< Numbers 2 >
1 And the LORD spoke to Moses and to Aaron, saying,
೧ಯೆಹೋವನು ಮಾತನಾಡಿ ಮೋಶೆ ಮತ್ತು ಆರೋನರಿಗೆ ಹೇಳಿದ್ದೇನೆಂದರೆ,
2 Every man of the children of Israel shall encamp by his own standard, with the banner of their father’s house: far off from the tabernacle of the congregation shall they encamp.
೨“ಇಸ್ರಾಯೇಲರೆಲ್ಲರೂ ಒಬ್ಬೊಬ್ಬರಾಗಿ ಕುಟುಂಬದ ಗುರುತುಗಳ ಪ್ರಕಾರ ದೇವದರ್ಶನದ ಗುಡಾರದ ಸುತ್ತಲೂ ಸ್ವಲ್ಪ ದೂರವಾಗಿ ಡೇರೆಗಳನ್ನು ತಮ್ಮ ತಮ್ಮ ದಂಡಿನ ಧ್ವಜದ ಹತ್ತಿರದಲ್ಲಿ ಹಾಕಿಕೊಳ್ಳಬೇಕು. ಅವರು ದೇವದರ್ಶನದ ಗುಡಾರದ ಎದುರಿನಲ್ಲಿ ಇಳಿದುಕೊಳ್ಳಬೇಕು.”
3 And on the east side toward the rising of the sun shall they of the standard of the camp of Judah encamp throughout their armies: and Nahshon the son of Amminadab shall be captain of the children of Judah.
೩ದೇವದರ್ಶನ ಗುಡಾರದ ಪೂರ್ವದಿಕ್ಕಿನಲ್ಲಿ ಸೂರ್ಯೋದಯವಾಗುವ ಕಡೆಗೆ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ದಂಡಿನ ಧ್ವಜದ ಹತ್ತಿರ ಡೇರೆಗಳನ್ನು ಹಾಕಿಕೊಳ್ಳಬೇಕು. ಯೆಹೂದ ಕುಲದ ಸೈನ್ಯಾಧಿಪತಿಯು ಅಮ್ಮೀನಾದಾಬನ ಮಗನಾದ ನಹಶೋನನು.
4 And his host, and those that were numbered of them, were seventy and four thousand and six hundred.
೪ಅವನ ಸೈನಿಕರ ಸಂಖ್ಯೆ 74,600 ಮಂದಿ.
5 And those that shall encamp next to him shall be the tribe of Issachar: and Nethaneel the son of Zuar shall be captain of the children of Issachar.
೫ಯೆಹೂದ ಕುಲದ ಬಳಿಯಲ್ಲಿ ಇಳಿದುಕೊಳ್ಳುವವರು ಇಸ್ಸಾಕಾರನ ಕುಲದವರು. ಚೂವಾರನ ಮಗನಾದ ನೆತನೇಲನು ಇಸ್ಸಾಕಾರರ ಸೈನ್ಯಾಧಿಪತಿ.
6 And his host, and those that were numbered of them, were fifty and four thousand and four hundred.
೬ಅವನ ಸೈನಿಕರ ಸಂಖ್ಯೆ 54,400 ಮಂದಿ.
7 Then the tribe of Zebulun: and Eliab the son of Helon shall be captain of the children of Zebulun.
೭ಇಸ್ಸಾಕಾರರ ಬಳಿಯಲ್ಲಿ ಇಳಿದುಕೊಳ್ಳುವವರು ಜೆಬುಲೂನ್ ಕುಲದವರು. ಹೇಲೋನನ ಮಗನಾದ ಎಲೀಯಾಬನು ಜೆಬುಲೂನ್ಯರ ಸೈನ್ಯಾಧಿಪತಿ.
8 And his host, and those that were numbered of them, were fifty and seven thousand and four hundred.
೮ಅವನ ಸೈನಿಕರ ಸಂಖ್ಯೆ 57,400 ಮಂದಿ.
9 All that were numbered in the camp of Judah were an hundred thousand and eighty thousand and six thousand and four hundred, throughout their armies. These shall first move forward.
೯ಹೀಗೆ ಯೆಹೂದ ಕುಲದ ದಂಡಿಗೆ ಸೇರಿದವರ ಸೈನಿಕರ ಒಟ್ಟು ಸಂಖ್ಯೆ 1,86,400 ಮಂದಿ. ಇವರು ಮುಂಭಾಗದಲ್ಲಿ ಹೊರಡಬೇಕು.
10 On the south side shall be the standard of the camp of Reuben according to their armies: and the captain of the children of Reuben shall be Elizur the son of Shedeur.
೧೦ದಕ್ಷಿಣ ದಿಕ್ಕಿನಲ್ಲಿ ರೂಬೇನ್ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಶೆದೇಯೂರನ ಮಗನಾದ ಎಲೀಚೂರನು ರೂಬೇನ್ ಕುಲದ ಸೈನ್ಯಾಧಿಪತಿ.
