< 1 Samuel 16 >
1 And the Lord seide to Samuel, Hou long biweilist thou Saul, sithen Y castide hym awey, that he regne not on Israel; fille thin horn with oile, and come, that Y sende thee to Ysay of Bethleem; for among hise sones Y haue purueide a king to me.
೧ಯೆಹೋವನು ಸಮುವೇಲನಿಗೆ, “ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ” ಎಂದು ಹೇಳಿದನು.
2 And Samuel seide, Hou schal Y go? for Saul schal here, and he schal sle me. And the Lord seide, Thou schalt take a calf of the droue in thi hond, and thou schalt seye, Y cam to make sacrifice to the Lord.
೨ಅದಕ್ಕೆ ಸಮುವೇಲನು, “ನಾನು ಹೋಗುವುದು ಹೇಗೆ? ಇದು ಸೌಲನಿಗೆ ಗೊತ್ತಾದರೆ ಅವನು ನನ್ನನ್ನು ಕೊಂದುಹಾಕುವನಲ್ಲವೇ” ಎಂದನು. ಅದಕ್ಕೆ ಯೆಹೋವನು, “ನೀನು ಒಂದು ಕರುವನ್ನು ತೆಗೆದುಕೊಂಡು ಹೋಗಿ ಯೆಹೋವನಿಗೋಸ್ಕರ ಯಜ್ಞಮಾಡುವುದಕ್ಕೆ ಬಂದಿದ್ದೇನೆಂದು ಹೇಳಿ ಇಷಯನನ್ನು ಅದಕ್ಕಾಗಿ ಕರೆ.
3 And thou schalt clepe Ysay to the sacrifice, and Y schal schewe to thee, what thou schalt do; and thou schalt anoynte, whom euere Y schal schewe to thee.
೩ಆ ನಂತರ ನೀನು ಮಾಡಬೇಕಾದದ್ದನ್ನು ನಾನೇ ನಿನಗೆ ತಿಳಿಸುತ್ತೇನೆ. ನಾನು ಯಾರನ್ನು ತೋರಿಸುತ್ತೇನೋ, ಅವನನ್ನು ನೀನು ಅಭಿಷೇಕಿಸಬೇಕು” ಎಂದನು.
4 Therfor Samuel dide, as the Lord spak to hym; and he cam in to Bethleem, and the eldere men of the citee wondriden, and camen to hym, and seiden, Whether thin entryng is pesible?
೪ಯೆಹೋವನು ಹೇಳಿದಂತೆಯೇ ಸಮುವೇಲನು ಬೇತ್ಲೆಹೇಮಿಗೆ ಹೋದನು. ಆ ಊರಿನ ಹಿರಿಯರು ನಡುಗುತ್ತಾ ಬಂದು ಅವನನ್ನು ಎದುರುಗೊಂಡು “ನಿನ್ನ ಆಗಮನವು ನಮಗೆ ಶುಭಕರವಾಗಿದೆಯೇ?” ಎಂದು ಕೇಳಲು
5 And he seide, It is pesible; Y cam to make sacrifice to the Lord; be ye halewid, and come ye with me, that Y make sacrifice. Therfor he halewide Ysai, and hise sones, and clepide hem to the sacrifice.
೫ಅವನು, “ಹೌದು, ಶುಭಕರವಾಗಿದೆ; ಯೆಹೋವನಿಗೆ ಯಜ್ಞವನ್ನರ್ಪಿಸುವುದಕ್ಕೆ ಬಂದಿದ್ದೇನೆ. ನೀವು ನಿಮ್ಮನ್ನು ಶುದ್ಧಪಡಿಸಿಕೊಂಡು ನನ್ನ ಜೊತೆಯಲ್ಲಿ ಯಜ್ಞಕ್ಕೆ ಬನ್ನಿರಿ” ಎಂದು ಹೇಳಿ ಇಷಯನನ್ನೂ, ಅವನ ಮಕ್ಕಳನ್ನೂ ಶುದ್ಧೀಕರಿಸಿ ಅವರನ್ನೂ ಯಜ್ಞಕ್ಕೆ ಕರೆದನು.
