< Jeremiah 2 >
1 And the word of the Lord was maad to me,
೧ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
2 and seide, Go thou, and crye in the eeris of Jerusalem, and seie, The Lord seith these thingis, Y hadde mynde on thee, and Y hadde merci on thee in thi yong wexynge age, and on the charite of thi spousyng, whanne thou suedist me in desert, in the lond which is not sowun.
೨“ನೀನು ಹೋಗಿ ಯೆರೂಸಲೇಮಿನ ಕಿವಿಗೆ ಮುಟ್ಟುವಂತೆ ಈ ಮಾತುಗಳನ್ನು ಸಾರು, ‘ಯೆಹೋವನು ಹೀಗೆನ್ನುತ್ತಾನೆ, ನೀನು ಯೌವನದಲ್ಲಿ ನನ್ನ ಮೇಲೆ ಇಟ್ಟಿದ್ದ ಪ್ರೀತಿಯನ್ನೂ, ವಿವಾಹಕಾಲದ ನಿನ್ನ ಪ್ರೇಮವನ್ನೂ, ನೀನು ಬಿತ್ತನೆ ಮಾಡದ ಅರಣ್ಯದಲ್ಲಿ ನನ್ನನ್ನು ಹಿಂಬಾಲಿಸಿದ ನಿನ್ನ ಪಾತಿವ್ರತ್ಯವನ್ನೂ ನಿನ್ನ ಹಿತಕ್ಕಾಗಿ ಜ್ಞಾಪಕದಲ್ಲಿಟ್ಟಿದ್ದೇನೆ.
3 Israel was hooli to the Lord, the firste of fruytis of hym; alle men that deuouren that Israel, trespassen; yuelis schulen come on hem, seith the Lord.
೩ಇಸ್ರಾಯೇಲ್ ಯೆಹೋವನ ಬೆಳೆಯ ಪ್ರಥಮಫಲವಾಗಿ ಆತನಿಗೆ ಮೀಸಲಾಗಿತ್ತು; ಅದನ್ನು ತಿಂದವರೆಲ್ಲರೂ ದೋಷಿಗಳಾಗಿ ಕೇಡಿಗೆ ಗುರಿಯಾಗುವರು. ಇದು ಯೆಹೋವನು ನುಡಿ.’”
4 The hous of Jacob, and alle the lynagis of the hous of Israel, here ye the word of the Lord.
೪ಯಾಕೋಬನ ಮನೆತನವೇ, ಇಸ್ರಾಯೇಲ್ ವಂಶದ ಸಕಲ ಗೋತ್ರಗಳೇ, ಯೆಹೋವನ ವಾಕ್ಯವನ್ನು ಕೇಳಿರಿ;
5 The Lord seith these thingis, What of wickidnesse foundun youre fadris in me, for thei yeden fer awey fro me, and yeden after vanyte, and weren maad veyn?
೫ಯೆಹೋವನು ಹೀಗೆನ್ನುತ್ತಾನೆ, “ನಿಮ್ಮ ಪೂರ್ವಿಕರು ನನ್ನಲ್ಲಿ ಯಾವ ಅನ್ಯಾಯವನ್ನು ಕಂಡು, ವ್ಯರ್ಥಾಚರಣೆಯನ್ನು ಅನುಸರಿಸಿ ತಾವೇ ಅಯೋಗ್ಯರಾಗಿ ನನ್ನನ್ನು ಬಿಟ್ಟು ದೂರವಾದರು?
6 And thei seiden not, Where is the Lord, that made vs to stie fro the lond of Egipt, that ledde vs ouer thorou desert, bi the lond vnabitable and with out weie, bi the lond of thirst, and bi the ymage of deeth, bi the lond in whiche a man yede not, nether a man dwellide.
