< Genesis 25 >

1 Forsothe Abraham weddide another wijf, Ceture bi name,
ಅಬ್ರಹಾಮನು ಕೆಟೂರಳೆಂಬ ಇನ್ನೊಬ್ಬ ಹೆಂಡತಿಯನ್ನು ಮದುವೆ ಮಾಡಿಕೊಂಡನು.
2 which childide to him Samram, and Jexan, and Madan, and Madian, and Jesboth, and Sue.
ಆಕೆ ಅವನಿಗೆ ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಹ ಇವರನ್ನು ಹೆತ್ತಳು.
3 Also Jexan gendride Saba and Dadan. Forsothe the sones of Dadan weren Asurym, and Lathusym, and Laomym.
ಯೊಕ್ಷಾನನು ಶೆಬಾ, ದೆದಾನ್ ಎಂಬಿವರನ್ನು ಪಡೆದನು. ಅಶ್ಮೂರ್ಯರೂ, ಲೆಟೂಶ್ಯರೂ, ಲೆಯುಮ್ಯರೂ ದೆದಾನನಿಂದ ಹುಟ್ಟಿದವರು.
4 And sotheli of Madian was borun Efa, and Ofer, and Enoth, and Abida, and Heldaa; alle these weren the sones of Cethure.
ಗೇಫಾ, ಗೇಫೆರ್, ಹನೋಕ್, ಅಬೀದಾ, ಎಲ್ದಾಯ ಎಂಬುವವರು ಮಿದ್ಯಾನನಿಂದ ಹುಟ್ಟಿದರು. ಇವರೆಲ್ಲರೂ ಕೆಟೂರಳ ಸಂತತಿಯವರು.
5 And Abraham yaf alle thingis whiche he hadde in possessioun to Isaac;
ಅಬ್ರಹಾಮನು ತನಗಿದ್ದ ಆಸ್ತಿಯನ್ನೆಲ್ಲಾ ಇಸಾಕನಿಗೆ ಕೊಟ್ಟನು.
6 sotheli he yaf yiftis to the sones of concubyns; and Abraham, while he lyuede yit, departide hem fro Ysaac, his sone, to the eest coost.
ಅಬ್ರಹಾಮನು ತನ್ನ ಉಪಪತ್ನಿಯರ ಮಕ್ಕಳಿಗೆ ಕೆಲವು ಸೊತ್ತುಗಳನ್ನು ದಾನಮಾಡಿ ತಾನು ಇನ್ನೂ ಜೀವದಿಂದಿರುವಾಗಲೇ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವ ದಿಕ್ಕಿನಲ್ಲಿರುವ ಕೆದೆಮ್ ದೇಶಕ್ಕೆ ಕಳುಹಿಸಿ ಬಿಟ್ಟನು.
7 Forsothe the daies of lijf of Abraham weren an hundrid and `fyue and seuenti yeer;
ಅಬ್ರಹಾಮನು ನೂರ ಎಪ್ಪತ್ತೈದು ವರ್ಷ ಬದುಕಿದನು.
8 and he failide, and diede in good eelde, and of greet age, and ful of daies, and he was gaderid to his puple.
ಅಬ್ರಹಾಮನು ಪೂರ್ಣಾಯುಷ್ಯದಿಂದ ದಿನತುಂಬಿದ ಮುದುಕನಾಗಿ ಪ್ರಾಣ ಬಿಟ್ಟು ತನ್ನ ಪೂರ್ವಿಕರ ಬಳಿಗೆ ಸೇರಿದನು.
9 And Ysaac and Ismael, his sones, birieden him in the double denne, which is set in the feeld of Efron, sone of Seor Ethei,
ಅವನ ಮಕ್ಕಳಾದ ಇಸಾಕ್, ಇಷ್ಮಾಯೇಲರು ಹಿತ್ತಿಯನಾದ ಚೋಹರನ ಮಗ ಎಫ್ರೋನನ ಭೂಮಿಯಲ್ಲಿರುವ ಮಕ್ಪೇಲದ ಗವಿಯಲ್ಲಿ ಅವನನ್ನು ಸಮಾಧಿಮಾಡಿದರು. ಅದು ಮಮ್ರೆಯ ತೋಪಿನ ಪೂರ್ವದಿಕ್ಕಿನಲ್ಲಿದೆ.
10 euene ayens Mambre, which denne he bouyte of the sones of Heth; and he was biried there, and Sare his wijf.
೧೦ಅಬ್ರಹಾಮನು ಅದನ್ನು ಹಿತ್ತಿಯರಿಂದ ಕೊಂಡುಕೊಂಡಿದ್ದನು. ಅದರಲ್ಲಿ ಅಬ್ರಹಾಮನಿಗೂ, ಅವನ ಹೆಂಡತಿಯಾದ ಸಾರಳಿಗೂ ಸಮಾಧಿ ಆಯಿತು.
