< John 1 >
1 In the beginning was the Word, and the Word was with God, and the Word was God.
೧ಆದಿಯಲ್ಲಿ ವಾಕ್ಯವಿತ್ತು; ಆ ವಾಕ್ಯವು ದೇವರೊಂದಿಗಿತ್ತು; ಆ ವಾಕ್ಯವು ದೇವರಾಗಿತ್ತು.
2 The same was in the beginning with God.
೨ಆ ವಾಕ್ಯವೆಂಬಾತನು ಆದಿಯಲ್ಲಿ ದೇವರೊಂದಿಗಿದ್ದನು.
3 All things were made through him. Without him, nothing was made that has been made.
೩ಸಮಸ್ತವೂ ಆತನ ಮೂಲಕವಾಗಿ ಸೃಷ್ಟಿಯಾಯಿತು. ಸೃಷ್ಟಿಯಾದ ಎಲ್ಲವುಗಳಲ್ಲಿ ಆತನಿಲ್ಲದೆ ಒಂದಾದರೂ ಸೃಷ್ಟಿಯಾಗಲಿಲ್ಲ.
4 In him was life, and the life was the light of men.
೪ಆತನಲ್ಲಿ ಜೀವವಿತ್ತು. ಆ ಜೀವವು ಮನುಷ್ಯರಿಗೆ ಬೆಳಕಾಗಿತ್ತು.
5 The light shines in the darkness, and the darkness hasn’t overcome it.
೫ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲು ಆ ಬೆಳಕನ್ನು ಮುಸುಕಲಿಲ್ಲ.
6 There came a man sent from God, whose name was John.
೬ದೇವರು ಕಳುಹಿಸಿದ ಒಬ್ಬ ಮನುಷ್ಯನು ಬಂದನು. ಅವನ ಹೆಸರು ಯೋಹಾನನು.
7 The same came as a witness, that he might testify about the light, that all might believe through him.
೭ಆ ಯೋಹಾನನು ಸಾಕ್ಷಿಗಾಗಿ ಬಂದನು. ತನ್ನ ಮೂಲಕವಾಗಿ ಎಲ್ಲರೂ ನಂಬುವಂತೆ ಅವನು ಬೆಳಕಿನ ವಿಷಯದಲ್ಲಿ ಸಾಕ್ಷಿಕೊಡಲು ಬಂದನು.
8 He was not the light, but was sent that he might testify about the light.
೮ಅವನೇ ಆ ಬೆಳಕಲ್ಲ; ಆದರೆ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ನೀಡಲೆಂದೇ ಬಂದವನು.
9 The true light that enlightens everyone was coming into the world.
೯ನಿಜವಾದ ಬೆಳಕು ಲೋಕಕ್ಕೆ ಬರುವುದಾಗಿತ್ತು; ಆ ಬೆಳಕೇ ಪ್ರತಿ ಮನುಷ್ಯನಿಗೂ ಬೆಳಕನ್ನು ಕೊಡುವಂಥದು.
10 He was in the world, and the world was made through him, and the world didn’t recognize him.
೧೦ಆತನು ಲೋಕದಲ್ಲಿ ಇದ್ದನು ಮತ್ತು ಲೋಕವು ಆತನ ಮೂಲಕ ಉಂಟಾಯಿತು, ಆದರೂ ಲೋಕವು ಆತನನ್ನು ಅರಿತುಕೊಳ್ಳಲಿಲ್ಲ.
11 He came to his own, and those who were his own didn’t receive him.
೧೧ಆತನು ತನ್ನ ಸ್ವಂತ ಜನರ ಬಳಿಗೆ ಬಂದನು; ಆದರೆ ಸ್ವಂತ ಜನರು ಆತನನ್ನು ಸ್ವೀಕರಿಸಲಿಲ್ಲ.
12 But as many as received him, to them he gave the right to become God’s children, to those who believe in his name:
೧೨ಆದರೂ ಯಾರಾರು ಆತನನ್ನು ಸ್ವೀಕರಿಸಿದರೋ, ಅಂದರೆ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರೋ ಅವರಿಗೆ ದೇವರ ಮಕ್ಕಳಾಗುವ ಅಧಿಕಾರವನ್ನು ಆತನು ಕೊಟ್ಟನು.
