< Deuteronomy 24 >
1 When a man takes a wife and marries her, then it shall be, if she finds no favour in his eyes because he has found some unseemly thing in her, that he shall write her a certificate of divorce, put it in her hand, and send her out of his house.
೧ಯಾವನಾದರೂ ತಾನು ಮದುವೆಮಾಡಿಕೊಂಡ ಸ್ತ್ರೀಯಲ್ಲಿ ಏನೋ ಅವಲಕ್ಷಣವನ್ನು ಕಂಡು ಅವಳಲ್ಲಿ ಸಂತೋಷಪಡದೆ ಇದ್ದರೆ ಅವನು ತ್ಯಾಗಪತ್ರವನ್ನು ಬರೆದುಕೊಟ್ಟು ಅವಳನ್ನು ಮನೆಯಿಂದ ಕಳುಹಿಸಬೇಕು.
2 When she has departed out of his house, she may go and be another man’s wife.
೨ಅವಳು ಮನೆಯಿಂದ ಹೋಗಿ ಮತ್ತೊಬ್ಬನನ್ನು ಮದುವೆಯಾಗಬಹುದು.
3 If the latter husband hates her, and writes her a certificate of divorce, puts it in her hand, and sends her out of his house; or if the latter husband dies, who took her to be his wife;
೩ಆಕೆ ಎರಡನೆಯ ಗಂಡನಿಂದಲೂ ತಿರಸ್ಕರಿಸಲ್ಪಟ್ಟು, ತ್ಯಾಗಪತ್ರವನ್ನು ಹೊಂದಿ ಕಳುಹಿಸಲ್ಪಟ್ಟರೆ ಅಥವಾ ಎರಡನೆಯ ಗಂಡನು ಸತ್ತರೆ,
4 her former husband, who sent her away, may not take her again to be his wife after she is defiled; for that would be an abomination to the LORD. You shall not cause the land to sin, which the LORD your God gives you for an inheritance.
೪ಆಗ ಅವಳನ್ನು ಕಳುಹಿಸಿಬಿಟ್ಟ ಮೊದಲನೆಯ ಗಂಡನು ಅವಳನ್ನು ಪುನಃ ತನ್ನ ಹೆಂಡತಿಯಾಗಿ ಸ್ವೀಕರಿಸಬಾರದು; ಅವಳು ಅಶುದ್ಧಳಾದಳು; ಅವಳನ್ನು ಪುನಃ ಸ್ವೀಕರಿಸುವುದು ಯೆಹೋವನಿಗೆ ಅಸಹ್ಯ ಕಾರ್ಯ. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶಕ್ಕೆ ದೋಷವುಂಟಾಗುವಂತೆ ಅವಕಾಶಕೊಡಬಾರದು.
5 When a man takes a new wife, he shall not go out in the army, neither shall he be assigned any business. He shall be free at home one year, and shall cheer his wife whom he has taken.
೫ಹೊಸದಾಗಿ ಮದುವೆಮಾಡಿಕೊಂಡವನು ಸೈನ್ಯದವರೊಡನೆ ಯುದ್ಧಕ್ಕೆ ಹೋಗಬಾರದು; ಭಾರವಾದ ಯಾವ ಕೆಲಸವನ್ನೂ ಅವನಿಗೆ ನೇಮಿಸಬಾರದು. ಅವನು ಒಂದು ವರ್ಷದ ವರೆಗೂ ಬಿಡುವಾಗಿ ಮನೆಯಲ್ಲಿ ಇದ್ದುಕೊಂಡು ಪರಿಗ್ರಹಿಸಿದ ಹೆಂಡತಿಯೊಡನೆ ಸುಖವಾಗಿರಲಿ.
6 No man shall take the mill or the upper millstone as a pledge, for he takes a life in pledge.
೬ಬೀಸುವ ಕಲ್ಲನ್ನು ಪೂರ್ತಿಯಾಗಲಿ ಅಥವಾ ಅರ್ಧವಾಗಲಿ ಒತ್ತೆ ತೆಗೆದುಕೊಳ್ಳಬಾರದು; ಅದು ಜೀವನಾಧಾರವನ್ನೇ ಒತ್ತೆಯಾಗಿ ತೆಗೆದುಕೊಂಡ ಹಾಗಾಗುವುದು.
7 If a man is found stealing any of his brothers of the children of Israel, and he deals with him as a slave, or sells him, then that thief shall die. So you shall remove the evil from amongst you.
೭ಯಾವನಾದರೂ ಸ್ವದೇಶದವನಾದ ಇಸ್ರಾಯೇಲನನ್ನು ಕದ್ದು ಅವನನ್ನು ದಾಸತ್ವದಲ್ಲಿ ನಡಿಸಿದ್ದಾಗಲಿ ಅಥವಾ ಮಾರಿಬಿಟ್ಟದ್ದು ಕಂಡುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಅಂಥ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಿಬಿಡಬೇಕು.
