< 1 Thessalonians 4 >

1 As to the rest, then, brethren, we request you, and call upon you in the Lord Jesus, as ye did receive from us how it behoveth you to walk and to please God, that ye may abound the more,
ಪ್ರಿಯರೇ, ನೀವು ಹೇಗೆ ನಡೆದುಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿದಂತೆಯೇ ಜೀವಿಸುತಿರುವಿರಿ. ಇದರಲ್ಲಿ ನೀವು ಹೆಚ್ಚೆಚ್ಚಾಗಿ ಮಾಡಬೇಕೆಂದು ನಾವು ಕಡೆಯದಾಗಿ ನಮಗೆ ಕರ್ತ ಆಗಿರುವ ಯೇಸುವಿನಲ್ಲಿ ನಿಮ್ಮನ್ನು ಪ್ರಬೋಧಿಸುತ್ತೇವೆ ಮತ್ತು ಉತ್ತೇಜಿಸುತ್ತೇವೆ.
2 for ye have known what commands we gave you through the Lord Jesus,
ನಮಗೆ ಕರ್ತ ಆಗಿರುವ ಯೇಸುವಿನ ಅಧಿಕಾರದ ಮೂಲಕ ನಿಮಗೆ ಕೊಟ್ಟ ಆಜ್ಞೆಗಳನ್ನು ನೀವು ತಿಳಿದವರಾಗಿದ್ದೀರಿ.
3 for this is the will of God — your sanctification; that ye abstain from the whoredom,
ನೀವು ಪವಿತ್ರರಾಗಿ ಇರಬೇಕೆಂಬುದೇ ದೇವರ ಚಿತ್ತವಾಗಿದೆ. ಆದ್ದರಿಂದ ನೀವು ಕಾಮಾತಿರೇಕಕ್ಕೆ ದೂರವಾಗಿರಬೇಕು.
4 that each of you know his own vessel to possess in sanctification and honour,
ನಿಮ್ಮಲ್ಲಿ ಪ್ರತಿಯೊಬ್ಬನೂ ಪವಿತ್ರತೆಯಿಂದಲೂ ಘನತೆಯಿಂದಲೂ ತನ್ನ ಸ್ವಂತ ದೇಹವನ್ನು ಕಾಪಾಡಿಕೊಳ್ಳಲು ತಿಳಿಯಬೇಕು.
5 not in the affection of desire, as also the nations that were not knowing God,
ನೀವು ದೇವರನ್ನರಿಯದ ಯೆಹೂದ್ಯರಲ್ಲದವರಂತೆ ಕಾಮಾಭಿಲಾಷೆಗೆ ಒಳಪಡಬಾರದು.
6 that no one go beyond and defraud in the matter his brother, because an avenger [is] the Lord of all these, as also we spake before to you and testified,
ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತಮ್ಮ ಸಹೋದರ ಸಹೋದರಿಯನ್ನು ವಂಚಿಸದಿರಲಿ. ಏಕೆಂದರೆ ನಾವು ಮೊದಲು ತಿಳಿಸಿ ನಿಮಗೆ ಗಂಭೀರವಾಗಿ ಎಚ್ಚರಿಸಿದಂತೆ ಈ ಪಾಪಗಳ ವಿಷಯದಲ್ಲಿ ಕರ್ತ ಯೇಸುವು ಮುಯ್ಯಿಗೆ ಮುಯ್ಯಿ ತೀರಿಸುವವರಾಗಿದ್ದಾರೆ.
7 for God did not call us on uncleanness, but in sanctification;
ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಪವಿತ್ರ ಜೀವನವನ್ನು ಜೀವಿಸಲು ಕರೆದಿದ್ದಾರೆ.
8 he, therefore, who is despising — doth not despise man, but God, who also did give His Holy Spirit to us.
ಆದ್ದರಿಂದ, ಈ ಆಜ್ಞೆಗಳನ್ನು ತಿರಸ್ಕರಿಸುವವನು ಮನುಷ್ಯನನ್ನಲ್ಲ ದೇವರನ್ನು ಅಂದರೆ, ತಮ್ಮ ಪವಿತ್ರಾತ್ಮರನ್ನು ನಮಗೆ ಕೊಡುವ ದೇವರನ್ನೇ ತಿರಸ್ಕರಿಸುತ್ತಾನೆ.
9 And concerning the brotherly love, ye have no need of [my] writing to you, for ye yourselves are God-taught to love one another,
ಸಹೋದರ ಪ್ರೀತಿಯ ವಿಷಯದಲ್ಲಿ ನಿಮಗೆ ಬರೆಯುವುದು ಅವಶ್ಯವಿಲ್ಲ. ಒಬ್ಬರನ್ನೊಬ್ಬರು ಪ್ರೀತಿಸಬೇಕೆಂದು ನೀವು ದೇವರಿಂದಲೇ ಉಪದೇಶ ಹೊಂದಿದ್ದೀರಿ.
10 for ye do it also to all the brethren who [are] in all Macedonia; and we call upon you, brethren, to abound still more,
ಸಮಸ್ತ ಮಕೆದೋನ್ಯದಲ್ಲಿರುವ ಸಹೋದರರನ್ನೆಲ್ಲಾ ನೀವು ಪ್ರೀತಿಸುತ್ತಿರುವುದು ನಿಜವೆ. ಆದರೂ ಪ್ರಿಯರೇ, ನೀವು ಪ್ರೀತಿಯಲ್ಲಿ ಇನ್ನೂ ಸಮೃದ್ಧಿಯಾಗಬೇಕೆಂದು ನಾವು ನಿಮ್ಮನ್ನು ಉತ್ತೇಜಿಸುತ್ತೇವೆ.