೬‘ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ಕಾಡಾಗಿಯೂ, ಹಳ್ಳಕೊಳ್ಳವಾಗಿಯೂ, ನಿರ್ಜಲವಾಗಿಯೂ, ಘೋರಾಂಧಕಾರವಾಗಿಯೂ, ಯಾರೂ ಹಾದುಹೋಗದೆಯೂ, ಯಾರೂ ವಾಸಿಸದೆಯೂ ಇರುವ ಅರಣ್ಯದಲ್ಲಿ ನಡೆಸಿದ ಯೆಹೋವನು ಎಲ್ಲಿ?’ ಎಂದು ಅವರು ಅಂದುಕೊಳ್ಳಲಿಲ್ಲವಲ್ಲ.
7 And Y brouyte you in to the lond of Carmele, that ye schulden ete the fruyt therof, and the goodis therof; and ye entriden, and defouliden my lond, and settiden myn eritage in to abhomynacioun.
೭ನಾನು ನಿಮ್ಮನ್ನು ಫಲವತ್ತಾದ ಸೀಮೆಗೆ ಕರೆತಂದು, ಅದರ ಫಲವನ್ನು ಮತ್ತು ಸಾರವನ್ನು ಅನುಭವಿಸುವ ಹಾಗೆ ಮಾಡಿದೆನು. ಆದರೆ ನೀವು ಆ ನನ್ನ ದೇಶವನ್ನು ಪ್ರವೇಶಿಸಿ, ಅದನ್ನು ಹೊಲೆ ಮಾಡಿ, ನನ್ನ ಸ್ವತ್ತನ್ನು ಅಸಹ್ಯಪಡಿಸಿದಿರಿ.
8 Preestis seiden not, Where is the Lord? and thei that helden the lawe, knewen not me; and scheepherdis trespassiden ayens me, and profetis profesieden in Baal, and sueden idols.
೮ಯಾಜಕರು, ‘ಯೆಹೋವನು ಎಲ್ಲಿ?’ ಎಂಬುದನ್ನು ವಿಚಾರಿಸಲಿಲ್ಲ. ಧರ್ಮೋಪದೇಶಕರು ನನ್ನನ್ನು ತಿಳಿಯಲ್ಲಿಲ್ಲ, ಪಾಲಕರು ನನಗೆ ದ್ರೋಹಮಾಡಿದರು, ಪ್ರವಾದಿಗಳು ಬಾಳ್ ದೇವತೆಯ ಆವೇಶದಿಂದ ಪ್ರವಾದಿಸಿ ಕೆಲಸಕ್ಕೆ ಬಾರದವುಗಳನ್ನು ಆರಾಧಿಸಿದರು.
9 Therfor yit Y schal stryue with you in doom, seith the Lord, and Y schal dispute with youre sones.
೯ಆದಕಾರಣ ನಾನು ನಿಮ್ಮೊಂದಿಗೆ ಇನ್ನೂ ವ್ಯಾಜ್ಯ ಮಾಡುವೆನು. ನಾನು ನಿಮ್ಮ ಸಂತಾನದವರೊಂದಿಗೂ ವ್ಯಾಜ್ಯ ಮಾಡುವೆನು” ಎಂದು ಯೆಹೋವನು ನುಡಿಯುತ್ತಾನೆ.
10 Go ye to the ilis of Cethym, and se ye; and sende ye in to Cedar, and biholde ye greetli; and se ye,
೧೦“ಕಿತ್ತೀಮ್ ದ್ವೀಪಗಳಿಗೆ ಹೋಗಿ ನೋಡಿರಿ, ಕೇದಾರಿಗೆ ಕಳುಹಿಸಿ ವಿಚಾರಮಾಡಿರಿ, ಇಂತಹ ಕಾರ್ಯವು ಎಲ್ಲಿಯಾದರೂ ನಡೆಯಿತೇ ಎಂದು ಚೆನ್ನಾಗಿ ಆಲೋಚಿಸಿರಿ.
11 if siche a thing is doon, if a folk chaungide hise goddis; and certeynli thei ben no goddis; but my puple chaungide hise glorie in to an ydol.
