< Psalms 97 >

1 The Lord hath regned, the erthe make ful out ioye; many ilis be glad.
ಯೆಹೋವ ದೇವರು ಆಳಿಕೆ ಮಾಡುತ್ತಾರೆ; ಭೂಮಿಯು ಉಲ್ಲಾಸಪಡಲಿ; ದ್ವೀಪಗಳ ಸಮೂಹವು ಸಂತೋಷಪಡಲಿ.
2 Cloude and derknesse in his cumpas; riytfulnesse and doom is amending of his seete.
ಮೇಘಗಳೂ, ಕಾರ್ಗತ್ತಲೂ ಅವರ ಸುತ್ತಲು ಇವೆ; ನೀತಿಯೂ, ನ್ಯಾಯವೂ ಅವರ ಸಿಂಹಾಸನದ ಅಸ್ತಿವಾರವಾಗಿದೆ.
3 Fier schal go bifore him; and schal enflawme hise enemyes in cumpas.
ಬೆಂಕಿಯು ಅವರ ಮುಂದೆ ಹೋಗಿ ಅವರ ವೈರಿಗಳನ್ನು ಸುತ್ತಲೂ ದಹಿಸುವುದು.
4 Hise leitis schyneden to the world; the erthe siy, and was moued.
ಅವರ ಮಿಂಚುಗಳು ಲೋಕವನ್ನು ಬೆಳಗಿಸುತ್ತವೆ; ಭೂಮಿಯು ಕಂಡು ನಡುಗುತ್ತದೆ.
5 Hillis as wax fletiden doun fro the face of the Lord; al erthe fro the face of the Lord.
ಯೆಹೋವ ದೇವರ ಸನ್ನಿಧಿಯಲ್ಲಿ ಬೆಟ್ಟಗಳು ಕರಗುತ್ತವೆ, ಸಮಸ್ತ ಭೂಮಿಯು ಮೇಣದ ಹಾಗೆ ಕರಗುತ್ತವೆ.
6 Heuenes telden his riytfulnesse; and alle puplis sien his glorie.
ಆಕಾಶವು ಅವರ ನೀತಿಯನ್ನು ತಿಳಿಸುತ್ತದೆ; ಎಲ್ಲಾ ಜನಗಳು ಅವರ ಮಹಿಮೆಯನ್ನು ಕಾಣುತ್ತಾರೆ.
7 Alle that worschipen sculptilis be schent, and thei that han glorie in her symelacris; alle ye aungels of the Lord, worschipe him.
ವಿಗ್ರಹಗಳನ್ನು ಪೂಜಿಸಿ, ವಿಗ್ರಹಗಳಲ್ಲಿ ಹೆಮ್ಮೆ ಪಡುವವರೆಲ್ಲರು ನಾಚಿಕೆಪಡಲಿ; ಎಲ್ಲಾ ದೇವರುಗಳೇ, ಯೆಹೋವ ದೇವರನ್ನು ಆರಾಧಿಸಿರಿ!
8 Sion herde, and was glad, and the douytris of Juda maden ful out ioye; for `thi domes, Lord.
ಯೆಹೋವ ದೇವರೇ, ನಿಮ್ಮ ನ್ಯಾಯಗಳನ್ನು ಚೀಯೋನ್ ಪಟ್ಟಣವು ಕೇಳಿ ಸಂತೋಷಿಸಿತು; ಯೆಹೂದದ ಪುತ್ರಿಯರು ಸಹ ಉಲ್ಲಾಸಿಸುತ್ತಾರೆ.
9 For thou, Lord, art the hiyeste on al erthe; thou art greetli enhaunsid ouere alle goddis.
ಏಕೆಂದರೆ ಯೆಹೋವ ದೇವರೇ, ನೀವು ಸಮಸ್ತ ಭೂಮಿಯ ಮೇಲೆ ಮಹೋನ್ನತರಾಗಿದ್ದೀರಿ; ಎಲ್ಲಾ ದೇವರುಗಳ ಮೇಲೆ ನೀವು ಅತ್ಯಂತ ಮಹೋನ್ನತರಾಗಿದ್ದೀರಿ.
10 Ye that louen the Lord, hate yuel; the Lord kepith the soulis of hise seyntis; he schal delyuer hem fro the hond of the synner.
ಯೆಹೋವ ದೇವರನ್ನು ಪ್ರೀತಿಸುವವರು ಕೆಟ್ಟದ್ದನ್ನು ಹಗೆ ಮಾಡುವರು; ದೇವರು ತಮ್ಮ ಭಕ್ತರ ಪ್ರಾಣಗಳನ್ನು ಕಾಪಾಡಿ, ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವರು.
11 Liyt is risun to the riytful man; and gladnesse to riytful men of herte.
ನೀತಿವಂತನಿಗೋಸ್ಕರ ಬೆಳಕೂ, ಯಥಾರ್ಥ ಹೃದಯದವರಿಗೋಸ್ಕರ ಅವರ ಹೃದಯದಲ್ಲಿ ಆನಂದವೂ ಇರುವುದು.
12 Juste men, be ye glad in the Lord; and knouleche ye to the mynde of his halewyng.
ನೀತಿವಂತರೇ, ಯೆಹೋವ ದೇವರಲ್ಲಿ ಸಂತೋಷಿಸಿರಿ; ದೇವರ ಪರಿಶುದ್ಧ ನಾಮವನ್ನು ಕೊಂಡಾಡಿರಿ.

< Psalms 97 >