< 1 Kings 1 >

1 Now king David was old and advanced in years; and they covered him with clothes, but he could not get warm.
ಅರಸನಾದ ದಾವೀದನು ವಯೋವೃದ್ಧನಾಗಿದ್ದನು. ಸೇವಕರು ಎಷ್ಟು ಕಂಬಳಿ ಹೊದಿಸಿದರೂ ಅವನಿಗೆ ಬೆಚ್ಚಗಾಗುತ್ತಿರಲಿಲ್ಲ.
2 Therefore his servants said to him, Let there be sought for my lord the king a young virgin: and let her stand before the king, and let her cherish him, and let her lie in thy bosom, that my lord the king may get warm.
ಆದುದರಿಂದ ಅವನ ಸೇವಕರು ಅವನಿಗೆ, “ನಮ್ಮ ಒಡೆಯನಾದ ಅರಸನಿಗೋಸ್ಕರ ಒಬ್ಬ ಕನ್ಯೆಯನ್ನು ಹುಡುಕಿತರುವೆವು. ಆಕೆಯು ಅರಸನ ಸನ್ನಿಧಿಯಲ್ಲಿದ್ದುಕೊಂಡು ನಿನ್ನನ್ನು ಪರಾಂಬರಿಸಬೇಕು. ಆಕೆಯು ನಮ್ಮ ಒಡೆಯನಾದ ಅರಸನ ಪಕ್ಕದಲ್ಲಿ ಮಲಗುವುದರಿಂದ ನಿಮಗೆ ಬೆಚ್ಚಗಾಗುವುದು” ಎಂದು ಹೇಳಿದರು.
3 So they sought for a fair damsel throughout all the land of Israel, and found Abishag a Shunammite, and brought her to the king.
ಆನಂತರ ಅವರು ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಲ್ಲಿ ಅತಿ ಸುಂದರಿಯಾದ ಹುಡುಗಿಯನ್ನು ಹುಡುಕುವುದಕ್ಕೆ ಹೋಗಿ ಶೂನೇಮ್ ಊರಿನ ಅಬೀಷಗ್ ಎಂಬಾಕೆಯನ್ನು ಕಂಡು ಆಕೆಯನ್ನು ಅರಸನ ಬಳಿಗೆ ಕರೆದುಕೊಂಡು ಬಂದರು.
4 And the damsel was very fair, and cherished the king, and ministered to him: but the king knew her not.
ಬಹು ಸುಂದರಿಯಾದ ಈಕೆಯು ಅರಸನನ್ನು ಶುಶ್ರೂಷೆ ಮಾಡುವ ಸೇವಕಿಯಾದಳು. ಆದರೆ ಅರಸನು ಈಕೆಯನ್ನು ಸಂಗಮಿಸಲಿಲ್ಲ.
5 Then Adonijah the son of Haggith exalted himself, saying, I will be king: and he prepared him chariots and horsemen, and fifty men to run before him.
ಆನಂತರ ಹಗ್ಗೀತಳ ಮಗನಾದ ಅದೋನೀಯನು, “ನಾನೇ ಅರಸನಾಗತಕ್ಕವನು” ಎಂಬುದಾಗಿ ಹೇಳಿ ಉಬ್ಬಿಕೊಂಡು, ತನಗೋಸ್ಕರ ರಥರಥಾಶ್ವಗಳನ್ನೂ, ಮುಂದೆ ಓಡುವುದಕ್ಕಾಗಿ ಐವತ್ತು ಸಿಪಾಯಿಗಳನ್ನೂ ನೇಮಿಸಿಕೊಂಡನು.
6 And his father had not displeased him at any time in saying, Why hast thou done so? and he also was a very handsome man; and his mother bore him after Absalom.
ಅವನ ತಂದೆಯಾದ ದಾವೀದನು, “ನೀನು ಹೀಗೆ ಮಾಡಿದ್ದೇಕೆ” ಎಂದು ಅವನನ್ನು ಒಂದು ಸಾರಿಯಾದರೂ ಗದರಿಸಿ ಬೇಸರಪಡಿಸಿರಲಿಲ್ಲ. ಅವನು ಬಹು ಸುಂದರವಾಗಿದ್ದನು. ಅಬ್ಷಾಲೋಮನ ತರುವಾಯ ಅವನೇ ಹಿರಿಯನಾಗಿದ್ದನು.
