು ಜೀವಮಾನದಲ್ಲಿ ಆತ್ಮಸ್ತುತಿಯಿಂದಲೂ, ಜನರಸ್ತುತಿಯಿಂದಲೂ ಕೂಡಿದವನಾದರೂ,
19 he will go to the generation of his fathers and they will never see the light again.
೧೯ಪೂರ್ವಿಕರ ಬಳಿಗೆ ಸೇರಿ ಅವರಂತೆಯೇ, ಎಂದಿಗೂ ಬೆಳಕನ್ನು ನೋಡುವುದಿಲ್ಲ.
20 One who has wealth but no understanding is like the beasts, which perish.
೨೦ವಿವೇಕಹೀನ ಮನುಷ್ಯನು ಎಷ್ಟು ಘನವಾದ ಪದವಿಯಲ್ಲಿದ್ದರೂ, ನಶಿಸಿ ಹೋಗುವ ಪಶುಗಳಿಗೆ ಸಮಾನವಾಗಿ ಇಲ್ಲವಾಗುತ್ತಾನೆ.