< 1 John 3 >
1 Se ye what maner charite the fadir yaf to vs, that we be named the sones of God, and ben hise sones. For this thing the world knewe not vs, for it knew not hym.
ಇಗೋ, ನಾವು ದೇವರ ಮಕ್ಕಳೆಂದು ಕರೆಯುವುದರಲ್ಲಿ ತಂದೆಯು ಎಂಥಾ ಮಹಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾರಲ್ಲಾ! ನಿಜಕ್ಕೂ ನಾವು ದೇವರ ಮಕ್ಕಳಾಗಿದ್ದೇವೆ. ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳುವುದಿಲ್ಲ, ಏಕೆಂದರೆ ಅದು ತಂದೆಯನ್ನು ತಿಳಿದುಕೊಳ್ಳಲಿಲ್ಲ.
2 Moost dere britheren, now we ben the sones of God, and yit it apperide not, what we schulen be. We witen, that whanne he schal appere, we schulen be lijk hym, for we schulen se hym as he is.
ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತಕ್ಷವಾಗಲಿಲ್ಲ. ಕ್ರಿಸ್ತ ಯೇಸು ಪ್ರತ್ಯಕ್ಷರಾದಾಗ ನಾವು ಅವರ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ನಾವು ಅವರನ್ನು ಅವರಿರುವ ಪ್ರಕಾರವೇ ನೋಡುವೆವು.
3 And ech man that hath this hope in hym, makith hym silf hooli, as he is hooli.
ಕ್ರಿಸ್ತ ಯೇಸುವಿನಲ್ಲಿ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನೂ ಅವರು ಶುದ್ಧರಾಗಿರುವಂತೆಯೇ ತನ್ನನ್ನು ಶುದ್ಧಮಾಡಿಕೊಳ್ಳುತ್ತಾನೆ.
4 Ech man that doith synne, doith also wickidnesse, and synne is wickidnesse.
ಪಾಪಮಾಡುವ ಪ್ರತಿಯೊಬ್ಬನೂ ನಿಯಮವನ್ನು ಮೀರುವವನಾಗಿದ್ದಾನೆ. ನಿಯಮವನ್ನು ಮೀರುವುದೇ ಪಾಪ.
5 And ye witen, that he apperide to do awei synnes, and synne is not in hym.
ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ಕ್ರಿಸ್ತ ಯೇಸು ಪ್ರತ್ಯಕ್ಷರಾದರೆಂಬುದು ನಿಮಗೆ ಗೊತ್ತಾಗಿದೆ. ಕ್ರಿಸ್ತ ಯೇಸುವಿನಲ್ಲಿ ಪಾಪವಿಲ್ಲ.
6 Ech man that dwellith in hym, synneth not; and ech that synneth, seeth not hym, nether knew hym.
ಕ್ರಿಸ್ತ ಯೇಸುವಿನಲ್ಲಿ ನೆಲೆಗೊಂಡಿರುವವರು ಪಾಪದಲ್ಲಿ ಮುಂದುವರಿಯುವುದಿಲ್ಲ. ಪಾಪದಲ್ಲಿ ಮುಂದುವರೆಯುವವರು ಕ್ರಿಸ್ತ ಯೇಸುವನ್ನು ಕಂಡವರೂ ಅಲ್ಲ, ತಿಳಿದವರೂ ಅಲ್ಲ.
7 Litle sones, no man disseyue you; he that doith riytwysnesse, is iust, as also he is iust.
ಪ್ರಿಯ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಕ್ರಿಸ್ತ ಯೇಸು ಹೇಗೆ ನೀತಿವಂತರಾಗಿದ್ದಾರೋ ಹಾಗೆಯೇ ನೀತಿಯನ್ನು ಅನುಸರಿಸುವವರು ನೀತಿವಂತರಾಗಿದ್ದಾರೆ.
8 He that doith synne, is of the deuel; for the deuel synneth fro the bigynnyng. In this thing the sone of God apperide, that he vndo the werkis of the deuel.
ಪಾಪದಲ್ಲಿ ಮುಂದುವರೆಯುವವರು ಸೈತಾನನಿಗೆ ಸೇರಿದವರು. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ ದೇವಪುತ್ರ ಯೇಸು ಸೈತಾನನ ಕೆಲಸಗಳನ್ನು ಲಯ ಮಾಡುವುದಕ್ಕೋಸ್ಕರವೇ ಪ್ರತ್ಯಕ್ಷರಾದರು.