7 And he conferred with Joab the son of Zeruiah, and with Abiathar the priest: and they following Adonijah helped him.
ಅವನು ಚೆರೂಯಳ ಮಗನಾದ ಯೋವಾಬನನ್ನು ಮತ್ತು ಯಾಜಕನಾದ ಎಬ್ಯಾತಾರನನ್ನೂ ತನ್ನ ಕಡೆಗೆ ಒಲಿಸಿಕೊಂಡನು. ಇವರು ಅವನನ್ನು ಹಿಂಬಾಲಿಸಿ ಅವನಿಗೆ ಸಹಾಯಕರಾದರು.
8 But Zadok the priest, and Benaiah the son of Jehoiada, and Nathan the prophet, and Shimei, and Rei, and the mighty men who belonged to David, were not with Adonijah.
ಆದರೆ ಯಾಜಕನಾದ ಚಾದೋಕ್, ಯೆಹೋಯಾದಾವನ ಮಗನಾದ ಬೆನಾಯ, ಪ್ರವಾದಿಯಾದ ನಾತಾನ್, ಶಿಮ್ಮೀ, ರೇಗೀ ಮತ್ತು ದಾವೀದನ ವಿಶೇಷ ಕಾವಲಿನವರು ಅದೋನೀಯನನ್ನು ಬೆಂಬಲಿಸಲಿಲ್ಲ.
9 And Adonijah slew sheep and oxen and fat cattle by the stone of Zoheleth, which is by Enrogel, and invited all his brethren the king’s sons, and all the men of Judah the king’s servants:
ಅದೋನೀಯನು ರೋಗೆಲ್ ಬುಗ್ಗೆಯ ಬಳಿಯಲ್ಲಿರುವ ಚೋಹೆಲೆತ್ ಬಂಡೆಯ ಮೇಲೆ ಕುರಿ, ಹೋರಿ ಮೊದಲಾದ ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ, ರಾಜಪುತ್ರರಾದ ತನ್ನ ಉಳಿದ ಸಹೋದರರನ್ನೂ ಅರಸನ ಅಧಿಕಾರಿಗಳಾದ ಎಲ್ಲಾ ಯೆಹೂದ್ಯರನ್ನೂ ಔತಣಕ್ಕೆ ಆಮಂತ್ರಿಸಿದನು.
10 But Nathan the prophet, and Benaiah, and the mighty men, and Solomon his brother, he called not.
೧೦ಆದರೆ ಪ್ರವಾದಿಯಾದ ನಾತಾನ್, ಬೆನಾಯ, ದಾವೀದನ ವಿಶೇಷ ಕಾವಲಿನವರು ತಮ್ಮನಾದ ಸೊಲೊಮೋನ್ ಇವರನ್ನು ಮಾತ್ರ ಆಮಂತ್ರಿಸಿರಲಿಲ್ಲ.
11 Therefore Nathan spoke to Bathsheba the mother of Solomon, saying, Hast thou not heard that Adonijah the son of Haggith doth reign, and David our lord knoweth it not?
೧೧ಆಗ ನಾತಾನನು ಸೊಲೊಮೋನನ ತಾಯಿಯಾದ ಬತ್ಷೆಬೆಗೆ, “ಹಗ್ಗೀತಳ ಮಗನಾದ ಅದೋನೀಯನು ನಮ್ಮ ಒಡೆಯನಾದ ದಾವೀದನಿಗೆ ತಿಳಿಯದೇ ಅರಸನಾದನೆಂಬುದನ್ನು ನೀನು ಕೇಳಿದಿಯಲ್ಲವೋ?
12 Now therefore come, let me, I pray thee, give thee counsel, that thou mayest save thy own life, and the life of thy son Solomon.
೧೨ಈಗ ನನ್ನ ಆಲೋಚನೆಯನ್ನು ಲಾಲಿಸಿ ನಿನ್ನ ಮತ್ತು ನಿನ್ನ ಮಗನಾದ ಸೊಲೊಮೋನನ ಜೀವವನ್ನು ಉಳಿಸಿಕೋ.
13 Go and enter in to king David, and say to him, Didst not thou, my lord, O king, swear to thy handmaid, saying, Assuredly Solomon thy son shall reign after me, and he shall sit upon my throne? why then doth Adonijah reign?
೧೩ನೀನು ಅರಸನಾದ ದಾವೀದನ ಬಳಿಗೆ ಹೋಗಿ ಅವನಿಗೆ, ‘ನನ್ನ ಒಡೆಯನಾದ ಅರಸನು ತನ್ನ ತರುವಾಯ ನನ್ನ ಮಗನಾದ ಸೊಲೊಮೋನನೇ ಆಳಬೇಕು. ಅವನೇ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಬೇಕು ಎಂದು ತಮ್ಮ ದಾಸಿಯಾದ ನನಗೆ ಪ್ರಮಾಣ ಮಾಡಿ ಹೇಳಿದ್ದನಲ್ಲಾ. ಹೀಗಿದ್ದ ಮೇಲೆ ಅದೋನೀಯನು ಆಳುವುದೇಕೆ’ ಎಂದು ಕೇಳು.