13 who were born, not of blood, nor of the will of the flesh, nor of the will of man, but of God.
೧೩ಇವರು ರಕ್ತಸಂಬಂಧದಿಂದಾಗಲಿ, ಶರೀರದ ಇಚ್ಛೆಯಿಂದಾಗಲಿ, ಪುರುಷ ಸಂಕಲ್ಪದಿಂದಾಗಲಿ ಹುಟ್ಟಿದವರಲ್ಲ; ದೇವರಿಂದಲೇ ಹುಟ್ಟಿದವರು.
14 The Word became flesh and lived among us. We saw his glory, such glory as of the only born Son of the Father, full of grace and truth.
೧೪ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.
15 John testified about him. He cried out, saying, “This was he of whom I said, ‘He who comes after me has surpassed me, for he was before me.’”
೧೫ಆತನ ವಿಷಯವಾಗಿ ಯೋಹಾನನು ಸಾಕ್ಷಿಕೊಡುತ್ತಾನೆ, ಹೇಗೆಂದರೆ “‘ನನ್ನ ನಂತರ ಬರುವಾತನು ನನಗಿಂತ ಮೊದಲೇ ಇದ್ದುದರಿಂದ ಆತನು ನನಗಿಂತಲೂ ಉನ್ನತನು’ ಎಂದು ನಾನು ಹೇಳಿದಾತನು ಈತನೇ” ಎಂದು ಘೋಷಿಸಿದನು.
16 From his fullness we all received grace upon grace.
೧೬ಯೇಸು ಕ್ರಿಸ್ತನ ಪರಿಪೂರ್ಣತೆಯಿಂದ ನಾವೆಲ್ಲರೂ ಕೃಪೆಯ ಮೇಲೆ ಕೃಪೆಯನ್ನು ಹೊಂದಿದೆವು.
17 For the law was given through Moses. Grace and truth were realized through Jesus Christ.
೧೭ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು. ಆದರೆ ಕೃಪೆಯೂ, ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.
18 No one has seen God at any time. The only born Son, who is in the bosom of the Father, has declared him.
೧೮ದೇವರನ್ನು ಯಾರೂ ಎಂದೂ ನೋಡಿಲ್ಲ. ತಂದೆಯ ಹೃದಯದಲ್ಲಿರುವ ಏಕಪುತ್ರನೂ ಸ್ವತಃ ದೇವರೂ ಆಗಿರುವಾತನೇ, ತಂದೆಯನ್ನು ತಿಳಿಯಪಡಿಸಿದ್ದಾನೆ.
19 This is John’s testimony, when the Jews sent priests and Levites from Jerusalem to ask him, “Who are you?”
೧೯ಯೆಹೂದ್ಯರು ಯೆರೂಸಲೇಮಿನಿಂದ ಯಾಜಕರನ್ನೂ, ಲೇವಿಯರನ್ನೂ ಯೋಹಾನನ ಬಳಿಗೆ ಕಳುಹಿಸಿ, “ನೀನು ಯಾರು?” ಎಂದು ಕೇಳಿದ್ದಕ್ಕೆ,
20 He declared, and didn’t deny, but he declared, “I am not the Christ.”
೨೦ಅವನು ಮರೆಮಾಡದೆ ಎಲ್ಲರ ಮುಂದೆ, “ನಾನು ಕ್ರಿಸ್ತನಲ್ಲ,” ಎಂದು ಹೇಳಿದನು.
21 They asked him, “What then? Are you Elijah?” He said, “I am not.” “Are you the prophet?” He answered, “No.”
೨೧ಅದಕ್ಕೆ ಅವರು, “ಹಾಗಾದರೆ ನೀನು ಯಾರು? ಎಲೀಯನೋ?” ಎಂದು ಕೇಳಿದರು. ಅದಕ್ಕೆ ಅವನು, “ನಾನು ಎಲೀಯನಲ್ಲ” ಅಂದನು. “ನೀನು ಬರಬೇಕಾದ ಆ ಪ್ರವಾದಿಯೋ?” ಎಂದು ಕೇಳಿದ್ದಕ್ಕೆ “ಅಲ್ಲ,” ಅಂದನು.
