< John 13 >
1 Now just before the Feast of the Passover this incident took place. Jesus knew that the time had come for Him to leave this world and go to the Father; and having loved His own who were in the world, He loved them to the end.
೧ಪಸ್ಕಹಬ್ಬದ ಹಿಂದಿನ ದಿನ ಯೇಸು, ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆ ಬಂದಿತೆಂದು ತಿಳಿದುಕೊಂಡು, ಈ ಲೋಕದಲ್ಲಿರುವ ತನ್ನವರನ್ನು ಪ್ರೀತಿಸಿ, ಅವರನ್ನು ಕೊನೆಯವರೆಗೂ ಪ್ರೀತಿಸುತ್ತಾ ಬಂದನು.
2 While supper was proceeding, the Devil having by this time suggested to Judas Iscariot, the son of Simon, the thought of betraying Him, Jesus,
೨ಅವರು ಭೋಜನಕ್ಕೆ ಕುಳಿತುಕೊಂಡಿದ್ದರು, ಅಷ್ಟರೊಳಗೆ ಸೈತಾನನು ಸೀಮೋನನ ಮಗನಾದ ಇಸ್ಕರಿಯೋತ ಯೂದನ ಹೃದಯದಲ್ಲಿ ಯೇಸುವನ್ನು ಹಿಡಿದುಕೊಡಬೇಕೆಂಬ ಆಲೋಚನೆಯನ್ನು ಹುಟ್ಟಿಸಿದನು.
3 although He knew that the Father had put everything into His hands, and that He had come forth from God and was now going to God,
೩ತಂದೆಯು ತನ್ನ ಕೈಯಲ್ಲಿ ಎಲ್ಲದರ ಮೇಲೆ ಅಧಿಕಾರ ಕೊಟ್ಟಿದ್ದಾನೆಂದೂ, ತಾನು ದೇವರ ಬಳಿಯಿಂದ ಬಂದು, ತಿರುಗಿ ದೇವರ ಬಳಿಗೆ ಹೋಗುತ್ತೇನೆಂದೂ ಯೇಸುವಿಗೆ ತಿಳಿದಿತ್ತು.
4 rose from the table, threw off His upper garments, and took a towel and tied it round Him.
೪ಆತನು ಊಟದಿಂದ ಎದ್ದು ತನ್ನ ಮೇಲುಹೊದಿಕೆಯನ್ನು ತೆಗೆದಿಟ್ಟು ಅಂಗ ವಸ್ತ್ರವನ್ನು ತೆಗೆದುಕೊಂಡು ನಡುವಿಗೆ ಕಟ್ಟಿಕೊಂಡನು.
5 Then He poured water into a basin, and proceeded to wash the feet of the disciples and to wipe them with the towel which He had put round Him.
೫ಅನಂತರ ಬೋಗುಣಿಯಲ್ಲಿ ನೀರು ಹಾಕಿಕೊಂಡು ಶಿಷ್ಯರ ಪಾದಗಳನ್ನು ತೊಳೆಯುತ್ತಾ, ತಾನು ಸೊಂಟಕ್ಕೆ ಕಟ್ಟಿಕೊಂಡ ಅಂಗವಸ್ತ್ರದಿಂದ ಪಾದಗಳನ್ನು ಒರಸುವುದಕ್ಕೂ ಪ್ರಾರಂಭಿಸಿದನು.
6 When He came to Simon Peter, Peter objected. "Master," he said, "are you going to wash my feet?"
೬ಹೀಗೆ ಆತನು ಸೀಮೋನ ಪೇತ್ರನ ಬಳಿಗೆ ಬಂದಾಗ ಅವನು ಆತನಿಗೆ, “ಕರ್ತನೇ, ನೀನು ನನ್ನ ಪಾದಗಳನ್ನು ತೊಳೆಯುತ್ತೀಯೋ?” ಎಂದು ಹೇಳಿದನು.
7 "What I am doing," answered Jesus, "for the present you do not know, but afterwards you shall know."
೭ಅದಕ್ಕೆ ಯೇಸು “ನಾನು ಮಾಡುವುದು ಏನೆಂದು ಈಗ ನಿನಗೆ ತಿಳಿಯುವುದಿಲ್ಲ. ಆನಂತರ ನಿನಗೆ ತಿಳಿಯುವುದು” ಎಂದನು.