೧೧ತನ್ನ ದೇವತೆಗಳು ದೇವರಲ್ಲದೆ ಇದ್ದರೂ ಅವುಗಳನ್ನು ಯಾವ ಜನಾಂಗವಾದರೂ ಬದಲಾಯಿಸಿಕೊಂಡಿತೋ? ಆದರೆ ನನ್ನ ಜನರು ತಮ್ಮ ಮಹಿಮೆಯಾದ ನನ್ನ ಬದಲಾಗಿ ಕೆಲಸಕ್ಕೆ ಬಾರದವುಗಳನ್ನು ಆರಿಸಿಕೊಂಡಿದ್ದಾರೆ.
12 Heuenes, be ye astonyed on this thing, and, ye yatis of heuene, be ye desolat greetli, seith the Lord.
೧೨ಆಕಾಶಮಂಡಲವೇ, ಇದಕ್ಕೆ ಬೆಚ್ಚಿಬೆರಗಾಗು, ತತ್ತರಿಸು, ಹಾಳಾಗು” ಎಂದು ಯೆಹೋವನು ನುಡಿಯುತ್ತಾನೆ.
13 For whi my puple hath don tweyne yuels; thei han forsake me, the welle of quyke watir, and han diggid to hem cisternes, `that weren distried, that moun not holde watris.
೧೩“ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ; ಅವರು ಜೀವಜಲದ ಬುಗ್ಗೆಯಾದ ನನ್ನನ್ನು ಬಿಟ್ಟುಬಿಟ್ಟು ತಮಗೋಸ್ಕರ ತೊಟ್ಟಿಗಳನ್ನು ತೋಡಿಕೊಂಡಿದ್ದಾರೆ. ಅವರು ಬಿರುಕು ಬಿಟ್ಟ, ನೀರು ನಿಲ್ಲದ ತೊಟ್ಟಿಗಳನ್ನು ಕೊರೆದುಕೊಂಡಿದ್ದಾರೆ.
14 Whether Israel is a boond man, ether is borun boonde?
೧೪ಇಸ್ರಾಯೇಲ್ ಒಬ್ಬ ದಾಸನೋ? ಮನೆಯ ಗುಲಾಮನಾಗಿ ಹುಟ್ಟಿದವನೋ?
15 Whi therfor is he maad in to prey? Liouns roriden on hym, and yauen her vois; thei han set the londe of hym in to wildernesse, the citees of him ben brent, and noon is that dwellith in tho.
೧೫ಏಕೆ ಸೂರೆಯಾದನು? ಪ್ರಾಯದ ಸಿಂಹಗಳು ಅವನ ಮೇಲೆ ಗರ್ಜಿಸಿ ಆರ್ಭಟಿಸುತ್ತಿವೆ, ಅವನ ದೇಶವನ್ನು ಹಾಳುಮಾಡಿವೆ, ಅವನ ಊರುಗಳು ಸುಟ್ಟು ನಿರ್ಜನವಾಗಿವೆ.
16 Also the sones of Menfis and of Tafnys han defoulid thee, `til to the cop of the heed.
೧೬ನೋಫ್ ಮತ್ತು ತಹಪನೇಸ್ ಪಟ್ಟಣಗಳವರು ನಿನ್ನ ನೆತ್ತಿಯನ್ನೂ ನುಣ್ಣಗೆ ಮೇದುಬಿಟ್ಟಿದ್ದಾರೆ.
17 Whether this is not don to thee, for thou forsokist thi Lord God, in that tyme in which he ledde thee bi the weie?
೧೭ನಿನ್ನನ್ನು ಮಾರ್ಗದರ್ಶಿಯಾಗಿ ನಡೆಸುತ್ತಿದ್ದ ನಿನ್ನ ದೇವರಾದ ಯೆಹೋವನನ್ನು ತೊರೆದುಬಿಟ್ಟು ಇದನ್ನೆಲ್ಲಾ ನೀನೇ ನಿನ್ನ ಮೇಲೆ ಬರಮಾಡಿಕೊಂಡೆಯಲ್ಲಾ.
