< 1 Corinthians 16 >

1 Now concerning the collection for the holy ones: as I commanded the assemblies of Galatia, you do likewise.
ಈಗ ದೇವಜನರಿಗೋಸ್ಕರ ಹಣ ಸಂಗ್ರಹಣೆ ವಿಚಾರದ ಕುರಿತು, ನಾನು ಗಲಾತ್ಯ ಪ್ರಾಂತ್ಯದ ಸಭೆಗಳಿಗೆ ಹೇಳಿಕೊಟ್ಟಿರುವ ಕ್ರಮದಂತೆ ನೀವೂ ಮಾಡಿರಿ.
2 On the first day of every week, let each one of you save as he may prosper, that no collections are made when I come.
ನಿಮ್ಮಲ್ಲಿ ಪ್ರತಿಯೊಬ್ಬನು ತನಗೆ ಬಂದಂಥ ಸಂಪಾದನೆಯಲ್ಲಿ ಸಾಧ್ಯವಾದಷ್ಟನ್ನು ವಾರದ ಮೊದಲನೆಯ ದಿನದಲ್ಲಿ ಸಂಗ್ರಹಿಸಿ ತನ್ನ ಮನೆಯಲ್ಲಿಟ್ಟುಕೊಂಡಿರಬೇಕು. ಇದರಿಂದ ನಾನು ಬಂದಾಗ ಹಣ ಸಂಗ್ರಹಣೆ ಮಾಡುವ ಅಗತ್ಯವಿರುವುದಿಲ್ಲ.
3 When I arrive, I will send whoever you approve with letters to carry your gracious gift to Jerusalem.
ಮತ್ತು ನಾನು ಬಂದ ಮೇಲೆ ನೀವು ಯಾರನ್ನು ಪ್ರಾಮಾಣಿಕರೆಂದು ಸೂಚಿಸುವಿರೋ, ಅವರೊಂದಿಗೆ ನಿಮ್ಮ ಕೊಡುಗೆಯನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋಗುವುದಕ್ಕೆ ಪತ್ರಗಳನ್ನು ಕೊಟ್ಟು ಕಳುಹಿಸುವೆನು.
4 If it is appropriate for me to go also, they will go with me.
ಮತ್ತೆ ನಾನು ಸಹ ಹೋಗುವುದು ಯುಕ್ತವಾಗಿ ತೋರಿದರೆ ಅವರು ನನ್ನ ಜೊತೆಯಲ್ಲಿ ಬರಬಹುದು.
5 I will come to you when I have passed through Macedonia, for I am passing through Macedonia.
ನಾನು ಹಾದುಹೋಗಬೇಕೆಂದಿರುವ ಮಕೆದೋನ್ಯ ಸೀಮೆಯನ್ನು ದಾಟುವಾಗ ನಿಮ್ಮ ಬಳಿಗೆ ಬಂದು ಬಹುಶಃ ನಿಮ್ಮ ಬಳಿಯಲ್ಲೇ ಉಳಿದುಕೊಳ್ಳುವೆನು.
6 But with you it may be that I will stay with you, or even winter with you, that you may send me on my journey wherever I go.
ಅಥವಾ ನಿಮ್ಮಲ್ಲಿ ಹಿಮಕಾಲವನ್ನಾದರೂ ಕಳೆಯುವೆನು; ಹಾಗೆಯೇ ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಸಾಗಕಳುಹಿಸಲು ಸಹಾಯಮಾಡಬಹುದು.
7 For I do not wish to see you now in passing, but I hope to stay a while with you, if the Lord permits.
ನಾನು ಹಾದುಹೋಗುವ ಈ ಸ್ವಲ್ಪ ಸಮಯದಲ್ಲಿ ನಿಮ್ಮನ್ನು ನೋಡಲು ಬಯಸುವುದಿಲ್ಲ. ಕರ್ತನ ಅಪ್ಪಣೆಯಾದರೆ ನಿಮ್ಮ ಬಳಿಯಲ್ಲಿ ಕೆಲವು ಕಾಲ ತಂಗಲು ಬಯಸುತ್ತೇನೆ.