6 And whanne thei hadden entrid, he siy Eliab, and seide, Whether bifor the Lord is his crist?
೬ಅವರು ಬರಲು ಅವನು ಎಲೀಯಾಬನನ್ನು ನೋಡಿ, ನಿಶ್ಚಯವಾಗಿ ಯೆಹೋವನು ಅಭಿಷೇಕಕ್ಕೆ ಆರಿಸಿಕೊಂಡವನು ಆತನ ಮುಂದೆ ಇದ್ದಾನೆ ಎಂದುಕೊಂಡನು.
7 And the Lord seide to Samuel, Biholde thou not his cheer, nethir hiynesse of his stature; for Y castide hym awei, and Y demyde not bi `the siyt of man; for a man seeth tho thingis that ben opyn, but the Lord biholdith the herte.
೭ಆದರೆ ಯೆಹೋವನು ಸಮುವೇಲನಿಗೆ, “ನೀನು ಅವನ ಸೌಂದರ್ಯವನ್ನೂ, ಎತ್ತರವನ್ನೂ ನೋಡಬೇಡ; ನಾನು ಅವನನ್ನು ನಿರಾಕರಿಸಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ಹೃದಯದ ಮತ್ತು ಅಂತರಂಗದ ಸೌಂದರ್ಯ ನೋಡುವವನಾಗಿದ್ದಾನೆ” ಅಂದನು.
8 And Ysai clepide Amynadab, and brouyte hym bifor Samuel; which seide, Nether the Lord hath chose this.
೮ಇಷಯನು ಅಬೀನಾದಾಬನನ್ನು ಸಮುವೇಲನ ಬಳಿಗೆ ಬರಮಾಡಲು ಸಮುವೇಲನು, “ಯೆಹೋವನು ಇವನನ್ನು ಆರಿಸಿಕೊಳ್ಳಲಿಲ್ಲ” ಎಂದನು.
9 Forsothe Isay brouyte Samma; of whom Samuel seide, Also the Lord hath not chose this.
೯ತರುವಾಯ ಇಷಯನು ಶಮ್ಮನನ್ನು ಬರಮಾಡಲು ಸಮುವೇಲನು, “ಯೆಹೋವನು ಇವನನ್ನೂ ಆರಿಸಿಕೊಳ್ಳಲಿಲ್ಲ” ಎಂದು ಹೇಳಿದನು.
10 Therfor Isai brouyte hise seuene sones bifor Samuel; and Samuel seide to Ysai, The Lord hath `not chose of these.
೧೦ಹೀಗೆ ಇಷಯನು ತನ್ನ ಮಕ್ಕಳಲ್ಲಿ ಏಳು ಮಂದಿಯನ್ನು ಸಮುವೇಲನ ಬಳಿಗೆ ಬರಮಾಡಿದರೂ ಅವನು, “ಯೆಹೋವನು ಇವರನ್ನು ಆರಿಸಿಕೊಳ್ಳಲಿಲ್ಲ” ಎಂದು ನುಡಿದನು.
11 And Samuel seide to Isai, Whether thi sones ben now fillid? And Isai answeride, Yit `another is, a litil child, and lisewith scheep. And Samuel seide to Isai, Sende thou, and brynge hym; for we schulen not sitte to mete, bifor that he come hidur.
೧೧ಅನಂತರ ಸಮುವೇಲನು ಇಷಯನನ್ನು, “ನಿನ್ನ ಮಕ್ಕಳೆಲ್ಲಾ ಇಷ್ಟೇ ಮಂದಿಯೋ” ಎಂದು ಕೇಳಲು ಅವನು, “ಇವರೆಲ್ಲರಿಗಿಂತಲೂ ಚಿಕ್ಕವನು ಒಬ್ಬನಿರುತ್ತಾನೆ; ಅವನು ಕುರಿಮೇಯಿಸುವುದಕ್ಕೆ ಹೋಗಿದ್ದಾನೆ” ಎಂದು ಉತ್ತರಕೊಟ್ಟನು. ಆಗ ಸಮುವೇಲನು, “ಅವನನ್ನು ಕರೆದುಕೊಂಡು ಬರಲು ತಿಳಿಸು; ಅವನು ಬರುವವರೆಗೂ ನಾವು ಊಟಕ್ಕೆ ಕುಳಿತುಕೊಳ್ಳಬಾರದು” ಎಂದು ಹೇಳಲು ಇಷಯನು ಅವನನ್ನು ಕರೆದು ಕರೆದುಕೊಂಡು ಬರಲು ತಿಳಿಸಿದನು.