14 Behold, while thou art yet talking there with the king, I will also come in after thee, and confirm thy words.
೧೪ನೀನು ಅರಸನೊಡನೆ ಮಾತನಾಡುತ್ತಿರುವಾಗ ನಾನು ಬಂದು ನಿನ್ನ ಮಾತನ್ನು ದೃಢಪಡಿಸುವೆನು” ಎಂದನು.
15 And Bathsheba went to the king into the chamber: and the king was very old; and Abishag the Shunammite ministered to the king.
೧೫ಅರಸನು ಬಹು ವೃದ್ಧನಾಗಿದುದರಿಂದ ಶೂನೇಮ್ಯಳಾದ ಅಬೀಷಗ್ ಎಂಬಾಕೆಯಿಂದ ಪರಾಂಬರಿಕೆಯನ್ನು ಹೊಂದುತ್ತಾ ಒಳಗಿನ ಕೋಣೆಯಲ್ಲಿಯೇ ಇರುತ್ತಿದ್ದನು.
16 And Bathsheba bowed, and did obeisance to the king. And the king said, What wouldest thou?
೧೬ಬತ್ಷೆಬೆಯು ಅಲ್ಲಿಗೆ ಹೋಗಿ ಅರಸನಿಗೆ ಬಾಗಿ ನಮಸ್ಕರಿಸಿದಳು. ಅರಸನು, “ನಿನಗೇನು ಬೇಕು?” ಎಂದು ಆಕೆಯನ್ನು ಕೇಳಿದನು.
17 And she said to him, My lord, thou didst swear by the LORD thy God to thy handmaid, saying, Assuredly Solomon thy son shall reign after me, and he shall sit upon my throne.
೧೭ಆಗ ಆಕೆಯು, “ನನ್ನ ಒಡೆಯನು ತನ್ನ ದೇವರಾದ ಯೆಹೋವನ ಮೇಲೆ ಆಣೆಯಿಟ್ಟು ತಮ್ಮ ದಾಸಿಯಾದ ನನಗೆ ನನ್ನ ತರುವಾಯ ನನ್ನ ಮಗನಾದ ಸೊಲೊಮೋನನು ಅರಸನಾಗಬೇಕು. ನಿಜವಾಗಿ ಅವನೇ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಬೇಕು ಎಂಬುದಾಗಿ ಹೇಳಿದ್ದೆಯಲ್ಲಾ.
18 And now, behold, Adonijah reigneth; and now, my lord the king, thou knowest it not:
೧೮ಆದರೆ ಈಗ ಅದೋನೀಯನು ನನ್ನ ಒಡೆಯನೂ ಅರಸನೂ ಆದ ನಿಮಗೆ ತಿಳಿಯದೇ ಅರಸನಾಗಿದ್ದಾನೆ.
19 And he hath slain oxen and fat cattle and sheep in abundance, and hath invited all the sons of the king, and Abiathar the priest, and Joab the captain of the host: but Solomon thy servant hath he not invited.
೧೯ಆತನು ಹೋರಿ, ಕುರಿ ಮೊದಲಾದ ಹಲವು ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ ನಿನ್ನ ಸೇವಕನಾದ ಸೊಲೊಮೋನನ ಹೊರತಾಗಿ ಎಲ್ಲಾ ರಾಜಪುತ್ರರನ್ನೂ, ಯಾಜಕನಾದ ಎಬ್ಯಾತಾರನನ್ನೂ, ಸೇನಾಧಿಪತಿಯಾದ ಯೋವಾಬನನ್ನೂ ಔತಣಕ್ಕೆ ಕರೆದಿದ್ದಾನೆ.
20 And thou, my lord, O king, the eyes of all Israel are upon thee, that thou shouldest tell them who shall sit on the throne of my lord the king after him.
೨೦ನನ್ನ ಒಡೆಯನೂ ಅರಸನೂ ಆದ ನಿಮ್ಮ ತರುವಾಯ ಸಿಂಹಾಸನದ ಮೇಲೆ ಕುಳಿತುಕೊಳ್ಳತಕ್ಕವರು ಯಾರೆಂಬುದನ್ನು ನೀವೇ ಗೊತ್ತುಮಾಡಬೇಕೆಂದು ಇಸ್ರಾಯೇಲರೆಲ್ಲರೂ ಕಾದುಕೊಂಡಿದ್ದಾರೆ.