8 Be careful in the plague of leprosy, that you observe diligently and do according to all that the Levitical priests teach you. As I commanded them, so you shall observe to do.
೮ಕುಷ್ಠರೋಗಿಗಳ ವಿಷಯದಲ್ಲಿ ಯಾಜಕರಾದ ಲೇವಿಯರು ಬೋಧಿಸುವಂತೆಯೇ ಮಾಡುವುದಕ್ಕೆ ನೀವು ಜಾಗರೂಕರಾಗಿರಬೇಕು. ನಾನು ಅವರಿಗೆ ಆಜ್ಞಾಪಿಸಿದ ನಿಯಮಗಳನ್ನೇ ನೀವು ಅನುಸರಿಸಬೇಕು.
9 Remember what the LORD your God did to Miriam, by the way as you came out of Egypt.
೯ನೀವು ಐಗುಪ್ತದೇಶದಿಂದ ಬಂದಾಗ ದಾರಿಯಲ್ಲಿ ನಿಮ್ಮ ದೇವರಾದ ಯೆಹೋವನು ಮಿರ್ಯಾಮಳಿಗೆ ಮಾಡಿದ್ದನ್ನು ನೆನಪುಮಾಡಿಕೊಳ್ಳಿರಿ.
10 When you lend your neighbour any kind of loan, you shall not go into his house to get his pledge.
೧೦ಮತ್ತೊಬ್ಬನಿಗೆ ಸಾಲಕೊಡುವಾಗ ಒತ್ತೆಯನ್ನು ತೆಗೆದುಕೊಳ್ಳುವುದಕ್ಕೆ ಅವನ ಮನೆಯೊಳಕ್ಕೆ ಹೋಗದೆ ಹೊರಗೆ ಇರಬೇಕು.
11 You shall stand outside, and the man to whom you lend shall bring the pledge outside to you.
೧೧ಸಾಲತೆಗೆದುಕೊಂಡವನೇ ಒತ್ತೆಯ ಸಾಮಾನುಗಳನ್ನು ತಂದುಕೊಡಬೇಕು.
12 If he is a poor man, you shall not sleep with his pledge.
೧೨ಅವನು ಕೇವಲ ಬಡತನದಿಂದ ತನ್ನ ಕಂಬಳಿಯನ್ನೇ ಒತ್ತೆಯಾಗಿ ಇಟ್ಟ ಸಂದರ್ಭದಲ್ಲಿ ಹೊತ್ತುಮುಣುಗಿದಾಗ ಅದನ್ನು ಹಿಂದಕ್ಕೆ ಕೊಡಬೇಕು.
13 You shall surely restore to him the pledge when the sun goes down, that he may sleep in his garment and bless you. It shall be righteousness to you before the LORD your God.
೧೩ಅದನ್ನು ಇಟ್ಟುಕೊಂಡು ರಾತ್ರಿ ಮಲಗಬಾರದು; ಅವನು ಅದನ್ನು ಹೊದ್ದುಕೊಂಡೇ ಮಲಗಿಕೊಳ್ಳಬೇಕಲ್ಲಾ; ಅದಲ್ಲದೆ ಅವನು ನಿಮ್ಮನ್ನು ಹರಸುವನು, ಮತ್ತು ನೀವು ಮಾಡಿದ್ದು ಧರ್ಮಕಾರ್ಯವೆಂದು ನಿಮ್ಮ ದೇವರಾದ ಯೆಹೋವನು ತಿಳಿದುಕೊಳ್ಳುವನು.
14 You shall not oppress a hired servant who is poor and needy, whether he is one of your brothers or one of the foreigners who are in your land within your gates.
೧೪ನೀವು ಸ್ವದೇಶದವರಲ್ಲಿಯಾಗಲಿ ಅಥವಾ ನಿಮ್ಮಲ್ಲಿರುವ ಅನ್ಯದೇಶದವರಲ್ಲಿಯಾಗಲಿ ಗತಿಯಿಲ್ಲದ ಬಡ ಕೂಲಿಯವನಿಗೆ
15 In his day you shall give him his wages, neither shall the sun go down on it, for he is poor and sets his heart on it, lest he cry against you to the LORD, and it be sin to you.