12 Therfor Ysai sente, and brouyte hym; sotheli he was rodi, and fair in siyt, and of semely face. And the Lord seide, Rise thou, and anoynte hym; for it is he.
೧೨ಅವನು ಕೆಂಪುಬಣ್ಣದವನೂ, ಸುಂದರನೇತ್ರನೂ, ನೋಡುವುದಕ್ಕೆ ರಮಣೀಯನೂ ಆಗಿದ್ದನು. ಯೆಹೋವನು ಸಮುವೇಲನಿಗೆ, “ಎದ್ದು ಇವನನ್ನು ಅಭಿಷೇಕಿಸು; ನಾನು ಆರಿಸಿಕೊಂಡವನು ಇವನೇ” ಎಂದು ಆಜ್ಞಾಪಿಸಲು
13 Therfor Samuel took the horn of oyle, and anoyntid hym in the myddis of his britheren; and the Spirit of the Lord was dressid in to Dauid fro that day `and afterward. And Samuel roos, and yede in to Ramatha.
೧೩ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು, ಅವನ ಸಹೋದರರ ಮಧ್ಯದಲ್ಲೇ ಅಭಿಷೇಕಿಸಿದನು. ಕೂಡಲೆ ಯೆಹೋವನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಕ್ಕೆ ಹೊರಟುಹೋದನು.
14 And so the Spirit of the Lord yede awei fro Saul, and a wickid spirit of the Lord trauelide Saul.
೧೪ಯೆಹೋವನ ಆತ್ಮವು ಸೌಲನನ್ನು ಬಿಟ್ಟು ಹೋಯಿತು; ಯೆಹೋವನು ಕಳುಹಿಸಿದ ದುರಾತ್ಮವು ಬಂದು ಅವನನ್ನು ಪೀಡಿಸುತ್ತಿದ್ದರಿಂದ
15 And the seruauntis of Saul seiden to hym, Lo! an yuel spirit of the Lord traueilith thee;
೧೫ಅವನ ಸೇವಕರು ಅವನಿಗೆ, “ಇಗೋ, ದೇವರಿಂದ ಬಂದ ದುರಾತ್ಮವು ನಿನ್ನನ್ನು ಪೀಡಿಸುತ್ತಾ ಇದೆ.
16 oure lord the kyng comaunde, and thi seruauntis that ben bifore thee, schulen seke a man, that kan synge with an harpe, that whanne the yuel spirit of the Lord takith thee, he harpe with his hond, and thou bere esiliere.
೧೬ಸ್ವಾಮೀ, ಅಪ್ಪಣೆಯಾಗಲಿ; ನಿನ್ನ ಸನ್ನಿಧಿಯಲ್ಲಿ ನಿಂತಿರುವ ನಿನ್ನ ಸೇವಕರಾದ ನಾವು ಹೋಗಿ ಕಿನ್ನರಿ ನುಡಿಸುವುದರಲ್ಲಿ ನಿಪುಣನಾದ ಒಬ್ಬನನ್ನು ಹುಡುಕಿ ತರುತ್ತೇನೆ. ಯೆಹೋವನಿಂದ ಕಳುಹಿಸಲ್ಪಟ್ಟ ದುರಾತ್ಮವು ನಿನ್ನ ಮೇಲೆ ಬರುವಾಗ ಅವನು ಕಿನ್ನರಿ ನುಡಿಸಿದರೆ ನಿನಗೆ ಉಪಶಮನವಾಗುವುದು” ಎಂದು ಹೇಳಿದರು.
17 And Saul seide to hise seruauntis, Puruey ye to me sum man syngynge wel, and brynge ye hym to me.
೧೭ಸೌಲನು ಅವರಿಗೆ, “ಚೆನ್ನಾಗಿ ನುಡಿಸಬಲ್ಲವನಾದ ಒಬ್ಬನನ್ನು ನನಗೋಸ್ಕರ ಹುಡುಕಿ ಕರೆದುಕೊಂಡು ಬನ್ನಿರಿ” ಎಂದು ಆಜ್ಞಾಪಿಸಿದನು.