22 They said therefore to him, “Who are you? Give us an answer to take back to those who sent us. What do you say about yourself?”
೨೨ಆಗ ಅವರು, “ಹಾಗಾದರೆ ನೀನು ಯಾರು? ನಮ್ಮನ್ನು ಕಳುಹಿಸಿದವರಿಗೆ ನಾವು ಉತ್ತರ ಕೊಡಬೇಕಲ್ಲಾ. ನಿನ್ನ ವಿಷಯವಾಗಿ ನೀನು ಏನು ಹೇಳುತ್ತೀ?” ಎಂದು ಕೇಳಿದರು.
23 He said, “I am the voice of one crying in the wilderness, ‘Make straight the way of the Lord,’ as Isaiah the prophet said.”
೨೩ಅದಕ್ಕೆ ಯೋಹಾನನು, “ಪ್ರವಾದಿಯಾದ ಯೆಶಾಯನು ಹೇಳಿದಂತೆ, ‘ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಧ್ವನಿಯೇ ನಾನು’” ಎಂದು ಉತ್ತರ ಕೊಟ್ಟನು.
24 The ones who had been sent were from the Pharisees.
೨೪ಅಲ್ಲಿ ಬಂದವರು ಫರಿಸಾಯರ ಕಡೆಯವರಾಗಿದ್ದರು.
25 They asked him, “Why then do you baptize if you are not the Christ, nor Elijah, nor the prophet?”
೨೫ಅವರು ಅವನಿಗೆ, “ನೀನು ಕ್ರಿಸ್ತನಾಗಲಿ, ಎಲೀಯನಾಗಲಿ ಆ ಪ್ರವಾದಿಯಾಗಲಿ ಆಗಿರದಿದ್ದರೆ, ನೀನು ದೀಕ್ಷಾಸ್ನಾನ ಕೊಡುವುದೇಕೆ?” ಎಂದು ಪ್ರಶ್ನಿಸಿದರು.
26 John answered them, “I baptize in water, but among you stands one whom you don’t know.
೨೬ಅದಕ್ಕೆ ಯೋಹಾನನು, “ನಾನು ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನೀವು ಅರಿಯದೆ ಇರುವ ಒಬ್ಬಾತನು ನಿಮ್ಮ ಮಧ್ಯದಲ್ಲಿದ್ದಾನೆ.
27 He is the one who comes after me, who is preferred before me, whose sandal strap I’m not worthy to loosen.”
೨೭ಆತನೇ ನನ್ನ ನಂತರ ಬರತಕ್ಕವನು. ಆತನ ಚಪ್ಪಲಿಗಳ ಪಟ್ಟಿ ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ” ಅಂದನು.
28 These things were done in Bethany beyond the Jordan, where John was baptizing.
೨೮ಇದೆಲ್ಲಾ ಯೋಹಾನನು ದೀಕ್ಷಾಸ್ನಾನ ಮಾಡಿಸುತ್ತಿದ್ದ ಯೊರ್ದನ್ ನದಿಯ ಆಚೆಯಲ್ಲಿರುವ ಬೇಥಾನ್ಯ ಎಂಬ ಊರಿನಲ್ಲಿ ನಡೆಯಿತು.
29 The next day, he saw Jesus coming to him, and said, “Behold, the Lamb of God, who takes away the sin of the world!
೨೯ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ಯಜ್ಞದಕುರಿಮರಿ.
30 This is he of whom I said, ‘After me comes a man who is preferred before me, for he was before me.’
೩೦‘ನನ್ನ ನಂತರ ಬರುವಾತನು ನನಗಿಂತ ಮೊದಲೇ ಇದ್ದುದರಿಂದ ಆತನು ನನಗಿಂತಲೂ ಉನ್ನತನು’ ಎಂದು ನಾನು ಹೇಳಿದ ಮಾತು ಈತನ ವಿಷಯವಾಗಿಯೇ.