9 Ech man that is borun of God, doith not synne; for the seed of God dwellith in hym, and he may not do synne, for he is borun of God.
ದೇವರಿಂದ ಹುಟ್ಟಿದವನು ಪಾಪವನ್ನು ಅಭ್ಯಾಸ ಮಾಡಲಾರನು, ಏಕೆಂದರೆ ದೇವರ ಬೀಜವು ಅವನಲ್ಲಿ ನೆಲೆಗೊಂಡಿದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪ ಅಭ್ಯಾಸ ಮಾಡುವುದು ಅವನಿಗೆ ಅಸಾಧ್ಯ.
10 In this thing the sones of God ben knowun, and the sones of the feend. Ech man that is not iust, is not of God, and he that loueth not his brothir.
ಇವರು ದೇವರ ಮಕ್ಕಳೆಂಬುದೂ ಅವರು ಸೈತಾನನ ಮಕ್ಕಳೆಂಬುದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರ ಮಗುವಲ್ಲ.
11 For this is the tellyng, that ye herden at the bigynnyng, that ye loue ech othere;
ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನೀವು ಮೊದಲಿನಿಂದಲೂ ಕೇಳಿದ ಸಂದೇಶವಾಗಿದೆ.
12 not as Caym, that was of the yuele, and slouy his brother. And for what thing slouy he him? for hise werkis weren yuele, and hise brotheris iust.
ಕೆಡುಕನಾಗಿದ್ದ ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನನಂತೆ ಅಲ್ಲ. ಅವನು ಯಾವ ಕಾರಣದಿಂದ ತಮ್ಮನನ್ನು ಕೊಂದುಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದುದರಿಂದಲೇ ಅಲ್ಲವೇ?
13 Britheren, nyle ye wondre, if the world hatith you.
ನನ್ನ ಪ್ರಿಯರೇ, ಲೋಕವು ನಿಮ್ಮನ್ನು ದ್ವೇಷಿಸಿದರೆ ಆಶ್ಚರ್ಯಪಡಬೇಡಿರಿ.
14 We witen, that we ben translatid fro deeth to lijf, for we louen britheren. He that loueth not, dwellith in deth.
ನಾವಂತೂ ಸಹೋದರರನ್ನು ಪ್ರೀತಿಸುವವರಾಗಿರುವುದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬುದು ನಮಗೆ ಗೊತ್ತಾಗಿದೆ. ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.
15 Ech man that hatith his brother, is a man sleere; and ye witen, that ech mansleere hath not euerlastinge lijf dwellinge in hym. (aiōnios )
ತನ್ನ ಸಹೋದರನನ್ನು ದ್ವೇಷಿಸುವ ಯಾರೇ ಆದರೂ ಕೊಲೆಗಾರನಾಗಿದ್ದಾನೆ ಮತ್ತು ಯಾವ ಕೊಲೆಗಾರನಲ್ಲಿಯೂ ನಿತ್ಯಜೀವವು ಇರುವುದಿಲ್ಲವೆಂಬುದು ನಿಮಗೆ ಗೊತ್ತಾಗಿದೆ. (aiōnios )
16 In this thing we han knowe the charite of God, for he puttide his lijf for vs, and we owen to putte oure lyues for oure britheren.
ಕ್ರಿಸ್ತ ಯೇಸುವು ನಮಗೋಸ್ಕರ ತಮ್ಮ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರ ಸಹೋದರಿಯರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವವರಾಗಿದ್ದೇವೆ.
17 He that hath the catel of this world, and seeth that his brothir hath nede, and closith his entrailis fro hym, hou dwellith the charite of God in hym?
ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರ ಸಹೋದರಿಯರನ್ನು ನೋಡಿ, ಕರುಣೆ ತೋರಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವುದು ಹೇಗೆ?