18 And oon of the children answeride and seide, Lo! Y siy the sone of Ysai of Bethleem, kunnynge to synge, and `strongeste in myyt, and `a man able to batel, and prudent in wordis, and a feir man; and the Lord is with hym.
೧೮ಸೇವಕರಲ್ಲೊಬ್ಬನು ಅವನಿಗೆ, “ಬೇತ್ಲೆಹೇಮಿನವನಾದ ಇಷಯನ ಮಗನನ್ನು ನೋಡಿದ್ದೇನೆ; ಅವನು ಚೆನ್ನಾಗಿ ಕಿನ್ನರಿ ನುಡಿಸಬಲ್ಲವನೂ, ಪರಾಕ್ರಮಶಾಲಿಯೂ, ಯುದ್ಧ ನಿಪುಣನೂ, ವಾಕ್ಚತುರನೂ, ಸುಂದರನೂ, ಯೆಹೋವನ ಅನುಗ್ರಹವನ್ನು ಹೊಂದಿದವನೂ ಆಗಿದ್ದಾನೆ” ಎಂದು ತಿಳಿಸಿದನು.
19 Therfor Saul sente messangeris to Ysay, and seide, Sende thou to me Dauid thi sone, `which is in the lesewis.
೧೯ಕೂಡಲೆ ಸೌಲನು ಇಷಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ಕುರಿಗಳನ್ನು ಮೇಯಿಸುತ್ತಿರುವ ನಿನ್ನ ಮಗನಾದ ದಾವೀದನನ್ನು ನನ್ನ ಬಳಿಗೆ ಕಳುಹಿಸು” ಎಂದು ಹೇಳಿಸಿದನು.
20 Therfor Isai took an asse `ful of looues, and a galoun of wyn, and a `kyde of geet; and sente bi the hond of Dauid his sone to Saul.
೨೦ಇಷಯನು ರೊಟ್ಟಿಯನ್ನೂ, ಒಂದು ಬುದ್ದಲಿ ದ್ರಾಕ್ಷಾರಸವನ್ನೂ, ಒಂದು ಹೋತಮರಿಯನ್ನೂ, ಕತ್ತೆಯ ಮೇಲೆ ಹೇರಿಸಿ ತನ್ನ ಮಗನಾದ ದಾವೀದನ ಮುಖಾಂತರ ಸೌಲನಿಗೆ ಕಳುಹಿಸಿದನು.
21 And Dauid cam to Saul, and stood bifor hym; and Saul louyde hym greetli, and he was maad `his squyer.
೨೧ಹೀಗೆ ದಾವೀದನು ಸೌಲನ ಬಳಿಗೆ ಬಂದು ಅವನ ಸೇವಕನಾದನು. ಸೌಲನು ಅವನನ್ನು ಬಹಳವಾಗಿ ಪ್ರೀತಿಸಿ ತನ್ನ ಆಯುಧಗಳನ್ನು ಹೊರುವುದಕ್ಕೆ ನೇಮಿಸಿಕೊಂಡನು.
22 And Saul sente to Isay, and seide, Dauid stonde in my siyt, for he foond grace in myn iyen.
೨೨ತರುವಾಯ ಸೌಲನು ಇಷಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ದಾವೀದನನ್ನು ಮೆಚ್ಚಿದ್ದೇನೆ; ಅವನು ನನ್ನ ಸನ್ನಿಧಿಯಲ್ಲಿ ಸೇವೆಮಾಡಲಿ” ಎಂದು ತಿಳಿಸಿದನು.
23 Therfor whanne euer the wickid spirit of the Lord took Saul, Dauid took the harpe, and smoot with his hond, and Saul was coumfortid, and he hadde liytere; for the wickid spirit yede awey fro hym.
೨೩ದೇವರಿಂದ ಕಳುಹಿಸಲ್ಪಟ್ಟ ದುರಾತ್ಮವು ಸೌಲನ ಮೇಲೆ ಬಂದಾಗ ದಾವೀದನು ಕಿನ್ನರಿಯನ್ನು ನುಡಿಸುವನು; ಅದರಿಂದ ದುರಾತ್ಮವು ಸೌಲನನ್ನು ಬಿಟ್ಟುಹೋಗುವುದು; ಅವನು ಉಪಶಮನಹೊಂದಿ ಚೆನ್ನಾಗಿರುತ್ತಿದ್ದನು.