21 Otherwise it shall come to pass, when my lord the king shall sleep with his fathers, that I and my son Solomon shall be counted offenders.
೨೧ನನ್ನ ಒಡೆಯನೂ, ಅರಸನೂ ಆದ ನೀವೂ ಹಾಗೆ ಮಾಡದೆ ಪೂರ್ವಿಕರ ಬಳಿಗೆ ಸೇರುವುದಾದರೆ ನಾನೂ ಮತ್ತು ನನ್ನ ಮಗನೂ ದೋಷಾರೋಪಣೆಗೆ ಗುರಿಯಾಗುವೆವು” ಎಂದು ಹೇಳಿದಳು.
22 And, lo, while she was yet talking with the king, Nathan the prophet also came in.
೨೨ಆಕೆಯು ಹೀಗೆ ಅರಸನ ಸಂಗಡ ಮಾತನಾಡುವಷ್ಟರಲ್ಲಿ ಪ್ರವಾದಿಯಾದ ನಾತಾನನು ಬಂದನು.
23 And they told the king, saying, Behold Nathan the prophet. And when he had come in before the king, he bowed himself before the king with his face to the ground.
೨೩ಸೇವಕರು ನಾತಾನನು ಬಂದಿರುವ ಸಂಗತಿಯನ್ನು ಅರಸನಿಗೆ ತಿಳಿಸಿದರು. ಪ್ರವಾದಿಯಾದ ನಾತಾನನು ಅರಸನ ಮುಂದೆ ಹೋಗಿ ಸಾಷ್ಟಾಂಗನಮಸ್ಕಾರಮಾಡಿದನು.
24 And Nathan said, My lord, O king, hast thou said, Adonijah shall reign after me, and he shall sit upon my throne?
೨೪ನಾತಾನನು, “ನನ್ನ ಒಡೆಯನೂ, ಅರಸನೂ ಆದ ನೀನು ಅದೋನೀಯನಿಗೆ ಅರಸನಾಗುವುದಕ್ಕೆ ನಿನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವುದಕ್ಕೂ ಅಪ್ಪಣೆಕೊಟ್ಟಿರುವಂತೆ ಕಾಣುತ್ತದೆ.
25 For he hath gone down this day, and hath slain oxen and fat cattle and sheep in abundance, and hath invited all the king’s sons, and the captains of the host, and Abiathar the priest; and, behold, they eat and drink before him, and say, God save king Adonijah.
೨೫ಅವನು ಗಟ್ಟಾ ಇಳಿದು ಹೋಗಿ ಹೋರಿ, ಕುರಿ ಮುಂತಾದ ಹಲವು ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ, ಎಲ್ಲಾ ರಾಜಪುತ್ರರನ್ನೂ, ಸೇನಾಧಿಪತಿಗಳನ್ನೂ, ಯಾಜಕನಾದ ಎಬ್ಯಾತಾರನನ್ನೂ ಔತಣಕ್ಕೆ ಕರೆದಿದ್ದಾನೆ. ಅವರು ಅವನ ಪಂಕ್ತಿಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು, ‘ಅರಸನಾದ‍ ಅದೋನೀಯನು ಚಿರಂಜೀವಿಯಾಗಿರಲಿ’ ಎಂದು ಕೂಗುತ್ತಿದ್ದಾರೆ.
26 But me, even me thy servant, and Zadok the priest, and Benaiah the son of Jehoiada, and thy servant Solomon, hath he not invited.
೨೬ಆದರೆ ಅವನು ನಿನ್ನ ಸೇವಕನಾದ ನನ್ನನ್ನೂ, ಯಾಜಕನಾದ ಚಾದೋಕ್, ಯೆಹೋಯಾದಾವನ ಮಗನಾದ ಬೆನಾಯ ಎಂಬುವರನ್ನೂ ನಿನ್ನ ಮಗನೂ, ಸೇವಕನೂ ಸೊಲೊಮೋನನನ್ನೂ ಔತಣಕ್ಕೆ ಕರೆಯಲಿಲ್ಲ.
27 Is this thing done by my lord the king, and thou hast not shown it to thy servant, who should sit on the throne of my lord the king after him?
