< Psalms 9 >
1 To the chief Musician upon Muthlabben, A Psalm of David. I will praise [thee], O LORD, with my whole heart; I will show forth all thy wonderful works.
೧ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಮೂತ್ಲಬ್ಬೇನೆಂಬ ರಾಗ; ದಾವೀದನ ಕೀರ್ತನೆ. ಯೆಹೋವನೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು; ನೀನು ಮಾಡಿದ ಅದ್ಭುತಕಾರ್ಯಗಳನ್ನೆಲ್ಲಾ ವರ್ಣಿಸುವೆನು.
2 I will be glad and rejoice in thee: I will sing praise to thy name, O thou most High.
೨ಪರಾತ್ಪರನಾದ ದೇವರೇ, ನಾನು ನಿನ್ನಲ್ಲಿ ಸಂತೋಷಿಸಿ ಉತ್ಸಾಹಗೊಳ್ಳುವೆನು; ನಿನ್ನ ಹೆಸರನ್ನು ಕೀರ್ತಿಸುವೆನು.
3 When my enemies are turned back, they shall fall and perish at thy presence.
೩ನನ್ನ ಹಗೆಗಳು ನಿನ್ನ ಎದುರಿನಿಂದ ಹಿಂದಿರುಗಿ ಎಡವಿಬಿದ್ದು ಹಾಳಾದರಲ್ಲಾ.
4 For thou hast maintained my right and my cause; thou sattest on the throne judging right.
೪ನನ್ನ ವ್ಯಾಜ್ಯದಲ್ಲಿ ನೀನು ನ್ಯಾಯವನ್ನು ಸ್ಥಾಪಿಸಿದಿ; ನೀನು ಆಸನಾರೂಢನಾಗಿ ನೀತಿಯಿಂದ ನ್ಯಾಯವನ್ನು ನಿರ್ಣಯಿಸುತ್ತಿ.
5 Thou hast rebuked the heathen, thou hast destroyed the wicked, thou hast put out their name for ever and ever.
೫ನೀನು ಜನಾಂಗಗಳನ್ನು ಹೆದರಿಸಿ ದುಷ್ಟರನ್ನು ನಾಶ ಮಾಡಿದ್ದಿ, ಅವರ ಹೆಸರನ್ನು ಯುಗಯುಗಾಂತರಕ್ಕೂ ಅಳಿಸಿಬಿಟ್ಟಿದ್ದಿ.
6 O thou enemy, destructions are come to a perpetual end: and thou hast destroyed cities; their memorial hath perished with them.
೬ಶತ್ರುಗಳು ನಿಶ್ಶೇಷವಾದರು; ನೀನು ಕೆಡವಿದ ಅವರ ಪಟ್ಟಣಗಳು ಸಂಪೂರ್ಣವಾಗಿ ಹಾಳಾದವು. ಅವರ ಸ್ಮರಣೆಯೇ ಇಲ್ಲವಾಯಿತು.
7 But the LORD shall endure for ever: he hath prepared his throne for judgment.
೭ಯೆಹೋವನಾದರೋ ಯಾವಾಗಲೂ ನೆಲೆಗೊಂಡಿದ್ದು, ನ್ಯಾಯವಿಚಾರಿಸುವುದಕ್ಕಾಗಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ.
8 And he shall judge the world in righteousness, he shall minister judgment to the people in uprightness.
೮ಆತನೇ ನೀತಿಗನುಸಾರವಾಗಿ ಲೋಕಕ್ಕೆ ನ್ಯಾಯ ತೀರಿಸುವವನು; ಆತನು ಜನಾಂಗಗಳಿಗೆ ಸತ್ಯಕ್ಕನುಸಾರವಾಗಿ ತೀರ್ಪುಕೊಡುವನು.
9 The LORD also will be a refuge for the oppressed, a refuge in times of trouble.
೯ಯೆಹೋವನು ಕುಗ್ಗಿದವರಿಗೆ ಆಶ್ರಯವೂ, ಆಪತ್ಕಾಲದಲ್ಲಿ ದುರ್ಗವೂ ಆಗಿರುವನು.
10 And they that know thy name will put their trust in thee: for thou, LORD, hast not forsaken them that seek thee.
೧೦ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು ನಿನ್ನಲ್ಲಿ ಭರವಸವಿಡುವರು; ಏಕೆಂದರೆ ನಿನ್ನ ಮೊರೆಹೋಗುವವರನ್ನು ನೀನು ಕೈಬಿಡುವವನಲ್ಲ.