8 "Never, while the world lasts," said Peter, "shall you wash my feet." "If I do not wash you," replied Jesus, "you have no share with me." (aiōn )
೮ಪೇತ್ರನು ಆತನಿಗೆ, “ನೀನು ನನ್ನ ಪಾದಗಳನ್ನು ಎಂದಿಗೂ ತೊಳೆಯಬಾರದು” ಎಂದು ಹೇಳಿದ್ದಕ್ಕೆ, ಯೇಸು, “ನಾನು ನಿನ್ನನ್ನು ತೊಳೆಯದಿದ್ದರೆ ನನ್ನೊಂದಿಗೆ ನಿನಗೆ ಪಾಲು ಇರುವುದಿಲ್ಲ” ಎಂದನು. (aiōn )
9 "Master," said Peter, "wash not only my feet, but also my hands and my head."
೯ಸೀಮೋನ ಪೇತ್ರನು, “ಕರ್ತನೇ, ನನ್ನ ಪಾದಗಳನ್ನು ಮಾತ್ರವಲ್ಲದೆ, ಕೈಗಳನ್ನೂ, ತಲೆಯನ್ನೂ ಸಹ ತೊಳೆ” ಎಂದನು.
10 "Any one who has lately bathed," said Jesus, "does not need to wash more than his feet, but is clean all over. And you my disciples are clean, and yet this is not true of all of you."
೧೦ಯೇಸು ಅವನಿಗೆ, “ಸ್ನಾನಮಾಡಿಕೊಂಡವನಿಗೆ ತನ್ನ ಪಾದಗಳನ್ನು ಮಾತ್ರ ತೊಳೆದುಕೊಂಡರೆ ಸಾಕು, ಅವನು ಸಂಪೂರ್ಣವಾಗಿ ಶುದ್ಧನಾಗಿದ್ದಾನೆ. ನೀವೂ ಶುದ್ಧರಾಗಿದ್ದೀರಿ. ಆದರೆ ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ” ಎಂದು ಹೇಳಿದನು.
11 For He knew who was betraying Him, and that was why He said, "You are not all of you clean."
೧೧ಯೇಸು ತನ್ನನ್ನು ಹಿಡಿದು ಕೊಡುವವನು ಯಾರೆಂದು ತಿಳಿದಿದ್ದರಿಂದ, “ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ” ಎಂದು ಹೇಳಿದ್ದನು.
12 So after He had washed their feet, put on His garments again, and returned to the table, He said to them, "Do you understand what I have done to you?
೧೨ಆತನು ಅವರ ಪಾದಗಳನ್ನು ತೊಳೆದ ಮೇಲೆ ತನ್ನ ಮೇಲುಹೊದಿಕೆಯನ್ನು ಹಾಕಿಕೊಂಡು, ಪುನಃ ಕುಳಿತುಕೊಂಡು ಅವರಿಗೆ ಹೇಳಿದ್ದೇನಂದರೆ, “ನಾನು ನಿಮಗೆ ಮಾಡಿದ್ದು ಏನೆಂದು ತಿಳಿಯಿತೋ?
13 You call me 'The Rabbi' and 'The Master,' and rightly so, for such I am.
೧೩ನೀವು ನನ್ನನ್ನು ಗುರುವೆಂದೂ ಮತ್ತು ಕರ್ತನೆಂದೂ ಕರೆಯುತ್ತೀರಿ. ನೀವು ಹೇಳುವುದು ಸರಿ. ಹೌದು, ನಾನು ಅಂಥವನೇ ಆಗಿದ್ದೇನೆ.
14 If I then, your Master and Rabbi, have washed your feet, it is also your duty to wash one another's feet.
೧೪ಹಾಗಾದರೆ ಕರ್ತನೂ, ಗುರುವೂ ಆಗಿರುವ ನಾನೇ ನಿಮ್ಮ ಪಾದಗಳನ್ನು ತೊಳೆದಿರುವಾಗ, ನೀವು ಸಹ ಒಬ್ಬರ ಪಾದಗಳನ್ನೊಬ್ಬರು ತೊಳೆಯಬೇಕು.