೨೭ಈ ಕಾರ್ಯವು ನನ್ನ ಒಡೆಯನೂ ಅರಸನೂ ಆದ ನಿನ್ನಿಂದಲೇ ನಡೆದಿರುವ ಪಕ್ಷದಲ್ಲಿ ನಿನ್ನ ತರುವಾಯ ಸಿಂಹಾಸನದ ಮೇಲೆ ಕುಳಿತುಕೊಳ್ಳತಕ್ಕವರು ಯಾರು ಎಂಬುವುದನ್ನು ನಿನ್ನ ಸೇವಕನಾದ ನನಗೆ ತಿಳಿಸಬಾರದಾಗಿತ್ತೇ” ಎಂದು ಹೇಳಿದನು.
28 Then king David answered and said, Call me Bathsheba. And she came into the king’s presence, and stood before the king.
೨೮ಅರಸನಾದ ದಾವೀದನು ಬತ್ಷೆಬೆಯನ್ನು ಕರೆಯಬೇಕೆಂದು ಆಜ್ಞಾಪಿಸಿದನು. ಆಕೆಯು ಬಂದು ಅರಸನ ಮುಂದೆ ನಿಂತಳು.
29 And the king swore, and said, As the LORD liveth, that hath redeemed my soul out of all distress,
೨೯ಅರಸನು ಆಕೆಗೆ, “ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿ ಕಾಪಾಡಿದ ಯೆಹೋವನಾಣೆ,
30 Even as I swore to thee by the LORD God of Israel, saying, Assuredly Solomon thy son shall reign after me, and he shall sit upon my throne in my stead; even so will I certainly do this day.
೩೦ನನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಅರಸನಾದ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಬೇಕೆಂದು ನಾನು ನಿನಗೆ ಇಸ್ರಾಯೇಲ್ ದೇವರಾದ ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಿದ್ದನ್ನು ಈಹೊತ್ತೇ ನೆರವೇರಿಸುವೆನು” ಎಂದನು.
31 Then Bathsheba bowed with her face to the earth, and did reverence to the king, and said, Let my lord king David live for ever.
೩೧ಆಗ ಬತ್ಷೆಬೆಯು ಅರಸನಿಗೆ ಸಾಷ್ಟಾಂಗನಮಸ್ಕಾರ ಮಾಡಿ, “ನನ್ನ ಒಡೆಯನೂ ಅರಸನೂ ಆದ ದಾವೀದನು ಸದಾಕಾಲವೂ ಬಾಳಲಿ” ಎಂದಳು.
32 And king David said, Call me Zadok the priest, and Nathan the prophet, and Benaiah the son of Jehoiada. And they came before the king.
೩೨ಅನಂತರ ಅರಸನಾದ ದಾವೀದನು ತನ್ನ ಸೇವಕರಿಗೆ, “ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ, ಯೆಹೋಯಾದಾವನ ಮಗನಾದ ಬೆನಾಯ ಎಂಬುವರನ್ನು ಕರೆಯಿರಿ” ಎಂದು ಆಜ್ಞಾಪಿಸಿದನು. ಅವರು ಅರಸನ ಸನ್ನಿಧಿಗೆ ಬಂದರು.
33 The king also said to them, Take with you the servants of your lord, and cause Solomon my son to ride upon my own mule, and bring him down to Gihon:
೩೩ಅರಸನು ಅವರಿಗೆ, “ನೀವು ನನ್ನ ಸೇವಕರನ್ನು ಕರೆದುಕೊಂಡು ನನ್ನ ಮಗನಾದ ಸೊಲೊಮೋನನನ್ನು ನನ್ನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿಕೊಂಡು ಗೀಹೋನ್ ಬುಗ್ಗೆಗೆ ಹೋಗಿರಿ.
34 And let Zadok the priest and Nathan the prophet anoint him there king over Israel: and blow ye with the trumpet, and say, God save king Solomon.
೩೪ಅಲ್ಲಿ ಯಾಜಕನಾದ ಚಾದೋಕನೂ ಮತ್ತು ಪ್ರವಾದಿಯಾದ ನಾತಾನನೂ ಅವನನ್ನು ಇಸ್ರಾಯೇಲರ ಅರಸನನ್ನಾಗಿ ಅಭಿಷೇಕಿಸಲಿ. ಅನಂತರ ಕೊಂಬನ್ನೂದಿರಿ. ಎಲ್ಲರೂ, ‘ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ’ ಎಂದು ಜಯಘೋಷ ಮಾಡಲಿ.
35 Then ye shall come up after him, that he may come and sit upon my throne; for he shall be king in my stead: and I have appointed him to be ruler over Israel and over Judah.