11 Sing praises to the LORD, who dwelleth in Zion: declare among the people his doings.
೧೧ಚೀಯೋನಿನಲ್ಲಿ ವಾಸಿಸುವ ಯೆಹೋವನನ್ನು ಕೀರ್ತಿಸಿರಿ; ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಕಟಿಸಿರಿ.
12 When he maketh inquisition for blood, he remembereth them: he forgetteth not the cry of the humble.
೧೨ಆತನು ಕುಗ್ಗಿದವರ ಮೊರೆಯನ್ನು ಮರೆಯದೆ ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವವನಾಗಿ ಅವರನ್ನು ಜ್ಞಾಪಕಮಾಡಿಕೊಳ್ಳುವನು.
13 Have mercy upon me, O LORD; consider my trouble [which I suffer] from them that hate me, thou that liftest me up from the gates of death:
೧೩ಯೆಹೋವನೇ, ಮರಣದ್ವಾರದೊಳಗೆ ಸೇರದಂತೆ; ನನ್ನನ್ನು ಉದ್ಧರಿಸುವವನೇ, ಕನಿಕರಿಸು; ಹಗೆಗಳಿಂದ ನನಗುಂಟಾದ ಬಾಧೆಯನ್ನು ಲಕ್ಷ್ಯಕ್ಕೆ ತಂದುಕೋ.
14 That I may show forth all thy praise in the gates of the daughter of Zion: I will rejoice in thy salvation.
೧೪ಆಗ ನಾನು ನಿನ್ನ ಸ್ತೋತ್ರವನ್ನು ಪ್ರಸಿದ್ಧಪಡಿಸುವೆನು; ನಿನ್ನಿಂದಾದ ರಕ್ಷಣೆಗಾಗಿ ಚೀಯೋನೆಂಬ ಕುಮಾರಿಯ ಬಾಗಿಲುಗಳಲ್ಲಿ ಹರ್ಷಿಸುವೆನು.
15 The heathen are sunk down in the pit [that] they made: in the net which they hid is their own foot taken.
೧೫ಜನಾಂಗಗಳವರು ತಾವು ಮಾಡಿದ ಕುಣಿಯಲ್ಲಿ ತಾವೇ ಬಿದ್ದು ಹೋದರು; ಅವರು ಹಾಸಿದ ಬಲೆಯಲ್ಲಿ ಅವರ ಕಾಲೇ ಸಿಕ್ಕಿಕೊಂಡಿತು.
16 The LORD is known [by] the judgment [which] he executeth: the wicked is snared in the work of his own hands. (Higgaion, Selah)
೧೬ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ (ಸೆಲಾ)
17 The wicked shall be turned into hell, [and] all the nations that forget God. (Sheol )
೧೭ದುಷ್ಟರು ಅಂದರೆ ದೇವರನ್ನು ಅಲಕ್ಷ್ಯಮಾಡುವ ಜನಾಂಗಗಳವರೆಲ್ಲಾ ಪಾತಾಳಕ್ಕೆ ಇಳಿದುಹೋಗುವರು. (Sheol )
18 For the needy shall not always be forgotten: the expectation of the poor shall [not] perish for ever.
೧೮ದಿಕ್ಕಿಲ್ಲದವರು ಕಡೆಯವರೆಗೆ ಮರೆಯಲ್ಪಡುವುದಿಲ್ಲ; ದೀನರ ನಿರೀಕ್ಷೆಯು ಕೆಡುವುದೇ ಇಲ್ಲ.
19 Arise, O LORD; let not man prevail: let the heathen be judged in thy sight.
೧೯ಯೆಹೋವನೇ, ಏಳು; ಮನುಷ್ಯಮಾತ್ರದವರು ಬಲಗೊಳ್ಳಬಾರದು. ಜನಾಂಗಗಳಿಗೆ ನಿನ್ನ ಸನ್ನಿಧಿಯಲ್ಲಿ ತೀರ್ಪು ಉಂಟಾಗಲಿ.
20 Put them in fear, O LORD: [that] the nations may know themselves [to be but] men. (Selah)
೨೦ಯೆಹೋವನೇ, ಅವರಿಗೆ ಭಯವನ್ನು ಹುಟ್ಟಿಸು; ಜನಾಂಗಗಳು ತಾವು ಮನುಷ್ಯಮಾತ್ರದವರೆಂದು ತಿಳಿದುಕೊಳ್ಳಲಿ. (ಸೆಲಾ)