18 And now what wolt thou to thee in the weie of Egipt, that thou drynke troblid watir? And what is to thee with the weie of Assiriens, that thou drynke water of the flood?
೧೮ನೀನು ಐಗುಪ್ತದ ದಾರಿಯಲ್ಲಿ ನಡೆದದ್ದೇಕೆ? ನೈಲ್ ನದಿಯ ನೀರನ್ನು ಕುಡಿಯ ಅವಶ್ಯಕತೆ ಇತ್ತೆ? ಅಶ್ಶೂರದ ಮಾರ್ಗದಲ್ಲಿ ಹೆಜ್ಜೆಯಿಟ್ಟದ್ದೇಕೆ? ಯೂಫ್ರೆಟಿಸ್ ನದಿಯ ಜಲವನ್ನು ಪಾನಮಾಡುವ ಅವಶ್ಯಕತೆ ಇತ್ತೇ?
19 Thi malice schal repreue thee, and thi turnyng awei schal blame thee; wite thou and se, that it is yuel and bittir that thou hast forsake thi Lord God, and that his drede is not at thee, seith the Lord God of oostis.
೧೯ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು, ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವವು; ನೀನು ನನ್ನ ಭಯವಿಲ್ಲದೆ ನಿನ್ನ ದೇವರಾದ ಯೆಹೋವನೆಂಬ ನನ್ನನ್ನು ತೊರೆದುಬಿಟ್ಟಿದ್ದರಿಂದ ನಿನಗೆ ಕೆಟ್ಟದ್ದಾಗಿಯೂ, ಕಹಿ ಅನುಭವವಾಗಿಯೂ ಇರುತ್ತದೆಂದು ಗ್ರಹಿಸಿಕೋ, ಕಣ್ಣಾರೆ ನೋಡು” ಎಂಬುದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನ ನುಡಿ.
20 Fro the world thou hast broke my yok, thou hast broke my bondis, and seidist, Y schal not serue. For thou hoore didist hordom in ech hiy litil hil, and vndur ech tree ful of bowis.
೨೦ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದು, ಕಣ್ಣಿಗಳನ್ನು ಕಿತ್ತು “ನಾನು ಸೇವೆ ಮಾಡುವುದಿಲ್ಲ” ಎಂದು ಅಂದುಕೊಳ್ಳುತ್ತಿದ್ದಿ, ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೂ ನೀನು ಅಡ್ಡಬಿದ್ದು ಜಾರಳಂತೆ ನಡೆದುಕೊಂಡಿದ್ದಿ.
21 Forsothe Y plauntide thee a chosun vyner, al trewe seed; hou therfor art thou, alien vyner, turned to me in to a schrewid thing?
೨೧“ನಾನು ನಿನ್ನನ್ನು ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೆಯ ದ್ರಾಕ್ಷಾಲತೆಯನ್ನಾಗಿ ನೆಟ್ಟಿರಲು ನೀನು ನನಗೆ ಕಾಡುದ್ರಾಕ್ಷಿಬಳ್ಳಿಯ ಕೆಟ್ಟರೆಂಬೆಗಳಂತೆ ಆಗಲು ಕಾರಣವೇನು?
22 Thouy thou waischist thee with fulleris clei, and multypliest to thee the erbe borith, thou art defoulid in thi wickidnesse bifore me, seith the Lord God.
೨೨ನೀನು ಬಹಳ ಸೌಳನ್ನು ಹಾಕಿಕೊಂಡು ಸಾಬೂನಿನಿಂದ ತೊಳೆದುಕೊಂಡರೂ ಶುದ್ಧವಾಗದೆ, ನಿನ್ನ ಅಧರ್ಮವು ನನ್ನ ಕಣ್ಣೆದುರಿಗೆ ಕೊಳಕಾಗಿ ನಿಂತಿದೆ” ಎಂದು ಕರ್ತನಾದ ಯೆಹೋವನು ನುಡಿಯುತ್ತಾನೆ.