೩೫ಆಮೇಲೆ ನೀವು ಅವನ ಹಿಂದೆ ಬನ್ನಿರಿ. ಅವನು ಅರಮನೆಯನ್ನು ಪ್ರವೇಶಿಸಿ ನನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ನನಗೆ ಬದಲಾಗಿ ಆಳಬೇಕು. ನಾನು ಇಸ್ರಾಯೇಲರ ಮತ್ತು ಯೆಹೂದ್ಯರನ್ನು ಆಳಲು ಅವನನ್ನೇ ಪ್ರಭುವನ್ನಾಗಿ ನೇಮಿಸಿದ್ದೇನೆ” ಎಂದನು.
36 And Benaiah the son of Jehoiada answered the king, and said, Amen: the LORD God of my lord the king say so too.
೩೬ಯೆಹೋಯಾದಾವನ ಮಗನಾದ ಬೆನಾಯನು ಅರಸನಿಗೆ, “ಹಾಗೆಯೇ ಆಗಲಿ. ನನ್ನ ಒಡೆಯನಾದ ಅರಸನ ದೇವರಾದ ಯೆಹೋವನು ಅದನ್ನು ಸ್ಥಿರಪಡಿಸಲಿ.
37 As the LORD hath been with my lord the king, even so let him be with Solomon, and make his throne greater than the throne of my lord king David.
೩೭ಆತನು ನನ್ನ ಒಡೆಯನಾದ ಅರಸನ ಸಂಗಡ ಇದ್ದ ಪ್ರಕಾರ ಸೊಲೊಮೋನನ ಸಂಗಡಲೂ ಇದ್ದು ರಾಜ್ಯವನ್ನು ನನ್ನ ಒಡೆಯನೂ, ಅರಸನೂ ಆದ ನಿನ್ನ ಕಾಲದಲ್ಲಿದ್ದದಕ್ಕಿಂತ ಹೆಚ್ಚಾಗಿ ಅಭಿವೃದ್ಧಿಮಾಡಲಿ” ಎಂದು ನುಡಿದನು.
38 So Zadok the priest, and Nathan the prophet, and Benaiah the son of Jehoiada, and the Cherethites, and the Pelethites, went down, and caused Solomon to ride upon king David’s mule, and brought him to Gihon.
೩೮ಆಗ ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ್, ಯೆಹೋಯಾದಾವನ ಮಗನಾದ ಬೆನಾಯ ಎಂಬುವರು ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳನ್ನು ತೆಗೆದುಕೊಂಡು ಸೊಲೊಮೋನನನ್ನು ಅರಸನಾದ ದಾವೀದನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿ, ಗೀಹೋನಿಗೆ ಕರೆದುಕೊಂಡು ಹೋದರು.
39 And Zadok the priest took an horn of oil out of the tabernacle, and anointed Solomon. And they blew the trumpet; and all the people said, God save king Solomon.
೩೯ಯಾಜಕನಾದ ಚಾದೋಕನು ದೇವದರ್ಶನದ ಗುಡಾರದಲ್ಲಿ ಎಣ್ಣೆಯ ಕೊಂಬನ್ನು ತೆಗೆದುಕೊಂಡು ಸೊಲೊಮೋನನನ್ನು ಅಭಿಷೇಕಿಸಿದನು. ಕೂಡಲೇ ಕೊಂಬನ್ನೂದಿ ಎಲ್ಲಾ ಜನರು “ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ” ಎಂದು ಆರ್ಭಟಿಸಿದರು.
40 And all the people came up after him, and the people piped with pipes, and rejoiced with great joy, so that the earth shook with the sound of them.
೪೦ತರುವಾಯ ಅವರೆಲ್ಲರೂ ಅವನನ್ನು ಹಿಂಬಾಲಿಸಿ ಕೊಳಲೂದುತ್ತಾ, ಬಹುಸಂತೋಷದಿಂದ ಜಯಘೋಷಮಾಡುತ್ತಾ ಹಿಂತಿರುಗಿ ಬಂದರು. ಅವರ ಕೂಗಿನಿಂದ ಭೂಮಿಯು ನಡುಗಿತೋ ಎಂಬಂತೆ ಆಯಿತು.
41 And Adonijah and all the guests that were with him heard it as they had finished eating. And when Joab heard the sound of the trumpet, he said, Why is this noise of the city being in an uproar?
