< 1 Corinthians 1 >

1 Paul, called to be an apostle of Jesus Christ through the will of God, and Sosthenes our brother,
ದೇವರ ಚಿತ್ತದಂತೆ ಯೇಸು ಕ್ರಿಸ್ತನಿಂದ ಅಪೊಸ್ತಲನಾಗುವುದಕ್ಕೆ ಕರೆಯಲ್ಪಟ್ಟ ಪೌಲನೂ ಮತ್ತು ನಮ್ಮ ಸಹೋದರನಾದ ಸೊಸ್ಥೆನನೂ,
2 To the church of God which is at Corinth, to them that are sanctified in Christ Jesus, called to be saints, with all that in every place call upon the name of Jesus Christ our Lord, both theirs and ours:
ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರಾದವರಿಗೂ, ಪರಿಶುದ್ಧರಾಗಿರಲು ಕರೆಯಲ್ಪಟ್ಟವರಿಗೂ, ನಮ್ಮ ಮತ್ತು ಅವರ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲಿದ್ದರೂ ಅವರೆಲ್ಲರಿಗೂ ಬರೆಯುವುದು ಏನೆಂದರೆ,
3 Grace be to you, and peace, from God our Father, and from the Lord Jesus Christ.
ನಮ್ಮ ತಂದೆಯಾಗಿರುವ ದೇವರಿಂದಲೂ ಹಾಗೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ, ಶಾಂತಿಯೂ ಉಂಟಾಗಲಿ.
4 I thank my God always on your behalf, for the grace of God which is given you by Jesus Christ;
ಕ್ರಿಸ್ತ ಯೇಸುವಿನಲ್ಲಿ ದೇವರು ನಿಮಗೆ ಅನುಗ್ರಹಿಸಿದ ಕೃಪೆಯ ನಿಮಿತ್ತವಾಗಿ ನಾನು ನಿಮಗೋಸ್ಕರ ಯಾವಾಗಲೂ ನನ್ನ ದೇವರನ್ನು ಕೊಂಡಾಡುತ್ತೇನೆ.
5 That in every thing ye are enriched by him, in all utterance, and in all knowledge;
ಆತನು ಎಲ್ಲಾ ರೀತಿಯಲ್ಲಿಯೂ, ಎಲ್ಲಾ ನುಡಿಗಳಲ್ಲಿಯೂ, ಎಲ್ಲಾ ತಿಳಿವಳಿಕೆಯಲ್ಲಿಯೂ, ನಿಮ್ಮನ್ನು ಸಮೃದ್ಧಿಯುಳ್ಳವರನ್ನಾಗಿ ಮಾಡಿದ್ದಾನೆ.
6 Even as the testimony of Christ was confirmed in you:
ಕ್ರಿಸ್ತನ ಕುರಿತಾದ ಸಾಕ್ಷಿಯು ನಿಮ್ಮಲ್ಲಿ ದೃಢವಾಗಿರುವ ಹಾಗೆಯೇ ಆತನು ನಿಮ್ಮನ್ನು ಸಮೃದ್ಧಿಯುಳ್ಳವರನ್ನಾಗಿ ಮಾಡಿದ್ದಾನೆ.
7 So that ye come behind in no gift; waiting for the coming of our Lord Jesus Christ:
ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯನ್ನು ನೀವು ಎದುರುನೋಡುತ್ತಾ ಇರುವುದರಿಂದ ಆತ್ಮೀಕ ಕೃಪಾವರದ ಕೊರತೆಯೂ ನಿಮಗೆ ಉಂಟಾಗುವುದಿಲ್ಲ,
8 Who shall also confirm you to the end, that ye may be blameless in the day of our Lord Jesus Christ.
ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ನೀವು ನಿರಪರಾಧಿಗಳಾಗಿರುವಂತೆ ಆತನು ನಿಮ್ಮನ್ನು ಕಡೆಯವರೆಗೂ ದೃಢಪಡಿಸುವನು.
9 God is faithful, by whom ye were called to the fellowship of his Son Jesus Christ our Lord.
ತನ್ನ ಮಗನೂ ಹಾಗೂ ನಮ್ಮ ಕರ್ತನಾಗಿರುವ ಯೇಸು ಕ್ರಿಸ್ತನ ಅನ್ಯೋನ್ಯತೆಗೆ ನಿಮ್ಮನ್ನು ಕರೆದ ದೇವರು ನಂಬಿಗಸ್ತನು.