8 But I will stay at Ephesus until Shavu`ot,
ಪಂಚಾಶತ್ತಮ ದಿನ ಹಬ್ಬದ ತನಕ ಎಫೆಸದಲ್ಲಿರುವೆನು;
9 for a great and effective door has opened to me, and there are many adversaries.
ಯಾಕೆಂದರೆ ಸೇವೆಗೆ ಅನುಕೂಲವೂ, ಸಫಲವೂ ಆಗಿರುವ ಹೆಬ್ಬಾಗಿಲೊಂದು ನನಗಾಗಿ ತೆರೆಯಲ್ಪಟ್ಟಿದೆ. ಹಾಗೆಯೇ ವಿರೋಧಿಗಳೂ ಅನೇಕರಿದ್ದಾರೆ.
10 Now if Timothy comes, see that he is with you without fear, for he does the work of the Lord, as I also do.
೧೦ತಿಮೊಥೆಯನು ಬಂದರೆ ಅವನು ನಿಮ್ಮಲ್ಲಿ ನಿರ್ಭಯನಾಗಿರುವಂತೆ ನೋಡಿಕೊಳ್ಳಿರಿ; ಅವನು ಸಹ ನನ್ನ ಹಾಗೆಯೇ ಕರ್ತನ ಸೇವೆಯನ್ನು ಮಾಡುತ್ತಿದ್ದಾನಲ್ಲಾ.
11 Therefore let no one despise him. But set him forward on his journey in peace, that he may come to me; for I expect him with the brothers.
೧೧ಆದ್ದರಿಂದ ಯಾರೂ ಅವನನ್ನು ತಿರಸ್ಕರಿಸಬಾರದು. ಅವನು ನನ್ನ ಬಳಿಗೆ ಬರುವಂತೆ ಅವನನ್ನು ಸಮಾಧಾನದಿಂದ ಕಳುಹಿಸಿರಿ; ಅವನು ಸಹೋದರರೊಂದಿಗೆ ಬರುವುದನ್ನು ಎದುರುನೋಡುತ್ತಾ ಇದ್ದೇನೆ.
12 Now concerning Apollos the brother, I strongly urged him to come to you with the brothers, but it was not at all his desire to come now; but he will come when he has an opportunity.
೧೨ಸಹೋದರ ಅಪೊಲ್ಲೋಸನ ಕುರಿತು; ಅವನು ಸಹೋದರರೊಂದಿಗೆ ನಿಮ್ಮನ್ನು ಭೇಟಿಮಾಡಬೇಕೆಂದು ನಾನು ಬಹಳವಾಗಿ ಅವನನ್ನು ಪ್ರೋತ್ಸಾಹಿಸಿದೆನು. ಆದರೆ ಅವನು ಈಗ ಬರುವುದಿಲ್ಲ ಎಂದು ನಿರ್ಧರಿಸಿದನು. ಆದರೆ ಒಳ್ಳೆ ಅವಕಾಶ ಸಿಕ್ಕಿದಾಗ ಬರುವನು.
13 Watch! Stand firm in the faith! Be courageous! Be strong!
೧೩ಎಚ್ಚರವಾಗಿರಿ, ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಲ್ಲಿರಿ. ಧೈರ್ಯವಂತರಾಗಿರಿ, ಬಲಗೊಳ್ಳಿರಿ.
14 Let all that you do be done in love.
೧೪ನೀವು ಮಾಡುವುದನ್ನೆಲ್ಲಾ ಪ್ರೀತಿಯಿಂದ ಮಾಡಿರಿ.
15 Now I beg you, brothers—you know the house of Stephanas, that it is the first fruits of Achaia, and that they have set themselves to serve the holy ones—
೧೫ಸ್ತೆಫನನ ಮನೆಯವರು ಅಖಾಯದಲ್ಲಿನ ಪ್ರಥಮಫಲವೆಂದು ಹಾಗೂ ಅವರು ದೇವಜನರ ಸೇವೆಗೋಸ್ಕರ ತಮ್ಮನ್ನು ಅರ್ಪಿಸಿದ್ದಾರೆಂದು ನೀವು ಬಲ್ಲವರಾಗಿದ್ದೀರಿ.