15 For I have set you an example in order that you may do what I have done to you.
೧೫ನಾನು ನಿಮಗೆ ಮಾಡಿದಂತೆಯೇ ನೀವು ಸಹ ಮಾಡಬೇಕೆಂದು ನಾನು ನಿಮಗೆ ಮಾದರಿಯನ್ನು ತೋರಿಸಿದ್ದೇನೆ.
16 In most solemn truth I tell you that a servant is not superior to his master, nor is a messenger superior to him who sent him.
೧೬ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ತನ್ನ ದಣಿಗಿಂತ ಆಳು ದೊಡ್ಡವನಲ್ಲ. ಹಾಗೆಯೇ ಕಳುಹಿಸಲ್ಪಟ್ಟವನು ಕಳುಹಿಸಿದವನಿಗಿಂತ ದೊಡ್ಡವನಲ್ಲ.
17 If you know all this, blessed are you if you act accordingly.
೧೭ನೀವು ಇವುಗಳನ್ನು ತಿಳಿದುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.
18 I am not speaking of all of you. I know whom I have chosen, but things are as they are in order that the Scripture may be fulfilled, which says, 'He who eats my bread has lifted up his heel against me.'
೧೮ನಾನು ನಿಮ್ಮೆಲ್ಲರನ್ನು ಕುರಿತು ಈ ಮಾತನ್ನು ಹೇಳಲಿಲ್ಲ. ನಾನು ಆರಿಸಿಕೊಂಡವರೆಲ್ಲರನ್ನು ನಾನು ಬಲ್ಲೆನು. ಆದರೆನನ್ನ ಜೊತೆಯಲ್ಲಿ ಊಟಮಾಡುವವನೇ, ನನಗೆ ದ್ರೋಹ ಬಗೆದನು, ಎಂಬ ಶಾಸ್ತ್ರದ ಮಾತು ನೆರವೇರಬೇಕಾಗಿದೆ.
19 From this time forward I tell you things before they happen, in order that when they do happen you may believe that I am He.
೧೯ಅದು ನಡೆಯುವಾಗ ನಾನೇ ಆತನು ಎಂದು ನೀವು ನಂಬುವಂತೆ, ಅದು ಸಂಭವಿಸುವುದಕ್ಕಿಂತ ಮೊದಲೇ ಅದನ್ನು ಈಗ ನಿಮಗೆ ಹೇಳುತ್ತಿದ್ದೇನೆ.
20 In most solemn truth I tell you that he who receives whoever I send receives me, and that he who receives me receives Him who sent me."
೨೦ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ನಾನು ಕಳುಹಿಸಿದಾತನನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುತ್ತಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸುತ್ತಾನೆ.”
21 After speaking thus Jesus was troubled in spirit and said with deep earnestness, "In most solemn truth I tell you that one of you will betray me."
೨೧ಇದನ್ನು ಹೇಳುತ್ತಾ ಯೇಸು ಆತ್ಮದಲ್ಲಿ ನೊಂದುಕೊಂಡವನಾಗಿ, “ನಾನುನಿಮಗೆ ನಿಜನಿಜವಾಗಿ ಹೇಳುತ್ತೇನೆ; ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದು ಕೊಡುತ್ತಾನೆ” ಎಂದು ಸಾಕ್ಷಿ ಹೇಳಿದನು.
22 The disciples began looking at one another, at a loss to know to which of them He was referring.
೨೨ಆಗ ಈತನು ಯಾರ ವಿಷಯವಾಗಿ ಈ ಮಾತನ್ನು ಹೇಳುತ್ತಾನೆಂದು ಶಿಷ್ಯರು ಗಲಿಬಿಲಿಗೊಂಡು ಒಬ್ಬರನೊಬ್ಬರು ನೋಡಿಕೊಂಡರು.
23 There was at table one of His disciples--the one Jesus loved-- reclining with his head on Jesus's bosom.
೨೩ಶಿಷ್ಯರೊಳಗೆ ಯೇಸುವಿಗೆ ಪ್ರಿಯನಾಗಿದ್ದ ಒಬ್ಬ ಶಿಷ್ಯನು ಆತನ ಎದೆಗೆ ಒರಗಿಕೊಂಡಿದ್ದನು.