31 I didn’t know him, but for this reason I came baptizing in water, that he would be revealed to Israel.”
೩೧ನನಗೂ ಆತನ ಗುರುತಿರಲಿಲ್ಲ. ಆದರೆ ಆತನನ್ನು ಇಸ್ರಾಯೇಲ್ಯರಿಗೆ ಪ್ರಕಟಪಡಿಸುವುದಕ್ಕೊಸ್ಕರ ನಾನು ನೀರಿನಲ್ಲಿ ದೀಕ್ಷಾಸ್ನಾನವನ್ನು ಮಾಡಿಸುವವನಾಗಿ ಬಂದೆನು.”
32 John testified, saying, “I have seen the Spirit descending like a dove out of heaven, and it remained on him.
೩೨ಇದಲ್ಲದೆ ಯೋಹಾನನು ಸಾಕ್ಷಿ ಕೊಟ್ಟು ಹೇಳಿದ್ದೇನೆಂದರೆ, “ದೇವರಾತ್ಮನು ಪರಲೋಕದಿಂದ ಪಾರಿವಾಳದಂತೆ ಇಳಿಯುವುದನ್ನು ಮತ್ತು ಆತನ ಮೇಲೆ ನೆಲೆಗೊಂಡಿರುವುದನ್ನು ನಾನು ಕಂಡೆನು.
33 I didn’t recognize him, but he who sent me to baptize in water said to me, ‘On whomever you will see the Spirit descending and remaining on him is he who baptizes in the Holy Spirit.’
೩೩ನನಗೂ ಆತನು ಯಾರೆಂಬುದು ತಿಳಿದಿರಲಿಲ್ಲ. ಆದರೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುವುದಕ್ಕೆ ನನ್ನನ್ನು ಕಳುಹಿಸಿದಾತನು ‘ಯಾರ ಮೇಲೆ ಆತ್ಮನು ಇಳಿದುಬಂದು ನೆಲೆಯಾಗಿರುವುದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುವಾತನು’ ಎಂದು ತಾನೇ ನನಗೆ ಹೇಳಿದನು.
34 I have seen and have testified that this is the Son of God.”
೩೪ನಾನು ಅದನ್ನು ನೋಡಿದ್ದೇನೆ ಮತ್ತು ಈತನೇ ದೇವಕುಮಾರನೆಂದು ಸಾಕ್ಷಿ ಕೊಟ್ಟಿದ್ದೇನೆ” ಎಂದು ಹೇಳಿದನು.
35 Again, the next day, John was standing with two of his disciples,
೩೫ಮರುದಿನ ಪುನಃ ಯೋಹಾನನೂ ತನ್ನ ಇಬ್ಬರು ಶಿಷ್ಯರೊಂದಿಗೆ ನಿಂತುಕೊಂಡಿದ್ದನು,
36 and he looked at Jesus as he walked, and said, “Behold, the Lamb of God!”
೩೬ಆಗ ಅಲ್ಲಿ ಯೇಸು ಹೋಗುತ್ತಿರುವುದನ್ನು ನೋಡಿ, ಯೋಹಾನನೂ ಅಗೋ, “ಯಜ್ಞಕ್ಕೆ ದೇವರು ನೇಮಿಸಿರುವ ಕುರಿಮರಿ” ಎಂದು ಹೇಳಿದನು.
37 The two disciples heard him speak, and they followed Jesus.
೩೭ಆ ಇಬ್ಬರು ಶಿಷ್ಯರು ಯೋಹಾನನು ಹೇಳಿದ್ದನ್ನು ಕೇಳಿ ಯೇಸುವನ್ನು ಹಿಂಬಾಲಿಸಿದರು.
38 Jesus turned and saw them following, and said to them, “What are you looking for?” They said to him, “Rabbi” (which is to say, being interpreted, Teacher), “where are you staying?”
೩೮ಯೇಸು ಹಿಂತಿರುಗಿ ತನ್ನನ್ನು ಹಿಂಬಾಲಿಸುತ್ತಿದ್ದ ಅವರನ್ನು ನೋಡಿ, “ನಿಮಗೆ ಏನು ಬೇಕು?” ಎಂದು ಕೇಳಲು ಅವರು, “ರಬ್ಬಿಯೇ, (ಅಂದರೆ ಗುರುವೇ) ನೀನು ವಾಸಿಸುವುದು ಎಲ್ಲಿ?” ಎಂದು ಕೇಳಿದರು.