೪೧ಅದೋನೀಯನು ಅವನ ಸಂಗಡ ಇದ್ದ ಅತಿಥಿಗಳೂ ಭೋಜನವನ್ನು ಮುಗಿಸುವಷ್ಟರಲ್ಲೇ ಅವರಿಗೆ ಈ ಕೂಗು ಕೇಳಿಸಿತು. ಯೋವಾಬನು ಕೊಂಬಿನ ಧ್ವನಿಯನ್ನು ಕೇಳಿದಾಗ, “ಪಟ್ಟಣದಲ್ಲಿ ಇಂಥ ಗದ್ದಲವೇಕೆ?” ಎಂದು ವಿಚಾರಿಸಿದನು.
42 And while he yet spoke, behold, Jonathan the son of Abiathar the priest came: and Adonijah said to him, Come in; for thou art a valiant man, and bringest good tidings.
೪೨ಆಗ ಯಾಜಕನಾದ ಎಬ್ಯಾತಾರನ ಮಗನಾದ ಯೋನಾತಾನನು ಅಲ್ಲಿಗೆ ಬಂದನು. ಅದೋನೀಯನು ಅವನಿಗೆ, “ಬಾ ನೀನು ಯೋಗ್ಯ ಪುರುಷನೂ, ಶುಭವರ್ತಮಾನವನ್ನು ತರುವವನೂ ಆಗಿರುತ್ತೀ” ಎಂದನು.
43 And Jonathan answered and said to Adonijah, Verily our lord king David hath made Solomon king.
೪೩ಯೋನಾತಾನನು ಅವನಿಗೆ, “ಶುಭವಾರ್ತೆ ಎಲ್ಲಿ? ನಮ್ಮೊಡೆಯನೂ, ಅರಸನೂ ಆದ ದಾವೀದನು ಸೊಲೊಮೋನನನ್ನು ಅರಸನನ್ನಾಗಿ ಮಾಡಿದ್ದಾನೆ.
44 And the king hath sent with him Zadok the priest, and Nathan the prophet, and Benaiah the son of Jehoiada, and the Cherethites, and the Pelethites, and they have caused him to ride upon the king’s mule:
೪೪ಅರಸನು ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ್ ಯೆಹೋಯಾದಾವನ ಮಗನಾದ ಬೆನಾಯ ಎಂಬುವರನ್ನೂ, ಕೆರೇತ್ಯ ಮತ್ತು ಪೆಲೇತ್ಯರನ್ನೂ ಅವನ ಜೊತೆಯಲ್ಲಿ ಕಳುಹಿಸಿದ್ದಾನೆ. ಅವರು ಅವನನ್ನು ಅರಸನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿದ್ದಾರೆ.
45 And Zadok the priest and Nathan the prophet have anointed him king in Gihon: and they have come from there rejoicing, so that the city is in an uproar. This is the noise that ye have heard.
೪೫ಯಾಜಕನಾದ ಚಾದೋಕನೂ, ಪ್ರವಾದಿಯಾದ ನಾತಾನನೂ ಗೀಹೋನಿನ ಬಳಿಯಲ್ಲಿ ಅವನಿಗೆ ರಾಜ್ಯಾಭಿಷೇಕ ಮಾಡಿದರು. ಅಲ್ಲಿಂದ ಅವರು ಮಹಾ ಸಂತೋಷದಿಂದ ಜಯಘೋಷ ಮಾಡುತ್ತಾ ಪಟ್ಟಣಕ್ಕೆ ಬಂದಿದ್ದಾರೆ. ಇದರಿಂದಲೇ ಪಟ್ಟಣದಲ್ಲಿ ಗದ್ದಲವುಂಟಾಗಿದೆ. ನೀವು ಕೇಳಿದ ಶಬ್ದವು ಇದೇ.
46 And also Solomon sitteth on the throne of the kingdom.
೪೬ಇದಲ್ಲದೆ ಸೊಲೊಮೋನನು ರಾಜಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ.
47 And moreover the king’s servants came to bless our lord king David, saying, God make the name of Solomon better than thy name, and make his throne greater than thy throne. And the king bowed himself upon the bed.
೪೭ಅರಸನಾದ ದಾವೀದನ ಸೇವಕರು ನಮ್ಮ ಒಡೆಯನೂ, ಅರಸನೂ ಆದ ದಾವೀದನ ಮುಂದೆ ಬಂದು, ‘ನಿನ್ನ ದೇವರು ನಿನ್ನ ಹೆಸರಿಗಿಂತಲೂ ಸೊಲೊಮೋನನ ಹೆಸರನ್ನು ಪ್ರಸಿದ್ಧಿಗೆ ತರಲಿ. ರಾಜ್ಯವನ್ನು ನಿನ್ನ ಕಾಲದಲ್ಲಿ ಇದ್ದದ್ದಕ್ಕಿಂತ ಅವನ ಕಾಲದಲ್ಲಿ ಹೆಚ್ಚು ಬಲಪಡಿಸಲಿ’ ಎಂದು ಅವನನ್ನು ಹರಿಸಿದ್ದಾರೆ.
