< Psalms 103 >

1 `Of Dauid. Mi soule, blesse thou the Lord; and alle thingis that ben with ynne me, blesse his hooli name.
ದಾವೀದನ ಕೀರ್ತನೆ. ನನ್ನ ಮನವೇ, ಯೆಹೋವನನ್ನು ಕೊಂಡಾಡು; ನನ್ನ ಸರ್ವೇಂದ್ರಿಯಗಳೇ, ಆತನ ಪವಿತ್ರ ನಾಮವನ್ನು ಕೀರ್ತಿಸಿರಿ.
2 Mi soule, blesse thou the Lord; and nyle thou foryete alle the yeldyngis of him.
ನನ್ನ ಮನವೇ, ಯೆಹೋವನನ್ನು ಕೊಂಡಾಡು; ಆತನ ಉಪಕಾರಗಳಲ್ಲಿ ಒಂದನ್ನೂ ಮರೆಯಬೇಡ.
3 Which doith merci to alle thi wickidnessis; which heelith alle thi sijknessis.
ಆತನು ನಿನ್ನ ಎಲ್ಲಾ ಅಪರಾಧಗಳನ್ನು ಕ್ಷಮಿಸುವವನೂ, ಸಮಸ್ತ ರೋಗಗಳನ್ನು ವಾಸಿಮಾಡುವವನೂ,
4 Which ayenbieth thi lijf fro deth; which corowneth thee in merci and merciful doyngis.
ನಿನ್ನ ಜೀವವನ್ನು ನಾಶನದಿಂದ ತಪ್ಪಿಸುವವನೂ, ಶಾಶ್ವತ ಪ್ರೀತಿ ಮತ್ತು ಕರುಣೆಯೆಂಬ ಕಿರೀಟದಿಂದ ನಿನ್ನನ್ನು ಶೃಂಗರಿಸುವವನೂ ಆಗಿದ್ದಾನೆ.
5 Which fillith thi desijr in goodis; thi yongthe schal be renulid as the yongthe of an egle.
ಶ್ರೇಷ್ಠ ವರಗಳಿಂದ ನಿನ್ನ ಆಶೆಯನ್ನು ಪೂರ್ಣಗೊಳಿಸುತ್ತಾನೆ; ಹದ್ದಿಗೆ ಬರುವಂತೆಯೇ ನಿನಗೆ ಯೌವನವನ್ನು ತಿರುಗಿ ಬರಮಾಡುತ್ತಾನೆ.
6 The Lord doynge mercies; and doom to alle men suffringe wrong.
ಯೆಹೋವನು ನೀತಿಯನ್ನು ಸಾಧಿಸುವವನಾಗಿ, ಕುಗ್ಗಿಹೋದವರೆಲ್ಲರ ನ್ಯಾಯವನ್ನು ಸ್ಥಾಪಿಸುತ್ತಾನೆ.
7 He made hise weies knowun to Moises; hise willis to the sones of Israel.
ಆತನು ಮೋಶೆಗೆ ತನ್ನ ಮಾರ್ಗವನ್ನೂ, ಇಸ್ರಾಯೇಲರಿಗೆ ತನ್ನ ಕೃತ್ಯಗಳನ್ನೂ ಪ್ರಕಟಿಸಿದನು.
8 The Lord is merciful doer, and merciful in wille; longe abidinge, and myche merciful.
ಯೆಹೋವನು ಕನಿಕರವೂ, ದಯೆಯೂ, ದೀರ್ಘಶಾಂತಿಯೂ, ಪೂರ್ಣಪ್ರೀತಿಯೂ ಉಳ್ಳವನು.
9 He schal not be wrooth with outen ende; and he schal not thretne with outen ende.
ಆತನು ಯಾವಾಗಲೂ ತಪ್ಪು ಹುಡುಕುವವನಲ್ಲ; ನಿತ್ಯವೂ ಕೋಪಿಸುವವನಲ್ಲ.
10 He dide not to vs aftir oure synnes; nether he yeldide to vs aftir oure wickidnessis.
೧೦ಆತನು ನಮ್ಮ ಪಾಪಗಳಿಗೆ ಸರಿಯಾಗಿ ನಮ್ಮನ್ನು ಶಿಕ್ಷಿಸಲಿಲ್ಲ; ನಮ್ಮ ಅಪರಾಧಗಳಿಗೆ ತಕ್ಕಂತೆ ದಂಡಿಸಲಿಲ್ಲ.
11 For bi the hiynesse of heuene fro erthe; he made strong his merci on men dredynge hym.
೧೧ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ, ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ಕೃಪೆಯು ಅಷ್ಟು ಅಪಾರವಾಗಿದೆ.