10 Now I beseech you, brethren, by the name of our Lord Jesus Christ, that ye all speak the same thing, and that there be no divisions among you; but that ye be perfectly joined together in the same mind and in the same judgment.
೧೦ಪ್ರಿಯರೇ, ನೀವೆಲ್ಲರೂ ಹೊಂದಾಣಿಕೆಯುಳ್ಳವರಾಗಿರಬೇಕೆಂದು, ನಿಮ್ಮಲ್ಲಿ ಭಿನ್ನತೆಗಳಿರಬಾರದೆಂದು, ನೀವು ಒಂದೇ ಮನಸ್ಸೂ ಮತ್ತು ಒಂದೇ ಉದ್ದೇಶವುಳ್ಳವರಾಗಿದ್ದು ಐಕ್ಯತೆಯಿಂದಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾನು ನಿಮ್ಮನ್ನು ಬುದ್ಧಿ ಹೇಳುತ್ತೇನೆ.
11 For it hath been declared to me concerning you, my brethren, by them who are of the house of Chloe, that there are contentions among you.
೧೧ಯಾಕೆಂದರೆ ನಿಮ್ಮಲ್ಲಿ ಭಿನ್ನಾಭಿಪ್ರಾಯಗಳು ಜಗಳಗಳುಂಟೆಂದು ನಿಮ್ಮ ಬಗ್ಗೆ ಖ್ಲೋಯೆಯ ಜನರಿಂದ ನನಗೆ ತಿಳಿದು ಬಂದಿತು.
12 Now this I say, that each one of you saith, I am of Paul; and I of Apollos; and I of Cephas; and I of Christ.
೧೨ಹೀಗಾಗಿ ನಾನಿದನ್ನು ಹೇಳುತ್ತಿದ್ದೇನೆ, ನಿಮ್ಮೊಳಗೆ ಕೆಲವರು, “ನಾನು ಪೌಲನವನು,” ಇಲ್ಲವೆ, “ನಾನು ಅಪೊಲ್ಲೋಸನವನು,” ಅಥವಾ, “ನಾನು ಕೇಫನವನು,” ಇಲ್ಲವೆ, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ.
13 Is Christ divided? was Paul crucified for you? or were ye baptized in the name of Paul?
೧೩ಕ್ರಿಸ್ತನು ವಿಭಾಗಿಸಲ್ಪಟ್ಟಿದ್ದಾನೋ? ನಿಮಗೋಸ್ಕರ ಶಿಲುಬೆಗೇರಿದವನು ಪೌಲನೋ? ಪೌಲನ ಹೆಸರಿನಲ್ಲಿ ನೀವು ದೀಕ್ಷಾಸ್ನಾನ ಮಾಡಿಸಿಕೊಂಡಿದ್ದೀರೋ?
14 I thank God that I baptized none of you, but Crispus and Gaius;
೧೪ನಿಮ್ಮಲ್ಲಿ ಕ್ರಿಸ್ಪನಿಗೂ ಮತ್ತು ಗಾಯನಿಗೂ ಹೊರತಾಗಿ ಮತ್ತಾರಿಗೂ ನಾನು ದೀಕ್ಷಾಸ್ನಾನ ಮಾಡಿಸಲಿಲ್ಲ.
15 Lest any should say that I had baptized in my own name.
೧೫ಆದ್ದರಿಂದ ನೀವು ನನ್ನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿದ್ದೀರೆಂದು ಯಾರೂ ಹೇಳಲಾರರು. ಅದಕ್ಕಾಗಿ ನಾನು ದೇವರಿಗೆ ಸ್ತೋತ್ರಮಾಡುತ್ತೇನೆ.
16 And I baptized also the household of Stephanas: besides, I know not whether I baptized any other.
೧೬ಇದಲ್ಲದೆ ಸ್ತೆಫನನ ಮನೆಯವರಿಗೆ ಸಹ ದೀಕ್ಷಾಸ್ನಾನಮಾಡಿಸಿದ್ದೇನೆ ಇದನ್ನು ಹೊರತು ಇನ್ನಾರಿಗೂ ನಾನು ದೀಕ್ಷಾಸ್ನಾನಮಾಡಿಸಿದಂತೆ ತೋರುವುದಿಲ್ಲ.