48 And also thus said the king, Blessed be the LORD God of Israel, who hath given one to sit on my throne this day, my eyes even seeing it.
೪೮ಅರಸನು ತನ್ನ ಹಾಸಿಗೆಯ ಮೇಲೆ ಬಾಗಿಕೊಂಡು, ‘ನಾನು ಕಣ್ಣಾರೆ ಕಾಣುವಂತೆ ಇಂದು ನನ್ನ ಸಿಂಹಾಸನಕ್ಕೆ ಒಬ್ಬ ಉತ್ತರಾಧಿಕಾರಿಯನ್ನು ದಯಪಾಲಿಸಿದ ಇಸ್ರಾಯೇಲರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ’ ಎಂದು ಹೇಳಿದ್ದಾನೆ” ಅಂದರು.
49 And all the guests that were with Adonijah were afraid, and arose, and went every man his way.
೪೯ಆಗ ಅದೋನೀಯನಿಂದ ಔತಣಕ್ಕೆ ಕರೆಯಲ್ಪಟ್ಟವರೆಲ್ಲರೂ ಭಯಪಟ್ಟು ತಮ್ಮ ತಮ್ಮ ಮನೆಗಳಿಗೆ ಹೊರಟುಹೋದರು.
50 And Adonijah feared because of Solomon, and arose, and went, and caught hold on the horns of the altar.
೫೦ಅದೋನೀಯನು ಸೊಲೊಮೋನನಿಗೆ ಹೆದರಿ ಹೊರಟುಹೋಗಿ ಯಜ್ಞವೇದಿಯ ಕೊಂಬುಗಳನ್ನು ಹಿಡಿದನು.
51 And it was told Solomon, saying, Behold, Adonijah feareth king Solomon: for, lo, he hath caught hold on the horns of the altar, saying, Let king Solomon swear to me to day that he will not slay his servant with the sword.
೫೧ದೂತರು ಬಂದು ಸೊಲೊಮೋನನಿಗೆ, “ಅದೋನೀಯನು ನಿನಗೆ ಹೆದರಿ ಯಜ್ಞವೇದಿಯ ಕೊಂಬುಗಳನ್ನು ಹಿಡಿದು, ‘ಅರಸನಾದ ಸೊಲೊಮೋನನು ನನ್ನನ್ನು ಕತ್ತಿಯಿಂದ ಸಂಹರಿಸುವುದಿಲ್ಲವೆಂಬುದಾಗಿ ಈ ಹೊತ್ತು ನನಗೆ ಪ್ರಮಾಣಮಾಡಬೇಕೆಂದು ಬೇಡಿಕೊಳ್ಳುತ್ತೇನೆ’” ಎಂಬುದಾಗಿ ತಿಳಿಸಿದನು.
52 And Solomon said, If he will show himself a worthy man, there shall not an hair of him fall to the earth: but if wickedness shall be found in him, he shall die.
೫೨ಅವನು, “ಅದೋನೀಯನು ಯೋಗ್ಯತೆಯುಳ್ಳವನಾಗಿ ನಡೆಯುವುದಾದರೆ ಅವನ ಕೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಗೊಡಿಸುವುದಿಲ್ಲ. ಆದರೆ ಅವನಲ್ಲಿ ಕೆಟ್ಟತನವು ಕಂಡುಬರುವುದಾದರೆ ಅವನು ಸಾಯುವನು” ಎಂದು ಹೇಳಿ ಆಳುಗಳನ್ನು ಕಳುಹಿಸಿ ಅವನನ್ನು ಯಜ್ಞವೇದಿಯ ಬಳಿಯಿಂದ ಕರೆಯಿಸಿದನು.
53 So king Solomon sent, and they brought him down from the altar. And he came and bowed himself to king Solomon: and Solomon said to him, Go to thy house.
೫೩ಅವನು ಬಂದಾಗ ಅರಸನಾದ ಸೊಲೊಮೋನನಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ಸೊಲೊಮೋನನು ಅವನಿಗೆ ಅವನ ಮನೆಗೆ ಹೋಗಲು ಅಪ್ಪಣೆಕೊಟ್ಟನು.

< 1 Kings 1 >