೧೫ಏನೂ ಅನ್ಯಾಯಮಾಡದೆ ದಿನದ ಕೂಲಿಯನ್ನು ಆ ದಿನದಲ್ಲೇ ಹೊತ್ತುಮುಣುಗುವುದಕ್ಕೆ ಮುಂಚಿತವಾಗಿ ಅವನಿಗೆ ಕೊಡಬೇಕು. ಅವನಿಗೆ ಬೇರೆ ಗತಿಯಿಲ್ಲದ್ದರಿಂದ ಅದನ್ನೇ ಎದುರುನೋಡುತ್ತಾನಲ್ಲಾ. ನೀವು ಕೊಡದಿದ್ದರೆ ಅವನು ಯೆಹೋವನಿಗೆ ಮೊರೆಯಿಟ್ಟಾನು; ಆಗ ನೀವು ದೋಷಿಗಳಾಗಿ ಕಂಡುಬಂದೀರಿ.
16 The fathers shall not be put to death for the children, neither shall the children be put to death for the fathers. Every man shall be put to death for his own sin.
೧೬ಮಕ್ಕಳ ಪಾಪಕ್ಕಾಗಿ ತಂದೆಗೂ, ತಂದೆಯ ಪಾಪಕ್ಕಾಗಿ ಮಕ್ಕಳಿಗೂ ಮರಣಶಿಕ್ಷೆಯಾಗಬಾರದು. ಪ್ರತಿಯೊಬ್ಬನೂ ತನ್ನ ಪಾಪಫಲವನ್ನು ತಾನೇ ಅನುಭವಿಸಬೇಕು.
17 You shall not deprive the foreigner or the fatherless of justice, nor take a widow’s clothing in pledge;
೧೭ನೀವು ಪರದೇಶಿಯ ಅಥವಾ ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವಾಗ ನ್ಯಾಯವನ್ನು ಬಿಟ್ಟು ತೀರ್ಪು ಕೊಡಬಾರದು. ವಿಧವೆಯಿಂದ ಉಡುವ ಬಟ್ಟೆಯನ್ನು ಒತ್ತೆಯಿಡಿಸಿಕೊಳ್ಳಬಾರದು.
18 but you shall remember that you were a slave in Egypt, and the LORD your God redeemed you there. Therefore I command you to do this thing.
೧೮ನೀವೇ ಐಗುಪ್ತದೇಶದಲ್ಲಿ ದಾಸರಾಗಿದ್ದಾಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡಿಸಿದನೆಂಬುವುದನ್ನು ನೆನಪುಮಾಡಿಕೊಳ್ಳಿರಿ; ಅದಕ್ಕಾಗಿಯೇ ಇದನ್ನು ಆಜ್ಞಾಪಿಸಿದ್ದೇನೆ.
19 When you reap your harvest in your field, and have forgotten a sheaf in the field, you shall not go again to get it. It shall be for the foreigner, for the fatherless, and for the widow, that the LORD your God may bless you in all the work of your hands.
೧೯ನೀವು ಪೈರುಗಳನ್ನು ಕೊಯ್ಯುವಾಗ ಒಂದು ಸಿವುಡನ್ನು ಹೊಲದಲ್ಲೇ ಮರೆತುಬಂದರೆ ಅದನ್ನು ತರುವುದಕ್ಕೆ ಹಿಂದಕ್ಕೆ ಹೋಗಬಾರದು; ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ನಿಮ್ಮನ್ನು ಅಭಿವೃದ್ಧಿಪಡಿಸುವನು.
20 When you beat your olive tree, you shall not go over the boughs again. It shall be for the foreigner, for the fatherless, and for the widow.
೨೦ಎಣ್ಣೆಯಮರಗಳ ರೆಂಬೆಗಳನ್ನು ಹೊಡೆದು ಕಾಯಿಗಳನ್ನು ಉದುರಿಸಿದ ಮೇಲೆ ಪುನಃ ಉದುರಿಸುವುದಕ್ಕೆ ಹೋಗಬಾರದು; ಮಿಕ್ಕ ಕಾಯಿಗಳು ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ.
21 When you harvest your vineyard, you shall not glean it after yourselves. It shall be for the foreigner, for the fatherless, and for the widow.
೨೧ದ್ರಾಕ್ಷಿತೋಟದ ಬೆಳೆಯನ್ನು ಕೂಡಿಸಿಕೊಳ್ಳುವಾಗ ಹಕ್ಕಲಾಯಬಾರದು; ಅದು ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ.
22 You shall remember that you were a slave in the land of Egypt. Therefore I command you to do this thing.
೨೨ನೀವೇ ಐಗುಪ್ತದೇಶದಲ್ಲಿ ದಾಸರಾಗಿದ್ದದ್ದು ಜ್ಞಾಪಕದಲ್ಲಿರಬೇಕು; ಅದಕ್ಕಾಗಿಯೇ ಇದನ್ನು ನಿಮಗೆ ಆಜ್ಞಾಪಿಸಿದ್ದೇನೆ.