17 For Christ hath not sent me to baptize, but to preach the gospel: not with wisdom of words, lest the cross of Christ should be made of no effect.
೧೭ಕ್ರಿಸ್ತನು ನನ್ನನ್ನು ಕಳುಹಿಸಿದ್ದು ದೀಕ್ಷಾಸ್ನಾನಮಾಡಿಸುವುದಕ್ಕಲ್ಲ ಆದರೆ ಸುವಾರ್ತೆಯನ್ನು ಸಾರುವುದಕ್ಕಾಗಿಯೇ. ಅದನ್ನು ಮನುಷ್ಯಜ್ಞಾನದ ಮಾತುಗಳಿಂದ ಸಾರಬೇಕೆಂದು ಕಳುಹಿಸಲಿಲ್ಲ; ಹಾಗೆ ಸಾರಿದರೆ ಕ್ರಿಸ್ತನ ಶಿಲುಬೆಯ ಶಕ್ತಿಯು ಮಾತಿನ ಚತುರತೆಯಿಂದ ನಿರರ್ಥಕವಾಗಿ ಹೋಗುತ್ತದೆ.
18 For the preaching of the cross is to them that perish foolishness; but to us who are saved it is the power of God.
೧೮ಶಿಲುಬೆಯ ಸಂದೇಶವು ನಾಶನದ ಮಾರ್ಗದಲ್ಲಿರುವವರಿಗೆ ಹುಚ್ಚುತನವಾಗಿದೆ, ಆದರೆ ರಕ್ಷಣೆಯ ಮಾರ್ಗದಲ್ಲಿರುವ ನಮಗೆ ಇದು ದೇವರ ಶಕ್ತಿಯಾಗಿದೆ.
19 For it is written, I will destroy the wisdom of the wise, and will bring to nothing the understanding of the prudent.
೧೯“ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು, ವಿವೇಕಿಗಳ ವಿವೇಕವನ್ನು ವಿಫಲಗೊಳಿಸುವೆನು.” ಎಂದು ಬರೆಯಲ್ಪಟ್ಟಿದೆ.
20 Where is the wise? where is the scribe? where is the disputer of this world? hath not God made foolish the wisdom of this world? (aiōn g165)
೨೦ಜ್ಞಾನಿಯು ಎಲ್ಲಿ? ವಿದ್ವಾಂಸನು ಎಲ್ಲಿ? ಇಹಲೋಕದ ತರ್ಕವಾದಿ ಎಲ್ಲಿ? ದೇವರು ಇಹಲೋಕದ ಜ್ಞಾನವನ್ನು ಮೂರ್ಖತನವಾಗಿ ಮಾಡಿದ್ದಾನಲ್ಲವೇ? (aiōn g165)
21 For when in the wisdom of God the world by wisdom knew not God, it pleased God by the foolishness of preaching to save them that believe.
೨೧ಲೋಕವು ತನ್ನ ಜ್ಞಾನದಿಂದ ದೇವರನ್ನು ತಿಳಿದುಕೊಳ್ಳದೆ ಹೋದದ್ದರಿಂದ; ಮೂರ್ಖತನವೆನಿಸಿಕೊಂಡಿರುವ ನಮ್ಮ ಬೋಧನೆಯ ಮೂಲಕ ನಂಬುವವರನ್ನು ರಕ್ಷಿಸುವುದು ದೇವರಿಗೆ ಹಿತವೆಂದು ತೋರಿತು.
22 For the Jews require a sign, and the Greeks seek wisdom:
೨೨ಯೆಹೂದ್ಯರು ಸೂಚಕಕಾರ್ಯಗಳನ್ನು ಕೇಳುತ್ತಾರೆ, ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ;
23 But we preach Christ crucified, to the Jews a stumblingblock, and to the Greeks foolishness;
೨೩ನಾವಾದರೋ ಶಿಲುಬೆಗೆ ಹಾಕಲ್ಪಟ್ಟ ಕ್ರಿಸ್ತನನ್ನು ಸಾರುತ್ತೇವೆ; ಕ್ರಿಸ್ತನ ಸಂದೇಶವು ಯೆಹೂದ್ಯರಿಗೆ ವಿಘ್ನವೂ ಮತ್ತು ಗ್ರೀಕರಿಗೆ ಮೂರ್ಖತನವೂ ಆಗಿದೆ.
