< Psalms 61 >

1 For the Chief Musician. For a stringed instrument. By David. Hear my cry, God. Listen to my prayer.
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ದಾವೀದನ ಕೀರ್ತನೆ. ದೇವರೇ, ನನ್ನ ಕೂಗನ್ನು ಕೇಳಿ ನನ್ನ ಪ್ರಾರ್ಥನೆಗೆ ಕಿವಿಗೊಡು.
2 From the end of the earth, I will call to you when my heart is overwhelmed. Lead me to the rock that is higher than I.
ನಾನು ಎದೆಗುಂದಿದವನಾಗಿ ಭೂಮಿಯ ಕಡೆಯ ಭಾಗದಿಂದ ನಿನಗೆ ಮೊರೆಯಿಡುತ್ತೇನೆ; ನಾನು ಹತ್ತಲಾರದ ಆಶ್ರಯಗಿರಿಯ ಮೇಲೆ ನನ್ನನ್ನು ಹತ್ತಿಸು.
3 For you have been a refuge for me, a strong tower from the enemy.
ನೀನು ನನಗೆ ಶರಣನೂ, ಶತ್ರುಗಳಿಂದ ತಪ್ಪಿಸುವ ಭದ್ರವಾದ ಬುರುಜು ಆಗಿದ್ದೀ.
4 I will dwell in your tent forever. I will take refuge in the shelter of your wings. (Selah)
ನನಗೆ ನಿರಂತರವೂ ನಿನ್ನ ಗುಡಾರದಲ್ಲಿ ಬಿಡಾರವಾಗಲಿ; ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವಂತೆ ಅನುಗ್ರಹಿಸು. (ಸೆಲಾ)
5 For you, God, have heard my vows. You have given me the heritage of those who fear your name.
ದೇವರೇ, ನೀನು ನನ್ನ ಹರಕೆಗಳಿಗೆ ಲಕ್ಷ್ಯಕೊಟ್ಟಿದ್ದೀ; ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ಸಿಕ್ಕತಕ್ಕ ಬಾಧ್ಯತೆಯನ್ನು ನನಗೂ ದಯಪಾಲಿಸಿದ್ದೀ.
6 You will prolong the king’s life. His years will be for generations.
ಅರಸನು ದೀರ್ಘಕಾಲ ಬಾಳುವಂತೆ ಅನುಗ್ರಹಿಸು; ಅವನ ಆಯಸ್ಸು ತಲತಲಾಂತರಗಳವರೆಗೆ ವೃದ್ಧಿಯಾಗಲಿ.
7 He shall be enthroned in God’s presence forever. Appoint your loving kindness and truth, that they may preserve him.
ಅವನು ನಿನ್ನ ಸಾನ್ನಿಧ್ಯವನ್ನು ಪಡೆದು, ಸದಾಕಾಲವೂ ಸಿಂಹಾಸನಾರೂಢನಾಗಿರಲಿ; ನಿನ್ನ ಪ್ರೇಮ ಮತ್ತು ಸತ್ಯತೆಗಳು ಅವನನ್ನು ಕಾಯಲಿ.
8 So I will sing praise to your name forever, that I may fulfill my vows daily.
ಹೀಗಾದರೆ ನಾನು ಪ್ರತಿದಿನವೂ ನನ್ನ ಹರಕೆಗಳನ್ನು ಸಲ್ಲಿಸುವವನಾಗಿ, ನಿನ್ನ ನಾಮವನ್ನು ಸದಾ ಸ್ಮರಿಸಿ ಕೀರ್ತಿಸುತ್ತಿರುವೆನು.

< Psalms 61 >