11 And aftir the deeth of Abraham God blesside Isaac his sone, which dwellide bisidis the pit bi name of hym that lyueth and seeth.
೧೧ಅಬ್ರಹಾಮನು ತೀರಿಹೋದ ನಂತರ ದೇವರ ಅನುಗ್ರಹವು ಅವನ ಮಗನಾದ ಇಸಾಕನ ಮೇಲೂ ಉಂಟಾಯಿತು. ಇಸಾಕನು ಬೆರ್ ಲಹೈರೋಯಿಯ ಹತ್ತಿರ ವಾಸವಾಗಿದ್ದನು.
12 These ben the generaciouns of Ismael, sone of Abraham, whom Agar Egipcian, seruauntesse of Sare, childide to Abraham;
೧೨ಅಬ್ರಹಾಮನಿಗೆ ಸಾರಳ ಐಗುಪ್ತ ದಾಸಿಯಾದ ಹಾಗರಳಲ್ಲಿ ಹುಟ್ಟಿದ ಇಷ್ಮಾಯೇಲನ ವಂಶದ ಚರಿತ್ರೆ.
13 and these ben the names of the sones of Ismael, in her names and generaciouns. The firste gendride of Ismael was Nabaioth, aftirward Cedar, and Abdeel, and Mabsan,
೧೩ಇಷ್ಮಾಯೇಲನ ಮಕ್ಕಳಿಗೂ ಇವರಿಂದ ಹುಟ್ಟಿದ ಕುಲಗಳಿಗೂ ಇರುವ ಹೆಸರುಗಳು ಯಾವುದೆಂದರೆ: ಮೊದಲು ಹುಟ್ಟಿದವನು ನೆಬಾಯೋತ್, ಆ ಮೇಲೆ ಹುಟ್ಟಿದವರು ಕೇದಾರ್, ಅದ್ಬಯೇಲ್, ಮಿಬ್ಸಾಮ್,
14 and Masma, and Duma, and Massa,
೧೪ಮಿಷ್ಮಾ, ದೂಮಾ, ಮಸ್ಸಾ,
15 and Adad, and Thema, and Ithur, and Nafir, and Cedma.
೧೫ಹದದ್, ತೇಮಾ, ಯಟೂರ್, ನಾಫೀಷ್, ಕೇದ್ಮಾ ಎಂಬುವವರೇ.
16 These weren the sones of Ismael, and these weren names by castels and townes of hem, twelue princes of her lynagis.
೧೬ವಂಶ ಪಾರಂಪರೆಯಾಗಿ ಊರುಗಳಲ್ಲಿಯೂ, ಪಾಳೆಯಗಳಲ್ಲಿಯೂ ವಾಸಿಸುವ ಇಷ್ಮಾಯೇಲನ ಸಂತಾನದವರೂ ಇವರೇ ಆಗಿದ್ದಾರೆ. ಇವರ ಕುಲಗಳ ಸಂಖ್ಯೆಗಳಿಗನುಸಾರವಾಗಿ ಹನ್ನೆರಡು ಮಂದಿ ಅರಸರಿರುತ್ತಾರೆ.
17 And the yeeris of lijf of Ismael weren maad an hundrid and seuene and thretti, and he failide, and diede, and was put to his puple.
೧೭ಇಷ್ಮಾಯೇಲನು ನೂರಮೂವತ್ತೇಳು ವರ್ಷ ಬದುಕಿದನು. ನಂತರ ಅವನು ಪ್ರಾಣ ಬಿಟ್ಟು ತನ್ನ ಪೂರ್ವಿಕರ ಬಳಿಗೆ ಸೇರಿದನು.
18 Forsothe he enhabitide fro Euila til to Sur, that biholdith Egipt, as me entrith in to Assiriens; he diede bifore alle his britheren.
೧೮ಇಷ್ಮಾಯೇಲ್ಯರು ಹವೀಲದಿಂದ ಐಗುಪ್ತ ದೇಶದ ಮೂಡಲಲ್ಲಿರುವ ಅಶ್ಶೂರಿನ ದಾರಿಯಲ್ಲಿರುವ ಶೂರಿನ ತನಕ ವಾಸಮಾಡಿದರು. ಹೀಗೆ ಅವರು ತಮ್ಮ ಸಂಬಂಧಿಕರ ಎದುರಾಗಿ ವಾಸಿಸಿದರು.