24 But to them who are called, both Jews and Greeks, Christ the power of God, and the wisdom of God.
೨೪ಆದರೆ ದೇವರಿಂದ ಕರಿಸಿಕೊಂಡವರಾದ ಯೆಹೂದ್ಯರಿಗಾಗಲಿ, ಗ್ರೀಕರಿಗಾಗಲಿ ಕ್ರಿಸ್ತನೇ ದೇವರ ಶಕ್ತಿಯೂ ಮತ್ತು ದೇವರ ಜ್ಞಾನವೂ ಆಗಿರುವಾತನೆಂದು ನಾವು ಸಾರುತ್ತೇವೆ.
25 Because the foolishness of God is wiser than men; and the weakness of God is stronger than men.
೨೫ದೇವರ ಬುದ್ಧಿಹೀನತೆಯು ಮನುಷ್ಯರ ಜ್ಞಾನಕ್ಕಿಂತಲೂ ಶ್ರೇಷ್ಠವಾದದ್ದು, ದೇವರ ಬಲಹೀನತೆಯು ಮನುಷ್ಯರ ಬಲಕ್ಕಿಂತಲೂ ಶಕ್ತಿಯುಳ್ಳದ್ದಾಗಿದೆ.
26 For ye see your calling, brethren, that not many wise men after the flesh, not many mighty, not many noble, are called:
೨೬ಸಹೋದರರೇ, ದೇವರು ನಿಮ್ಮನ್ನು ಕರೆದಾಗ ನೀವು ಹೇಗಿದ್ದೀರೆಂದು ಆಲೋಚಿಸಿರಿ. ಮನುಷ್ಯರ ದೃಷ್ಟಿಯಲ್ಲಿ ನಿಮ್ಮೊಳಗೆ ಜ್ಞಾನಿಗಳೂ ಹೆಚ್ಚಿನ ಸಂಖ್ಯೆಯಲ್ಲಿಲ್ಲ, ಪ್ರಬಲರೂ ಅನೇಕರಿರಲಿಲ್ಲ, ಕುಲೀನರೂ ಅನೇಕರಿರಲಿಲ್ಲ.
27 But God hath chosen the foolish things of the world to confound the wise; and God hath chosen the weak things of the world to confound the things which are mighty;
೨೭ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡನು; ದೇವರು ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಅಶಕ್ತರನ್ನು, ಬಲಹೀನರನ್ನು ಆರಿಸಿಕೊಂಡನು.
28 And base things of the world, and things which are despised, hath God chosen, and things which are not, to bring to nought things that are:
೨೮ದೇವರು ಈ ಲೋಕದಲ್ಲಿ ಕೀಳಾದವರನ್ನೂ ಹಾಗೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣ್ಯರನ್ನು ಇಲ್ಲದಂತೆ ಮಾಡುವುದಕ್ಕಾಗಿ ಗಣನೆಗೆ ಬಾರದವರನ್ನು, ನಿಂದಿಸಲ್ಪಟ್ಟವರನ್ನು ಆರಿಸಿಕೊಂಡಿದ್ದಾನೆ.
29 That no flesh should glory in his presence.
೨೯ಹೀಗಿರಲು ದೇವರ ಮುಂದೆ ಹೊಗಳಿಕೊಳ್ಳುವುದಕ್ಕೆ ಯಾರಿಗೂ ಆಸ್ಪದವಿಲ್ಲ.
30 But of him are ye in Christ Jesus, who from God is made to us wisdom, and righteousness, and sanctification, and redemption:
೩೦ದೇವರು ಈ ರೀತಿ ಮಾಡಿದ್ದರಿಂದಲೇ ಈಗ ನೀವು ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ದೇವರ ಕಡೆಯಿಂದ ನಮಗೆ ಜ್ಞಾನವೂ, ನೀತಿಯೂ, ಶುದ್ಧಿಯೂ, ಮತ್ತು ವಿಮೋಚನೆಯು ಆಗಿದ್ದಾನೆ.
31 That, according as it is written, He that glorieth, let him glory in the Lord.
೩೧“ಹೆಚ್ಚಳಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ” ಎಂಬ ವೇದೋಕ್ತಿ ನೆರವೇರುವುದಕ್ಕಾಗಿಯೇ ಹೀಗಾಯಿತು.

< 1 Corinthians 1 >