11 and to study to be quiet, and to do your own business, and to work with your own hands, as we did command you,
ಇದಲ್ಲದೆ ನಾವು ನಿಮಗೆ ಹೇಳಿದ ಪ್ರಕಾರ ಪ್ರಶಾಂತ ಜೀವನವೇ ನಿಮ್ಮ ಗುರಿಯಾಗಿರಲಿ: ನೀವು ಸ್ವಂತ ಕಾರ್ಯಗಳನ್ನೇ ನಡೆಸಿಕೊಂಡು, ನಿಮ್ಮ ಕೈಯಾರೆ ಕೆಲಸ ಮಾಡುವವರಾಗಿರಿ.
12 that ye may walk becomingly unto those without, and may have lack of nothing.
ಹೀಗೆ ನಿಮ್ಮ ಅನುದಿನದ ಜೀವನವು ಹೊರಗಿನವರ ಮುಂದೆ ಯೋಗ್ಯವಾಗಿರುವುದು ಮತ್ತು ನೀವು ಯಾರ ಮೇಲೆಯೂ ಆತುಕೊಳ್ಳದೆ ಬಾಳುವಿರಿ.
13 And I do not wish you to be ignorant, brethren, concerning those who have fallen asleep, that ye may not sorrow, as also the rest who have not hope,
ಪ್ರಿಯರೇ, ನೀವು ನಿರೀಕ್ಷೆಯಿಲ್ಲದೆ ಗೋಳಾಡುವವರಂತೆ ಮರಣ ಹೊಂದಿದ ವಿಶ್ವಾಸಿಗಳ ಬಗ್ಗೆ ಅಜ್ಞಾನಿಗಳಾಗಿರಬಾರದೆಂದು ನಾವು ಅಪೇಕ್ಷಿಸುತ್ತೇವೆ.
14 for if we believe that Jesus died and rose again, so also God those asleep through Jesus he will bring with him,
ಏಕೆಂದರೆ ಯೇಸು ಸತ್ತು ಪುನಃ ಜೀವಂತವಾಗಿ ಎದ್ದರೆಂದು ನಾವು ನಂಬಿದರೆ, ಅದರಂತೆ ಯೇಸುವಿನಲ್ಲಿ ನಿದ್ರೆಹೋದವರನ್ನು ಸಹ ದೇವರು ಅವರೊಡನೆ ಕರೆದುಕೊಂಡು ಬರುವರು.
15 for this to you we say in the word of the Lord, that we who are living — who do remain over to the presence of the Lord — may not precede those asleep,
ಕರ್ತ ಯೇಸುವಿನ ಪುನರಾಗಮನದವರೆಗೆ ಇನ್ನೂ ಜೀವದಿಂದ ಉಳಿದಿರುವ ನಾವು ಮರಣಹೊಂದಿದವರಿಗಿಂತ ಮುಂದಾಗಿ ಪುನರುತ್ಥಾನವಾಗುವುದಿಲ್ಲ ಎಂದು, ನಾವು ಕರ್ತ ಯೇಸುವಿನ ವಾಕ್ಯದ ಆಧಾರದಿಂದ ನಿಮಗೆ ಹೇಳುತ್ತಿದ್ದೇವೆ.
16 because the Lord himself, in a shout, in the voice of a chief-messenger, and in the trump of God, shall come down from heaven, and the dead in Christ shall rise first,
ಏಕೆಂದರೆ ಕರ್ತ ಯೇಸು ತಾವೇ ಆಜ್ಞಾಘೋಷದೊಡನೆಯೂ ಪ್ರಧಾನ ದೇವದೂತನ ಧ್ವನಿಯೊಡನೆಯೂ ದೇವರ ತುತೂರಿಯೊಡನೆಯೂ ಪರಲೋಕದಿಂದ ಇಳಿದು ಬರುವರು. ಆಗ ಕ್ರಿಸ್ತ ಯೇಸುವಿನಲ್ಲಿ ಸತ್ತವರು ಮೊದಲು ಎದ್ದು ಬರುವರು.
17 then we who are living, who are remaining over, together with them shall be caught away in clouds to meet the Lord in air, and so always with the Lord we shall be;
ಆಮೇಲೆ, ಜೀವದಿಂದ ಉಳಿದಿರುವ ನಾವು ಅವರೊಂದಿಗೆ ಅಂತರಿಕ್ಷದಲ್ಲಿ ಕರ್ತ ಯೇಸುವನ್ನು ಎದುರುಗೊಳ್ಳುವುದಕ್ಕಾಗಿ ಮೇಘಗಳಲ್ಲಿ ಒಯ್ಯಲಾಗುವೆವು. ಹೀಗೆ ನಾವು ಸದಾಕಾಲವೂ ಕರ್ತ ಯೇಸುವಿನ ಜೊತೆಯಲ್ಲಿಯೇ ಇರುವೆವು.
18 so, then, comfort ye one another in these words.
ಆದಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.

< 1 Thessalonians 4 >