18 Mi litle sones, loue we not in word, nethir in tunge, but in werk and treuthe.
ನನ್ನ ಪ್ರಿಯ ಮಕ್ಕಳೇ, ನೀವು ಬರೀಮಾತಿನಿಂದಾಗಲಿ, ಹೊಗಳಿಕೆಯ ಮಾತಿನಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದಲ್ಲಿಯೂ ಪ್ರೀತಿಸುವವರಾಗಿರಬೇಕು.
19 In this thing we knowen, that we ben of treuthe, and in his siyt we monesten oure hertis.
ದೇವರ ಸಮಕ್ಷಮದಲ್ಲಿ ನಾವು ನಮ್ಮ ಹೃದಯವನ್ನು ವಿಶ್ರಾಂತಿಗೊಳಿಸಿರುವುದರಿಂದ ನಾವು ಸತ್ಯಕ್ಕೆ ಸೇರಿದವರು ಎಂಬುದು ಇದರಿಂದಲೇ ನಮಗೆ ತಿಳಿಯುತ್ತದೆ:
20 For if oure herte repreueth vs, God is more than oure hert, and knowith alle thingis.
ಏಕೆಂದರೆ ನಮ್ಮ ಹೃದಯವು ನಮ್ಮನ್ನು ಅಪರಾಧಿ ಎಂದು ಖಂಡಿಸುವಾಗಲೆಲ್ಲಾ, ನಮ್ಮ ಹೃದಯಕ್ಕಿಂತ ದೇವರು ದೊಡ್ಡವರಾಗಿದ್ದಾರೆಂತಲೂ ದೇವರು ಎಲ್ಲವನ್ನೂ ಬಲ್ಲವರಾಗಿದ್ದಾರೆಂತಲೂ ತಿಳಿದುಕೊಳ್ಳಿರಿ.
21 Moost dere britheren, if oure herte repreueth not vs, we han trust to God;
ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ಅಪರಾಧಿ ಎಂದು ಖಂಡಿಸದಿದ್ದರೆ ದೇವರ ಮುಂದೆ ಆತ್ಮವಿಶ್ವಾಸ ನಮಗಿರುವುದು.
22 and what euer we schulen axe, we schulen resseyue of hym, for we kepen hise comaundementis, and we don tho thingis that ben plesaunt bifor hym.
ಮತ್ತು ನಾವು ಏನೇನು ಬೇಡಿಕೊಳ್ಳುತ್ತೇವೋ ಅದನ್ನು ದೇವರಿಂದ ನಾವು ಹೊಂದಿಕೊಳ್ಳುತ್ತೇವೆ. ಏಕೆಂದರೆ ನಾವು ಅವರ ಆಜ್ಞೆಗಳನ್ನು ಕೈಗೊಂಡು ಅವರ ದೃಷ್ಟಿಯಲ್ಲಿ ಮೆಚ್ಚಿಗೆಯಾದವುಗಳನ್ನು ಮಾಡುವವರಾಗಿದ್ದೇವೆ.
23 And this is the comaundement of God, that we bileue in the name of his sone Jhesu Crist, and that we loue ech othere, as he yaf heeste to vs.
ನಾವು ದೇವರ ಪುತ್ರ ಆಗಿರುವ ಯೇಸುಕ್ರಿಸ್ತರ ಹೆಸರನ್ನು ನಂಬಿ, ಅವರು ನಮಗೆ ಆಜ್ಞಾಪಿಸಿದ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ದೇವರ ಆಜ್ಞೆಯಾಗಿರುತ್ತದೆ.
24 And he that kepith hise comaundementis, dwellith in hym, and he in hym. And in this thing we witen, that he dwellith in vs, bi the spirit, whom he yaf to vs.
ದೇವರ ಆಜ್ಞೆಗಳನ್ನು ಕೈಗೊಂಡು ನಡೆಯುವವನು ದೇವರಲ್ಲಿ ವಾಸಮಾಡುತ್ತಾನೆ ಮತ್ತು ದೇವರು ಅವನಲ್ಲಿ ವಾಸಮಾಡುತ್ತಾರೆ. ದೇವರು ನಮ್ಮಲ್ಲಿ ವಾಸಮಾಡುತ್ತಾರೆಂದು ದೇವರು ನಮಗೆ ದಯಪಾಲಿಸಿದ ಆತ್ಮನಿಂದಲೇ ನಾವು ಬಲ್ಲೆವು.