24 Making a sign therefore to him, Simon Peter said, "Tell us to whom he is referring."
೨೪ಅವನಿಗೆ ಸೀಮೋನ ಪೇತ್ರನು ಸನ್ನೆಮಾಡಿ, “ಆತನು ಯಾರ ವಿಷಯವಾಗಿ ಮಾತನಾಡಿದನು ಎಂದು ಕೇಳು” ಅಂದನು.
25 So he, having his head on Jesus's bosom, leaned back and asked, "Master, who is it?"
೨೫ಆ ಶಿಷ್ಯನು ಹಾಗೆಯೇ ಯೇಸುವಿನ ಎದೆಗೆ ಒರಗಿಕೊಂಡವನಾಗಿ, “ಕರ್ತನೇ, ಅವನು ಯಾರು?” ಎಂದು ಆತನನ್ನು ಕೇಳಿದನು.
26 "It is the one," answered Jesus, "for whom I shall dip this piece of bread and to whom I shall give it." Accordingly He dipped the piece of bread, and took it and gave it to Judas, the son of the Iscariot Simon.
೨೬ಅದಕ್ಕೆ ಯೇಸು, “ನಾನು ಈ ರೊಟ್ಟಿಯ ತುಂಡನ್ನು ಅದ್ದಿ ಯಾರಿಗೆ ಕೊಡುತ್ತೇನೋ ಅವನೇ!” ಎಂದು ಉತ್ತರಿಸಿ ಆ ರೊಟ್ಟಿಯ ತುಂಡನ್ನು ಅದ್ದಿ, ತೆಗೆದು, ಸೀಮೋನ್ ಇಸ್ಕರಿಯೋತನ ಮಗನಾದ ಯೂದನಿಗೆ ಕೊಟ್ಟನು.
27 Then, after Judas had received the piece of bread, Satan entered into him. "Lose no time about it," said Jesus to him.
೨೭ಅವನು ಆ ರೊಟ್ಟಿಯ ತುಂಡನ್ನು ತೆಗೆದುಕೊಂಡ ಕೂಡಲೇ, ಸೈತಾನನು ಅವನೊಳಗೆ ಪ್ರವೇಶಿಸಿದನು. ಆಗ ಯೇಸು ಅವನಿಗೆ, “ನೀನು ಮಾಡುವುದನ್ನು ಬೇಗನೇ ಮಾಡು” ಎಂದು ಹೇಳಿದನು.
28 But why He said this no one else at the table understood.
೨೮ಆದರೆ ಆತನು ಅವನಿಗೆ ಇದನ್ನು ಏಕೆ ಹೇಳಿದನೆಂದು ಊಟದ ಮೇಜಿನಲ್ಲಿ ಕುಳಿತವರಲ್ಲಿ ಯಾರಿಗೂ ತಿಳಿಯಲಿಲ್ಲ.
29 Some, however, supposed that because Judas had the money-box Jesus meant, "Buy what we require for the Festival," or that he should give something to the poor.
೨೯ಅವರಲ್ಲಿ ಕೆಲವರು, ಯೂದನ ವಶದಲ್ಲಿ ಹಣದ ಚೀಲವಿದ್ದುದರಿಂದ ಯೇಸು ಅವನಿಗೆ “ಹಬ್ಬಕ್ಕೆ ನಮಗೆ ಅಗತ್ಯವಾದವುಗಳನ್ನು ಕೊಂಡುಕೋ ಎಂದೋ, ಅಥವಾ ಬಡವರಿಗೆ ಏನಾದರೂ ಕೊಡು ಎಂದೋ, ಯೇಸು ಅವನಿಗೆ ಹೇಳುತ್ತಾನೆ” ಎಂದು ಅಂದುಕೊಂಡರು.
30 So Judas took the piece of bread and immediately went out. And it was night.
೩೦ಇಸ್ಕರಿಯೋತ ಯೂದನು ಆ ರೊಟ್ಟಿಯ ತುಂಡನ್ನು ತೆಗೆದುಕೊಂಡ ಕೂಡಲೇ, ಅಲ್ಲಿಂದ ಎದ್ದು ಹೊರಗೆ ಹೋದನು. ಆಗ ರಾತ್ರಿಯಾಗಿತ್ತು.