19 Also these ben the generaciouns of Ysaac sone of Abraham. Abraham gendride Isaac,
೧೯ಅಬ್ರಹಾಮನ ಮಗನಾದ ಇಸಾಕನ ಚರಿತ್ರೆ.
20 and whanne Isaac was of fourti yeer, he weddide a wijf, Rebecca, douyter of Batuel, of Sirie of Mesopotanye, the sistir of Laban.
೨೦ಅಬ್ರಹಾಮನು ಇಸಾಕನನ್ನು ಪಡೆದನು. ಇಸಾಕನು ನಲವತ್ತು ವರ್ಷದವನಾದಾಗ ಅರಾಮ್ಯನಾದ ಬೆತೂವೇಲನ ಮಗಳೂ ಅರಾಮ್ಯನಾದ ಲಾಬಾನನ ತಂಗಿಯೂ ಆಗಿದ್ದ ರೆಬೆಕ್ಕಳನ್ನು ಪದ್ದನ್ ಅರಾಮಿನಿಂದ ಕರೆದುತಂದು ಹೆಂಡತಿಯನ್ನಾಗಿ ಮಾಡಿಕೊಂಡನು.
21 And Isaac bisouyte the Lord for his wijf, for sche was bareyn; and the Lord herde him, and yaf conseiuyng to Rebecca.
೨೧ಆಕೆ ಬಂಜೆಯಾಗಿರಲಾಗಿ ಇಸಾಕನು ಆಕೆಗೊಸ್ಕರ ಯೆಹೋವನನ್ನು ಬೇಡಿಕೊಂಡನು. ಯೆಹೋವನು ಅವನ ವಿಜ್ಞಾಪನೆಯನ್ನು ಲಾಲಿಸಿದ್ದರಿಂದ ರೆಬೆಕ್ಕಳು ಬಸುರಾದಳು.
22 But the litle children weren hurtlid togidre in hir wombe; and sche seide, If it was so to comynge to me, what nede was it to conseyue? And sche yede and axide counsel of the Lord,
೨೨ಆಕೆಯ ಗರ್ಭದಲ್ಲಿ ಶಿಶುಗಳು ಒಂದನ್ನೊಂದು ನೂಕಾಡುತ್ತಿದ್ದಾಗ ಆಕೆಯು, “ಹೀಗಾದರೆ ನಾನು ಹೇಗೆ ಬದುಕಬೇಕು” ಎಂದು ಹೇಳಿ ಇದರ ವಿಷಯದಲ್ಲಿ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ಹೋದಳು.
23 which answerde, and seide, Twei folkis ben in thi wombe, and twei puplis schulen be departid fro thi wombe, and a puple schal ouercome a puple, and the more schal serue the lesse.
೨೩ಯೆಹೋವನು ಆಕೆಗೆ, “ನಿನ್ನ ಗರ್ಭದಲ್ಲಿ ಎರಡು ಜನಾಂಗಗಳು ಇವೆ; ಆ ಎರಡು ಜನಾಂಗಗಳು ಹುಟ್ಟಿನಿಂದಲೇ ಭಿನ್ನವಾಗಿರುವವು; ಅವುಗಳಲ್ಲಿ ಒಂದು ಮತ್ತೊಂದಕ್ಕಿಂತ ಬಲಿಷ್ಠವಾಗುವುದು; ಹಿರಿಯವನು ಕಿರಿಯವನಿಗೆ ಸೇವೆ ಮಾಡುವನು” ಎಂದು ಹೇಳಿದನು.
24 Thanne the tyme of childberyng cam, and lo! twei children weren foundun in hir wombe.
೨೪ಆಕೆ ದಿನತುಂಬಿದಾಗ ಅವಳಿ ಮಕ್ಕಳನ್ನು ಹೆತ್ತಳು.
25 He that yede out first was reed, and al rouy in the manere of a skyn; and his name was clepid Esau.
೨೫ಮೊದಲು ಹುಟ್ಟಿದ್ದು ಕೆಂಪಾಗಿಯೂ ಮೈಮೇಲೆಲ್ಲಾ ಕೂದಲಿನ ವಸ್ತ್ರದಂತೆ ರೋಮವುಳ್ಳದ್ದಾಗಿಯೂ ಇತ್ತು. ಅದಕ್ಕೆ “ಏಸಾವ” ಎಂದು ಹೆಸರಿಟ್ಟರು.
26 Anoon the tothir yede out, and helde with the hond the heele of the brother; and therfore he clepide him Jacob. Isaac was sixti yeer eeld, whanne the litle children weren borun.