39 He said to them, “Come and see.” They came and saw where he was staying, and they stayed with him that day. It was about the tenth hour.
೩೯ಆತನು ಅವರಿಗೆ, “ನೀವೇ ಬಂದು ನೋಡಿರಿ” ಎಂದು ಹೇಳಲು, ಅವರು ಹೋಗಿ ಆತನು ವಾಸಿಸುತ್ತಿದ್ದ ಸ್ಥಳವನ್ನು ನೋಡಿ ಆ ದಿನ ಆತನ ಸಂಗಡ ಇದ್ದರು. ಆಗ ಹೆಚ್ಚುಕಡಿಮೆ ಸಂಜೆ ನಾಲ್ಕು ಗಂಟೆಯಾಗಿತ್ತು.
40 One of the two who heard John and followed him was Andrew, Simon Peter’s brother.
೪೦ಯೋಹಾನನ ಮಾತನ್ನು ಕೇಳಿ ಯೇಸುವನ್ನು ಹಿಂಬಾಲಿಸಿದ ಆ ಇಬ್ಬರಲ್ಲಿ ಸೀಮೋನ್ ಪೇತ್ರನ ತಮ್ಮನಾದ ಅಂದ್ರೆಯನು ಒಬ್ಬನು.
41 He first found his own brother, Simon, and said to him, “We have found the Messiah!” (which is, being interpreted, Christ).
೪೧ಇವನು ಮೊದಲು ತನ್ನ ಅಣ್ಣನಾದ ಸೀಮೋನನನ್ನು ಕಂಡು ಅವನಿಗೆ “ನಾವು ಮೆಸ್ಸೀಯನನ್ನು ಕಂಡುಕೊಂಡೆವು” (ಮೆಸ್ಸೀಯನು ಎಂದರೆ ಕ್ರಿಸ್ತನು) ಎಂದು ಹೇಳಿ,
42 He brought him to Jesus. Jesus looked at him and said, “You are Simon the son of Jonah. You shall be called Cephas” (which is by interpretation, Peter).
೪೨ಅವನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದನು. ಯೇಸು ಅವನನ್ನು ನೋಡಿ “ನೀನು ಯೋಹಾನನ ಮಗನಾದ ಸೀಮೋನನು. ಇನ್ನು ಮೇಲೆ ನೀನು ‘ಕೇಫ’ ಎಂದು ಕರೆಯಲ್ಪಡುವಿ” ಎಂದು ಹೇಳಿದನು. (ಕೇಫ ಎಂದರೆ ಪೇತ್ರ ಇಲ್ಲವೆ ಬಂಡೆ ಎಂದು ಅರ್ಥ)
43 On the next day, he was determined to go out into Galilee, and he found Philip. Jesus said to him, “Follow me.”
೪೩ಮರುದಿನ ಯೇಸು ಗಲಿಲಾಯಕ್ಕೆ ಹೋಗಬೇಕೆಂದಿರುವಾಗ ಫಿಲಿಪ್ಪನನ್ನು ಕಂಡು, “ನನ್ನನ್ನು ಹಿಂಬಾಲಿಸು” ಎಂದನು.
44 Now Philip was from Bethsaida, the city of Andrew and Peter.
೪೪ಈ ಫಿಲಿಪ್ಪನು, ಅಂದ್ರೆಯ ಮತ್ತು ಪೇತ್ರರ ಪಟ್ಟಣವಾದ ಬೆತ್ಸಾಯಿದದವನಾಗಿದ್ದನು.
45 Philip found Nathanael, and said to him, “We have found him of whom Moses in the law and also the prophets, wrote: Jesus of Nazareth, the son of Joseph.”