23 Hou seist thou, Y am not defoulid, Y yede not aftir Baalym? Se thi weies in the greet valei, wite thou what thou hast do; a swifte rennere ordeynynge hise weies.
೨೩“ನಾನು ಅಶುದ್ಧವಾಗಲಿಲ್ಲ, ಬಾಳ್ ದೇವತೆಗಳನ್ನು ನಾನು ಹಿಂಬಾಲಿಸಲಿಲ್ಲ” ಎಂದು ಹೇಗೆ ಹೇಳುತ್ತಿ? ಆ ತಗ್ಗಿನಲ್ಲಿನ ನಿನ್ನ ನಡತೆಯನ್ನು ನೋಡು, ನೀನು ಮಾಡಿದ ದುಷ್ಟ ಕೆಲಸವನ್ನು ಮನಸ್ಸಿಗೆ ತಂದುಕೋ. ಅತ್ತಿತ್ತ ನೆಗೆದಾಡುವ ಬೆದೆಗೆ ಬಂದ ಹೆಣ್ಣು ಒಂಟೆಯಂತಿರುವೆ.
24 A wielde asse customable in wildirnesse drow the wynd of his loue in the desire of his soule; no man schal turne awei it. Alle that seken it, schulen not faile; thei schulen fynde it in the flux of vncleene blood therof.
೨೪ನೀನು ಮದದಿಂದ ಗಾಳಿಯನ್ನು ಬುಸುಬುಸನೆ ಮೂಸಿ ನೋಡುವ ಅಡವಿಯ ಹೆಣ್ಣು ಕಾಡುಕತ್ತೆಯ ಹಾಗಿದ್ದಿ; ಅದಕ್ಕೆ ಬೆದೆ ಏರಿದಾಗ ಯಾವ ಗಂಡು ಕತ್ತೆಯೂ ಅದನ್ನು ಬದಿಗೆ ನೂಕುವುದಿಲ್ಲ. ಆಯಾ ತಿಂಗಳಿನಲ್ಲಿ ಅದನ್ನು ಹುಡುಕುವವುಗಳೆಲ್ಲಾ ಆಯಾಸಗೊಳ್ಳದೆ ಅದನ್ನು ದೊರಕಿಸಿಕೊಳ್ಳುವವು.
25 Forbede thi foot fro nakidnesse, and thi throte fro thirst; and thou seidist, Y dispeiride, Y schal not do; for Y louede brennyngli alien goddis, and Y schal go aftir hem.
೨೫“ನಿನ್ನ ಕಾಲು ಸವೆಯದಂತೆಯೂ ನಿನ್ನ ಗಂಟಲು ಆರದಂತೆಯೂ ತಡೆದುಕೋ” ಎಂದೆನು, ಆದರೆ ನೀನು, “ನಿರೀಕ್ಷೆಯಿಲ್ಲ, ಆಗಲಾರದು, ಅನ್ಯರ ಮೇಲೆ ಮೋಹಗೊಂಡಿದ್ದೇನೆ. ಅವರ ಹಿಂದೆಯೇ ಹೋಗುವೆನು” ಅಂದುಕೊಂಡಿದ್ದಿ.
26 As a theef is schent, whanne he is takun, so the hous of Israel ben schent; thei, and kyngis of hem, the princes, and prestis, and the prophetis of hem,
೨೬ಕಳ್ಳನು ಸಿಕ್ಕಿಬಿದ್ದು ಹೇಗೆ ನಾಚಿಕೆಪಡುವನೋ, ಹಾಗೆಯೇ ಇಸ್ರಾಯೇಲ್ ವಂಶವು ನಾಚಿಕೆಪಡುವುದು. ಅವರು ಮರಕ್ಕೆ, “ನೀನು ನನ್ನ ತಂದೆ” ಎಂತಲೂ; ಕಲ್ಲಿಗೆ, “ನೀನು ಹೆತ್ತ ತಾಯಿ” ಎಂತಲೂ ಹೇಳುವ ಪ್ರಜೆಗಳು. ಅವರ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು ನಾಚಿಕೆಗೆ ಈಡಾಗುವರು.