12 As myche as the eest is fer fro the west; he made fer oure wickidnessis fro vs.
೧೨ಪೂರ್ವಕ್ಕೂ, ಪಶ್ಚಿಮಕ್ಕೂ ಎಷ್ಟು ದೂರವೋ, ನಮ್ಮ ದ್ರೋಹಗಳನ್ನು ನಮ್ಮಿಂದ ತೆಗೆದು ಅಷ್ಟು ದೂರ ಮಾಡಿದ್ದಾನೆ.
13 As a fadir hath merci on sones, the Lord hadde merci on men dredynge him;
೧೩ತಂದೆಯು ಮಕ್ಕಳನ್ನು ಕನಿಕರಿಸುವಂತೆ, ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕನಿಕರಿಸುತ್ತಾನೆ.
14 for he knewe oure makyng.
೧೪ನಾವು ರೂಪಗೊಂಡಿದ್ದನ್ನು ಆತನು ಬಲ್ಲನು; ನಾವು ಧೂಳಾಗಿದ್ದೇವೆ ಎಂಬುವುದನ್ನು ನೆನಪುಮಾಡಿಕೊಳ್ಳುತ್ತಾನೆ.
15 He bithouyte that we ben dust, a man is as hey; his dai schal flowre out so as a flour of the feeld.
೧೫ಮನುಷ್ಯನ ಆಯುಷ್ಕಾಲವು ಹುಲ್ಲಿನಂತಿದೆ; ಅವನು ಅಡವಿಯ ಹೂವಿನ ಹಾಗೆ ಶೋಭಿಸುತ್ತಾನೆ.
16 For the spirit schal passe in hym, and schal not abide; and schal no more knowe his place.
೧೬ಗಾಳಿ ಬಡಿಯುತ್ತಲೇ ಅದು ಹೋಗುವುದು; ಅದರ ಸ್ಥಳವು ಅದನ್ನು ತಿರುಗಿ ಕಾಣುವುದಿಲ್ಲ.
17 But the merci of the Lord is fro with out bigynnyng, and til in to with outen ende; on men dredinge hym. And his riytfulnesse is in to the sones of sones;
೧೭ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳವರ ಮೇಲೆ, ಆತನ ದಯೆಯು ಯುಗಯುಗಾಂತರಗಳವರೆಗೂ ಇರುತ್ತದೆ.
18 to hem that kepen his testament. And ben myndeful of hise comaundementis; to do tho.
೧೮ಆತನ ನಿಬಂಧನೆಗಳನ್ನು ಕೈಕೊಂಡು, ಆತನ ವಿಧಿಗಳನ್ನು ನೆನಪಿನಲ್ಲಿಟ್ಟುಕೊಂಡು ನಡೆಯುವವರ ಮಕ್ಕಳು ಮೊಮ್ಮಕ್ಕಳವರೆಗೂ ಆತನು ತನ್ನ ನೀತಿಯನ್ನು ಸಾಧಿಸುವನು.
19 The Lord hath maad redi his seete in heuene; and his rewme schal be lord of alle.
೧೯ಯೆಹೋವನು ಮೇಲಣ ಲೋಕದಲ್ಲಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ; ಆತನು ಸಮಸ್ತವನ್ನೂ ಆಳುತ್ತಾನೆ.
20 Aungels of the Lord, blesse ye the Lord; ye myyti in vertu, doynge his word, to here the vois of hise wordis.
೨೦ದೇವದೂತರೇ, ಆತನ ಶಬ್ದಕ್ಕೆ ಕಿವಿಗೊಡುವವರೆ ಆತನ ಆಜ್ಞೆಯನ್ನು ನೆರವೇರಿಸುವ ಪರಾಕ್ರಮಶಾಲಿಗಳೇ, ಯೆಹೋವನನ್ನು ಕೊಂಡಾಡಿರಿ.
21 Alle vertues of the Lord, blesse ye the Lord; ye mynystris of hym that doen his wille.
೨೧ಆತನ ಸೈನ್ಯಗಳೇ, ಆತನ ಚಿತ್ತವನ್ನು ನೆರವೇರಿಸುವ ಸೇವಕರೇ, ಯೆಹೋವನನ್ನು ಕೊಂಡಾಡಿರಿ.
22 Alle werkis of the Lord, blesse ye the Lord, in ech place of his lordschipe; my soule, blesse thou the Lord.
೨೨ಆತನ ರಾಜ್ಯದ ಸರ್ವಸ್ಥಳಗಳಲ್ಲಿರುವ ಎಲ್ಲಾ ಸೃಷ್ಟಿಗಳೇ, ಯೆಹೋವನನ್ನು ಕೊಂಡಾಡಿರಿ. ನನ್ನ ಮನವೇ, ಯೆಹೋವನನ್ನು ಕೊಂಡಾಡು.

< Psalms 103 >