16 that you also be in subjection to such, and to everyone who helps in the work and labors.
೧೬ನಾನು ನಿಮ್ಮಲ್ಲಿ ಬೇಡುವುದೇನಂದರೆ, ಸೇವೆಯಲ್ಲಿ ನಮಗೆ ಸಹಾಯಮಾಡುವ ಹಾಗೂ ಪ್ರಯಾಸಪಡುವವರೆಲ್ಲರಿಗೂ ನೀವು ಅಧೀನರಾಗಿರಬೇಕು.
17 I rejoice at the coming of Stephanas, Fortunatus, and Achaicus; for that which was lacking on your part, they supplied.
೧೭ಸ್ತೆಫನನೂ, ಪೊರ್ತುನಾತೊಸನೂ, ಅಖಾಯಿಕನೂ ಬಂದದ್ದು ನನಗೆ ಸಂತೋಷವನ್ನುಂಟುಮಾಡಿದೆ. ನಿಮ್ಮಿಂದ ಆಗಿರುವ ಕೊರತೆಯನ್ನು ಅವರು ನೀಗಿಸಿರುವರು.
18 For they refreshed my spirit and yours. Therefore acknowledge those who are like that.
೧೮ಅವರು ನನ್ನ ಆತ್ಮವನ್ನೂ ಮತ್ತು ನಿಮ್ಮ ಆತ್ಮಗಳನ್ನೂ ಚೈತನ್ಯಗೊಳಿಸಿದರಲ್ಲ. ಹೀಗಿರುವುದರಿಂದ ಇಂಥವರನ್ನು ಸನ್ಮಾನಿಸಿರಿ.
19 The assemblies of Asia greet you. Aquila and Priscilla greet you warmly in the Lord, together with the assembly that is in their house.
೧೯ಆಸ್ಯಸೀಮೆಯ ಸಭೆಗಳವರು ನಿಮ್ಮನ್ನು ವಂದಿಸುತ್ತಾರೆ. ಅಕ್ವಿಲನೂ ಮತ್ತು ಪ್ರಿಸ್ಕಿಲ್ಲಳೂ ತಮ್ಮ ಮನೆಯಲ್ಲಿ ಕೂಡಿ ಬರುವ ಸಭೆಯವರೊಂದಿಗೆ ಕರ್ತನ ಹೆಸರಿನಲ್ಲಿ ಬಹಳವಾಗಿ ನಿಮ್ಮನ್ನು ವಂದಿಸುತ್ತಿದ್ದಾರೆ.
20 All the brothers greet you. Greet one another with a holy kiss.
೨೦ಸಹೋದರರೆಲ್ಲರೂ ನಿಮಗೆ ವಂದನೆ ಹೇಳುತ್ತಿದ್ದಾರೆ. ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.
21 This greeting is by me, Paul, with my own hand.
೨೧ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆಯನ್ನು ಬರೆದಿದ್ದೇನೆ.
22 If any man doesn’t love the Lord Yeshua the Messiah, let him be cursed. Come, Lord!
೨೨ಯಾವನಾದರೂ ಕರ್ತನನ್ನು ಪ್ರೀತಿಸದಿದ್ದರೆ ಅವನು ಶಾಪಗ್ರಸ್ತನಾಗಲಿ. ನಮ್ಮ ಕರ್ತನೇ ಬಾ!
23 The grace of the Lord Yeshua the Messiah be with you.
೨೩ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ
24 My love to all of you in Messiah Yeshua. Amen.
೨೪ಕ್ರಿಸ್ತ ಯೇಸುವಿನಲ್ಲಿ ನನ್ನ ಪ್ರೀತಿಯು ನಿಮ್ಮೆಲ್ಲರೊಂದಿಗೆ ಇರಲಿ. ಅಮೆನ್.

< 1 Corinthians 16 >