27 that seien to a tree, Thou art my fadir; and to a stoon, Thou hast gendrid me. Thei turneden to me the bak, and not the face; and in the tyme of her turment thei schulen seie, Ryse thou, and delyuere vs.
೨೭ಅವರು ನನ್ನ ಕಡೆಗೆ ಮುಖತಿರುಗಿಸದೆ ಬೆನ್ನು ಮಾಡಿದ್ದಾರೆ, ಆದರೆ ಅವರಿಗೆ ಕೇಡು ಸಂಭವಿಸಿದಾಗ, “ಎದ್ದು ನಮ್ಮನ್ನು ಉದ್ಧರಿಸು” ಎಂದು ಮೊರೆಯಿಡುವರು.
28 Where ben thi goddis, whiche thou madist to thee? Rise thei, and delyuere thee in the tyme of thi turment; for aftir the noumbre of thi citees weren thi goddis, thou Juda.
೨೮ಯೆಹೂದವೇ, ನೀನು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿನಗೆ ಕೇಡು ಸಂಭವಿಸಿದಾಗ ಅವು ನಿನ್ನನ್ನು ಉದ್ಧರಿಸಲು ಶಕ್ತವಾದರೆ ಏಳಲಿ! ನಿನ್ನ ಪಟ್ಟಣಗಳೆಷ್ಟೋ, ನಿನ್ನ ದೇವರುಗಳೂ ಅಷ್ಟು ಇವೆ.
29 What wolen ye stryue with me in doom? Alle ye han forsake me, seith the Lord.
೨೯ಯೆಹೋವನು ಹೀಗೆನ್ನುತ್ತಾನೆ, “ನನ್ನೊಡನೆ ಏಕೆ ವ್ಯಾಜ್ಯವಾಡುತ್ತೀರಿ? ನೀವೆಲ್ಲರೂ ನನಗೆ ದ್ರೋಹಿಗಳು.
30 In veyn Y smoot youre sones, thei resseyueden not chastisyng; youre swerd deuouride youre prophetis, youre generacioun is distried as a lioun.
೩೦ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ನೀವು ತಿದ್ದಿ ನಡೆಯಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.”
31 Se ye the word of the Lord, whether Y am maad a wildirnesse to Israel, ether a lond late bryngynge forth fruyt? Whi therfor seide my puple, We han go awei, we schulen no more come to thee?
೩೧ನೀವು ಎಂತಹ ದುಷ್ಟ ವಂಶದವರು! ಯೆಹೋವನ ಮಾತನ್ನು ಕೇಳಿರಿ, “ನಾನು ಇಸ್ರಾಯೇಲಿಗೆ ಅರಣ್ಯವಾಗಿಯೂ, ಗಾಢಾಂಧಕಾರದ ಪ್ರದೇಶವಾಗಿಯೂ ಏಕೆ ಪರಿಣಮಿಸಿದವು? ‘ನಾವು ಮನಬಂದಂತೆ ತಿರುಗುತ್ತಿದ್ದೇವೆ, ನಿನ್ನ ಹತೋಟಿಗೆ ಇನ್ನು ಬಾರೆವು’” ಎಂದು ನನ್ನ ಜನರು ಹೇಳುವುದು ಏಕೆ?
32 Whethir a virgyn schal foryete hir ournement? and a spousesse `schal foryete hir brest girdil? But mi puple hath foryete me bi daies with out noumbre.
೩೨ಯುವತಿಯು ತನ್ನ ಆಭರಣಗಳನ್ನು, ವಧುವು ತನ್ನ ಒಡ್ಯಾಣವನ್ನು ಮರೆಯುವುದುಂಟೇ? ನನ್ನ ಜನರೋ ಲೆಕ್ಕವಿಲ್ಲದಷ್ಟು ದಿನ ನನ್ನನ್ನು ಮರೆತಿದ್ದಾರೆ.