11 And his host, and those that were numbered of them, were forty and six thousand and five hundred.
೧೧ಅವನ ಸೈನಿಕರ ಸಂಖ್ಯೆ 46,500 ಮಂದಿ.
12 And those who encamp by him shall be the tribe of Simeon: and the captain of the children of Simeon shall be Shelumiel the son of Zurishaddai.
೧೨ರೂಬೇನ್ ಕುಲದವರ ಬಳಿಯಲ್ಲಿ ಇಳಿದುಕೊಳ್ಳುವವರು ಸಿಮೆಯೋನ್ ಕುಲದವರು. ಚೂರೀಷದ್ದೈಯನ ಮಗನಾದ ಶೆಲುಮೀಯೇಲನು ಸಿಮೆಯೋನ್ ಕುಲದ ಸೈನ್ಯಾಧಿಪತಿ.
13 And his host, and those that were numbered of them, were fifty and nine thousand and three hundred.
೧೩ಅವನ ಸೈನಿಕರ ಸಂಖ್ಯೆ 59,300 ಮಂದಿ.
14 Then the tribe of Gad: and the captain of the sons of Gad shall be Eliasaph the son of Reuel.
೧೪ತರುವಾಯ ಗಾದ್ಯರ ಕುಲದವರು. ರೆಗೂವೇಲನ ಮಗನಾದ ಎಲ್ಯಾಸಾಫನು ಗಾದ್ ಕುಲದ ಸೈನ್ಯಾಧಿಪತಿ.
15 And his host, and those that were numbered of them, were forty and five thousand and six hundred and fifty.
೧೫ಅವನ ಸೈನಿಕರ ಸಂಖ್ಯೆ 45,650 ಮಂದಿ.
16 All that were numbered in the camp of Reuben were an hundred thousand and fifty and one thousand and four hundred and fifty, throughout their armies. And they shall move forward in the second rank.
೧೬ಹೀಗೆ ರೂಬೇನ್ ಕುಲದ ದಂಡಿಗೆ ಸೇರಿದ ಸೈನಿಕರ ಒಟ್ಟು ಸಂಖ್ಯೆ 1,51,450 ಮಂದಿ. ಇವರು ಎರಡನೆಯ ದಂಡಾಗಿ ಹೊರಡಬೇಕು.
17 Then the tabernacle of the congregation shall move forward with the camp of the Levites in the midst of the camp: as they encamp, so shall they move forward, every man in his place by their standards.
೧೭ಅನಂತರ ಸೈನ್ಯಗಳ ಮಧ್ಯದಲ್ಲಿ ದೇವದರ್ಶನದ ಗುಡಾರವು ಲೇವಿಯರ ಪಾಳೆಯದಿಂದ ಹೊರಡಬೇಕು. ಅವರು ಇಳಿದುಕೊಳ್ಳುವ ಪ್ರಕಾರವೇ ತಮ್ಮ ತಮ್ಮ ಧ್ವಜಗಳನ್ನು ಹಿಡಿದುಕೊಂಡು ತಮಗೆ ಗೊತ್ತಾದ ಸ್ಥಾನದಲ್ಲಿ ಹೊರಡಬೇಕು.
18 On the west side shall be the standard of the camp of Ephraim according to their armies: and the captain of the sons of Ephraim shall be Elishama the son of Ammihud.
೧೮ಪಶ್ಚಿಮ ದಿಕ್ಕಿನಲ್ಲಿ ಎಫ್ರಾಯೀಮ್ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅಮ್ಮೀಹೂದನ ಮಗನಾದ ಎಲೀಷಾಮಾನು ಎಫ್ರಾಯೀಮ್ ಕುಲದ ಸೈನ್ಯಾಧಿಪತಿ.
19 And his host, and those that were numbered of them, were forty thousand and five hundred.
೧೯ಅವನ ಸೈನಿಕರ ಸಂಖ್ಯೆ 40,500 ಮಂದಿ.
20 And by him shall be the tribe of Manasseh: and the captain of the children of Manasseh shall be Gamaliel the son of Pedahzur.
೨೦ಎಫ್ರಾಯೀಮ್ ಬಳಿಯಲ್ಲಿ ಮನಸ್ಸೆ ಕುಲದವರೂ ತಮ್ಮ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಪೆದಾಚೂರನ ಮಗನಾದ ಗಮ್ಲೀಯೇಲ್ ಮನಸ್ಸೆ ಕುಲದ ಸೈನ್ಯಾಧಿಪತಿ.
21 And his host, and those that were numbered of them, were thirty and two thousand and two hundred.
೨೧ಅವನ ಸೈನಿಕರ ಸಂಖ್ಯೆ 32,200 ಮಂದಿ.