೨೬ಎರಡನೆಯ ಶಿಶುವು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡಿದುಕೊಂಡು ಹುಟ್ಟಿದ್ದರಿಂದ ಅದಕ್ಕೆ “ಯಾಕೋಬ” ಎಂದು ಹೆಸರಿಟ್ಟರು. ಇವರಿಬ್ಬರು ಹುಟ್ಟಿದಾಗ ಇಸಾಕನು ಅರುವತ್ತು ವರ್ಷದವನಾಗಿದ್ದನು.
27 And whanne thei weren woxun, Esau was maad a man kunnynge of huntyng, and a man erthe tilier; forsothe Jacob was a symple man, and dwellide in tabernaclis.
೨೭ಆ ಹುಡುಗರಿಬ್ಬರೂ ಬೆಳೆದಾಗ ಅವರಲ್ಲಿ ಏಸಾವನು ಬೇಟೆಯಾಡುವುದರಲ್ಲಿ ನಿಪುಣನಾಗಿದ್ದನು; ಅವನು ಅರಣ್ಯವಾಸಿ. ಯಾಕೋಬನು ಸಾಧು ಮನುಷ್ಯನಾಗಿ ಗುಡಾರಗಳಲ್ಲೇ ವಾಸಿಸುತ್ತಿದ್ದನು.
28 Isaac louyde Esau, for he eet of the huntyng of Esau; and Rebecca louyde Jacob.
೨೮ಬೇಟೆಯ ಮಾಂಸವು ಇಸಾಕನಿಗೆ ಇಷ್ಟವಾದುದರಿಂದ ಅವನು ಏಸಾವನನ್ನು ಪ್ರೀತಿಸಿದನು; ರೆಬೆಕ್ಕಳು ಯಾಕೋಬನನ್ನು ಪ್ರೀತಿಸಿದಳು.
29 Sotheli Jacob sethide potage; and whanne Esau cam weri fro the feld,
೨೯ಒಂದು ದಿನ ಯಾಕೋಬನು ಅಡಿಗೆ ಮಾಡುತ್ತಿರುವಾಗ ಏಸಾವನು ಕಾಡಿನಿಂದ ದಣಿದು ಬಂದು ಅವನಿಗೆ, “ನಾನು ಬಹಳ ದಣಿದು ಬಂದಿದ್ದೇನೆ;
30 he seide to Jacob, Yyue thou to me of this reed sething, for Y am ful weri; for which cause his name was clepid Edom.
೩೦ಆ ಕೆಂಪಾದ ರುಚಿ ಪದಾರ್ಥವನ್ನು ಈಗಲೇ ತಿನ್ನುವುದಕ್ಕೆ ಕೊಡು” ಎಂದು ಕೇಳಿದನು. ಈ ಸಂಗತಿಯಿಂದ ಏಸಾವನಿಗೆ “ಎದೋಮ್” ಎಂದು ಹೆಸರಾಯಿತು.
31 And Jacob seide to him, Sille to me the riyt of the first gendrid childe.
೩೧ಯಾಕೋಬನು ಅವನಿಗೆ, “ನೀನು ಮೊದಲು ನಿನ್ನ ಚೊಚ್ಚಲತನದ ಹಕ್ಕನ್ನು ನನಗೆ ಮಾರಿ ಬಿಡು” ಅನ್ನಲು.
32 He answerde, Lo! Y die, what schulen the firste gendrid thingis profite to me?
೩೨ಏಸಾವನು, “ಆಗಲಿ” ನನ್ನಂಥ ಸಾಯುವವನಿಗೆ ಚೊಚ್ಚಲತನದಿಂದ ಪ್ರಯೋಜನವೇನು ಅಂದನು.
33 Jacob seide, therfor swere thou to me. Therfor Esau swoor, and selde the firste gendrid thingis.
೩೩ಆಗ ಯಾಕೋಬನು ಮೊದಲು ಪ್ರಮಾಣಮಾಡು ಅಂದಾಗ ಏಸಾವನು ಪ್ರಮಾಣಮಾಡಿ ಅವನಿಗೆ ತನ್ನ ಚೊಚ್ಚಲತನದ ಹಕ್ಕನ್ನು ಕೊಟ್ಟುಬಿಟ್ಟನು.
34 And so whanne he hadde take breed and potage, Esau eet and drank, and yede forth, and chargide litil that he hadde seld the riyt of the firste gendrid child.
೩೪ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿ ಗುಗ್ಗರಿಯ ಪಲ್ಯವನ್ನು ಕೊಟ್ಟನು. ಏಸಾವನು ತಿಂದು ಕುಡಿದು ಎದ್ದು ಹೋದನು. ಹೀಗೆ ಅವನು ತನ್ನ ಚೊಚ್ಚಲತನದ ಹಕ್ಕನ್ನು ತಾತ್ಸಾರ ಮಾಡಿ ಬಿಟ್ಟನು.

< Genesis 25 >