೪೫ಫಿಲಿಪ್ಪನು ನತಾನಯೇಲನನ್ನು ಕಂಡು ಅವನಿಗೆ “ಮೋಶೆಯು ಧರ್ಮಶಾಸ್ತ್ರದಲ್ಲಿ ಯಾರ ವಿಷಯವಾಗಿ ಬರೆದನೋ ಮತ್ತು ಪ್ರವಾದಿಗಳು ಯಾರ ವಿಚಾರವಾಗಿ ಬರೆದರೋ ಆತನು ನಮಗೆ ಸಿಕ್ಕಿದನು, ಆತನು ಯಾರೆಂದರೆ ಯೋಸೇಫನ ಮಗನಾದ ನಜರೇತಿನ ಯೇಸುವೇ” ಎಂದು ಹೇಳಿದನು.
46 Nathanael said to him, “Can any good thing come out of Nazareth?” Philip said to him, “Come and see.”
೪೬ನತಾನಯೇಲನು “ನಜರೇತಿನಿಂದ ಒಳ್ಳೆಯದೇನಾದರೂ ಬರಲು ಸಾಧ್ಯವೋ?” ಎಂದು ಕೇಳಲು, ಫಿಲಿಪ್ಪನು “ಬಂದು ನೋಡು,” ಅಂದನು.
47 Jesus saw Nathanael coming to him, and said about him, “Behold, an Israelite indeed, in whom is no deceit!”
೪೭ಯೇಸು ತನ್ನ ಕಡೆಗೆ ಬರುವ ನತಾನಯೇಲನನ್ನು ಕಂಡು ಅವನನ್ನು ಕುರಿತು “ಇಗೋ, ಇವನು ನಿಜವಾದ ಇಸ್ರಾಯೇಲನು, ಇವನಲ್ಲಿ ಕಪಟವಿಲ್ಲ” ಎಂದು ಹೇಳಿದನು.
48 Nathanael said to him, “How do you know me?” Jesus answered him, “Before Philip called you, when you were under the fig tree, I saw you.”
೪೮ಅದಕ್ಕೆ ನತಾನಯೇಲನು “ನೀನು ನನ್ನನ್ನು ಹೇಗೆ ಬಲ್ಲೆ?” ಎಂದು ಯೇಸುವನ್ನು ಕೇಳಿದ್ದಕ್ಕೆ ಆತನು “ಫಿಲಿಪ್ಪನು ನಿನ್ನನ್ನು ಕರೆಯುವುದಕ್ಕಿಂತ ಮೊದಲೇ ನೀನು ಆ ಅಂಜೂರದ ಮರದ ಕೆಳಗಿರುವುದನ್ನು ನಾನು ನೋಡಿದೆನು” ಎಂದು ಹೇಳಿದನು.
49 Nathanael answered him, “Rabbi, you are the Son of God! You are King of Israel!”
೪೯ಅದಕ್ಕೆ ನತಾನಯೇಲನು, “ಗುರುವೇ, ನೀನು ದೇವಕುಮಾರನು! ನೀನೇ ಇಸ್ರಾಯೇಲಿನ ಅರಸನು” ಎಂದನು.
50 Jesus answered him, “Because I told you, ‘I saw you underneath the fig tree,’ do you believe? You will see greater things than these!”
೫೦ಅದಕ್ಕೆ ಯೇಸು “ಆ ಅಂಜೂರದ ಮರದ ಕೆಳಗೆ ನಿನ್ನನ್ನು ನೋಡಿದೆನೆಂದು ನಾನು ನಿನಗೆ ಹೇಳಿದ ಮಾತ್ರಕ್ಕೆ ನಂಬುತ್ತೀಯೋ? ನೀನು ಇವುಗಳಿಗಿಂತಲೂ ಹೆಚ್ಚಿನ ಮಹತ್ಕಾರ್ಯಗಳನ್ನು ನೋಡುವೆ,” ಎಂದನು.
51 He said to him, “Most certainly, I tell you all, hereafter you will see heaven opened, and the angels of God ascending and descending on the Son of Man.”
೫೧ಯೇಸು “ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ. ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನ ಮೇಲೆದೇವದೂತರು ಏರುತ್ತಾ ಇಳಿಯುತ್ತಾ ಇರುವುದನ್ನೂ ನೀವು ನೋಡುವಿರಿ” ಎಂದು ಹೇಳಿದನು.