22 Then the tribe of Benjamin: and the captain of the sons of Benjamin shall be Abidan the son of Gideoni.
೨೨ತರುವಾಯ ಬೆನ್ಯಾಮೀನ ಕುಲದವರು. ಗಿದ್ಯೋನಿಯ ಮಗನಾದ ಅಬೀದಾನ್ ಬೆನ್ಯಾಮೀನ ಕುಲದ ಸೈನ್ಯಾಧಿಪತಿ.
23 And his host, and those that were numbered of them, were thirty and five thousand and four hundred.
೨೩ಅವನ ಸೈನಿಕರ ಸಂಖ್ಯೆ 35,400 ಮಂದಿ.
24 All that were numbered of the camp of Ephraim were an hundred thousand and eight thousand and an hundred, throughout their armies. And they shall go forward in the third rank.
೨೪ಹೀಗೆ ಎಫ್ರಾಯೀಮ್ಯರ ದಂಡಿಗೆ ಸೇರಿದ ಸೈನಿಕರ ಒಟ್ಟು ಸಂಖ್ಯೆ 1,08,100 ಮಂದಿ. ಇವರು ಮೂರನೆಯ ದಂಡಾಗಿ ಹೊರಡಬೇಕು.
25 The standard of the camp of Dan shall be on the north side by their armies: and the captain of the children of Dan shall be Ahiezer the son of Ammishaddai.
೨೫ಉತ್ತರ ದಿಕ್ಕಿನಲ್ಲಿ ದಾನ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅಮ್ಮೀಷದ್ದೈಯ ಮಗನಾದ ಅಹೀಗೆಜೆರ್ ದಾನ್ ಕುಲದ ಸೈನ್ಯಾಧಿಪತಿ.
26 And his host, and those that were numbered of them, were sixty and two thousand and seven hundred.
೨೬ಅವನ ಸೈನಿಕರ ಸಂಖ್ಯೆ 62,700 ಮಂದಿ.
27 And those that encamp by him shall be the tribe of Asher: and the captain of the children of Asher shall be Pagiel the son of Ocran.
೨೭ದಾನ್ ಕುಲದ ಬಳಿಯಲ್ಲಿ ಆಶೇರ್ ಕುಲದವರು ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಒಕ್ರಾನನ ಮಗನಾದ ಪಗೀಯೇಲನು ಆಶೇರ್ ಕುಲದವರ ಸೈನ್ಯಾಧಿಪತಿ.
28 And his host, and those that were numbered of them, were forty and one thousand and five hundred.
೨೮ಅವನ ಸೈನಿಕರ ಸಂಖ್ಯೆ 41,500 ಮಂದಿ.
29 Then the tribe of Naphtali: and the captain of the children of Naphtali shall be Ahira the son of Enan.
೨೯ತರುವಾಯ ನಫ್ತಾಲಿ ಕುಲದವರು, ಏನಾನನ ಮಗನಾದ ಅಹೀರನು ನಫ್ತಾಲಿ ಕುಲದ ಸೈನ್ಯಾಧಿಪತಿ.
30 And his host, and those that were numbered of them, were fifty and three thousand and four hundred.
೩೦ಅವನ ಸೈನಿಕರ ಸಂಖ್ಯೆ 53,400 ಮಂದಿ.
31 All they that were numbered in the camp of Dan were an hundred thousand and fifty and seven thousand and six hundred. They shall go last with their standards.
೩೧ಹೀಗೆ ದಾನ್ ಕುಲದ ದಂಡಿಗೆ ಸೇರಿದ ಸೈನಿಕರ ಒಟ್ಟು ಸಂಖ್ಯೆ 1,57,600 ಮಂದಿ. ಇವರು ಕಡೆಯ ದಂಡಾಗಿ ಹೊರಡಬೇಕು.
32 These are those who were numbered of the children of Israel by the house of their fathers: all those that were numbered of the camps throughout their hosts were six hundred thousand and three thousand and five hundred and fifty.
೩೨ಮೋಶೆ ಮತ್ತು ಆರೋನರು ಇಸ್ರಾಯೇಲರ ಗೋತ್ರಗಳ ಪ್ರಕಾರ ದಂಡುಗಳಲ್ಲಿ ಸೈನಿಕರಾಗಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ 6,03,550 ಮಂದಿ.
33 But the Levites were not numbered among the children of Israel; as the LORD commanded Moses.
೩೩ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಲೇವಿಯರು ಇಸ್ರಾಯೇಲರ ಸಂಗಡ ಲೆಕ್ಕಹಾಕಲಿಲ್ಲ.
34 And the children of Israel did according to all that the LORD commanded Moses: so they encamped by their standards, and so they moved forward, every one after their families, according to the house of their fathers.
೩೪ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಮಾಡಿದರು. ಹಾಗೆಯೇ ದಂಡು ದಂಡಾಗಿ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು ಮತ್ತು ಗೋತ್ರಕುಟುಂಬಗಳ ಪ್ರಕಾರವೇ ಹೊರಡುತ್ತಿದ್ದರು.