31 So when he was gone out, Jesus said, "Now is the Son of Man glorified, and God is glorified in Him.
೩೧ಅವನು ಹೊರಗೆ ಹೋದ ಮೇಲೆ ಯೇಸುವು, “ಈಗ ಮನುಷ್ಯಕುಮಾರನು ಮಹಿಮೆ ಹೊಂದುತ್ತಾನೆ, ಮತ್ತುದೇವರು ಆತನಲ್ಲಿ ಮಹಿಮೆ ಹೊಂದಿದ್ದಾನೆ.
32 Moreover God will glorify Him in Himself, and will glorify Him without delay.
೩೨ದೇವರು ಆತನಲ್ಲಿ ಮಹಿಮೆ ಹೊಂದಿರುವುದರಿಂದ, ದೇವರು ಸಹ ಮನುಷ್ಯಕುಮಾರನನ್ನುತನ್ನಲ್ಲಿ ಮಹಿಮೆಪಡಿಸುವನು. ತಕ್ಷಣವೇ ಮಹಿಮೆಪಡಿಸುವನು.
33 Dear children, I am still with you a little longer. You will seek me, but, as I said to the Jews, 'Where I am going you cannot come,' so for the present I say to you.
೩೩ನನ್ನ ಮಕ್ಕಳೇ, ಇನ್ನು ಸ್ವಲ್ಪ ಕಾಲವೇ ನಾನು ನಿಮ್ಮ ಜೊತೆಯಲ್ಲಿ ಇರುತ್ತೇನೆ. ನೀವು ನನ್ನನ್ನು ಹುಡುಕುವಿರಿ ಆದರೆ ‘ನಾನು ಹೋಗುವಲ್ಲಿಗೆ ನೀವು ಬರಲಾರಿರಿ’ ಎಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಈಗ ಹೇಳುತ್ತೇನೆ.
34 A new commandment I give you, to love one another; that as I have loved you, you also may love one another.
೩೪ನಾನು ನಿಮಗೆ ಒಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ಏನೆಂದರೆ, ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು, ಎಂಬುದೇ.
35 It is by this that every one will know that you are my disciples--if you love one another."
೩೫ನಿಮ್ಮೊಳಗೆ ಪರಸ್ಪರ ಪ್ರೀತಿಯಿರುವುದಾದರೆ ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳುವರು” ಎಂದನು.
36 "Master," inquired Simon Peter, "where are you going?" "Where I am going," replied Jesus, "you cannot be my follower now, but you shall be later."
೩೬ಸೀಮೋನ್ ಪೇತ್ರನು ಆತನಿಗೆ, “ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ?” ಎಂದು ಕೇಳಿದ್ದಕ್ಕೆ ಯೇಸು ಅವನಿಗೆ, “ನಾನು ಹೋಗುವ ಕಡೆಗೆ, ಈಗ ನೀನು ನನ್ನನ್ನು ಹಿಂಬಾಲಿಸಲಾರೆ. ಅನಂತರ ನೀನು ನನ್ನನ್ನು ಹಿಂಬಾಲಿಸುವೆ” ಎಂದನು.
37 "Master," asked Peter again, "why cannot I follow you now? I will lay down my life on your behalf.
೩೭ಪೇತ್ರನು ಆತನಿಗೆ, “ಕರ್ತನೇ, ನಾನು ಈಗ ನಿನ್ನನ್ನು ಏಕೆ ಹಿಂಬಾಲಿಸಲಾರೆನು? ನಿನಗಾಗಿ ನನ್ನ ಪ್ರಾಣವನ್ನೇ ಕೊಡುವೆನು” ಎಂದು ಹೇಳಿದನು.
38 "You say you will lay down your life on my behalf!" said Jesus; "in most solemn truth I tell you that the cock will not crow before you have three times disowned me."
೩೮ಆಗ ಯೇಸು ಅವನಿಗೆ, “ನೀನು ನನಗಾಗಿ ಪ್ರಾಣವನ್ನೇ ಕೊಡುವೆಯಾ? ನಿನಗೆ ನಿಜನಿಜವಾಗಿ ಹೇಳುತ್ತೇನೆ: ನೀನು ನನ್ನನ್ನು ಮೂರು ಸಾರಿ ನಿರಾಕರಿಸುವ ತನಕ ಕೋಳಿಯು ಕೂಗುವುದೇ ಇಲ್ಲ” ಎಂದನು.