33 What enforsist thou to schewe thi weie good to seke loue, which ferthermore bothe hast tauyt thi malices thi weies,
೩೩ಕಾಮವನ್ನು ತೀರಿಸಿಕೊಳ್ಳಬೇಕೆಂದು ಎಷ್ಟೋ ಮುಂದುವರೆದಿದ್ದಿ! ಇದರಿಂದ ನಿನ್ನ ದುರಭ್ಯಾಸಗಳಿಗೆ ನಿನ್ನ ನಡತೆಯನ್ನು ಹೊಂದಿಸಿಕೊಂಡಿದ್ದಿ.
34 and the blood of pore men and innocentis is foundun in thi wyngis? Y fond not hem in dichis, but in alle thingis whiche Y remembride bifore.
೩೪ಇದಲ್ಲದೆ ನಿರ್ದೋಷಿಗಳಾದ ದರಿದ್ರರ ಪ್ರಾಣರಕ್ತವು ನಿನ್ನ ನೆರಿಗೆಯಲ್ಲಿ ಅಂಟಿಕೊಂಡಿದೆ; ಇವರು ಕನ್ನ ಕೊರೆಯುವುದನ್ನು ಕಂಡೆನು ಎಂದು ನೀವು ನೆವ ಹೇಳುವಂತಿಲ್ಲ, ನಿನ್ನ ಈ ಎಲ್ಲಾ ದುರಭ್ಯಾಸಗಳ ದೆಸೆಯಿಂದ ನಿನ್ನನ್ನು ದಂಡಿಸುವೆನು.
35 And thou seidist, Y am with out synne and innocent; and therfor thi stronge veniaunce be turned awei fro me. Lo! Y schal stryue with thee in doom; for thou seidist, Y synnede not.
೩೫ನೀನಾದರೋ, “ನಾನು ನಿರ್ದೋಷಿ, ಆತನ ಕೋಪವು ನನ್ನ ಮೇಲಿಂದ ನಿಶ್ಚಯವಾಗಿ ತೊಲಗಿಹೋಗಿದೆ” ಎಂದುಕೊಂಡಿದ್ದಿ; “ನಾನು ಪಾಪಮಾಡಲಿಲ್ಲ” ಎಂದು ನೀನು ಹೇಳಿದ ಕಾರಣ, ಇಗೋ, ನಾನು ನಿನಗೆ ನ್ಯಾಯ ತೀರಿಸುವೆನು.
36 Hou vijl art thou maad, rehersynge thi weies? and thou schalt be schent of Egipt, as thou were schent of Assur.
೩೬ಹೊಸ ಹೊಸ ಮಾರ್ಗಗಳನ್ನು ಅನುಸರಿಸಲು ಏಕೆ ಅಷ್ಟು ಪ್ರಯತ್ನಿಸುತ್ತೀ? ಅಶ್ಶೂರದ ವಿಷಯವಾಗಿ ಹೇಗೆ ಆಶಾಭಂಗಪಟ್ಟೆಯೋ ಹಾಗೆಯೇ ಐಗುಪ್ತದ ವಿಷಯವಾಗಿಯೂ ಆಶಾಭಂಗಪಡುವಿ.
37 For whi and thou schalt go out of this lond, and thin hondis schulen be on thin heed; for whi the Lord hath al to-broke thi trist, and thou schalt haue no thing to prosperite.
೩೭ಅಲ್ಲಿಂದಲೂ ತಲೆಯ ಮೇಲೆ ಕೈಹೊತ್ತುಕೊಂಡು ಹೊರಡುವಿ; ಏಕೆಂದರೆ ನಿನ್ನ ಭರವಸೆಗಳನ್ನು ಯೆಹೋವನು ನಿರಾಕರಿಸಿದ್ದಾನೆ; ಅವುಗಳ ಮುಖಾಂತರ ನಿನ್ನ ಕಾರ್ಯವು ಕೈಗೂಡುವುದಿಲ್ಲ.